Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ ಬಿಜೆಪಿ ನಾಯಕ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಅವರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ನಿಯೋಗ ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿತು. ಈ ವೇಳೆ ಪೋಲಿಸ್ ಕಮಿಷನರ್ ಯಡಾ ಮಾರ್ಟಿನ್ ಅವರ ಜೊತೆ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಶೀಘ್ರದಲ್ಲೇ ಬಂಧಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು ಈ ವೇಳೆ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಅವರು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಖಂಡಿತವಾಗಿಯೂ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತರಲು ಪೊಲೀಸ್ ಕಮಿಷನರ್ ಅವರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಡೋಣಿ, ಧನಶ್ರೀ ದೇಸಾಯಿ, ಮಹಾನಗರ…
ತುಮಕೂರು: ರೈತರು ಸಾವಯವ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಮೂಲಕ ಸುಸ್ಥಿರ ಜೀವನವನ್ನು ನಡೆಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಎನ್. ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ರಾಷ್ಟ್ರೀಯ ರೈತರ ದಿನಾಚರಣೆಯ ಅಂಗವಾಗಿ ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ “ಸಮಗ್ರ ಕೃಷಿ ಪದ್ಧತಿ” ಕುರಿತು ರೈತರು ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಜನ್ಮದಿನದ ಸ್ಮರಣಾರ್ಥವಾಗಿ ಪ್ರತೀ ವರ್ಷ ಡಿಸೆಂಬರ್ 23ರಂದು ಭಾರತದಾದ್ಯಂತ ರಾಷ್ಟ್ರೀಯ ರೈತರ ದಿನಾಚರಣೆಯನ್ನು ಆಚರಿಸಲಾಗುವುದು. ಚೌಧರಿ ಚರಣ್ ಸಿಂಗ್ ಅವರಿಗಿದ್ದ ರೈತಪರ ಕಾಳಜಿ ಹಾಗೂ ರೈತರ ಶ್ರೇಯೋಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದ ಅವರು ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡುವುದು ಎಲ್ಲಾ ರೈತರ ಮೊದಲ ಆದ್ಯತೆಯಾಗಿರಬೇಕು ಎಂಬ ಸಂದೇಶವನ್ನು ನೀಡಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಯ್ಕೆಯಾದ ಪ್ರಗತಿಪರ…
ತುಮಕೂರು: ಜಿಲ್ಲೆಯ 94 ಅಂಗನವಾಡಿ ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್‌ಲೈನ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 3,249 ಹಾಗೂ ಸಹಾಯಕಿಯರ ಹುದ್ದೆಗೆ 2003 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1,537 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 963 ಅಂಗನವಾಡಿ ಸಹಾಯಕಿಯರ ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣಗೊಂಡ ಅರ್ಜಿಗಳನ್ನು ಡಿಸೆಂಬರ್ 26 ರಿಂದ 2025ರ ಜನವರಿ 5ರೊಳಗೆ ವೆಬ್ ಸೈಟ್ https://karnemakaone.kar.nic.in/abcd/ ನಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಅಪ್ ಲೋಡ್ ಮಾಡಬಹುದಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 4 ಹಂತಗಳನ್ನು ಅನುಸರಿಸಬೇಕು. ಮೊದಲ ಹಂತದಲ್ಲಿ ಹುದ್ದೆಯನ್ನು ಆಯ್ಕೆ ಮಾಡಿ ನಿಗಧಿತ ಅರ್ಜಿ ನಮೂನೆ ತುಂಬಿ ಸಲ್ಲಿಸಬೇಕು. ಬಳಿಕ ಅರ್ಜಿಯ ಐಡಿಯನ್ನು ಟಿಪ್ಪಣಿ ಮಾಡಬೇಕು. 2ನೇ ಹಂತದಲ್ಲಿ…
ತುಮಕೂರು: ಜಿಲ್ಲಾ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 255 ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಜಿಲ್ಲಾ ಗೃಹರಕ್ಷಕದಳದ ಕಚೇರಿಯಿಂದ ಡಿಸೆಂಬರ್ 27ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು 2025ರ ಜನವರಿ 2ರೊಳಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ. ಗೃಹರಕ್ಷಕ ಹುದ್ದೆಯು ಖಾಯಂ ನೌಕರಿಯಾಗಿರುವುದಿಲ್ಲ. ಯಾವುದೇ ರೀತಿಯ ಮಾಸಿಕ ಸಂಬಳ ಹಾಗೂ ವಿಶೇಷ ಭತ್ಯೆಗಳನ್ನು ನೀಡಲು ಅವಕಾಶವಿರುವುದಿಲ್ಲ. ತುರ್ತು ಸಂದರ್ಭದಲ್ಲಿ ಕರ್ತವ್ಯ ಮತ್ತು ಚುನಾವಣೆ ಕರ್ತವ್ಯ ನಿರ್ವಹಿಸಿದ ದಿನದಂದು ಗೌರವ ಧನ ಸೌಲಭ್ಯವನ್ನು ನೀಡಲಾಗುವುದು. ಗೌರವಧನವನ್ನು ಬ್ಯಾಂಕ್ ಉಳಿತಾಯ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಪ್ರತಿ ಮಾಹೆಯಲ್ಲಿ 4 ಕವಾಯತುಗಳು, ವಾರದಲ್ಲಿ ಒಂದು ದಿನದಂತೆ ನಡೆಸಲಾಗುವುದು. ಅಭ್ಯರ್ಥಿಗಳು 19 ರಿಂದ 40 ವರ್ಷದೊಳಗಿನವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ 10ನೇ ತರಗತಿ ಅಂಕಪಟ್ಟಿ, ಜನ್ಮ ದಿನಾಂಕ ದೃಢೀಕರಣ (ಟಿ.ಸಿ.), ಆಧಾರ್ ಕಾರ್ಡ್ ಮತ್ತು ಪಾನ್…
ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–2ರ ಹೆಬ್ಬೂರು ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 26ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೆಬ್ಬೂರು, ಸಿರಿವರ, ಕಣಕುಪ್ಪೆ ಹಾಗೂ ಬಳ್ಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 30 ದಿನಗಳ ಉಚಿತ ಮೊಬೈಲ್ ರಿಪೇರಿ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರುವಂತಹ 18 ರಿಂದ 45 ವಯೋಮಿತಿಯೊಳಗಿರುವ ಹಾಗೂ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಜನವರಿ 5ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 0816-2243386, ಮೊ.ಸಂ: 9738351048, 9663680001ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಬೆಸ್ಕಾಂ ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಬ್ರಹ್ಮಸಂದ್ರ ಉಪಸ್ಥಾವರದಲ್ಲಿ ರಿಪೇರಿ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಚಿನ್ನೇನಹಳ್ಳಿ, ತಾಳಗುಂದ, ಸೀಬಿ, ತರೂರು, ಸೀಬಿ ಅಗ್ರಹಾರ ಹಾಗೂ ಯಲದಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಯ ಜಿ.ಹೆಚ್. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು:ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತರಾಜಕಾರಣದ ಬಿಕ್ಕಟ್ಟನ್ನುಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದುದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರುರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತ್ರ ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತ್ರ ಶಿಕ್ಷಕರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನುತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವಏಕತ್ವವಾಗಿ ಸರ್ವಾಧಿಕಾರ ತಲೆದೂರಿದೆ. ಬಹುತ್ವದ ನಾಯಕತ್ವ ಇಂದಿನ ಅಗತ್ಯವಾಗಿದೆ. ನಾಯಕನಲ್ಲಿ ಬಹುತ್ವಜೀವಿಸಬೇಕು…
ತುಮಕೂರು: ಗಣಿತಶಾಸ್ತ್ರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಫಲರಾಗಲು ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ವಿವಿಯ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ.ಹೇಳಿದರು. ವಿವಿಕಲಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗವು ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿ, ಗಣಿತಶಾಸ್ತ್ರದ ಮಹತ್ವ, ಇತಿಹಾಸ, ಅವಕಾಶಗಳ ಕುರಿತು ತಿಳಿಸಿದರು. ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಸಹ ಪ್ರಾಧ್ಯಾಪಕಿ ಡಾ.ಸಿ.ಶೋಭಾ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಂಡು ದೊರೆತ ಅವಕಾಶವನ್ನು ಸಮರ್ಪಕವಾಗಿಬಳಸಿಕೊಳ್ಳಿ ಎಂದು ಸಾಹೇ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಕೆ.ಬಿ.ಲಿಂಗೇಗೌಡ ಕರೆ ನೀಡಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪಿಜಿ ಸೆಮಿನಾರ್‌ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸಾಹೇ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಥಮ ಬ್ಯಾಚ್ ನ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಕೌಶಲ್ಯವನ್ನು ಕಲಿಯುವ ಅನಿವಾರ್ಯತೆ ಇದೆ. ಕೌಶಲ್ಯವನ್ನು ಬೆಳಸಿಕೊಂಡು ಧೈರ್ಯದಿಂದ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಾಹೇ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ಡಾ.ಎಂ.ಝಡ್. ಕುರಿಯನ್ ಮಾತನಾಡಿ, ನಿಮ್ಮ ಯಶಸ್ಸಿಗೆ ನೀವೇ ಕಾರಣ ಹಾಗಾಗಿ ಯಶಸ್ಸಿನ ಕಡೆ ಮುನ್ನುಗ್ಗಿ. ಬಂದ ಅವಕಾಶವನ್ನು ಬಿಟ್ಟು ಮತ್ತೊಂದು ಅವಕಾಶಕ್ಕೆ ಕಾಯಬೇಡಿ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉದ್ಯಮವನ್ನು ಸೃಷ್ಟಿಸುವ ಕಡೆ ಗಮನಹರಿಸಿ ಎಂದು ಹೇಳಿದರು. ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ರವಿಪ್ರಕಾಶ್ ಮಾತನಾಡಿ, ಪ್ರಸಕ್ತ ಸಂದರ್ಭದಲ್ಲಿ ಬೇಡಿಕೆ ಇರುವ ಎಂಬಿಎ ಕೋರ್ಸ್ ಗೆ ಬೇಕಾದ ಎಲ್ಲಾ ಸೌಲಭ್ಯವನ್ನು ನೀಡಲಾಗಿದೆ.…