Author: admin

ತುಮಕೂರು: ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅನುದಾನವನ್ನು ಸದ್ಬಳಕೆ ಮಾಡಿಕೊಂಡು ತುಮಕೂರು ನಗರವನ್ನು ಮಾದರಿ ನಗರವನ್ನಾಗಿ ನಿರ್ಮಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, 2024–25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರ್ಕಾರದಿಂದ ತುಮಕೂರು ಸೇರಿ ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತಲಾ 200 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬಿಡುಗಡೆಯಾಗುವ ಹಣವನ್ನು ಕಾಮಗಾರಿಗಳಿಗೆ ಸದ್ವಿನಿಯೋಗಿಸಿ 2026–27ನೇ ಸಾಲಿನೊಳಗಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಯೋಜನೆಯಡಿ ಒದಗಿಸಲಾಗುವ 200…

Read More

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಿಲುಕುರಿಕೆ ಗ್ರಾಮದ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯು ಶನಿವಾರ ಜರುಗಿತು.. ಹಾಲು ಉತ್ಪಾದಕರ ಸಹಕಾರ ಸಂಘ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ಶೈಲ ರಂಗನಾಥ್ ಎನ್.ಸಿ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀರಂಗಯ್ಯ ಎನ್.ಆರ್. ರವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಆಯ್ಕೆಯಾದ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ಮತ್ತು ಎಲ್ಲ ನಿರ್ದೇಶಕರುಗಳಿಗೆ ಶುಭ ಕೋರಿ ಅಭಿನಂದಿಸಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘ ನವಿಲುಕುರಿಕೆ ಗ್ರಾಮ ನೂತನ ನಿರ್ದೇಶಕರುಗಳಾಗಿ ನರಸಿಂಹಮೂರ್ತಿ ಎನ್.ಡಿ., ಅಂಜನಾಚಾರ್, ಕೃಷ್ಣಮೂರ್ತಿ, ಜೈ ದೀಪ, ಮಲ್ಲಿಕಾರ್ಜುನಯ್ಯ, ರಂಗಯ್ಯ ಡಿ., ಚೇತನ ಮೋಹನ್ ಕುಮಾರ್, ಸಂಧ್ಯಾ ಅನಿಲ್ ಕುಮಾರ್, ಜಯರಾಮಯ್ಯ, ಚಿಕ್ಕ ರಂಗಯ್ಯ, ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೈಲ ರಂಗನಾಥ ಮಾತನಾಡಿ, ಸಹಕಾರ ಸಂಘದ ಸಮಗ್ರ ಅಭಿವೃದ್ಧಿಗಾಗಿ…

Read More

ತುಮಕೂರು:  ಜಿಲ್ಲೆಯ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಬೂತಮ್ಮ ಎಂಬವರು ಗುಡಿಸಲಿನಲ್ಲಿ ವಾಸವಿದ್ದು, ಇವರ ಗುಡಿಸಲಿಗೆ  ಬೆಂಕಿ ಬಿದ್ದ ಪರಿಣಾಮ ಮಕ್ಕಳ ವಿದ್ಯಾಭ್ಯಾಸದ ದಾಖಲೆಗಳು ಮತ್ತು ದಿನ ಬಳಕೆ ವಸ್ತುಗಳು ಸುಟ್ಟು ಕರಕಲಾಗಿದೆ. ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ನವರು ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ, ಸರ್ಕಾರದಿಂದ ಪರಿಹಾರ ಬರುವಂತೆ ಕ್ರಮ ವಹಿಸಿ ನಷ್ಟವಾದ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ, ಬೂತಮ್ಮನವರಿಗೆ ಆರ್ಥಿಕ ಸಹಾಯ ಮಾಡಿದರು. ವರದಿ: ನಂದೀಶ್ ನಾಯ್ಕ ಪಿ., ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ:  ಪಟ್ಟಣದ ಬಾಪೂಜಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 28 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತ ಹೊಂದಿದ ಮುದ್ದಯ್ಯ ಅವರಿಗೆ ಬೀಳ್ಕೊಡುಗೆ ಸಮಾರಂಭ ಶನಿವಾರ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ವೃತ್ತಿ ಜೀವನದಲ್ಲಿ ಸಹಕರಿಸಿದಂತಹ ಪ್ರತಿಯೊಬ್ಬರಿಗೂ ಋಣಿಯಾಗಿರುತ್ತೇನೆ, ಅದೇ ರೀತಿ ಪಾಶ್ಚಿಮಾತ್ಯ ಸಂಸ್ಕೃತಿಗಳನ್ನ ಅಳವಡಿಸಿಕೊಳ್ಳದೆ, ಭಾರತೀಯ ಪರಂಪರೆಯ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಕರೆ ನೀಡಿದರು ಮಾಜಿ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಉಗ್ರ ನರಸಿಂಹಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಾಪೂಜಿ ಕಾಲೇಜನ್ನ ಬೆಳೆಸುವುದರಲ್ಲಿ ಮುದ್ದಯ್ಯ ಅವರ ಕಾರ್ಯ ಶ್ಲಾಘನೀಯವಾದದ್ದು. ಸಂಸ್ಥೆಯಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನ ನೀಡುತ್ತಾ ಬಂದಿದ್ದು, ಮುಂದೆಯೂ ಶಿಕ್ಷಣ ಪರ್ವ ಮುಂದುವರೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ತುಮಕೂರಿನ ಬಾಪೂಜಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣ ಮೂರ್ತಿ, ವಾಲ್ಮೀಕಿ ಜಾಗೃತಿ ವೇದಿಕೆಯ ಅಧ್ಯಕ್ಷ ಪಾಳೇಗಾರ ಲೋಕೇಶ್, ಶಿವಣ್ಣ, ಸೇರಿದಂತೆ ಬಾಪೂಜಿ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ತಿಪ್ಪಯ್ಯನದುರ್ಗ ಗ್ರಾಮದ ದಲಿತರ ಕಾಲೋನಿ ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತವಾಗಿದೆ. ಈ ಗ್ರಾಮದಲ್ಲಿ ಮೂರು ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದು,  ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಗಳು ನಡೆಯುತ್ತಿಲ್ಲ ಹಾಗೂ ರಾತ್ರಿ ವೇಳೆ ಸರಿಯಾದ ರೀತಿಯಲ್ಲಿ ಬೆಳಕಿನ ವ್ಯವಸ್ಥೆ ಇಲ್ಲದೆ, ಜನ ವಿಧಿ ಇಲ್ಲದೆ ಕತ್ತಲೆ ಹಾಗೂ ಕೊಳಚೆಯಂತೆ ಇರುವ ಪ್ರದೇಶದಲ್ಲಿ ವಾಸ ಮಾಡುತ್ತಿದ್ದಾರೆ. ಈ ವಿಷಯ ಇಲ್ಲಿನ ಜನಪ್ರತಿನಿಧಿಗಳು ಕಣ್ಣಾರೆ ನೋಡಿಯೂ ನೋಡದಂತೆ ಹೋಗುತ್ತಿದ್ದಾರೆ. ಇಲ್ಲಿನ ನಿವಾಸಿಗಳು ಎಷ್ಟೋ ಬಾರಿ ಈ ವಿಷಯದ ಬಗ್ಗೆ ಪಿಡಿಒ ಬಳಿ ಮನವಿ ಮಾಡಿದರೂ ಸರಿಪಡಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಆರು ತಿಂಗಳಾದರೂ ಯಾವುದೇ ಕೆಲಸ ನಡೆಯುವುದಿಲ್ಲ. ಎಲ್ಲೆಂದರಲ್ಲಿ ನಿಂತ ಕೊಳಚೆ ನೀರಿನಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳ ಭಯದಿಂದ ಜೀವನ ಸಾಗಿಸುವಂತಾಗಿದೆ ಎಂದು ಇಲ್ಲಿನ ವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇನ್ನಾದರೂ  ಸಂಬಂಧ ಪಟ್ಟ ಅಧಿಕಾರಿಗಳು,  ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಗಳು ಗ್ರಾಮಕ್ಕೆ…

Read More

ಕಲಬುರಗಿ: ಅಫಜಲಪುರ ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಸಂದರ್ಭದಲ್ಲಿ ಸೊಸೆ ತನ್ನ ಅತ್ತೆಯ ವಿರುದ್ಧ ದೇವರಿಗೆ ಹರಕೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು”ಎಂದು ಸೊಸೆ ನೋಟಿನ ಮೇಲೆ ಬರೆದು ದೇವಿಗೆ ಹರಕೆ ಅರ್ಪಿಸಿದ್ದಾಳೆ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಅತ್ತೆಯ ಸಾವು ಬಯಸಿ ಸೊಸೆ ದೇವರಿಗೆ ಹರಕೆ ಹೇಳಿದ್ದು, ಸಾಕಷ್ಟು ಜನರು ಇದನ್ನ ವ್ಯಂಗ್ಯವಾಗಿ ತೆಗೆದುಕೊಂಡಿದ್ದರೆ, ಅತ್ತೆಯಂದಿರು ಆತಂಕದಿಂದ ನೋಡುವಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರಿಗೆ ನವದೆಹಲಿಯ ಅವರ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾವಪೂರ್ಣ ಅಂತಿಮ ನಮನ ಸಲ್ಲಿಸಿದರು. ವಿತ್ತ ಮಂತ್ರಿ, ಪ್ರಧಾನಮಂತ್ರಿ ಸೇರಿ ಅನೇಕ ಉನ್ನತ ಸ್ಥಾನಗಳನ್ನು ಅಲಂಕರಿಸಿ ಸರಳತೆ, ಸೌಮ್ಯತೆ, ಪ್ರಾಮಾಣಿಕತೆ ಮೂಲಕ ಅನೇಕ ಸಾಧನೆಗಳ ಅಚ್ಚಳಿಯದ ಛಾಪು ಮೂಡಿಸಿ ರಾಷ್ಟ್ರಕ್ಕೆ ಎಣೆ ಇಲ್ಲದ ಕೊಡುಗೆ ನೀಡಿದ ಅವರು ಚಿರಸ್ಮರಣೀಯರು ಎಂದು ಕುಮಾರಸ್ವಾಮಿ ತಿಳಿಸಿದರು. ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿದ ಅವರು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ನಗರದ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ನಾಮಕರಣಕ್ಕೆ ಪಾಲಿಕೆ ಮುಂದಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದರು, ಇದೀಗ ಶಾಸಕ ಜಿಟಿ ದೇವೇಗೌಡ ಕೂಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಅಂತ ನಾಮಕರಣ ಮಾಡಿಲ್ಲ ಅನ್ನುವುದಾದರೆ, ಸಿದ್ದರಾಮಯ್ಯ ಅವರ ಹೆಸರನ್ನ ಇಟ್ಟರೇನು ತಪ್ಪಿಲ್ಲ. ಈಗಾಗಲೇ ಸಾಕಷ್ಟು ಚರ್ಚೆಗಳ ನಡೆಯುತ್ತಿವೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಸಂಸದ ಯದುವೀರ್ ಅವರು ಹೇಳುವಂತೆ ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎನ್ನುತ್ತಾರೆ. ಒಂದು ವೇಳೆ ಹೆಸರಿಟ್ಟಲ್ಲದಿದ್ದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪಿಲ್ಲ ಎಂದು ಹೇಳುವ ಮೂಲಕ ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಅಯೋಧ್ಯೆ: ರಾಮಮಂದಿರದ ಪುರೋಹಿತರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಸ್ತ್ರ ಸಂಹಿತೆ ಜಾರಿ ಮಾಡಿದೆ ಮಾಡಿದ್ದು, ಅರ್ಚಕರಿಗೆ ವಿಶಿಷ್ಟ ಗುರುತು ನೀಡಲು ವಿಶಿಷ್ಟ ಬಟ್ಟೆಗಳನ್ನು ಧರಿಸುವ ನಿಯಮ ಜಾರಿಯಾಗಿದೆ. ಎಲ್ಲ ಪುರೋಹಿತರಿಗೆ ಎರಡು ಸೆಟ್ ಹಳದಿ ನಿಲುವಂಗಿ, ಬಿಳಿ ಧೋತಿಗಳನ್ನು ನೀಡಲಾಗಿದೆ. ಇನ್ಮುಂದೆ ದೇವಾಲಯದಲ್ಲಿ ಇದೇ ಬಟ್ಟೆಗಳನ್ನು ಧರಿಸಲಿದ್ದಾರೆ. ಪುರೋಹಿತರು, ಬಾಲರಾಮನ ಪೂಜೆ ಮಾಡಬೇಕು. ಇದರ ಜೊತೆಗೆ ಗರ್ಭಗುಡಿಯೊಳಗೆ ಫೋನ್ ಗಳ ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೇರಿದಂತೆ ಒಟ್ಟು 14 ಅರ್ಚಕರು ರಾಮಮಂದಿರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದುವರೆಗೆ ಅರ್ಚಕರಿಗೆ ಡ್ರೆಸ್ ಕೋಡ್ ಎನ್ನುವುದು ಇರಲಿಲ್ಲ. ಈಗ ಎಲ್ಲ ಅರ್ಚಕರಿಗೂ ವಸ್ತ್ರ ಸಂಹಿತೆ ಜಾರಿ ಮಾಡಿ ಬಟ್ಟೆಗಳನ್ನು ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮೈಸೂರು: ತಂದೆಯನ್ನು ಹತ್ಯೆ ಮಾಡಿದ ಮಗನೊಬ್ಬ ಅಪಘಾತದ ಕಥೆ ಕಟ್ಟಿ ಸಿಕ್ಕಿಬಿದ್ದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದ್ದು, ಘಟನೆಯ ಸತ್ಯಾಂಶ ಬಯಲಾದ ಬೆನ್ನಲ್ಲೇ ಆರೋಪಿ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ಎಂಬವರು ಹತ್ಯೆಗೀಡಾದವರಾಗಿದ್ದು, ಇವರ ಪುತ್ರ ಪಿರಿಯಾಪಟ್ಟಣದ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯ ಪಾಂಡು ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಪಿರಿಯಾಪಟ್ಟಣದ ಬೈಲುಕುಪ್ಪೆ ಬಳಿ ಬುಧವಾರ ಈ ಘಟನೆ ನಡೆದಿದೆ. ಅಣ್ಣಪ್ಪನ ಹೆಸರಲ್ಲಿ ವಿಮೆ ಮಾಡಿಸಿದ ಮಗ ಪಾಂಡು, ಆ ಹಣದ ಆಸೆಗೆ ಕೃತ್ಯ ಎಸಗಿದ್ದಾನೆ. ನಿಮಗೆ ಟಿಬೇಟಿಯನ್ ಮೊದಲನೇ ಕ್ಯಾಂಪಿನಲ್ಲಿ ಕೆಲಸ ಇದೆ ಎಂದು ತಂದೆಯನ್ನು ಕಳುಹಿಸಿದ್ದ ಆರೋಪಿ ಮಗ ಬಳಿಕ ಹಿಂಬದಿಯಿಂದ ಹೋಗಿ ತಲೆಗೆ ದೊಣ್ಣೆಯಿಂದ ಹೊಡೆದು ಕೊಂಡಿದ್ದಾನೆ. ಬಳಿಕ ತಂದೆಯ ಮೃತದೇಹವನ್ನು ಬಿ.ಎಂ. ರಸ್ತೆಯ ಮಂಚ ದೇವನಹಳ್ಳಿ ಸಮೀಪ ಎಸೆದಿದ್ದಾನೆ. ನಂತರ ತಂದೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಪಾಂಡುವಿನ ದೂರಿನ ಮೇಲೆ ಅನುಮಾನ ಬಂದು ಸಬ್ ಇನ್ಸ್ ಪೆಕ್ಟರ್ ಅಜಯ್ ಕುಮಾರ್…

Read More