Subscribe to Updates
Get the latest creative news from FooBar about art, design and business.
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
- ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
Author: admin
ತುಮಕೂರು: ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರ/ಖಾಸಗಿ ಉದ್ಯೋಗ ಹೊಂದದೇ ಇರುವ, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ರಾಜ್ಯದಲ್ಲಿ ವಾಸವಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಇಲಾಖೆಯ ಸಿಬ್ಬಂದಿ ಅರುಣ್ ಉಪಸ್ಥಿತರಿದ್ದರು.…
ತುಮಕೂರು: ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್…
ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದದ 2025ರ ಜನವರಿ 2ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚಿನ್ನೇನಹಳ್ಳಿ, ಸೀಬಿ, ತರೂರು, ಸೀಬಿ ಅಗ್ರಹಾರ, ಯಲದಬಾಗಿ ಪಂಚಾಯ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು/ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: “ಮುಖ್ಯಮಂತ್ರಿಗಳ ಕಾರ್ಯಕ್ರಮದ ಅಂಗವಾಗಿ ಪಾವಗಡ ತಾಲ್ಲೂಕಿನಲ್ಲಿ 2,800 ನಿವೇಶನ ವಿತರಣೆಗೊಳಿಸಲು ಗುರಿ ಹೊಂದಲಾಗಿದೆ” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರು ಮಾಹಿತಿ ನೀಡಿದ್ದಾರೆ. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ನಿವೇಶನ ರಹಿತರಿಗೆ 3,000 ನಿವೇಶನಗಳನ್ನು ವಿತರಣೆ ಮಾಡುವ ಗುರಿ ಹೊಂದಿದ್ದು, ಇತ್ತೀಚೆಗೆ ಖಾಲಿ ನಿವೇಶನಗಳನ್ನು ಸಮತಟ್ಟು ಮಾಡಿ ಸೈಟ್ ಫಾರ್ಮೇಶನ್ ಕಾರ್ಯಗಳು ಪ್ರಗತಿಯಲ್ಲಿವೆ. ಈ ಸೈಟ್ ವಿತರಣಾ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಲಿದ್ದು, ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸಮಿತಿ ನೇತೃತ್ವ ನೀಡಲಿದೆ. ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡುವುದರಿಂದ ನಿಜವಾದ ಫಲಾನುಭವಿಗಳಿಗೆ ನಿವೇಶನ ಒದಗಿಸುವ ಗುರಿ ಯಶಸ್ವಿಯಾಗುತ್ತದೆ” ಎಂದರು. ಜಲಜೀವನ್ ಮಿಷನ್: ಗುಣಮಟ್ಟಕ್ಕೆ ಒತ್ತು ಅವರು ಜಲಜೀವನ್ ಮಿಷನ್ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸುವುದಕ್ಕೆ ಆದೇಶ ನೀಡಿದರು. “ಕಾಮಗಾರಿಗಳು ಸೂಕ್ತವಾಗಿರದಿದ್ದರೆ ನಿಷ್ಕರ್ಷೆಯ ಕ್ರಮ ಕೈಗೊಳ್ಳಲಾಗುವುದು. ಉತ್ತಮವಾಗಿ ಕಾಮಗಾರಿ ಮುಗಿಸಿರುವವರ ಬಿಲ್ಲುಗಳನ್ನು ಸರಿಯಾಗಿ ಪಾವತಿಸಲಾಗುವುದು”…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಜಾಮೀನಿನಲ್ಲಿರುವ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ಸಿಕ್ಕಿದೆ ಎಂದು ವರದಿಯಾಗಿದೆ. ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಲು ಅನಿಲ್ ಸಿ. ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಅಸ್ತು ಹಿನ್ನಲೆ ಎರಡ್ಮೂರು ದಿನಗಳಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ (SLP) ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಗೊಂದಲ ಸೃಷ್ಟಿಸಲು ಬಯಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಭದ್ರತೆಗಾಗಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಹೊಸ ವರ್ಷವನ್ನು ಸಂತೋಷದಿಂದ ಆಚರಿಸಿ. ನಿಮ್ಮ ಹೊಸ ವರ್ಷವು ಅತ್ಯಂತ ಸಂತೋಷದಾಯಕವಾಗಿರಲಿ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪುಣೆ: ಕೇರಳ “ಮಿನಿ–ಪಾಕಿಸ್ತಾನ”. ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಗೆಲುವಿನ ವರ್ಷಾಚರಣೆ ವೇಳೆ ಮಾತನಾಡಿದ ಅವರು, ಕೇರಳ ಮಿನಿ ಪಾಕಿಸ್ತಾನವಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗಿದ್ದಾರೆ ಎಂದು ರಾಣೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತನ್ನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಣೆ, ಕೇರಳ ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಕೇರಳನ್ನು ಪಾಕಿಸ್ತಾನಕ್ಕೆ ಹೋಲಿಸಿದ ಹೇಳಿಕೆಯನ್ನು ಸಮರ್ಥಿಸಲು “ಧಾರ್ಮಿಕ ಮತಾಂತರಗಳು” ಮತ್ತು “ಲವ್ ಜಿಹಾದ್” ನಂತಹ ವಿಷಯಗಳನ್ನು ಉಲ್ಲೇಖಿಸಿದ್ದು, ತಮ್ಮ ಹೇಳಿಕೆ ವಾಸ್ತವಿಕವಾಗಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಬೋಮ್ಮಲದೇವಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದ ಸರ್ವೆ.ನಂ.99ರ ಅರಣ್ಯ ನಾಶ ಮಾಡಲಾಗುತ್ತಿದ್ದು, ತೋಗರಿಘಟ್ಟ ಗ್ರಾಮದ ಸ.ನಂ.99ರ 2ಎಕರೇ ಪ್ರದೇಶದಲ್ಲಿನ 400ಕ್ಕೂ ಅಧಿಕ ವಿವಿಧ ಜಾತಿಯ ಮರಗಳ ಮಾರಣಹೋಮ ಮಾಡಲಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ವಸತಿ ರಹಿತ ಸಾರ್ವಜನಿಕರಿಗೆ ವಸತಿ ನೀಡುವ ಉದ್ದೇಶಕ್ಕಾಗಿ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಸಾಮಾಜಿಕ ವಲಯ ಅರಣ್ಯಕ್ಕೆ ಸೇರಿದ 400ಕ್ಕೂ ಅಧಿಕ ಮರಗಳ ಮಾರಣಹೋಮ ಮಾಡಲಾಗುತ್ತಿದೆ. ತುಮಕೂರು ನಗರದ ಮೋಹಮ್ಮದ್ ಆಜಾಂಗೆ ತುಮಕೂರು ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ 6ಲಕ್ಷ 25ಸಾವಿರಕ್ಕೆ 390ಮರಗಳಿಗೆ ಇ–ಹರಾಜು ನೀಡಲಾಗಿದೆ. ಕಂದಾಯ ಇಲಾಖೆಯಿಂದ ಆಶ್ರಯ ಯೋಜನೆಗಾಗಿ ತೋಗರಿಘಟ್ಟ ಗ್ರಾಮದ ಸರ್ವೆ.ನಂ.ನಲ್ಲಿ 2ಎಕರೇ ಜಮೀನು ಮಂಜೂರು ಮಾಡಿ ಬೋಮ್ಮಲದೇವಿಪುರ ಗ್ರಾಪಂಗೆ ಹಸ್ತಾಂತರ ಮಾಡಲಾಗಿದ್ದು.. ಸರಕಾರಿ ಗೋಮಾಳದಲ್ಲಿ ಸಾಮಾಜಿ ವಲಯ ಅರಣ್ಯ ಇಲಾಖೆಯಿಂದ ಬೆಳೆಸಿರುವ ವಿವಿಧ ಜಾತಿಯ ಮರಗಳನ್ನು ಮರೇಮಾಚಿ ಬಿ.ಡಿ.ಪುರ ಗ್ರಾಪಂಯಿಂದ ಹರಾಜಿಗೆ ಮಸಲತ್ತು ಮಾಡಲಾಗಿದೆ…
ಬೆಂಗಳೂರು: ಸಣ್ಣ ಸಣ್ಣ ವಿಚಾರಕ್ಕೂ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಚಾಳಿಯಾಗಿದೆ. ಹೊಸ ವರ್ಷಕ್ಕಾದರೂ ಅವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ ಅವರು, ಡೆತ್ ನೋಟ್ನಲ್ಲಿ ಕಾರ್ಪೊರೇಟರ್ ಹೆಸರು ಬರೆದಿದ್ದಾರೆ. ಅನೇಕ ಜನರು ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ತಾರೆ. ಹಾಗಾಂತ ಪ್ರಿಯಾಂಕ್ ಖರ್ಗೆ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದು ಅವರು ಹೇಳಿದರು. ಸಣ್ಣ ವಿಷಯಕ್ಕೂ ರಾಜೀನಾಮೆ ಕೊಡಬೇಕು ಅನ್ನೋದು ಬಿಜೆಪಿಯ ಚಾಳಿ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರಾಜಕಾರಣಿಗಳು ಬೇರೆ ಬೇರೆಯವರ ಜೊತೆ ಇರುತ್ತಾರೆ. ಬಿಜೆಪಿಯವರಿಗೆ ಬೇರೆ ಉದ್ಯೋಗ ಇಲ್ಲ. ಪೊಲೀಸ್ ಠಾಣೆ ಮುಂದೆ ಹೋಗೋದು ಪ್ರತಿಭಟನೆ ಮಾಡೋದು, ಸುಮ್ಮನೆ ಆರೋಪ ಮಾಡೋದು ಅಷ್ಟೇ ಕೆಲಸ. ಪ್ರಿಯಾಂಕ್ ಖರ್ಗೆ ಮೇಲೆ ಏನಾದ್ರೂ ಆರೋಪ ಇದೆಯಾ ಹೇಳಿ? ಎಲ್ಲೋ ನಡೆದಿದ್ದಕ್ಕೆ…
ಬಳ್ಳಾರಿ: ನಮ್ಮದು ಯತ್ನಾಳ್ ಬಣ ಅಲ್ಲ, ಬಿಜೆಪಿ ಬಣ. ಇರೋದು ಒಂದೇ ಬಿಜೆಪಿ ಬಣ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದೆ. ನಮ್ಮದು ಯತ್ನಾಳ್ ಬಣವಲ್ಲ. ಇರೋದು ಒಂದೇ ಬಣ, ಅದು ಬಿಜೆಪಿ ಬಣ ಎಂದರು. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಸಿಪಿ ಸಮಿತಿ ಬಂತು, ಎಲ್ಲವೂ ಬಂತು. ಮಾಧ್ಯಮಗಳಲ್ಲಿ ಕೆಲವನ್ನ ಬಿಂಬಿಸಲಾಗ್ತಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ಬೋರ್ಡ್ ವಿಚಾರದಲ್ಲಿ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಜ.4 ರಂದು ಬಳ್ಳಾರಿಯ ಕಂಪ್ಲಿಯಲ್ಲಿ ಸಮಾವೇಶ ಮಾಡ್ತೇವೆ. ಜ.6 ರಂದು ಕೂಡ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು. ವಕ್ಫ್ ವಿಚಾರದಲ್ಲಿ ಹಿಂದೂ–ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕೆಂದು ನಾವು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…