Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಸಿಟಿ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ನಾನು ತಪ್ಪಿತಸ್ಥನೆಂದು ಕಂಡುಬಂದರೆ, ಯಾವುದೇ ಕ್ರಮವನ್ನು ಎದುರಿಸಲು ನಾನು ಸಿದ್ಧನಿದ್ದೇನೆ, ತಪ್ಪಿತಸ್ಥರನ್ನು ಉಳಿಸುವ ಪ್ರಶ್ನೆಯೇ ಇಲ್ಲ ಎಂದು ದಿನೇಶ್ ಹೇಳಿದರು. ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನವೆಂಬರ್ 9, 10 ಮತ್ತು 11 ರಂದು ಒಟ್ಟು 34 ಸಿಸೇರಿಯನ್ ಹೆರಿಗೆಗಳನ್ನು ನಡೆಸಲಾಯಿತು. ಈ ಪೈಕಿ ಏಳು ಮಹಿಳೆಯರು ತೀವ್ರ ಅಸ್ವಸ್ಥರಾಗಿದ್ದರು ಮತ್ತು ಅವರಲ್ಲಿ ಐವರು ಸಾವನ್ನಪ್ಪಿದರು. ಕೂಡಲೇ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೈದ್ಯರ ತಂಡವನ್ನು ಬಳ್ಳಾರಿಗೆ ಕಳುಹಿಸಲಾಯಿತು. ಈ ತಂಡವು ನವೆಂಬರ್ 14 ರಂದು ತನ್ನ ವರದಿಯನ್ನು ಸಲ್ಲಿಸಿತು, ಆಸ್ಪತ್ರೆಯಲ್ಲಿ ವೈದ್ಯರು ಎಲ್ಲಾ ನಿಯಮಗಳನ್ನು ಅನುಸರಿಸಿದ್ದಾರೆ ಮತ್ತು ಅವರ ಕಡೆಯಿಂದ ಯಾವುದೇ ನಿರ್ಲಕ್ಷ್ಯವಾಗಿಲ್ಲ ಎಂದು ಕಂಡುಹಿಡಿದಿದೆ. ಸಿಸೇರಿಯನ್ ನಂತರ ತಾಯಂದಿರಿಗೆ ನೀಡಲಾದ ರಿಂಗರ್ಸ್ ಲ್ಯಾಕ್ಟೇಟ್ IV ದ್ರವದ ಪ್ರತಿಕೂಲ…
ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದನ್ನು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಖಂಡಿಸಿದ್ದು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೀದರ್: ಔರಾದ ತಾಲೂಕಿನ ಕೌಠ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ಕುಮಾರ ಕುಲಕರ್ಣಿ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೌಠ (ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ರವಿನಾ ಗೌತಮ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಪಿಡಿಒ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಯ ಸುಮಾರು 84 ಮನೆಗಳು ಹಾಗೂ PMAY ಆವಾಸ ಯೋಜನೆಯ 83 ಮನೆಗಳು ಮಂಜೂರಾದರು ಇಲ್ಲಿಯವರೆಗೆ ಗ್ರಾಮ ಸಭೆ ಕರೆಯದೆ ವಿಳಂಬ ನೀತಿ ಅನುಸರಿಸುದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮನೆಗಳ GPS ಮಾಡಿ ಹಣ ಬಿಡುಗಡೆ ಮಾಡಲು 4,000/ದಿಂದ 5000/-ಗಳನ್ನು ಫಲಾನುಭವಿಗಳಲ್ಲಿ ಬೇಡಿಕೆ ಇಡುತ್ತಿದ್ದಾರೆ. ಕೆಲವು ಖಾಲಿ ಚಕ್ ತಂದು ಅದರ ಮೇಲೆ ಸಹಿ ಮಾಡುವಂತೆ ಹೇಳುತ್ತಿದ್ದಾರೆ ಅವರ ಬಗ್ಗೆ ಪ್ರಶ್ನಿಸಿದರೆ ನಿಮಗೆ ತಿಳಿಯುವುದಿಲ್ಲ ಸಹಿ ಮಾಡಿ ಎಂದು ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರತಿ ದಿನ ಪಂಚಾಯಿತಿಗೆ ಬರದಿರುವುದರಿಂದ ಸಾರ್ವಜನಿಕರ ಸಮಸ್ಯೆಗಳು ಹಾಗೇ ಉಳಿಯುತ್ತಿವೆ. ಇದರಿಂದ ಪಂಚಾಯತಿನ ಅಭಿವೃದ್ಧಿ ಕುಂಠಿತಗೊಂಡಿದೆ. ಇವರ…
ಬೀದರ್: ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂ ಖಾನ್, ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಪಟ್ಟಣದ ಹೊರ ವಲಯ ಚಳ್ಳಕೆರೆ ರಸ್ತೆ ಸಮೀಪದ ಜಮೀನೊಂದರಲ್ಲಿ ಗಂಡ ಹೆಂಡತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ. ಸಾಸಲಕುಂಟೆ ಸಮೀಪದ ವೆಂಕಟಮ್ಮನಹಳ್ಳಿ ಗ್ರಾಮದ ಗೋವಿಂದರೆಡ್ಡಿ ಮತ್ತು ಜ್ಯೋತಿ ಎನ್ನುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗೋವಿಂದ ರೆಡ್ಡಿಗೆ ಎರಡು ಮದುವೆಯಾಗಿದ್ದು, ಜ್ಯೋತಿ ಮೊದಲನೇ ಹೆಂಡತಿ ಎಂದು ಹೇಳಲಾಗುತ್ತಿದೆ, ಈತನ ಎರಡನೆಯ ಹೆಂಡತಿ ಲಕ್ಷ್ಮೀದೇವಿ ಎಂದು ತಿಳಿದು ಬಂದಿದ್ದು ಸದ್ಯ ಈಕೆ ಬೆಂಗಳೂರಿನಲ್ಲಿ ವಾಸವಿದ್ದಾಳೆ. ಪಾವಗಡ ಪಟ್ಟಣದ ಲಾಡ್ಜ್ ಒಂದರಲ್ಲಿ ರಾತ್ರಿ ಜ್ಯೋತಿ ಮತ್ತು ಗೋವಿಂದ ರೆಡ್ಡಿ ತಂಗಿದ್ದು ಬೆಳಗ್ಗೆ ಒಂಬತ್ತು ಗಂಟೆಯ ಸಂದರ್ಭದಲ್ಲಿ ಪಟ್ಟಣದ ಹೊರವಲಯದ ಜಮೀನ್ ಒಂದರ ಬಂಡೆಯ ಮೇಲೆ ಮದ್ಯಕ್ಕೆ ವಿಷವನ್ನು ಮಿಕ್ಸ್ ಮಾಡಿ ಕುಡಿದಿದ್ದು ಜ್ಯೋತಿ 9:30ರ ಸಂದರ್ಭದಲ್ಲಿ ಸಾವನ್ನಪ್ಪಿದ್ದರೆ ಕೊನೆ ಉಸಿರಿನಲ್ಲಿದ್ದ ಗೋವಿಂದ ರೆಡ್ಡಿಯನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಪ್ರವಾನಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ತುಮಕೂರು ಎ ಎಸ್ ಪಿ…
ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ. ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ. ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ. “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ…
ತುಮಕೂರು : ಇದೇ ತಿಂಗಳು 26 ರಂದು ನಡೆಯಲಿರುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾಸಮಾರಂಭ ಹಾಗೂ ಚಟುವಟಿಕೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ.ಬಾಲ ಗುರುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಇದೇ ಸಂರದರ್ಭಲ್ಲಿ ಮಾತನಾಡಿದ ಅವರು, ಇದೇ ತಿಂಗಳ 26 ರಂದು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಜಿಲ್ಲೆಯ ಮತ್ತೊಬ್ಬ ಸಚಿವರಾದ ಕೆ.ಎನ್.ರಾಜಣ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ರಾಜ್ಯ ಚಲನಚಿತ್ರ ನಟಿ ಉಮಾಶ್ರೀ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ರೂಪಾ ಸಿಂಧೂರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿ.ಇ.ಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್, ಇತರರು ಆಗಮಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಹರಿಕಥಾ ದಾಸರಾದ ಲಕ್ಷ್ಮಣ ದಾಸ್, ಚಲನಚಿತ್ರ ನಟ ಹನುಮಂತೇಗೌಡ, ಸಪ್ತಗಿರಿ ಕಾಲೇಜಿನ ಅಧ್ಯಕ್ಷರಾದ ಜಿ.ವಿ.ಕುಮಾರ್, ಇವರುಗಳನ್ನು ಸನ್ಮಾನ ಕಾರ್ಯಕ್ರಮ…
ತುಮಕೂರು: ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು. ನಗರದ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ಶಿಕ್ಷಣ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕರು ಚುನಾವಣೆ ಸಂದರ್ಭಗಳಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಲು ಆಸಕ್ತಿ ತೋರದೆ ಇರುವುದರಿಂದ ಅವರು ಇರುವ ಸ್ಥಳಗಳಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯಡಿ ಸ್ವೀಕೃತವಾದ ಅರ್ಜಿಗಳು, ಮನೆ-ಮನೆ ಸಮೀಕ್ಷೆಯ ಪ್ರಗತಿ ಹಾಗೂ ಇ.ಪಿ.ರೇಷಿಯೋ, ಜೆಂಡರ್ ರೇಷಿಯೋ ಮುಂತಾದ ಮತದಾರರ ಪಟ್ಟಿಯ ಸಂಬಂಧ ಸಾಧಿಸಿರುವ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಇ.ಪಿ. ರೇಷಿಯೋ ಮತ್ತು ಜೆಂಡರ್ ರೇಷಿಯೋ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 23ರ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಹೆಚ್.ರಸ್ತೆಯ ಶ್ರೀ ಸಿದ್ಧಗಂಗಾ ಪ್ರೌಢ ಶಾಲೆಯಲ್ಲಿ “ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ಮನಮೋಹನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ 5 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx