Author: admin

ಬೆಂಗಳೂರು: ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲರು ಸೇರಿದ್ರೆನೇ ಕನ್ನಡ ಚಿತ್ರರಂಗ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಮ್ಯಾಕ್ಸ್ ಸಿನಿಮಾ ಸಕ್ಸಸ್ ಮೀಟ್ ನಲ್ಲಿ ಮಾತನಾಡಿದ ಅವರು, ಬಾಸ್ ಕಾಲ ಮುಗಿತು ಮ್ಯಾಕ್ಸ್ ಮಾಸ್ ಆಟ ಶುರು ಎಂಬ ಕೇಕ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದರು. ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ. ಇದೆ ದರ್ಶನ್ ಫ್ಯಾನ್ಸ್ ಬಗ್ಗೆ ಹೇಳ್ದಾಗ ನಾನು ಫ್ಯಾನ್ಸ್‌ಗೆ ಬೈಬೇಡಿ ಅಂದಿದ್ದೆ. ಅವರು ನೋವಿನಲ್ಲಿದ್ದಾರೆ ಏನ್‌ ಮಾತಾಡಬೇಕು ಅಂತ ಗೊತ್ತಾಗ್ತಿಲ್ಲ ಅಂತ ಹೇಳಿದೆ. ನಾವ್ಯಾಕೆ ಟಾಂಟ್‌ ಕೊಡಬೇಕು? ಯಶ್, ಶಿವಣ್ಣ, ಧ್ರುವ ಉಪ್ಪಿಗೆ ಬಾಸ್ ಅಂತ ಕರಿಯೋದಿಲ್ವಾ? ನನಗೂ ದರ್ಶನ್‌ ಗೂ ಏನು ಇಲ್ಲ ಸರ್…  ದರ್ಶನ್ ನಾನು ಇಬ್ರು ಕಷ್ಟ ಪಟ್ಟು ಮೇಲೆ ಬಂದಿದ್ದೀವಿ. ನನ್ನ ಫ್ಯಾನ್ಸ್ ಎಲ್ಲಾ ಹೀರೋಗಳ ಸಿನಿಮಾ ನೋಡ್ತಾರೆ. ಕೆಟ್ಟ ಅಹಂಕಾರ ನಮ್ಮಲಿ ಇದೆ ಅಂದು ಕೊಂಡಿರೋದೇ ತಪ್ಪು…

Read More

ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 9  ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕಾಶ ಬಾರಕೇರ (42) ಮೃತಪಟ್ಟವರಾಗಿದ್ದಾರೆ. ಈವರೆಗೆ  ಅಯ್ಯಪ್ಪ ಮಾಲಾಧಾರಿಗಳಾದ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗ್ಮೋಡೆ, ಶಂಕರ್ ಚಹ್ವಾಣ್, ತೇಜಸ್ವಿ ಸಾತ್ರೆ, ಪ್ರಕಾಶ್ ಬಾರಕೇರ ಮೃತಪಟ್ಟಿದ್ದರು. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಉಳಿದ 8 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / ದೂರುಗಳನ್ನು ʼಮಕ್ಕಳ ದನಿ ಪೆಟ್ಟಿಗೆʼಯ ಮೂಲಕ ಸ್ವೀಕರಿಸಿ, ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ತಮ್ಮ ವಿರುದ್ಧದ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿದೆ ಎಂದು ಪ್ರಿಯಾಂಕ್ ಖರ್ಗೆ ನೇರವಾಗಿ ಆರೋಪ ಮಾಡಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ–ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪೆರ್ನಾಜೆ: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 81  ಕೃಷಿಕರಿಗೆ  “ಹವ್ಯಕ ಕೃಷಿ ರತ್ನ” ಪ್ರಶಸ್ತಿ ಪ್ರದಾನ ಮಾಡಿದರು. ಕುಕ್ಕೆ ಶ್ರೀ  ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು ವಾಗ್ಮಿ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ದಿಕ್ಸೂಚಿ ಭಾಷಣವನ್ನು ನೀಡಿದರು ಗೌರವಾಧ್ಯಕ್ಷರು  ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರು, ಅಧ್ಯಕ್ಷರಾದ ಅಖಿಲ ಹವ್ಯಕ ಮಹಾಸಭಾದ ಗಿರಿಧರಕಜೆ ವೇ ಮೂ ಶೇಷಗಿರಿ ಪ್ರಧಾನ ಅರ್ಚಕರು ಸಿಗಂದೂರು, ವೆ ಮೂ ಹರಿ ನಾರಾಯಣ  ಆಸ್ರಣ್ಣ  ಆಡಳಿತ ಮೊಕ್ತೇಸರರು  ಕಟೀಲು, ಮುಖ್ಯಸ್ಥರು ಸಂಚಾಲಕರಾದ ಗಣೇಶ್ ಚಂದ್ರ  ಮುಂತಾದ ಗಣ್ಯರ ಸಮ್ಮುಖದಲ್ಲಿ. ಸೌಮ್ಯ ಪೆರ್ನಾಜೆಯವರನ್ನು ಈ ಪ್ರತಿಷ್ಠಿತ ಪ್ರಶಸ್ತಿಯು ಡಿ. 27 ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು. “ನಾನು ಜೇನು ಸಾಕಾಣೆ ಜೇನು ಗಡ್ಡ ವಿಶ್ವದಲ್ಲೇ ಪ್ರಪ್ರಥಮವಾಗಿ ಮಹಿಳಾ ಜೇನುಗಡ್ಡದಾರಿ  ಜೇನು  ಕೃಷಿ…

Read More

ತುಮಕೂರು:  ದನಗಳನ್ನು ಖರೀದಿ ಮಾಡುವ ವೇಳೆ ಅದರ ಮಾಲೀಕನೊಂದಿಗೆ ಖರೀದಿದಾರನು ತೆಗೆದುಕೊಂಡಿದ್ದ ಪೋಟೋದಿಂದ ದನಗಳ್ಳತನದ ಆರೋಪಿ ಪತ್ತೆಯಾಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ಕಂಪ್ಲಾಪುರದಲ್ಲಿ ನಡೆದಿದೆ. ದನಗಳ್ಳತನದ ಆರೋಪಿಯೆಂದು ತಿಳಿಯದೆ,  ಮಾಲೀಕ ಎಂದು ತಿಳಿದು ದನಗಳನ್ನು ಬಾಷಾ ಎಂಬುವರು ಕೆ.ಜಿ. ಟೆಂಪಲ್ ನಲ್ಲಿ ಖರೀದಿ ಮಾಡಿದ್ದರು. ಅಲ್ಲದೆ ಈ ವೇಳೆ ದನಗಳನ್ನು ಮಾರಾಟ ಮಾಡಿದ್ದ ಪುಟ್ಟರಾಜು ಎಂಬ ವ್ಯಕ್ತಿ ಜೊತೆ ಪೋಟೋ ತೆಗೆದುಕೊಂಡಿದ್ದರು. ಆದ್ರೆ ಅದು ಕಳ್ಳತನ ಮಾಡಿರುವ ದನಗಳೆಂದು ತಿಳಿದಿರಲಿಲ್ಲ. ಕುಣಿಗಲ್ ತಾಲೂಕಿನ ಕಂಪ್ಲಾಪುರ ಗ್ರಾಮದ ಚನ್ನೆಗೌಡ ಎಂಬುವವರಿಗೆ ಸೇರಿದ ಸುಮಾರು 70 ಸಾವಿರ ಬೆಲೆ ಬಾಳುವ ದನಗಳನ್ನು , ರಾತ್ರಿ ವೇಳೆ ಪಕ್ಕದ ಮನೆಯ ವಾಸಿ ಪುಟ್ಟರಾಜು ಕಳ್ಳತನ ಮಾಡಿದ್ದನು. ಅಲ್ಲದೆ ರಾತ್ರೋ ರಾತ್ರಿ ಅದನ್ನು ಗುಬ್ಬಿ ತಾಲ್ಲೂಕಿನ ಕೆ.ಜಿ.ಟೆಂಪಲ್ ಬಳಿ ದನಗಳ ಸಂತೆಗೆ ಸಾಗಿಸಿದ್ದನು. ಸಂತೆಯಲ್ಲಿ ಅದನ್ನು ಬಾಷಾ ಎಂಬುವರಿಗೆ 43 ಸಾವಿರ ರೂ. ಗೆ ಮಾರಾಟ ಮಾಡಿದ್ದನು. ದನಗಳು ಕಳ್ಳತನವಾಗಿರುವ ವಿಚಾರ…

Read More

ಬೀದರ್: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಆರು ಜನರಿಂದ ಬೆದರಿಕೆ ಇರುವುದಾಗಿ ಮರಣಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತುಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಂಚಾಳ (26) ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬ ಸದಸ್ಯರನ್ನು ಸಾಂತ್ವನ ಹೇಳಿದರು. ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿ ಧೈರ್ಯ ತುಂಬಿದರು. ಸಚಿವರ ಜೊತೆ ಬಂದ ಪೊಲೀಸರು ಮನೆಗೆ ಬರದಂತೆ ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ  ಸಚಿನ್ ಸಹೋದರಿಯರು,  ಬಳಿಕ ಸಚಿವ ಖಂಡ್ರೆ ಎದುರು ಅಳಲು ತೋಡಿಕೊಂಡರು. ಇದೇ ವೇಳೆ ಸರ್ಕಾರ ಮತ್ತು ವೈಯಕ್ತಿಕವಾಗಿ ಮೃತ ಸಚಿನ್ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವರು ಹೇಳಿದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಬೆಳಿಗ್ಗೆ 8 ಗಂಟೆಯಿಂದ 2025ರ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಪ್ರದೇಶಗಳಿಗೆ ಸಾರ್ವಜನಿಕರು/ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಕ್ಯಾತ್ಸಂದ್ರ ಠಾಣೆ ಸರಹದ್ದು, ನಾಮದ ಚಿಲುಮೆ, ಬಸದಿ ಬೆಟ್ಟ ಹಾಗೂ ದೇವರಾಯನದುರ್ಗ ಬೆಟ್ಟಕ್ಕೆ 2025ರ ಹೊಸ ವರ್ಷಾಚರಣೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು/ಪ್ರವಾಸಿಗರು ಭೇಟಿ ನೀಡಲಿದ್ದು, ಸಂಭ್ರಮಾಚರಣೆ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಸಂಭವವಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಸಾರ್ವಜನಿಕರು ಮದ್ಯಪಾನ ಮಾಡಿ ಹಾಗೂ ಜಾಲಿರೈಡ್ ನೆಪದಲ್ಲಿ ವಾಹನಗಳನ್ನು ಚಾಲನೆ ಮಾಡುವುದರಿಂದ ಮಾರಣಾಂತಿಕ ರಸ್ತೆ ಅಪಘಾತ ಸಂಭವಿಸುವ ಹಾಗೂ ಈ ಪ್ರದೇಶಗಳು ಸುರಕ್ಷಿತ ಅರಣ್ಯ ಆವೃತ ಪ್ರದೇಶಗಳಾಗಿದ್ದು, ಪ್ರವಾಸಿಗರ ಮೇಲೆ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇರುತ್ತದೆ. ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ…

Read More

ತುಮಕೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳ ವ್ಯಾಸಂಗ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿದ್ದು, ಮಕ್ಕಳೊಂದಿಗೆ ಕೆಲಸ ಮಾಡಿದ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯ ನಿರ್ವಹಿಸಲು ಹಾಗೂ ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದಲ್ಲದೆ ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ಕೊಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 2025ರ ಜನವರಿ 6ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊದಲನೇ ಮಹಡಿ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂಖ್ಯೆ:0816-2956699ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಮಕ್ಕಳ…

Read More

ತುಮಕೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮತ್ತು ಡ್ರಾಗ್ ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಎಚ್ಚರಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಮೋಟಾರ್ ಸೈಕಲ್‌ನ್ನು ಮತ್ತು ಕಾರನ್ನು ಅಪಾಯಕಾರಿಯಾಗಿ ಚಾಲನೆ ಮಾಡಬಾರದು. ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ಕೆಣಕುವುದು ಮಾಡಬಾರದು ಮತ್ತು ಇತರರೊಂದಿಗೆ ಸಭ್ಯವಾಗಿ ನಾಗರೀಕತೆಯಿಂದ ವರ್ತಿಸಬೇಕು ಎಂದು ಹೇಳಿದರು. ನಗರದ ಪ್ರಮುಖ ಯಾತ್ರಾ ಸ್ಥಳಗಳಾಗಿರುವ ನಾಮದ ಚಿಲುಮೆ, ದೇವರಾಯದುರ್ಗ ಹಾಗೂ ಬಸದಿಬೆಟ್ಟ ಸ್ಥಳಗಳು ಸಂರಕ್ಷಿತ ಅರಣ್ಯ ಪ್ರದೇಶಗಳು ಅಪಘಾತ ವಲಯಗಳಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಹಿತ ದೃಷ್ಠಿಯಿಂದ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಡಿ 31 ರಿಂದ ಜ. 2ರವರೆಗೆ ಪ್ರವೇಶ ನಿಷೇಧಿಸಲಾಗಿದೆ.ಸಾರ್ವಜನಿಕರ ಪ್ರವೇಶವನ್ನು ನಿರ್ಭಂಧಿಸಲು ಪಿಕೇಟಿಂಗ್ ಪಾಯಿಂಟ್‌ಗಳನ್ನು ಹಾಕಲಾಗಿದೆ ಎಂದರು. ಯಾವುದೇ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸ್ವಂತ ಫಾರಂ ಹೌಸ್‌ಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯಿಲ್ಲದೆ ರೇವ್‌ಪಾರ್ಟಿಗಳು ಇತರೆ ಮೋಜುಮಸ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದಿದ್ದಾರೆ.…

Read More