Author: admin

ತುಮಕೂರು:  ಬೆಸ್ಕಾಂ ಗ್ರಾಮೀಣ ಉಪವಿಭಾಗ–1ಕ್ಕೆ ಸಂಬಂಧಿಸಿದಂತೆ ನಗರದ ಕೋತಿ ತೋಪು ಹೊರಪೇಟೆ ವೃತ್ತದಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಕೋರಾ, ಸಿಟಿ ಕೆರೆ, ಬೆಳ್ಳಾವಿ ಶಾಖೆ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ದೂರು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಜಯನಗರದಲ್ಲಿಂದು ಗ್ರಾಹಕ ಸಂವಾದ ಸಭೆ ತುಮಕೂರು:  ಬೆಸ್ಕಾಂ ನಗರ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ನಗರದ ಜಯನಗರದಲ್ಲಿರುವ ಉಪವಿಭಾಗ ಕಚೇರಿಯಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೆಹಬೂಬ್ ಷರೀಫ್ ತಿಳಿಸಿದ್ದಾರೆ. ಎಸ್.ಎಸ್.ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು–ಕೊರತೆ ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು:  ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆ ವತಿಯಿಂದ ಡಿಸೆಂಬರ್ 24ರವರೆಗೆ “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಎಂಬ ಅಭಿಯಾನವನ್ನು ಕೈಗೊಳ್ಳುವಂತೆ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮಟ್ಟದಲ್ಲಿ ವಿಶೇಷ ಶಿಬಿರ/ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಉತ್ತಮ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಾಗಾರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರವು ಉತ್ತಮ ಆಡಳಿತ ನೀಡುವ ಬಗ್ಗೆ ತಮ್ಮ ಸಲಹೆಗಳನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ಪ್ಯಾಕೇಜ್-ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಪ.ಜಾತಿ/ಪ.ಪಂಗಡ ಉದ್ದಿಮೆದಾರರು/ಫಲಾನುಭವಿಗಳು ಮಾರ್ಗಸೂಚಿಯನ್ವಯ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ‘ನಾಗನಿಲಯ’, 5ನೇ ಮುಖ್ಯ ರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0816–2275370ಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 21 ಮತ್ತು 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 21ರಂದು ಅಂಕಸಂದ್ರ, ದೊಡ್ಡಗುಣಿ, ಚೇಳೂರು, ಹೊಸಕೆರೆ, ಹಾಗಲವಾಡಿ, ಊರ್ಡಿಗೆರೆ ಉಪಸ್ಥಾವರದ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ ಹಾಗೂ ಡಿಸೆಂಬರ್ 22ರಂದು ಸಿಟಿ ಕೆರೆ, ಮೆಳೆಕೋಟೆ, ಬೆಳಧರ, ಕೋರಾ, ತುಮಕೂರು ಉಪಸ್ಥಾವರದ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಶ್ರವಣಬೆಳಗೊಳದ ಶ್ರೀ ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ತುಮಕೂರು ನಗರಕ್ಕೆ  ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಗಮಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಚಾಲನೆ ನೀಡಿದರು. ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಸ್ವಾಮೀಜಿ ಅವರನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು. ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರು. ವಾದ್ಯ ವೃಂದ, ಹಾಗೂ ಜೈನ ಸಮುದಾಯದವರು ಪಾಲ್ಗೊಂಡಿದ್ದರು. ಶೋಭಯಾತ್ರೆಯು ಎಂ.ಜಿ. ರಸ್ತೆ, ಗುಂಚಿ ಚೌಕ, ಚರ್ಚ್ ಸರ್ಕಲ್, ಮಂಡಿಪೇಟೆ ಸರ್ಕಲ್ ಮಾಗವಾಗಿ ಪಾಶ್ವನಾಥ ದಿಗಂಬರ ಜಿನಮಂದಿರ ತಲುಪಿತು. ಜಿನಮಂದಿರದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜಾದಿಗಳನ್ನು ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರು ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು. ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು. ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ…

Read More

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.  ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ…

Read More

ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ಸಮದಾಯ ಭವನ ಶಿಥಿಲಾವಸ್ಥೆಯಲ್ಲಿ ನಿಂತಿದೆ. ಸುಮಾರು ವರ್ಷಗಳಿಂದ ಪಾಳು ಬಿದ್ದ ಸಮುದಾಯ ಭವನದ ಪುನಶ್ಚೇತನ ಯಾವಾಗ ಅಂತ ಇಲ್ಲಿನ ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸಮುದಾಯ ಭವನ ಬಾಳು ಬಿದ್ದಿದೆ ಎಂದು ಆರೋಪಿಸಿದ್ದಾರೆ. ಪುನಶ್ಚೇತನ ಇಲ್ಲದೇ ಕುಡುಕರ ಅಡ್ಡೆಯಾದ ಸಮುದಾಯ ಭವನದ ಉದ್ದಾರ ಯಾವಾಗ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ. ನೇಗಲಾಲ ಗ್ರಾಮದ ಸಮುದಾಯ ಭವನ ಕುಡುಕರ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದ್ದು, ಎಲ್ಲಿ ನೋಡಿದರೂ ಕಸ ಕಸ ಕಸ..?ಮೇಲ್ಚಾವಣಿ ಇಲ್ಲದೆ ಸೊರಗುತ್ತಿದೆ. ಗ್ರಾಮದ ನರಸಿಂಹಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಸಮುದಾಯ ಭವನದ ಕಥೆ ಇದಾಗಿದೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆ ಅನುದಾನದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನ ಈಗ ಕುಡುಕರ ಅಡ್ಡೆಯಾಗಿದೆ. ಸಮುದಾಯ ಭವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಿ ಗ್ರಾಮದ ಬಡವರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮ ಪಂಚಾಯತಿ…

Read More

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ನಡೆಯುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೀಸಲಾತಿ ವಿಷಯದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು. ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು. ನಮ್ಮತುಮಕೂರಿನ…

Read More