Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ತುಮಕೂರು: ಮಾವು(Mango) ಹೂ ಮತ್ತು ಕಾಯಿ ಕಟ್ಟುವ ಸಮಯದಲ್ಲಿ ಮಾವು ಬೆಳೆಗಾರರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕಾ ಇಲಾಖೆ ಸಲಹೆ ನೀಡಿದೆ. ಮಾವಿನಲ್ಲಿ ರೋಗ ಮತ್ತು ಕೀಟ ಬಾಧೆಯನ್ನು ತಡೆಗಟ್ಟಲು ಮಾವಿನ ತೋಟಗಳನ್ನು ಸ್ವಚ್ಚವಾಗಿ ಇಡಬೇಕು. ಮಾವಿನ ಗಿಡಗಳ ಬುಡದಲ್ಲಿ ಕಳೆಗಳನ್ನು ತೆಗೆಯಬೇಕು. ಹೂವು ಉದುರುವುದನ್ನು ತಡೆಗಟ್ಟಲು ಹೂವಿನ ಪ್ರಾರಂಭದ ಹಂತದಲ್ಲಿ ಪ್ರತಿ 25 ದಿನಕ್ಕೊಮ್ಮೆ ಪೊಟ್ಯಾಶಿಯಂ ನೈಟ್ರೇಟ್ (KNO3) 5 ಗ್ರಾಂ ಔಷಧಿಯನ್ನು 1 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಮಾವಿನ ಗಿಡದಲ್ಲಿ ಹೂ ಚೆನ್ನಾಗಿ ಕಚ್ಚಲು NAA (Planofix) ಸಸ್ಯ ಪ್ರಚೋದಕ 4 ಮಿ.ಲೀ. ಔಷಧಿಯನ್ನು 16 ಲೀ. ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ 2 ಬಾರಿ ಸಿಂಪಡಿಸಬೇಕು. ಹೂವು ಮತ್ತು ಕಾಯಿ ಉದುರುವುದನ್ನು ತಡೆಗಟ್ಟಲು ಮಾವಿನ ಸ್ಪೆಷಲ್-05 ಗ್ರಾಂ ಔಷಧಿಯನ್ನು 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ 25 ದಿನಕ್ಕೊಮ್ಮೆ 3 ಬಾರಿ ಸಿಂಪಡಣೆ ಮಾಡಬೇಕು. ಮಾವಿನ ಜಿಗಿ ಹುಳುವನ್ನು ಹತೋಟಿ ಮಾಡಲು ಬೇವಿನ ಎಣ್ಣೆ…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 31, 32 ಹಾಗೂ 35ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲು ಡಿಸೆಂಬರ್ 20ರಂದು ಸಂಜೆ 4 ಗಂಟೆಗೆ ಸಿದ್ಧರಾಮೇಶ್ವರ ಬಡಾವಣೆಯ ಶಿವ ಸುಬ್ರಮಣ್ಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ತಿಳಿಸಿದರು. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ತೊಂದರೆಗಳಿಗೆ ಪರೀಕ್ಷೆಗಳನ್ನು ನಡೆಸಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ 58 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶಿಬಿರದ ಕಾರ್ಯಕ್ರಮಕ್ಕೆ ಜನ ಶಿಕ್ಷಣ ಸಂಸ್ಥೆ ತುಮಕೂರು ನಿರ್ದೇಶಕರಾದ ಸುಕನ್ಯಾ ರವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಬ್ಯಾಂಕ್ ಕೌನ್ಸಿಲಿಂಗ್ ನಾಗಲಕ್ಷ್ಮಿ, ಸೇವಾ ಟ್ರಸ್ಟಿನ ಸಂಧ್ಯಾ, ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರಾದ ಅನುರಾಧ, ಮೌನಿಕ, ಮೇಲ್ವಿಚಾರಕರಾದ ಹರೀಶ್, ಸಾರ್ವಜನಿಕ ಆಸ್ಪತ್ರೆಯ ಪವಿತ್ರ, ಮುಖಂಡರಾದ ಪ್ರಕಾಶ್ ರೆಡ್ಡಿ, ಅಮಿಲಿನೆನಿ ನರೇಶ್, ಕೃಷ್ಣಪ್ಪ, ತಿರುಮನಿ ಆಸ್ಪತ್ರೆ ರಮೇಶ್, ಮಂಜುನಾಥ, ಶಾಮಣ್ಣ, ಲೋಕೇಶ, ಇದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಪಾವಗಡ: ತಾಲೂಕಿನ ವ್ಯಾಪ್ತಿಯಲ್ಲಿ ಮರಿದಾಸನಹಳ್ಳಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶಿಕ್ಷಣ ಕಾಯ೯ಕ್ರಮದಡಿಯಲ್ಲಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ಟ್ಯೂಷನ್ ಕ್ಲಾಸ್ ನೀಡಲಾಗುತ್ತಿದ್ದು, ಇದರ ಉದ್ಘಾಟನೆಯನ್ನ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಡಾ. ವಿರೇಂದ್ರ ಹೆಗ್ಗಡೆಯವರ ಆಶಯದಂತೆ ತಾಲ್ಲೂಕಿನ ಗ್ರಾಮಾಂತರ 6 ಪ್ರೌಢಶಾಲೆಗಳಲ್ಲಿ 10 ನೇ ತರಗತಿಯ ಮಕ್ಕಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನ ಪಡೆಯಲು, ಗಣಿತ ಹಾಗೂ ಇಂಗ್ಲೀಷ್ ವಿಷಯಗಳಿಗೆ ಒತ್ತು ಕೊಟ್ಟು, 3 ತಿಂಗಳ ಕಾಲ ವಿಶೇಷ ಟ್ಯೂಷನ್ ಮಾಡಲು ನುರಿತ ಅನುಭವ ಹೊಂದಿರುವ ಶಿಕ್ಷಕರಿಗೆ 3 ತಿಂಗಳು ಯೋಜನೆಯಿಂದ ಗೌರವಧನ ನೀಡಿ ಸಂಜೆ 4 ಗಂಟೆಯಿಂದ 5 ಗಂಟೆಯವರಿಗೆ ಟ್ಯೂಷನ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ವಾಷಿ೯ಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನ ಪಡೆದು ಮುಂದಿನ ನಿಮ್ಮ ಭವಿಷ್ಯವನ್ನ ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ತಿಳಿಸಿದರು. ಕಾಯ೯ಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಗೋಪಾಲ್, ವಲಯ ಮೇಲ್ವಿಚಾರಕಿ ವೆಂಕಟರತ್ನ,…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದಳವಾಯಿಹಳ್ಳಿ ಗ್ರಾಮದ ವಿನಯ್ ಕುಮಾರ್ ಎಸ್. ಅವರು ತುಮಕೂರು ವಿಶ್ವವಿದ್ಯಾನಿಲಯದ ಅಖಿಲ ಭಾರತ ವಿಶ್ವವಿದ್ಯಾಲಯದ ದಕ್ಷಿಣ ವಲಯ ಮತ್ತು KSCA 1ನೇ ವಿಭಾಗದ ಕ್ರಿಕೆಟ್ ಆಟಗಾರರಾಗಿದ್ದು, ಇವರ ಕ್ರೀಡಾ ಕ್ಷೇತ್ರದ ಸಾಧನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಆಗಿದ್ದಾರೆ. ಇವರಿಗೆ ಡಿ.25ರಂದು ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸನ್ಮಾನಿಸಲು ಕನ್ನಡ ಫಿಲಂ ಚೇಂಬರ್ಸ್ ಕಮಿಟಿಯಿಂದ ಆಹ್ವಾನಿಸಲಾಗಿದೆ ಎಂದು ಕನ್ನಡ ಫಿಲಂ ಚೇಂಬರ್ ಸಮಿತಿ ರಾಜ್ಯಾಧ್ಯಕ್ಷ ಎಂ.ಎಸ್.ರವೀಂದ್ರ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸಿ.ಟಿ.ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಕೇಸ್ ಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾದ ಬೆನ್ನಲ್ಲೇ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ. ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಶಾಸಕರು ಪೊಲೀಸ್ ವ್ಯಾನ್ ಹತ್ತಿದ ಘಟನೆಯೂ ನಡೆಯಿತು. ಬಿಜೆಪಿ ನಾಯಕರೆಲ್ಲರೂ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಹಲ್ಲೆ ಮಾಡಲು ಬಂದವರು ಗೂಂಡಾಗಳು ಎಂದು ಅಸಮಾಧಾನ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಕೊರಟಗೆರೆ : ಕೊರಟಗೆರೆ ಮುಂಜಾನೆ ಗೆಳೆಯರ ಬಳಗ ಮತ್ತು ಮಹಿಳಾ ಬಳಗದಿಂದ ಕುಟುಂಬ ನಿರ್ವಹಣೆಗೆ ಬಡ ಮಹಿಳೆಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಯಿತು. ಕೊರಟಗೆರೆ ತಾಲ್ಲೂಕಿನ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಸಿದ್ದಗಿರಿ ನಂಜುಂಡಸ್ವಾಮಿಯವರು ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಇವರು ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿ ಬೆಂಡೊಣೆ ಗ್ರಾಮದಲ್ಲಿ ವಾಸವಾಗಿದ್ದರು. ಇವರು ನಿಧನರಾದ ಮೇಲೆ ಇವರ ಪತ್ನಿ ಪದ್ಮಾವತಿಯವರು ವಿಕಲಚೇತನದ ಹೆಣ್ಣು ಮಗಳ ಪೋಷಣೆಯೊಂದಿಗೆ ಕಷ್ಟಕರ ಜೀವನ ನಡೆಸುತ್ತಿದ್ದರು, ಇದನ್ನು ಮನಗೊಂಡ ಕೊರಟಗೆರೆ ಮುಂಜಾನೆ ಗೆಳೆಯರ ಬಳಗ ಮತ್ತು ಮಹಿಳಾ ಬಳಗವು ಅವರ ಜೀವನ ನಿರ್ವಹಣೆಗೆ ಹೊಲಿಗೆ ಯಂತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ನೂತನ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ರುದ್ರೇಶ್, ನಿವೃತ್ತ ಜೀವ ವಿಮಾ ಅಧಿಕಾರಿ ಶಂಕರಲಿಂಗೇಗೌಡರನ್ನು ಸನ್ಮಾನಿಸಲಾಯಿತು. ಗೆಳೆಯರ ಬಳಗದ ಅಧ್ಯಕ್ಷ ಎಲ್.ರಾಜಣ್ಣ, ಮಾಜಿ ಜಿ.ಪಂ ಸದಸ್ಯೆ ದಾಕ್ಷಾಯಿಣಿ, ಪ.ಪಂ.ಸದಸ್ಯ ಕೆ.ಆರ್.ಓಬಳರಾಜು, ಚಂದ್ರಕಲಾ, ಲಕ್ಷ್ಮೀ, ಜ್ಯೋತಿ, ಗಟ್ಲಹಳ್ಳಿ ಕುಮಾರ್, ವಿಜಯನರಸಿಂಹ, ಕೃಷ್ಣಮೂರ್ತಿ, ವಿಶ್ವಣ, ದಿನೇಶ್ ಸೇರಿದಂತೆ…
ಕೊರಟಗೆರೆ : ಬಿಜಾಪುರ ಜಿಲ್ಲೆಯ ವಿಶೇಷ ಮುಖ್ಯಪೇದೆ ಮಲ್ಲಿಕಾರ್ಜುನ್ ಚವಾರ್(32) ಎಂಬುವರಿಗೆ ತುಂಬುಗಾನಹಳ್ಳಿಯ 12ನೇ ಕೆಎ ಆರ್ಪಿ ಘಟಕದಲ್ಲಿ ತಡರಾತ್ರಿ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಕೊರಟಗೆರೆ ತಾಲುಕು ಕೋಳಾಲ ಹೋಬಳಿ ತೀತಾ ಗ್ರಾಪಂ ತುಂಬುಗಾನಹಳ್ಳಿ ಗ್ರಾಮದ ಸಮೀಪದ ಕೆಎಸ್ಆರ್ ಪಿ 12ನೇ ಪಡೆಯ ವಸತಿ ಗೃಹದಲ್ಲಿ ವಾಸವಾಗಿದ್ದರು. ಬುಧವಾರ ಮುಂಜಾನೆ 3ಗಂಟೆ ವೇಳೆಯಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾದ ತಕ್ಷಣವೇ ಸಿಬ್ಬಂದಿ ವರ್ಗ ಸಾರ್ವಜನಿಕ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಬಿಜಾಪುರ ಜಿಲ್ಲೆ ಸಿಂಧಗಿ ತಾಲೂಕಿನ ಬೋರ್ಗಿ ಗ್ರಾಮದ ಮಲ್ಲಿಕಾರ್ಜುನ್ ಚಾವರ 2014ರಲ್ಲಿ ಕರ್ತವ್ಯಕ್ಕೆ ಸೇರಿದ್ದಾರೆ. 2021ರಲ್ಲಿ ಕೊರಟಗೆರೆಗೆ ಆಗಮಿಸಿ ಕಳೆದ 3 ವರ್ಷದಿಂದ ತುಂಬುಗಾನಹಳ್ಳಿ 12ನೇ ಕೆಎಸ್ ಆಪ್ ಪಿ ಘಟಕದಲ್ಲಿ ವಿಶೇಷ ಪೊಲೀಸ್ ಮುಖ್ಯಪೇದೆಯಾಗಿ ಸೇವೆ ಸಲ್ಲಿಸಿದ್ದು ಇವರ ದಿಢೀರ್ ಸಾವಿನಿಂದ ಘಟಕದಲ್ಲಿ ಮೌನ ಆವರಿಸಿದೆ. ಮೃತ ಮಲ್ಲಿಕಾರ್ಜುನ್ ಮಡದಿಯ ಜೊತೆ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 12ನೇ ಪಡೆಯ ಕಮಾಂಡೆಂಡ್…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಲೋಕಸಭಾ ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ತಾಲ್ಲೂಕು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಕಚೇರಿ ಆವರಣದಲ್ಲಿ ಕೇಂದ್ರ ಗೃಹ ಸಚಿವರನ್ನು ದೇಶದಿಂದ ಗಡಿಪಾರು ಮಾಡುವಂತೆ ಪ್ರತಿಭಟನೆ ಮೂಲಕ ಆಗ್ರಹಿಸಿ ಗ್ರೇಡ್–2 ತಹಶೀಲ್ದಾರ್ ರಾಮ್ ಪ್ರಸಾದ್ ಮುಖೇನಾ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಭಾರತದ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಲೋಕಸಭಾ ಸಂಸತ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ದೇಶದ ಎಲ್ಲಾ ದಲಿತ ಸಂಘ-ಸಂಸ್ಥೆಗಳು ಖಂಡಿಸುತ್ತೇವೆ. ದಲಿತರು ಶೋಷಣೆಗೆ ಒಳಗಾಗಿದ್ದಾಗ ಯಾವ ದೇವರು ಸಹ ನಮ್ಮನ್ನು ಕಾಪಾಡಲಿಲ್ಲ ಸಂವಿಧಾನವೊಂದೇ ದಲಿತರಿಗೆ ರಕ್ಷಣೆ ನೀಡಿ ಸಮಾನತೆ ಕಲ್ಪಿಸಿರುವುದು ಎಂದು ಆಕ್ರೋಶ ಹೊರಹಾಕಿದರು. ಸರ್ವ ಜನಾಂಗದವರು ಸಮಾನತೆ, ಸಹಬಾಳ್ವೆಯಿಂದ ಜೀವನ ನಡೆಸಲಿ ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎಂದು ವಿಶ್ವಜ್ಞಾನಿ ಅಂಬೇಡ್ಕರ್ರವರು ದೇಶಕ್ಕೆ…