Author: admin

ಚಿತ್ರದುರ್ಗ: ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದ್ದು, ಸದ್ಯ ಶಿಕ್ಷಕ ಪರಾರಿಯಾಗಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿರುವ ವೇದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್​ ಆದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದೆ. ಒಂಬತ್ತು ವರ್ಷದ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಬಾಲಕ ತನ್ನ ಅಜ್ಜಿಗೆ ಕರೆ ಮಾಡಲು ಮೊಬೈಲ್ ಫೋನ್ ಬಳಸಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಸಾರವಾಗಲು ಪ್ರಾರಂಭಿಸಿದ ಕೂಡಲೇ ಶಿಕ್ಷಕ ನಾಪತ್ತೆಯಾಗಿದ್ದಾನೆ. ಪೊಲೀಸರು ಶಿಕ್ಷಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಗುರು ತಿಪ್ಪೇಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಅವರು ಘಟನೆ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ…

Read More

ತುಮಕೂರು:  ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸರ್ಕಾರಿ, ಖಾಸಗಿ ಕಾರ್ಯಕ್ರಮ ಸೇರಿ ಮೈದಾನದಲ್ಲಿ ಸದಾ ಒಂದಲ್ಲೊಂದು ಚಟುವಟಿಕೆ ನಡೆಯುತ್ತಿರುತ್ತದೆ. ಆದರೆ, ಕಾರ್ಯಕ್ರಮ ಆಯೋಜಕರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮೈದಾನದಲ್ಲಿ ಕಾಲಿಟ್ಟ ಕಡೆಯಲ್ಲಿ ಮೊಳೆಗಳು ಕಾಲಿಗೆ ಚುಚ್ಚಿಕೊಳ್ಳುತ್ತಿವೆ. ಮೈದಾನದಲ್ಲಿ ದಸರಾ ಪ್ರಯುಕ್ತ ಸುಮಾರು 11 ದಿನಗಳ ಕಾಲ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದಕ್ಕಾಗಿ ಬೃಹತ್‌ ಪೆಂಡಾಲ್ ಅಳವಡಿಸಲಾಗಿತ್ತು. ಈ ಸಮಯದಲ್ಲಿ ನೆಲಕ್ಕೆ ಹೊಡೆದಿದ್ದ ಮೊಳೆಗಳನ್ನು ಈವರೆಗೆ ಹೊರ ತೆಗೆದಿಲ್ಲ. ಇದರ ನಂತರ ನಾನಾ ಕಾರ್ಯಕ್ರಮಗಳು ಮೈದಾನದಲ್ಲಿ ನಡೆದವು. ಅವರು ಸಹ ಇದನ್ನು ಮುಂದುವರಿಸಿದ್ದು, ಮೊಳೆ ಮತ್ತಷ್ಟು ಜಾಸ್ತಿಯಾದವು. ಇದರ ಪರಿಣಾಮ ಈಗ ವಿದ್ಯಾರ್ಥಿಗಳು, ಕ್ರೀಡಾಪಟುಗಳ ಮೇಲೆ ಬೀಳುತ್ತಿದೆ. ಅಪಾಯದಲ್ಲಿ ಆಟವಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ. ‘ತುಮಕೂರು ದಸರಾ’ ಅಂಗವಾಗಿ ಧಾರ್ಮಿಕ ಮಂಟಪ, ಮುಖ್ಯ ವೇದಿಕೆ ನಿರ್ಮಿಸಿದ್ದ ಜಾಗದಲ್ಲಿ ಮೊಳೆಗಳ ರಾಶಿಯೇ ಇದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನೀರಿನ ಹರಿವಿಗೆ ಕೆಲ ಮೊಳೆಗಳು ಕಿತ್ತು ಬಂದಿವೆ. ಕ್ರೀಡಾಪಟುಗಳು, ಮೈದಾನದಲ್ಲಿ…

Read More

ಚಿಕ್ಕನಾಯಕನಹಳ್ಳಿ: ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಮಂಗಳವಾರ ಸಂಜೆ ಸಾವನ್ನಪ್ಪಿದ್ದಾರೆ. ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅಣ್ಣನ ಮಗನ ಮಗಳು ಪುಣ್ಯ (11) ಮೃತಪಟ್ಟವರು. ಮಂಗಳವಾರ ಸಂಜೆ 6 ಗಂಟೆಗೆ ಗ್ರಾಮದ ಬಳಿಯ ಕೆರೆ ಕಡೆ ಬಹಿರ್ದೆಸೆಗೆ ಶ್ರಾವ್ಯ, ಪುಣ್ಯ ಸೇರಿದಂತೆ ಮೂವರು ಹೋಗಿದ್ದಾರೆ. ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಶ್ರಾವ್ಯ ಹಾಗೂ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಮತ್ತೊಬ್ಬಳು ಬುದ್ಧಿಮಾಂದ್ಯಳಾಗಿದ್ದು ಮನೆಗೆ ಬಂದು ಕೆರೆಗೆ ಬಿದ್ದಿರುವ ವಿಷಯ ತಿಳಿಸಿದ್ದಾರೆ. ಕೂಡಲೇ ವೆಂಕಟೇಶ್‌ ಹಾಗೂ ಮಂಜುನಾಥ್‌ ರಕ್ಷಣೆಗೆ ತೆರಳಿದ್ದಾರೆ. ಈ ವೇಳೆ ವೆಂಕಟೇಶ್ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ವೆಂಕಟೇಶ್ ಹಾಗೂ ಶ್ರಾವ್ಯ ಮೃತಪಟ್ಟಿದ್ದರೆ, ಪುಣ್ಯ ಹುಳಿಯಾರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.  ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೀದರ್: ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೀದರ್‌ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ (26), ರತಿಕಾಂತ ಬಸಗೊಂಡಾ (30), ಸಂತೋಷ ಬಸಗೊಂಡಾ (20), ಹಾಗೂ ಸದಾನಂದ ಬಸಗೊಂಡಾ (21) ಮೃತರು. ಗಂಭೀರ ಗಾಯಗೊಂಡ ದಿಗಂಬರ ಜಗನ್ನಾಥ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ನಾಲ್ವರಲ್ಲಿ ಮೂರು ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ. ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು. ತಡರಾತ್ರಿ 15 ಕೇಸ್ ದಾಖಲಾಗಿದೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ. ಇನ್ನು ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ ದಾಖಲಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಗಲಭೆಗಳನ್ನು ನಿಯಂತ್ರಿಸುವುದು ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸುವುದರಿಂದ ಸಮಾಜವು ಅವರ ತ್ಯಾಗಗಳನ್ನು ಸ್ಮರಿಸಬೇಕು. ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಮೈಸೂರು ರಸ್ತೆಯ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಮೈದಾನದಲ್ಲಿ ನಡೆದ ಪೊಲೀಸ್ ಸ್ಮರಣಾರ್ಥ ದಿನಾಚರಣೆ ಕಾರ್ಯಕ್ರಮದಲ್ಲಿ ಎಂಟು ಧೈರ್ಯಶಾಲಿ ಪೊಲೀಸರಿಗೆ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿ, ‘ಮೃತ ಪೊಲೀಸ್ ಸಿಬ್ಬಂದಿಯ ಆತ್ಮಕ್ಕೆ ಶಾಂತಿ ಸಿಗಲಿ. ಸರ್ಕಾರ ಅವರ ಕುಟುಂಬಗಳೊಂದಿಗೆ ನಿಲ್ಲುತ್ತದೆ’ ಎಂದು ಹೇಳಿದರು. ‘ಕರ್ನಾಟಕದ ಎಂಟು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಅವರ ಕುಟುಂಬ ಸದಸ್ಯರು ಇಲ್ಲಿ ಇದ್ದಾರೆ. ಕೆಲವರು ತಮ್ಮ ಕರ್ತವ್ಯ ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶದಾದ್ಯಂತ 191 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಗಳಿಗೆ ಅವರ ನಷ್ಟದ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ. ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಶಾಸಕ ಅಶೋಕ ಪಟ್ಟಣ ಅವರ ಆಪ್ತ ಮಲ್ಲಣ್ಣ ಯಾದವಾಡ ಅವರು ಗೆಲುವು ಸಾಧಿಸಿದ್ದರು. ಈ ಗೆಲುವಿನ ಸಂಭ್ರಮಾಚರಣೆ ಬಳಿಕ ಪಿಕೆಪಿಎಸ್ ಮಾಜಿ ಅಧ್ಯಕ್ಷ 40 ವರ್ಷದ ಗಿರಿಯಪ್ಪ ಗಂಟೋಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಮದುರ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ ಅವರ ಪರ ಪ್ರಚಾರ ಮಾಡಿದ್ದ ಗಿರಿಯಪ್ಪ ಗಂಟೋಟಿ ನಿನ್ನೆ ವಿಜಯೋತ್ಸವದಲ್ಲಿ ಭಾಗವಹಿಸಿದ್ದರು. ಆದರೆ, ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ರಾಜ್ಯದ ಸಂಪನ್ಮೂಲಗಳನ್ನು ‘ಹೈಕಮಾಂಡ್‌ ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’ ಮತ್ತು ‘ಕಾಂಗ್ರೆಸ್‌ಗೆ ಅಲ್ಲ’ ಎಂದು ಮಂಗಳವಾರ ಹೇಳಿದ್ದಾರೆ. ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ‘ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ’ ಎಂದಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು…

Read More

ಬೆಂಗಳೂರು: ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆಯೊಂದು ಚನ್ನಪಟ್ಟಣ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಪುರದಲ್ಲಿ ಸೋಮವಾರ ನಡೆದಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ದುರ್ದೈವಿ. ಮನೆ ಒರೆಸುವ ಸಲುವಾಗಿ ಮುಸ್ಕಾನ್ ಅವರು ಟಬ್​ಗೆ ನೀರನ್ನು ತುಂಬಿಸಿ ಇಟ್ಟಿದ್ದಾರೆ. ಈ ನಡುವೆ ಮಗು ಅಲ್ಲೇ ಆಟವಾಡಿಕೊಂಡಿತ್ತು. ಚನ್ನಪಟ್ಟಣದ ಖಾಸಗಿ ಹೋಟಲ್ ವೊಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಮಗುವಿನ ತಂದೆ ಶಂಷಾದ್ ಕೆಲಸ ಮುಗಿಸುಕೊಂಡು ಮನೆಗೆ ಬಂದಿದ್ದಾರೆ. ತೀವ್ರ ಬಾಯಾರಿಕೆಯಿಂದ ಹೆಂಡತಿ ಬಳಿ ಕುಡಿಯಲು ನೀರು ಕೇಳಿದ್ದಾರೆ. ಮುಸ್ಕಾನ್ ಪತಿಗಾಗಿ ನೀರು ತರಲು ಹೋಗಿ ಬರುವಷ್ಟರಲ್ಲಿ ಮಗು ನೀರು ತುಂಬಿದ್ದ ಟಬ್ ಒಳಗೆ ಬಿದ್ದಿದೆ. ಟಬ್​ಗೆ ಬಿದ್ದ ತಕ್ಷಣವೇ ಮಗುವಿಗೆ ಪ್ರಜ್ಞೆ ಕಳೆದುಕೊಂಡಿದೆ. ಇದರಿಂದ ಭಯಗೊಂಡ ಪೋಷಕರು ಕೂಡಲೇ ಹತ್ತಿರದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲೇ ಖುಷಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ…

Read More

ತುಮಕೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಅಮಿಷಕ್ಕೆ ಒಳಗಾಗಿ ನಗರದ ಸಿದ್ಧಗಂಗಾ ಬಡಾವಣೆ ನಿವಾಸಿ, ಖಾಸಗಿ ಕಂಪನಿಯೊಂದರ ನಿರ್ವಾಹಕ ಶರತ್ ಬಾಬು ಎಂಬುವರು 15.31 ಲಕ್ಷ ಕಳೆದುಕೊಂಡಿದ್ದಾರೆ. ಫೇಸ್ ಬುಕ್‌ ನಲ್ಲಿ ಷೇರು ಮಾರುಕಟ್ಟೆ ಜಾಹೀರಾತು ವೀಕ್ಷಿಸಿ ಅದರಲ್ಲಿನ ಲಿಂಕ್ ಕ್ಲಿಕ್ ಮಾಡಿದ್ದಾರೆ. ಆರೋಪಿಗಳು ಫೇಸ್‌ ಬುಕ್‌ ನಲ್ಲಿ ವಾಟ್ಸಾಪ್ ಗ್ರೂಪ್ ಲಿಂಕ್ ಕಳುಹಿಸಿ, ‘ಪ್ಯೂ‌ ಫೋಕಸ್”, ‘ವಿಐಪಿ ಸರ್ವೀಸ್ 359 ಗ್ರೂಪ್‌ ಗಳಿಗೆ ಶರತ್‌ ಅವರನ್ನು ಸೇರ್ಪಡೆ ಮಾಡಿದ್ದಾರೆ. ಇದಾದ ಬಳಿಕ ಶರತ್ ‘ಯು ಪ್ರೊ’ ಆ್ಯಪ್ ಇನ್‌ ಸ್ಟಾಲ್ ಮಾಡಿಕೊಂಡಿದ್ದಾರೆ. ನಾವು ಹೇಳಿದಂತೆ ಹಣ ವರ್ಗಾಯಿಸಿದರೆ ಅದನ್ನು ನಾವು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಿಮಗೆ ಲಾಭ ನೀಡಲಾಗುವುದು ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಶರತ್, ಮೊದಲ ಹಂತದಲ್ಲಿ 4.70 ಲಕ್ಷ ವರ್ಗಾಯಿಸಿದ್ದಾರೆ. ವಾಪಸ್ ಕೇಳಿದಾಗ ನೀವು ಇದುವರೆಗೆ ಹೂಡಿಕೆ ಮಾಡಿದ ಹಣಕ್ಕೆ ಶೇ.200ರಷ್ಟು ಲಾಭ ಬಂದಿದೆ. ಸದರಿ ಹಣ ಪಡೆಯಲು 8.60…

Read More