Author: admin

ಬೆಳಗಾವಿ: ಸಿದ್ದಗಂಗಾ ಮಠಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಏಪ್ರಿಲ್‌ ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು. ಸಿದ್ದಗಂಗಾ ಮಠ ವಿಶ್ವಕ್ಕೆ ಮಾದರಿಯಾದ ಮಠವಾಗಿದೆ. ಮಕ್ಕಳಿಗೆ ಶಿಕ್ಷಣ, ದಾಸೋಹ ಕೊಡುತ್ತಿರುವ ಮಠವಾಗಿದೆ. ಈ ಬಗ್ಗೆ ಮುಖ್ಯ ಇಂಜಿನಿಯರ್ ಸ್ವಾಮೀಜಿ ಜೊತೆ ಮಾತನಾಡಿದ್ದಾರೆ ಎಂದು ಸಚಿವರು ವಿವರ ನೀಡಿದರು. ಸಿದ್ದಗಂಗಾ ಮಠ ನೀರನ್ನು ಬಳಸಿಕೊಂಡರೂ ತಪ್ಪಲ್ಲ. ಈ ಕುರಿತಾಗಿ ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ. ಒಂದು ವೇಳೆ ನೀರು ಬಳಸದೆ ನೋಟಿಸ್ ಕೊಟ್ಟರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜನವರಿ ಮಾಹೆಯ ಅಂತ್ಯದಲ್ಲಿ ಫಲ–ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಫಲ–ಪುಷ್ಪ ಪ್ರದರ್ಶನವನ್ನು ವೈಶಿಷ್ಠ್ಯಪೂರ್ಣವಾಗಿ ಏರ್ಪಡಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಫಲ–ಪುಷ್ಪ ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಫಲ–ಪುಷ್ಪ ಪ್ರದರ್ಶನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಪಯೋಗವಾಗುವಂತೆ ಕೃಷಿ, ಮೀನುಗಾರಿಕೆ, ಪಶು ಸಂಗೋಪನೆ, ಅರಣ್ಯ, ರೇಷ್ಮೆ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿಯುಕ್ತವಾದ ಮಳಿಗೆಗಳನ್ನು ತೆರೆದು ವಸ್ತುಪ್ರದರ್ಶನವನ್ನು ಏರ್ಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಹಳ್ಳಿಯಲ್ಲಿ ಕಣ್ಮರೆಯಾಗುತ್ತಿರುವ ಆಹಾರ ಪದಾರ್ಥಗಳು ಮತ್ತು ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ವಿಶೇಷ ವಸ್ತು ಪ್ರದರ್ಶನ ಏರ್ಪಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಮೌಲ್ಯಯುತ ಪುಸ್ತಕಗಳ ಪ್ರದರ್ಶನ ಏರ್ಪಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read More

ತುಮಕೂರು: ತುಮಕೂರಿನ ಗಾಂಧಿನಗರದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಭಾಗೀಯ ಮಟ್ಟದ ಅಂಚೆ ಅದಾಲತ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಂಚೆ ಸೇವೆಗೆ ಸಂಬಂಧಿಸಿದ ದೂರು, ಸಲಹೆ, ಸೂಚನೆಗಳಿದ್ದಲ್ಲಿ ಸಾರ್ವಜನಿಕರು ಡಿಸೆಂಬರ್ 26ರೊಳಗಾಗಿ ತುಮಕೂರು ವಿಭಾಗದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬೇಕೆಂದು ಅಂಚೆ ಅಧೀಕ್ಷಕ ಬಿ.ಎಂ.ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಪ್ರವಾಸೋದ್ಯಮ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ Food Craft Institute (FCI) ಹಾಗೂ Institute of Hotel Management (IHM) ಸಂಸ್ಥೆಗಳಿಂದ ವಸತಿ ಸಹಿತ ತರಬೇತಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Food & Beverage Service Steward ತರಬೇತಿ, 5ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Room Attendant ತರಬೇತಿ, 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Front Office Associate ತರಬೇತಿ ಹಾಗೂ 8ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 5 ತಿಂಗಳ ಅಡುಗೆ ತಯಾರಿಕೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸುವವರು 20 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಡಿಸೆಂಬರ್ 24ರೊಳಗಾಗಿ ನಿಗಧಿತ ಅರ್ಜಿ ನಮೂನೆ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ ಕಾರ್ಡ್,…

Read More

ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಬ್ಯಾಂಕಿನ ಸಹಯೋಗದೊಂದಿಗೆ ವಿವಿಧ ಯೋಜನೆಗಳಡಿ ಸಾಲ/ಸಹಾಯಧನ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆಗಾಗಿ 50,000 ರೂ.ಗಳ ಸಹಾಯಧನ ಹಾಗೂ 50,000 ರೂ.ಗಳ ಸಾಲ ಸೇರಿದಂತೆ ಘಟಕ ವೆಚ್ಚ 1 ಲಕ್ಷ ರೂ.ಗಳ ಸಾಲ ಸೌಲಭ್ಯ ನೀಡಲಾಗುವುದು. ಅದೇ ರೀತಿ ಸ್ವಾವಲಂಬಿ ಸಾರಥಿ ಯೋಜನೆಯಡಿ ಫುಡ್ ಕಾರ್ಟ್ ಸ್ಥಾಪನೆಗಾಗಿ ಸಾಲದ ಮೊತ್ತಕ್ಕೆ ಶೇ.75ರಷ್ಟು ಅಥವಾ 4 ಲಕ್ಷ ರೂ.ಗಳವರೆಗೆ ಸಹಾಯಧನ ಹಾಗೂ ಉಳಿದ ಮೊತ್ತವನ್ನು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗಾಗಿ ವೆಬ್ ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಡಿಸೆಂಬರ್ 20 ಮತ್ತು 21ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಚಾಲುಕ್ಯ ಫೌಂಡೇಶನ್, ದಾಸನಪುರ ಬೆಂಗಳೂರು, ಆರೋಗ್ಯ ಇಲಾಖೆ ಪಾವಗಡ ರವರ ಸಂಯುಕ್ತ ಆಶ್ರಯದಲ್ಲಿ ರಕ್ತದ ಗುಂಪು ಪತ್ತೆ ಪರೀಕ್ಷೆ ಮತ್ತು ಹದಿಹರೆಯದವರ ಆರೋಗ್ಯ ಮತ್ತು ಸ್ವಾಸ್ಥ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 120 ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವನ್ನು ಹಿರಿಯ ಮತ್ತು ಕಿರಿಯ ಆಪ್ತ ಸಮಾಲೋಚಕರಿಂದ ಆಪ್ತ ಸಮಾಲೋಚನೆ ಮಾಡಿಸಲಾಯಿತು. ಕಾರ್ಯಕ್ರಮವನ್ನು ನಡೆಸಿಕೊಟ್ಟ ಚಾಲುಕ್ಯ ಫೌಂಡೇಶನ್ ರವರಿಗೆ ಧನ್ಯವಾದಗಳು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ ರಾಮಚಂದ್ರಪ್ಪ ಕೆ., ಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಹನುಮೇಶ್ ಎನ್., ಮೋಹನ್ ಕುಮಾರ್.ಜಿ.ಕೆ., ಅಭಿಷೇಕ್, ಶಿಕ್ಷಕಿಯರಾದ ವಿಮಲಾ ಆರ್., ರಶ್ಮಿ ಸಿ.ಎಸ್., ಮಾನಸ ಮತ್ತು ಶ್ರೀ ಲಕ್ಷ್ಮೀ , ಉಮಾಪತಿ, ಆರೋಗ್ಯ ಇಲಾಖೆಯ ಹನುಮಂತರಾಜು, ಇಂದಿರಾ ಮತ್ತಿತರರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: “ಹೆಣ್ಣು ಮಕ್ಕಳ ಜಾಗೃತಿ ದಿನಗಳಿವು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಇಂದು ಹೆಣ್ಣು ಮಕ್ಕಳು ಜಾಗೃತಿ ವಹಿಸಲು ಸಹಕಾರಿಯಾಗಿದೆ. ಇಂದಿನ ದೌರ್ಜನ್ಯಪೂರಿತ ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿದ ಬಾಳಬೇಕಿದೆ. ಆದರ್ಶಗಳನ್ನು ಇಟ್ಟುಕೊಂಡು ಗುರಿ ತಲುಪಲು ಶ್ರಮವಹಿಸಬೇಕು. ಹದಿಹರೆಯ, ಸವಾಲಿನ ಕಾಲಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಕಾರಾತ್ಮಕವಾಗಿ ಆಲೋಚಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’’ ಎಂದು ಲೇಖಕಿ ಸುಶೀಲಾಸದಾಶಿವಯ್ಯ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಮಹಿಳಾ ಸಂಘಟನೆ, ನಗರದ ಅನನ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆಯಾದ ಲೇಖಕಿ ಡಾ.ಬಿ.ಸಿ. ಶೈಲಾನಾಗರಾಜ್ ಮಾತನಾಡಿ “ಹೆಣ್ಣನ್ನು ಶತಮಾನಗಳ ಕಾಲ ಅಕ್ಷರ ವಂಚಿತಳನ್ನಾಗಿ ಮಾಡಿ ಆ ಮೂಲಕ ಜ್ಞಾನ ಹಾಗೂ ಪ್ರತಿಭಾ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ಪುರುಷ ವ್ಯವಸ್ಥೆಗೆ ಈ ದಿನಗಳಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಮುಂದಿದ್ದು, ಸಾಧನೆಯ ಹಾದಿಯಲ್ಲಿರುವ ಬಹುದೊಡ್ಡ ಸಂಘಟಿತ ಹೋರಾಟವಾಗಿದೆ. ತಮ್ಮ ಮೇಲಿನ…

Read More

ತುಮಕೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ರುಡ್‌ ಸೆಟ್ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮನೋವಿಜ್ಞಾನ, ಪತ್ರಿಕೋದ್ಯಮ, ಗ್ರಾಮೀಣಾಭಿವೃದ್ಧಿ, ಸಮಾಜಶಾಸ್ತ್ರ, ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ಎಂ.ಕಾಂ/ಬಿಎಸ್ಸಿ(ಕೃಷಿ), ಬಿಬಿಎಂ/ಬಿ.ಎ./ಬಿಎಸ್ಸಿ ಪದವಿಯೊಂದಿಗೆ ಬಿ.ಎಡ್ ಅಥವಾ ಎಂ.ಎಡ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರಾಗಿದ್ದು, ಟೈಪಿಂಗ್ ಹಾಗೂ ಗಣಕಯಂತ್ರದಲ್ಲಿ ಎಂ.ಎಸ್ ವರ್ಡ್, ಎಂ.ಎಸ್ ಎಕ್ಸೆಲ್, ಎಂ.ಎಸ್. ಪವರ್ ಪಾಯಿಂಟ್‌ ನಲ್ಲಿ ಪರಿಣಿತಿ ಹೊಂದಿದ್ದು, 22 ರಿಂದ 30 ವಯೋಮಾನದೊಳಗಿನವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರವನ್ನು ಇ-ಮೇಲ್: rudsetinlm@gmail.comಗೆ ಡಿಸೆಂಬರ್ 28ರೊಳಗೆ ಸಲ್ಲಿಸಬೇಕು. ಆಯ್ಕೆಯಾದವರಿಗೆ ಮಾಸಿಕ 30,000 ರೂ. ಗಳ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9113880324 ಅಥವಾ 9686172444ನ್ನು ಸಂಪರ್ಕಿಸ ಬೇಕೆಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು:  ಪ್ರಿಯಕರನೊಂದಿಗೆ ಸೇರಿ ಗಂಡನನ್ನೆ ಬೆಂಕಿ ಹಚ್ಚಿ ರಸ್ತೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪ್ರಿಯಕರ  ಇಬ್ಬರಿಗೂ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅನ್ನಪೂರ್ಣ ಮತ್ತು ರಾಮಕೃಷ್ಣ ಇಬ್ಬರು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ತಲಾ ರೂ. 30,000/- ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗೋಕುಲ–ಬಡ್ಡಿಹಳ್ಳಿ ಬಡಾಣೆಯಲ್ಲಿ ನಾರಾಯಣ ಬಾಬು ವಾಸವಾಗಿದ್ದರು. ಅವರನ್ನು ಅವರ ಪತ್ನಿ ಅಪರಾಧಿ ಅನ್ನಪೂರ್ಣ ತನ್ನ ಪ್ರಿಯಕರನೊಂದಿಗೆ ಸೇರಿ 2021ರ ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮನೆಯಲ್ಲಿದ್ದ ಜಿ.ನಾರಾಯಣ ಅವರನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದರು. ಮೈಯೆಲ್ಲಾ ಬೆಂಕಿ ಹತ್ತಿಕೊಂಡು ಉರಿ ತಾಳಲಾರದೇ ಜಿ.ನಾರಾಯಣ ಅವರು ಮನೆಯಿಂದ ಹೊರಗಡೆ ಓಡಿ ಬಂದಿದ್ದರು. ಮನೆಯ ಮುಂದೆ ಸ್ವಲ್ಪ ದೂರದಲ್ಲಿದ್ದ ಸಿಮೆಂಟ್ ಚರಂಡಿಗೆ ಮಕಾಡೆಯಾಗಿ ಬಿದ್ದಿದ್ದರು. ಅಲ್ಲಯೇ ಇದ್ದ ಆರೋಪಿ ರಾಮಕೃಷ್ಣ ಆತನನ್ನು ಹಿಂಬಾಲಿಸಿಕೊಂಡು…

Read More