Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸಗೂರು ಸಹಯೋಗದೊಂದಿಗೆ “ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೊಂದಿಗೆ 501 ಉಚಿತ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಜರಗಿತು. ಈ ಸಂಧರ್ಭದಲ್ಲಿ ಕುಟುಂಬದ ವತಿಯಿಂದ ವಿವಿಧ ತಳಿಗಳ 501 ಸಸಿಗಳನ್ನು ವಿತರಿಸಲಾಯಿತು.ವೇದಿಕೆಯ ಮೇಲೆ ನೂತನ ವಧುವರರಿಗೂ ಸಸಿಗಳನ್ನು ಕೊಡುವುದರ ಮೂಲಕ ಶುಭ ಹಾರೈಸಲಾಯಿತು. ಮದುವೆಗೆ ಆಗಮಿಸಿದ ಬಂಧುಗಳು ತುಂಬಾ ಆಸಕ್ತಿ ವಹಿಸಿ ವಿವಿಧ ತಳಿಗಳ ಸಸಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು ಮತ್ತು ಕೊಂಡೊಯ್ದರು.ಇದೇ ವೇಳೆ ವನಸಿರಿ ಪೌಂಡೇಶನ್ ವತಿಯಿಂದ ಸಸಿಗಳ ವಿತರಣೆಯ ಜೊತೆಗೆ ನೋಂದಣಿ ಕಾರ್ಯ ಕೂಡ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ನೇತೃತ್ವದವಹಿಸಿದ ವನಸಿರಿ ಜಾಲತಾಣದ ಅಧ್ಯಕ್ಷರಾದ ಚನ್ನಪ್ಪ ಕೆ. ಹೊಸಹಳ್ಳಿ ಅವರು ಮಾತನಾಡಿ, ಮಾಲಿ ಪಾಟೀಲ್ ಬಂಧುಗಳು ಮದುವೆ…
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ದಕ್ಷಿಣ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ. ಈಗಿನಂತೆ ಡಿಸೆಂಬರ್ 27ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾಥಲ್ಯಾಬ್, ಮೂರು ಆಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ…
ಬೆಳಗಾವಿ: 9 ತಿಂಗಳ ತುಂಬು ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಸುವರ್ಣ ಮಾಂತಯ್ಯ ಮಠಪತಿ (35) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು. ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು. ಮಹಿಳೆಯ ಪತಿ ಶನಿವಾರ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಯಿತು. ಆದರೆ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಕಲಬುರಗಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಘಟನೆಗೆ ಹಲವು ಎಂಎಲ್ ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ? ಎಂದು ಕೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಅವರು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ 25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ. 18 ಕೋಚ್ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ…
ಬೀದರ್: ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವರಾದ ಅಮಿತ್ ಶಾ ವಿರುದ್ಧ ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪಕ್ಷದ ಜಿಲ್ಲಾಧ್ಯಕ್ಷರಾದ ಯೋಹಾನ್ ಡಿಸೋಜಾ ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಪಾರ್ಲಿಮೆಂಟ್ ನಲ್ಲಿ ಭಾಷಣ ಮಾಡುತ್ತಾ, ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ಅವಮಾನ ಮಾಡಿದ್ದಾರೆ. ಅಮಿತ್ ಶಾ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಮಂತ್ರಿಯಾಗಿ ಸಂವಿಧಾನ ಪಿತಾ ಪರಮ ಪೂಜ್ಯ ಬಾಬಾಸಾಹೇಬ್ ಅವರ ಬಗ್ಗೆ ನಗಣ್ಯ ರೀತಿಯಲ್ಲಿ ವ್ಯಾಖ್ಯಾನಿಸಿ ಮಾತನಾಡಿದ್ದಾರೆ. ಇದು ಎಲ್ಲಾ ಪ್ರಜಾಪ್ರಭುತ್ವವಾದಿಗಳು ಮತ್ತು ಅಂಬೇಡ್ಕರ್ ಅಭಿಮಾನಿಗಳಿಗೆ ಮಾನಸಿಕವಾಗಿ ಬಹಳ ನೋವುಂಟು ಮಾಡಿದ್ದಾರೆ ಅವರು ತಕ್ಷಣವೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ…
ಮೈಸೂರು: ಭಾರತೀಯ ಜೈನ್ ಮಿಲನ್ ವಲಯ — 8 ಮೈಸೂರು ವಿಭಾಗ ಮಟ್ಟದ ಜಿನ ಭಜನ ಸ್ಪರ್ಧೆ ಎಂಟನೇ ಆವೃತ್ತಿಗೆ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಚಾಲನೆ ನೀಡಲಾಯಿತು. ಭಾರತೀಯ ಜೀನ್ ಮಿಲನ್ ವಲಯ — 8ರ ಗೌರವ ಅಧ್ಯಕ್ಷರಾದ ಶೀಲಾ ಅನಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜೀವನ ಮಹಿಳಾ ಒಕ್ಕೂಟದ ಮಾಜಿ ಕಾರ್ಯಾಧ್ಯಕ್ಷರಾದ ಪದ್ಮಿನಿ ಪದ್ಮರಾಜ್, ಜ್ಯೋತಿ ನೇಮಿರಾಜು ಲಿಂಗನಮಕ್ಕಿ, ಭಾರತೀಯ ಜೈನ ಮಿಲನ್ ವಲಯ –8 ರ ಅಧ್ಯಕ್ಷ ಕೆ.ಯುವರಾಜು ಭಂಡಾರಿ, ಸುಶ್ರುತ ಕಣ್ಣಿನ ಆಸ್ಪತ್ರೆಯ ಡಾ. ಪಲ್ಲವಿ ಪ್ರಭು, ಡಾ.ಸಿ.ಎ.ಪಿ. ಪ್ರಭು ಇನ್ನಿತರ ಗಣ್ಯರುಗಳು ಭಾಗವಹಿಸಿದ್ದರು. ಸಂಗೀತ ವಿದುಷಿ ಸೌಮ್ಯ ಶ್ರೀಧರ್ ಜೈನ್ ಮತ್ತು ತಂಡ ಮಂಗಳ ಜಿನಭಕ್ತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ನೇಹ, ಶರ್ಮಿಳಜಿನೇಶ್, ಮೈಸೂರು ವಿಭಾಗದ ಉಪಾಧ್ಯಕ್ಷ ಸಿ.ಎಸ್. ನಾಗರಾಜ್, ಕಾರ್ಯದರ್ಶಿ ಎಂ.ರತ್ನರಾಜು, ಪ್ರಸನ್ನ ಕುಮಾರ್, ಜಿ.ಬಿ .ಚಂದ್ರಶೇಖರ್, ಇನ್ನಿತರ ಪದಾಧಿಕಾರಿಗಳು, ವಿವಿಧ ಜೈನ ಸಂಘಟನೆಗಳ ಅಧ್ಯಕ್ಷರು,…
ಕೊರಟಗೆರೆ: ಕರುನಾಡಿನ ಸುಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತೋವಿನಕೆರೆ–ತುಂಬಾಡಿ ಮಾರ್ಗದ ಪಿಡಬ್ಲ್ಯೂಡಿ ಇಲಾಖೆಯ 2 ಕಿ.ಮೀ. ಮುಖ್ಯರಸ್ತೆಯಲ್ಲಿ ಬರೋಬ್ಬರಿ 400 ಕ್ಕೂ ಅಧಿಕ ಗುಂಡಿಗಳು ಬಿದ್ದು ಮುಖ್ಯ ರಸ್ತೆಯೇ ಕಾಣೆಯಾಗಿ ವಾಹನ ಸವಾರರಿಗೆ ಉಂಟಾಗಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದಿಂದ ನೇಗಲಾಲದ ಸಂಪರ್ಕದ 2 ಕಿ.ಮೀ. ರಸ್ತೆಯು ಗುಂಡಿಮಯ ಆಗಿರುವ ಪರಿಣಾಮ ಸಸ್ಯಕಾಶಿಗೆ ಆಗಮಿಸುವ ಪ್ರವಾಸಿಗರಿಗೆ, ರೈತಾಪಿವರ್ಗಕ್ಕೆ ಮತ್ತು ಶಾಲೆಗೆ ತೆರಳುವ ಮಕ್ಕಳಿಗೆ ಪ್ರತಿನಿತ್ಯವು ಸಮಸ್ಯೆಯಾಗಿ ಪರಿಣಮಿಸಿದೆ. ಮುಖ್ಯರಸ್ತೆ ಕಾಮಗಾರಿಯಲ್ಲಿ ಗುತ್ತಿಗೆದಾರನ ಅಕ್ರಮ: ತೋವಿನಕೆರೆಯಿಂದ ಜೋನಿಗರಹಳ್ಳಿ ಮಾರ್ಗವಾಗಿ ಸಿದ್ದರಬೆಟ್ಟ ಮೂಲಕ ತುಂಬಾಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಮತದಾರರ ಮನವಿಯಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪಿಡಬ್ಲ್ಯೂಡಿ ಇಲಾಖೆಯಿಂದ 5 ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ದಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಗುತ್ತಿಗೆದಾರ ಮತ್ತು ಅಧಿಕಾರಿವರ್ಗ 2 ಕಿ.ಮೀ. ರಸ್ತೆಯನ್ನೇ ನಿರ್ಮಿಸದೇ ಇರೋದು ಬೆಳಕಿಗೆ ಬಂದಿದೆ. ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: 5 ಕೋಟಿ ಅನುದಾನ ನೀಡಿದ್ರು, ರಸ್ತೆ ಕಾಮಗಾರಿ…
ತುಮಕೂರು: ಮಾನವನ ಮನಸ್ಸು ಆತ್ಮಗಳ ಶುದ್ದಿಗೆ ಸ್ವಾಧ್ಯಾಯದ ಚಿಂತನೆಗಳು ಅಗತ್ಯವಾಗಿದೆ ಎಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದು ತುಮಕೂರಿನ ಜೈನ ಭವನದಲ್ಲಿ ನಡೆದ ಮಂಗಳ ಪುರಪ್ರವೇಶ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರಕ್ತದ ಶುದ್ಧಿ ಕರುಣಕ್ಕೆ ಡಯಾಲಿಸಿಸ್ ಹೇಗೋ, ಮಾನವನ ಮನಸ್ಸು ಶುದ್ದಿ, ಆತ್ಮ ಶುದ್ದಿಗೆ ಚಿಂತನೆಗಳು ಅಗತ್ಯ. ಪೂಜೆ , ನೊoಪಿ , ವೃತ, ಆರಾಧನೆಗಳನ್ನ ಮಾಡುವುದು ಸ್ವಾದ್ಯಾಯವಾಗಿದೆ. ತಮ್ಮ ವೃತ್ತಿಯ ಜೊತೆಗೆ ಬಿಡುವು ಮಾಡಿಕೊಂಡು ಸ್ವಾಧ್ಯಾಯಗಳನ್ನು ಮಾಡುವಂತೆ ತಿಳಿಸಿದರು. ಇಲ್ಲಿ ಧರ್ಮ ಸಂಸ್ಕಾರ ವಿದೆ ಧಾರ್ಮಿಕ ಸಂಸ್ಕಾರ ತುಂಬಿದ ಲಕ್ಷ್ಮಿ ಸೇನಾ ಭಟ್ಟರಕ ಪೀಠವಿದೆ ಎಂದ ಅವರು, ಇಲ್ಲಿ ಹಲವಾರು ಚಾತುರ್ಮಾಸಗಳು ನಡೆದಿವೆ, ಇಲ್ಲಿ ಶ್ರೇಷ್ಠ ಮುನಿ ಸಂಸ್ಕಾರ ವಂತರಿದ್ದಾರೆ. ಪಿಂಚಿ ಮಂದಿರ ,ಚಂದ್ರನಾಥ ಮೂರ್ತಿ, ಮಂದರಗಿರಿ ಬೆಟ್ಟದ ಮೇಲಿನ ಜೈನ ಬಸದಿಗಳ ಸಂಕೀರ್ಣ, ಜೀರ್ಣೋದ್ಧಾರ ಮಾಡಿ ಕೊಡುಗೆ ನೀಡಿದ್ದಾರೆ ಎಂದ ಭಟ್ಟರಕ ಶ್ರೀಗಳು,…