Author: admin

ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ತಾಂಡಾಗಳ ನಿರುದ್ಯೋಗಿ ಬಂಜಾರ ಸಮುದಾಯದ ಯುವಕ/ಯುವತಿಯರಿಗಾಗಿ ಬಂಜಾರ ಸಂಸ್ಕೃತಿ, ಸಂವಿಧಾನ ಹಾಗೂ ವೃತ್ತಿ ತರಬೇತಿ ಕುರಿತು ಅರಿವು ಮೂಡಿಸಲು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ತರಬೇತಿ ಪಡೆಯಲಿಚ್ಛಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪಿಯುಸಿ/ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯು 2 ದಿನಗಳ ಕಾಲ ನಡೆಯಲಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಮದ ಜಾಲತಾಣ https://banjarathanda.karnataka.gov ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ತುಮಕೂರು ವಲಯ, ಸರಸ್ವತಿ ಪುರಂ, 2ನೇ ಹಂತ, ತುಮಕೂರು-572102 ಅಥವಾ ದೂ.ವಾ.ಸಂ.0816-2956063 ಅಥವಾ ಇ-ಮೇಲ್: tumkurktdcl@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ…

Read More

ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ನೀಡುವ ಸಹಾಯಧನ ಮತ್ತು ಸಾಲ ಸೌಲಭ್ಯಕ್ಕಾಗಿ ಆಯ್ಕೆ ಸಮಿತಿ ಮೂಲಕ ಆಯ್ಕೆಯಾದ ಫಲಾಪೇಕ್ಷಿಗಳು ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ. ಸೌಲಭ್ಯಕ್ಕೆ ಸಂಬಂಧಿಸಿದಂತೆ ಫಲಾಪೇಕ್ಷಿಗಳು ಮಧ್ಯವರ್ತಿಗಳಿಂದ ಮೋಸ ಹೋದಲ್ಲಿ ನಿಗಮ ಜವಾಬ್ದಾರಿಯಾಗುವುದಿಲ್ಲ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಖುದ್ದಾಗಿ ಕಚೇರಿಯ ಅಧಿಕಾರಿ/ಸಿಬ್ಬಂದಿಗಳನ್ನು ಭೇಟಿ ಮಾಡಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿಯಿದ್ದ 73 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3ರ ಅನುಪಾತದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈಗಾಗಲೇ ತುಮಕೂರು ಜಿಲ್ಲಾ ವೆಬ್ ಸೈಟ್ www.tumkur.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಬಹು ಉಪಯೋಗಿ ಸಭಾಂಗಣದಲ್ಲಿ 2025 ಜನವರಿ 6ರಂದು ಬೆಳಿಗ್ಗೆ 10ಗಂಟೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗುವುದು. ತಾತ್ಕಾಲಿಕ ಪಟ್ಟಿಯನ್ವಯ ಆಯ್ಕೆಯಾಗಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಎಸ್.ಎಸ್.ಎಲ್.ಸಿ/ಪಿಯುಸಿ ಅಂಕಪಟ್ಟಿ, ಸಿಂಧುತ್ವ ಪ್ರಮಾಣ ಪತ್ರ, ಪೊಲೀಸ್ ವರದಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆ ನಡೆಯುವ ಸ್ಥಳದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ದೂ.ವಾ.ಸಂ: 0816–2278718ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಲೆಮಾರಿ ಮತ್ತು ಸುಡುಗಾಡು ಸಿದ್ದ ಜನಾಂಗಕ್ಕೆ ಸೇರಿದ 30ಕ್ಕೂ ಹೆಚ್ಚು ಕುಟುಂಬಗಳು ಸುಮಾರು 50 ವರ್ಷಗಳಿಂದ ವಾಸವಿದ್ದಾರೆ ಇದೀಗ ಇವರ ಬಹುಕಾಲದ ಬೇಡಿಕೆಯನ್ನ ಈಡೇರಿಸುವುದಾಗಿ ಶಾಸಕ ಸುರೇಶ್ ಬಾಬು ಭರವಸೆ ನೀಡಿದ್ದಾರೆ ಚಿಕ್ಕನಾಯಕನಹಳ್ಳಿಯ ದಬ್ಬೇಘಟ್ಟದ ಗುಂಡದೋಪಿನಲ್ಲಿ ವಾಸವಿದ್ದ ಈ ಅಲೆಮಾರಿ ಬುಡಕಟ್ಟು ಜನಾಂಗದ ಜನರಿಗೆ ಶಾಸಕ ಸುರೇಶ್ ಬಾಬು ನಿವೇಶನ ದೊರಕಿಸಿಕೊಡುವ ಭರವಸೆಯನ್ನ ಈಡೇರಿಸಿದ್ದಾರೆ. ಅಲೆಮಾರಿಗಳಿಗೆ ಒಂದೇ ಜಾಗದಲ್ಲಿ ಸ್ಥಿರವಾಗಿ ಉಳಿಯುವ ಕಾಯಕಲ್ಪ ನಮ್ಮಿಂದ ಆಗಿದೆ ಎಂದು ಇದೇ ವೇಳೆ ಶಾಸಕ ಸುರೇಶ್ ಬಾಬು ಹೇಳಿದ್ದಾರೆ. ನಿಮ್ಮ ಋಣದಲ್ಲಿ ಇರುತ್ತೇವೆ: ತಮ್ಮ ಬೇಡಿಕೆಯನ್ನು ಈಡೇರಿಸಿದ ಶಾಸಕ ಶಾಸಕ ಸುರೇಶ್ ಬಾಬು ಅವರ ಕಾರ್ಯಕ್ಕೆ ಅಲೆಮಾರಿ ಬುಡಕಟ್ಟು ಜನಾಂಗ ಪ್ರತಿಕ್ರಿಯಿಸಿ, ಇದು ಅಲೆಮಾರಿಗಳ 30 ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ,   ನಾವು ಸತ್ತರೂ, ನಮ್ಮ ಮಕ್ಕಳಿಗೆ ಹೇಳಿ ಸಾಯ್ತೀವಿ…! ನೀವು ನೀಡಿದ ಭರವಸೆಯನ್ನ ಈಡೇರಿಸಿದ್ದೀರಿ ಎಂದು.  ನಾವು ಸಾಯುವವರೆಗೂ ನಿಮ್ಮ ಋಣದಲ್ಲಿ ಇರುತ್ತೇವೆ ಎಂದು ಹೇಳಿದರು.…

Read More

ತುಮಕೂರು: ಚಿಕ್ಕವಯಸ್ಸಿನಲ್ಲಿಯೇ ಗಣಿತಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿ ವಿಶ್ವದಾದ್ಯಂತಗಣಿತ ಪ್ರಿಯರ ಹೃದಯಗೆದ್ದ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಬದುಕು ಎಲ್ಲರಿಗೂ ಮಾದರಿ ಎಂದು ಕುವೆಂಪು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ ಬಿ.ಜೆ.ಗಿರೀಶ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನದ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗಣಿತ ಶಾಸ್ತ್ರ ದಿನಾಚರಣೆಯಲ್ಲಿ ಮಾತನಾಡಿದರು. ಶ್ರೀನಿವಾಸ ರಾಮಾನುಜನ್‌ ಅವರಜೀವನ, ಕೃತಿಗಳು ಮತ್ತುಗಣಿತ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದರು. ಬದುಕಿದರೆ ಸಾವಿರಾರು ವರ್ಷಗಳು ಬದುಕುವಂತಹ ಸಾಧನೆ ಮಾಡಬೇಕೆಂದುಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣಿತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ಚಂದ್ರಾಲಿ ಬೈಷ್ಯ ವಹಿಸಿದ್ದರು. ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಾಟೀಲ್ ಮಲ್ಲಿಕಾರ್ಜುನ್ ಬಿ., ಸಹಾಯಕ ಪ್ರಾಧ್ಯಾಪಕರಾದ ಡಾ.ಬೋರೆಗೌಡ ಎಚ್.ಎಸ್., ಡಾ.ನರಹರಿ ಎನ್. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು:  ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 24ರ ಬೆಳಿಗ್ಗೆ 11:30 ಗಂಟೆಗೆ ಶಿರಾ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ–2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿ.ಟಿ. ವಿಜಯಲಕ್ಷ್ಮೀ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಶಿರಾ ತಾಲೂಕಿನ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯ ನಿವೇದಿತಾ ರವೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ. ಚಂದ್ರಶೇಖರಪ್ಪ ಭಾಗವಹಿಸಲಿದ್ದಾರೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ತಿಳಿಸಿದ್ದಾರೆ. ನಮ್ಮತುಮಕೂರಿನ…

Read More

ತುಮಕೂರು: : ಬೆಸ್ಕಾಂ ಗುಬ್ಬಿ ಉಪಸ್ಥಾವರದ ಶಕ್ತಿ ಪರಿವರ್ತಕವು ವಿಫಲವಾಗಿರುವುದರಿಂದ ಡಿಸೆಂಬರ್ 24 ರಿಂದ 27ರವರೆಗೆ ಗೋಪಾಲಪುರ, ಜಿ. ಹೊಸಹಳ್ಳಿ, ತಿಪ್ಪೂರು, ಸಿಂಗೋನಹಳ್ಳಿ, ತೊರೆಹಳ್ಳಿ, ಕೊಡಿಗೆಹಳ್ಳಿ, ಕೊಪ್ಪ, ಹೇರೂರು, ಎಂ.ಹೆಚ್ ಪಟ್ಟಣ, ಉದ್ದೇಹೊಸಕೆರೆ, ಹೊನ್ನವಳ್ಳಿ, ಬಿದರೆ, ಅಮ್ಮನಘಟ್ಟ, ಗುಬ್ಬಿ ಪಟ್ಟಣ, ಕೆ.ಎಂ.ಎಫ್, ತೊಂಗನಹಳ್ಳಿ, ದೊಡ್ಡಕಟ್ಟಿಗೆನಹಳ್ಳಿ, ಬೆವಿಕಂ ಉಪವಿಭಾಗ, ಹೊದಲೂರು ಕೆರೆ, ಮಾದಾಪುರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸೀಮಿತ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯೊಂದಿಗೆ ವಿದ್ಯುತ್ ನೀಡಲಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ, ಬೆಳಗುಲಿ ಮತ್ತು ದೇವರಹಳ್ಳಿ ಗ್ರಾಮದ ಸರಹದ್ದಿನಲ್ಲಿ ಹಾದು ಹೋಗಿರುವ ವಿದ್ಯುತ್ ಪ್ರಸರಣಾ ಮಾರ್ಗವನ್ನು ಡಿಸೆಂಬರ್ 24 ಅಥವಾ ತದನಂತರ ವಿದ್ಯುದ್ದೀಕರಣಗೊಳಿಸಲಾಗುವುದು ಎಂದು ವಿದ್ಯುತ್ ಪ್ರಸರಣಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಬೆಳಗುಲಿ ಗ್ರಾಮದಲ್ಲಿ ಉದ್ದೇಶಿತ 110/11 ಕೆವಿ ವಿದ್ಯುತ್ ಉಪಕೇಂದ್ರ ಹಾಗೂ ಹಾಲಿ ಇರುವ 110 ಕೆವಿ (ಕೆಬಿ ಕ್ರಾಸ್-ಹುಳಿಯಾರು) ಏಕಮುಖ ಪ್ರಸರಣ ಮಾರ್ಗದಿಂದ 1.350 ಕಿ.ಮೀ. ಉದ್ದದ 110 ಕೆವಿ ಲಿಲೋ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ವಿದ್ಯುದ್ದೀಕರಣಗೊಳಿಸಲಾಗುವುದು. ಸಾರ್ವಜನಿಕರು ಸದರಿ ಗ್ರಾಮಗಳ ವಿದ್ಯುತ್ ಪ್ರಸರಣಾ ಮಾರ್ಗದಲ್ಲಿರುವ ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲಿ ಮಾಡಬಾರದು. ಯಾರಾದರೂ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ…

Read More

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಖಾಸಗಿ ವ್ಯಕ್ತಿಯೊಬ್ಬರ ತೋಟದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದ್ದ ಡ್ರೋನ್ ಪ್ರತಾಪ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರತಾಪ್‌ ಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಬಿಗ್ ಬಾಸ್ ರಿಯಾಲಿಟಿ ಶೋನ  ಸ್ಪರ್ದಿಯಾಗಿದ್ದ ಪ್ರತಾಪ್‌, ತುಮಕೂರಿನ ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟದ ಪ್ರಯೋಗ ಮಾಡಿದ್ದನು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಸ್ಪೋಟದ ಪ್ರಯೋಗ ಮಾಡಿದ್ದಲ್ಲದೆ, ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದನು. ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಅರೆಸ್ಟ್ ಮಾಡಿದ್ದರು . ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಡ್ರೋನ್ ಪ್ರತಾಪ್‌ ಗೆ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ…

Read More

ಬೆಂಗಳೂರು: ಡಿಜಿಟಲ್​ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 11.8 ಕೋಟಿ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯೊಬ್ಬರು ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈ ಕ್ರೈಂ ಬ್ರ್ಯಾಂಚ್​ ಪೊಲೀಸರೆಂದು ಹೇಳಿಕೊಂಡು ಸೈಬರ್​ ವಂಚಕರು ಸುಭಾಷ್ ಅವರಿಗೆ ಕರೆ ಮಾಡಿದ್ದು, ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್​ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ. ಈಗ ಕೇಸ್​ ಸುಪ್ರೀಂಕೋರ್ಟ್​​ನಲ್ಲಿ ಇದೆ  ಎಂದು ಬೆದರಿಸಿದ್ದರು. ಬಳಿಕ ಸುಭಾಷ್ ಅವರನ್ನು ಒಂದು ತಿಂಗಳುಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಹೀಗಾಗಿ ಅವರು ಯಲಹಂಕದ ಲಾಡ್ಜ್ ವೊಂದರಲ್ಲಿ ಇದ್ದರು.  ಸುಭಾಷ್ ಅವರು ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್​ ಮಾಡಿದ ಸೈಬರ್ ವಂಚಕರು ಟೆಕ್ಕಿಯಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ.  ಬಳಿಕ ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ.…

Read More