Subscribe to Updates
Get the latest creative news from FooBar about art, design and business.
- ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
Author: admin
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ — ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ — ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತಂತೆ ಸಂಶಯವಿದ್ದಲ್ಲಿ ಇ — ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಶಿಲ್ಲಾಂಗ್: ಚರ್ಚ್ನೊಳಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕಾಶ್ ಸಾಗರ್ ಎಂಬಾತ ಚರ್ಚ್ ಗೆ ನುಗ್ಗಿದ ವ್ಯಕ್ತಿಯಾಗಿದ್ದು, ಅಕ್ರಮವಾಗಿ ಚರ್ಚ್ ಗೆ ನುಗ್ಗಿದ ಈತ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಲ್ಲದೇ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಾವಿನ್ನಾಂಗ್ ಗ್ರಾಮದ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ನವದೆಹಲಿ: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಇದೀಗ ಕಾಂಗ್ರೆಸ್ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಿದೆ. ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕನ್ನಡ ಹಾಗೂ ತೆಲುಗಿನ ಅನೇಕ ಧಾರವಾಹಿಗಳಲ್ಲಿ ನಟಿಸಿರುವ ಚರಿತ್ ಅವರು ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಕೇಳಿಬಂದಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆ. ತಾನು ವಾಸ ಮಾಡುತ್ತಿದ್ದ ಮನೆಗೆ ಚರಿತ್ ಸಹಚರರ ಜೊತೆ ನುಗ್ಗಿ ಕಿರುಕುಳ ನೀಡಿದ್ದಾರೆ. ಜೊತೆಗೆ ತನ್ನ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ವಿಚ್ಛೇದನದ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿರುವ ಆರೋಪವಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಶುಕ್ರವಾರ ಲಾಹೋರ್ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ರಹಮಾನ್ ಮಕ್ಕಿಗೆ ಕಳೆದ ಕೆಲವು ದಿನಗಳಿಂದ ಮಧುಮೇಹ ಹೆಚ್ಚಿತ್ತು. ನಂತರ ಆತನನ್ನ ಲಾಹೋರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ನ ಸೋದರ ಮಾವನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಟಿ.ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯಲ್ಲಿ ಶುಕ್ರವಾರ ನಡೆದಿದೆ. ಗಿರಿನಗರ ನಿವಾಸಿ ಶಂಕರ್ ಜಟ್ಟಿ (62) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಬ್ಯಾಂಕ್ ನೌಕರರು ಎಂದು ತಿಳಿದು ಬಂದಿದೆ. ತರಕಾರಿ ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಿಜಿಎಸ್ ಮೇಲ್ಸೇತುವೆಯಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದರು. ಈ ವೇಳೆ ಅಪರಿಚಿತ ವಾಹನ ಅವರ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಚಾಮರಾಜಪೇಟೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪರಿಚಿತ ವಾಹನದ ಪತ್ತೆಗಾಗಿ ಬಲೆ ಬೀಸಿದ್ದಾರೆ. ಅಲ್ಲದೇ ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮರಗಳ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx…
ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಜೈನರ ಗುತ್ತಿಯಲ್ಲಿ 15 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಹ್ಮ ಎಚ್ಚರ ಜೀವನಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬೆಂಗಳೂರಿನ ಉದ್ಯಮಿ ವಿ.ಜೆ.ಬ್ರಹ್ಮದೇವಯ್ಯ, ತ್ರಿಶಾಲಾ ಬ್ರಹ್ಮದೇವಯ್ಯ ದಂಪತಿಗಳು ಭೂಮಿ ಪೂಜೆ ನೆರವೇರಿಸಿದರು . ಕ್ಷೇತ್ರಪಾಲ ಪೂಜೆ, ವಾಸ್ತು ದೇವತೆ ಪೂಜೆ, ವಾಯು, ಮೇಘ, ಅಗ್ನಿ ಪೂಜೆಗಳೊಂದಿಗೆ ನೆರವೇರಿಸಿ, ಕಳಸ ಸ್ಥಾಪನೆ ,ವಿವಿಧ ದ್ರವ್ಯಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ತೀರ್ಥಂಕರರಿಗೆ ಆರೋಗ್ಯ ಗಳನ್ನು ಸಮರ್ಪಿಸಿ ಶಾಂತಿ ಮಂತ್ರ ಪಠಿಸಲಾಯಿತು . ಮುನಿಶ್ರೀ ವೀರಸಾಗರ ಮಹಾರಾಜರು ಆಶೀರ್ವಚನ ನೀಡಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ, ಆರೋಗ್ಯ, ಶಿಕ್ಷಣ ಸೇವೆ ನೀಡುವತ್ತ ಹೆಜ್ಜೆ ಇಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎ.ಬಿ .ಕಾಂತರಾಜು, ಶಶಿಕುಮಾರ್ ಧವನ್ ಜೈನ, ನಾಗಚಂದ್ರ, ಮನ್ಮಥರಾಜು, ರೇಖಾ ಧವನ್ , ಅಂಜನ, ಶಶಿಕುಮಾರ್ , ನಿಶ್ಚಲ್ , ಮಂಜುಳಾ, ಧನ ಕೀರ್ತಿ, ವಸುಮತಿ , ಪದ್ಮ ಪ್ರಭು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೈನ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಶ್ರಾವಕ…
ಶಿರಾ: ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮಳೆ ನಡುವೆ ರಸ್ತೆಗೆ ಟಾರು ಹಾಕುವ ಕಾಮಗಾರಿ ನಡೆಸುತ್ತಿದ್ದು ಮಳೆಯಲ್ಲಿ ಟಾರು ರಸ್ತೆಗೆ ಕಚ್ಚುವುದೇ? ಈ ರಸ್ತೆಯ ಗುಣ ಮಟ್ಟ ಹೇಗಿರಬಹುದು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ, ನಾವು ಇನ್ನೂ ಐದು ವರ್ಷ ಮೇಂಟೈನ್ಸ್ ಮಾಡುತ್ತೇವೆ. ಹಾಗಾಗಿ ಏನಾದರೂ ತೊಂದರೆ ಇಲ್ಲ ಎಂದು ರಸ್ತೆ ಕಾಮಗಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಳೆಯ ನಡುವೆಯೂ ರಸ್ತೆಗೆ ಟಾರು ಹಾಕುವುದು ಎಷ್ಟರಮಟ್ಟಿಗೆ ಸರಿ ಹಾಗೂ ಈಗಾಗಲೇ ಟಾರು ಹಾಕಿರುವ ರಸ್ತೆಗಳು ಗುಂಡಿ ಬಿದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಮಳೆಯಲ್ಲಿ ನೆನೆದಿರುವ ರಸ್ತೆಗೆ ಹಾಕುತ್ತಿರುವ ಟಾರು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟು ಮನವಿ ಮಾಡಿಕೊಂಡರು ಸಹ ಅಧಿಕಾರಿಗಳು ದರ್ಪ ತೋರುತ್ತಿದ್ದು ಇವರಿಗೆ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಅವರ ಅಂತ್ಯ ಸಂಸ್ಕಾರವನ್ನು ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಿರ್ಮಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಪ್ರಧಾನಿ ಸಿಂಗ್ ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದಾರೆ. ಅವರ ಸ್ಮಾರಕ ಸ್ಥಾಪಿಸುವ ಬಗ್ಗೆ ಪ್ರಧಾನಿ ಮೋದಿ ಮಾತನಾಡಿದ ಬಳಿಕ, ಖರ್ಗೆ ಪ್ರಧಾನಿಗೆ ಪತ್ರ ಬರೆದಿದ್ದು, ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಜಬಲ್ಪುರ: ಟಿಕೆಟ್ ಕೊಳ್ಳಲು ಹಣವಿಲ್ಲ ಎಂದು ಇಲ್ಲೊಬ್ಬ ವ್ಯಕ್ತಿ ರೈಲಿನ ಚಕ್ರಗಳ ನಡುವೆ ಅವಿತು ಬರೋಬ್ಬರಿ 290 ಕಿ.ಮೀ. ದೂರ ಪ್ರಯಾಣಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ದಾನಪುರ ಎಕ್ಸ್ ಪ್ರೆಸ್ ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೈಲು ಟಿಕೆಟ್ ಕೊಳ್ಳಲು ಹಣವಿಲ್ಲದೇ ಈತ ರೈಲಿನ ಕೆಳಗೆ ಅವಿತು ಬರೊಬ್ಬರಿ ಸುಮಾರು 290 ಕಿ.ಮೀ ವರೆಗೂ ಪ್ರಯಾಣಿಸಿದ್ದಾನೆ ಎನ್ನಲಾಗಿದೆ. ಈತ ಮಧ್ಯಪ್ರದೇಶದ ಇಟಾರ್ಸಿಯಿಂದ ಜಬಲ್ಪುರದವರೆಗೆ ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿದ್ದಾನೆ ಎಂದು ತಿಳಿದು ಬಂದಿದೆ. ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ S4 ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ಪತ್ತೆಯಾಗಿತ್ತು. ಹೀಗಾಗಿ ಈ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯನ್ನು ಹೊರತೆಗೆದ ವೇಳೆ ಆತ ಮದ್ಯ ಪಾನ…