Subscribe to Updates
Get the latest creative news from FooBar about art, design and business.
- ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
Author: admin
ಮೈಸೂರು: ಮೈಸೂರಿನ ಕೆ.ಆರ್.ಎಸ್. ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಕೂಡ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಕೆಆರ್ಸ್ ಗೆ ತೆರಳುವ ಮಾರ್ಗದ ಪ್ರಿನ್ಸೆಸ್ ರಸ್ತೆಯನ್ನು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಮರುನಾಮಕರಣ ಮಾಡದೇ ಪರಂಪರೆಯನ್ನು ಉಳಿಸಬೇಕೆಂದು ಆಗ್ರಹಿಸಿದ್ದಾರೆ. ಮೈಸೂರಿನ ಪಾರಂಪರಿಕ ಇತಿಹಾಸವನ್ನು ಹಾಗೂ ಅದರ ಹೆಗ್ಗುರುತುಗಳನ್ನು ಅಳಿಸಿ ಹಾಕುವ ಯಾವುದೇ ನಿರ್ಣಯವೂ ಸಹ ನಮ್ಮ ಮುಂದಿನ ಪೀಳಿಗೆಗೆ ಮಾರಕವಾಗುತ್ತದೆ ಮತ್ತು ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಕೊಂದಂತಾಗುತ್ತದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ (ಡಿ.26) ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು. ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ…
ಹುಬ್ಬಳ್ಳಿ,: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಭಕ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗುರುವಾರ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು. ಇತರ 7 ಮಂದಿ ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಒಬ್ಬ ಬಾಲಕ ಚೇತರಿಸಿಕೊಂಡಿದ್ದಾನೆ. ಕುಟುಂಬದವರ ಜೊತೆಗೆ ಚರ್ಚಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಹರಿಹರಪುರ: ಗುಡಿಸಲೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಎರಡು ಕುಟುಂಬ ಬೀದಿಗೆ ಬಿದ್ದ ಘಟನೆ ಪಾವಗಡ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಸಂಭವಿಸಿದೆ. ಘಟನೆಯಿಂದ ಎರಡು ಕುಟುಂಬಗಳು ತಮ್ಮ ವಾಸ ಸ್ಥಳವನ್ನು ಕಳೆದುಕೊಂಡಿವೆ. ದೊಡ್ಡಣ್ಣ (S/O ಸಣ್ಣ ಹನುಮಂತಪ್ಪ) ಎಂಬವರ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಕ್ರಿಸ್ಮಸ್ ರಜಾ ದಿನವಾಗಿರುವ ಹಿನ್ನೆಲೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಸ್ಪಂದಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಇದೀಗ ಇಡೀ ಗುಡಿಸಲು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ. ಗುಡಿಸಲಿನೊಂದಿಗೆ ತಮ್ಮ ಅಗತ್ಯ ಸಾಮಗ್ರಿಗಳು ಕೂಡ ಸುಟ್ಟು ಭಸ್ಮವಾಗಿದೆ. ಇದೀಗ ನೊಂದ ಕುಟುಂಬಗಳು ಆಶ್ರಯಕ್ಕಾಗಿ ಪರದಾಡುತ್ತಿದೆ. ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಮನವಿ ಮಾಡಿದ್ದಾರೆ. ನೊಂದ ಕುಟುಂಬಕ್ಕೆ ಸರಿಯಾದ ಆಹಾರ, ತಾತ್ಕಾಲಿಕ…
ಬೆಂಗಳೂರು: ಬೆಂಗಳೂರು ನಗರದಲ್ಲಿ ನವೆಂಬರ್ ತಿಂಗಳವರೆಗೆ ಪ್ರತಿದಿನವೆಂಬಂತೆ ಸರಾಸರಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಈ ಅಪಘಾತಗಳಲ್ಲಿ ಸುಮಾರು ಶೇಕಡಾ 70ರಷ್ಟು ಅಪಘಾತಗಳು ರಾತ್ರಿ ಹೊತ್ತಿನಲ್ಲಿ ಸಂಭವಿಸಿದೆ ಎಂದು ತಜ್ಞರು ಹೇಳಿದ್ದಾರೆ. ರಾತ್ರಿ ವೇಳೆ ಅಪಘಾತ ಹೆಚ್ಚಾಗಲು ಕಾರಣ ಅತಿಯಾದ ವೇಗ, ರಸ್ತೆ ಸ್ಪಷ್ಟವಾಗಿ ಗೋಚರವಾಗದಿರುವುದು, ಚಾಲನಾ ಕೌಶಲ್ಯದ ಕೊರತೆ ಮತ್ತು ಅಸಮರ್ಪಕ ಮೂಲಸೌಕರ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನವೆಂಬರ್ ಅಂತ್ಯದವರೆಗೆ 780 ಮಾರಣಾಂತಿಕ ಅಪಘಾತಗಳು ವರದಿಯಾಗಿದ್ದು, 802 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 3,571 ಮಾರಣಾಂತಿಕವಲ್ಲದ ಅಪಘಾತಗಳಲ್ಲಿ 3,685 ಜನರು ಗಾಯಗೊಂಡಿದ್ದಾರೆ. ಈ ವರ್ಷ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸಿದೆ. 224 ಅಪಘಾತಗಳು ದಾಖಲಾಗಿವೆ. ಇದರ ಪರಿಣಾಮವಾಗಿ 53 ಸಾವುಗಳು ಮತ್ತು 230 ಗಾಯಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ. ನಂತರ ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು 222 ಪ್ರಕರಣ…
ಕೋಯಿಕ್ಕೋಡ್: ಮಲಯಾಳಂನ ಸಾಹಿತಿ, ಗೀತರಚನೆಕಾರ ಎಂಟಿ ವಾಸುದೇವನ್ ನಾಯರ್ ನಿಧನರಾಗಿದ್ದು, ಅವರಿಗೆ 91 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೋಯಿಕ್ಕೋಡ್ ನಲ್ಲಿ ನಿಧನರಾದರು. ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆದುಹಾಕಿದ್ದರಿಂದ ಮಂಗಳವಾರ ಅವರ ಸ್ಥಿತಿ ಸುಧಾರಣೆಯ ಲಕ್ಷಣಗಳನ್ನು ತೋರಿಸಿತ್ತು. ಆದರೆ ಬುಧವಾರ ರಾತ್ರಿ ವೇಳೆಗೆ ಅದು ಅಷ್ಟೇ ವೇಗವಾಗಿ ಹದಗೆಟ್ಟಿತು. ಎಂಟಿ ಎಂದೇ ಖ್ಯಾತರಾಗಿದ್ದ ಎಂಟಿ ವಾಸುದೇವನ್ ನಾಯರ್ ಕಾದಂಬರಿಗಳು, ಸಣ್ಣ ಕಥೆಗಳು, ಚಿತ್ರಕಥೆಗಳು, ಮಕ್ಕಳ ಸಾಹಿತ್ಯ, ಪ್ರವಾಸ ಬರವಣಿಗೆ ಮತ್ತು ಪ್ರಬಂಧಗಳನ್ನು ವ್ಯಾಪಿಸಿರುವ ಕೊಡುಗೆಗಳೊಂದಿಗೆ ಮಲಯಾಳಂ ಸಾಹಿತ್ಯ ಮತ್ತು ಸಿನಿಮಾದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರು ಎರಡು ಸಾಕ್ಷ್ಯಚಿತ್ರಗಳೊಂದಿಗೆ ಮಲಯಾಳಂ ಚಿತ್ರರಂಗದಲ್ಲಿ ಶ್ರೇಷ್ಠವಾದ ನಿರ್ಮಾಲ್ಯಂ (1973) ಸೇರಿದಂತೆ ಆರು ಚಲನಚಿತ್ರಗಳನ್ನು ಅವರು ನಿರ್ದೇಶಿಸಿದ್ದಾರೆ. ಅವರು ಚಲನಚಿತ್ರೋದ್ಯಮಕ್ಕೆ ಪ್ರವೇಶಿಸಿದ ಸ್ವಂತ ಕಥೆಯಾದ Snehathinte Mukhangal ಮುರಪ್ಪೆನ್ನು (1965) ಚಿತ್ರವಾಗಿ ರೂಪುಗೊಂಡಿತ್ತು. ಈ ಬಳಿಕ ಅವರು 44 ಇತರ ಚಿತ್ರಕಥೆಗಳನ್ನು…
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಅಯ್ಯಪ್ಪ ಸ್ವಾಮಿ ಭಕ್ತರ ಪೈಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ9 ಮಂದಿಯ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಮೃತಪಟ್ಟಿದ್ದಾರೆ. ಉಳಿದ 7 ಮಂದಿಗೆ ಚಿಕಿತ್ಸೆ ಮುಂದುವರಿದಿದೆ. ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಗರ ಪೊಲೀಸರು ವುಮೆನ್ಸ್ ಹೈಲ್ಯಾಂಡ್, ಪಿಕಪ್—ಡ್ರಾಪ್ ಗೆ ಕ್ಯಾಬ್ ಸೌಲಭ್ಯ, ಚೆನ್ನಮ್ಮ ಪಡೆ ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಬ್ರಿಗೇಡ್ ರಸ್ತೆ, ಚರ್ಚ್ಸ್ಟ್ರೀಟ್, ಎಂ.ಜಿ.ರಸ್ತೆಯಲ್ಲಿ ಹೆಚ್ಚಾಗಿ ಹೊಸ ವರ್ಷಾಚರಣೆಗೆ ಜನಸಂದಣಿ ಸೇರುವುದರಿಂದ 15ಕ್ಕೂ ಹೆಚ್ಚು ವುಮೆನ್ಸ್ ಹೈಲ್ಯಾಂಡ್ ಸ್ಥಾಪಿಸಲಾಗಿದೆ.ಅದೇ ರೀತಿ ಇಂದಿರಾನಗರ, ಕೋರಮಂಗಲದಲ್ಲೂ ವುಮೆನ್ಸ್ ಹೈಲ್ಯಾಂಡ್ ತೆರೆಯಲಾಗಿದೆ. ನೈಟ್ ಪಾರ್ಟಿ ನಡೆಯುವ ಪಬ್, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಹೋಟೆಲ್ಗಳಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಹಿಳೆಯರಿಗಾಗಿ ಕ್ಯಾಬ್ ಸೌಲಭ್ಯಗಳನ್ನು ಆಯೋಜಕರೇ ಒದಗಿಸಲಿದ್ದಾರೆ. ಪಾರ್ಟಿಗಳಲ್ಲಿ ಪಾಲ್ಗೊಳ್ಳುವ ಮಹಿಳೆಯರು ಮದ್ಯ ಸೇವಿಸಿ ಅಸ್ವಸ್ಥರಾದರೆ ಅವರನ್ನು ಮನೆಗೆ ಕಳುಹಿಸಲು ಕ್ಯಾಬ್ ಸೌಲಭ್ಯವನ್ನು ಮಾಲೀಕರು ನೀಡಲಿದ್ದಾರೆ. ಅಲ್ಲದೆ ಅಂತಹ ಪರಿಸ್ಥಿತಿಯಲ್ಲಿ ತಮ್ಮ ವಾಹನಗಳನ್ನು ಚಲಾಯಿಸಲು ಸಾಧ್ಯವಾಗದಿದ್ದರೆ ಅವರುಗಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ಆಯೋಜಕರೇ ವಹಿಸಿಕೊಂಡು ಕ್ಯಾಬ್ ವ್ಯವಸ್ಥೆ ಮಾಡುವಂತೆ ನಗರ ಪೊಲೀಸ್ ಪೊಲೀಸರು ಸೂಚಿಸಿದ್ದಾರೆ. ಅಂದು ಕೇಂದ್ರ ವಿಭಾಗದ ಎಂ.ಜಿ.ರಸ್ತೆ,…
ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇದು ಡಿ.ಕೆ.ಸಹೋದರರ ಷಡ್ಯಂತ್ರ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಹೇಳಿದೆ. ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್ ಸರ್ಕಾರ, ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ.…
ಬೆಂಗಳೂರು: ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ರುಚಿಗೆ ಹೆಸರುವಾಸಿಯಾಗಿರುವ ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಈಗ ವೇ ಪ್ರೋಟೀನ್ ಯುಕ್ತ ಇಡ್ಲಿ ಹಾಗೂ ದೋಸೆ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬದಲಾದ ಜೀವನಶೈಲಿಯಿಂದಾಗಿ ನಗರ ಪ್ರದೇಶಗಳ ಜನರು ಹೆಚ್ಚೆಚ್ಚು ಸಿದ್ಧಪಡಿಸಲಾದ ಆಹಾರ ಉತ್ಪನ್ನಗಳ ಮೊರೆ ಹೋಗುತ್ತಿರುವುದನ್ನು ಮನಗಂಡು, ಆರೋಗ್ಯಕರವಾದ ಹಾಗೂ ರುಚಿಕರವಾದ ಇಡ್ಲಿ ಮತ್ತು ದೋಸೆಹಿಟ್ಟನ್ನು ಗ್ರಾಹಕರಿಗೆ ಒದಗಿಸಲು ನಿರ್ಧರಿಸಿ, ಈ ನೂತನ ಉತ್ಪನ್ನವನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ನಂದಿನಿ ಬ್ರ್ಯಾಂಡ್‌ನ ಇಡ್ಲಿ / ದೋಸೆ ಹಿಟ್ಟನ್ನು ಎರಡು ವಿಧದ ಪ್ಯಾಕ್ ಗಳಲ್ಲಿ ಅಂದರೆ 450 ಗ್ರಾಂ.ಗೆ ₹40 ಹಾಗೂ 900 ಗ್ರಾಂ.ಗೆ ₹80 ರಂತೆ ಮಾರಾಟ ದರ ನಿಗದಿಪಡಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx