Author: admin

ತುಮಕೂರು: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಬುಧವಾರ ಸಂಜೆ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸ್ತುಪ್ರದರ್ಶನವು ಜಿಲ್ಲೆಯ ಸಮಗ್ರ ಚಿತ್ರಣವನ್ನು ನೀಡುವಂತಿರಬೇಕು. ಕೃಷಿ, ಅರಣ್ಯ, ತೋಟಗಾರಿಕೆ, ಆರೋಗ್ಯ, ಕೈಗಾರಿಕೆ, ಪಶುವೈದ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷಣ, ಜವಳಿ ಮತ್ತು ಕೈಮಗ್ಗ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಪ್ರವಾಸೋದ್ಯಮ, ಕಾರ್ಮಿಕ, ವಾರ್ತಾ ಇಲಾಖೆಗಳು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳು, ಕೃಷಿಕರು, ಕೈಗಾರಿಕೋದ್ಯಮಿಗಳು, ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಗಳು ನೀಡುವ ಸವಲತ್ತುಗಳ ಬಗ್ಗೆ ಜನಪರ ಮಾಹಿತಿಯನ್ನು ಈ ವಸ್ತುಪ್ರದರ್ಶನದಲ್ಲಿ ನೀಡಬೇಕು ಎಂದು ತಿಳಿಸಿದರು. ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಲಕ್ಷಾಂತರ ಮಂದಿ…

Read More

ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪೂರ ಹುಬ್ಬಳ್ಳಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಬೇಕು ಎಂದು ಇತ್ತೀಚೆಗೆ  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ದಲಿತ ಸಂಘರ್ಷ ಸಮಿತಿ(DSS) ಮನವಿ ಮಾಡಿತ್ತು. ಈ ಬಗ್ಗೆ ನಮ್ಮತುಮಕೂರು  ಮಾಧ್ಯಮ ವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿ ಸಂತಪುರ ಗ್ರಾಮ ಪಂಚಾಯತ್ ಪಿಡಿಒ ಸಂತೋಷ್ ಪಾಟೀಲ್ ಔರಾದ್ ರಾಷ್ಟ್ರೀಯ ಹೆದ್ದಾರಿ ಸಂತಪುರ ಬಸವೇಶ್ವರ ವೃತ್ತದ  ಹತ್ತಿರ ಮತ್ತು ಮಸ್ಕಲ್ ಕ್ರಾಸ್ ಹತ್ತಿರ ಬ್ಯಾರಿಕೇಡ್ ಅಳವಡಿಸಿದ್ದಾರೆ ಅವರಿಗೆ ತುಂಬಾ ಧನ್ಯವಾದಗಳು ಎಂದು ಭೀಮವಾದ ದಲಿತ ಸಂಘರ್ಷ ಸಮಿತಿ ಮುಖಂಡರು ತಿಳಿಸಿದರು. ಇದೇ ವೇಳೆ ಸಾರ್ವಜನಿಕ ಸಮಸ್ಯೆಯ ಬಗ್ಗೆ ವರದಿ ಮಾಡಿ ಅಧಿಕಾರಿ ವರ್ಗಗಳ ಗಮನ ಸೆಳೆದ ನಮ್ಮತುಮಕೂರು ವಾಹಿನಿಗೆ ಗ್ರಾಮಸ್ಥರು ಹಾಗೂ ಸಂಘಟನೆಯ ಮುಖಂಡರು ಧನ್ಯವಾದಗಳನ್ನು ಸಲ್ಲಿಸಿದರು.  ಈ ಸಂದರ್ಭದಲ್ಲಿ ಸಂತಪೂರ ಪಿ.ಎಸ್.ಐ. ನಂದಕುಮಾರ್ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಬೆಂಗಳೂರು ಜಿಲ್ಲಾ ಅಂಗನವಾಡಿಯ ಸಾವಿರಾರು ನೌಕರರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಂ.ನಗರ ಜಿಲ್ಲಾ ಅಧ್ಯಕ್ಷ ಲೀಲಾವತಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಿ ಎಂದು ಪ್ರತಿಭಟಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂಗನವಾಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಸಂಬಳ ಹೆಚ್ಚಿಸುವುದಾಗಿ ತಿಳಿಸಿದರು. ಆದರೆ ಯಾವುದೇ ರೀತಿಯಲ್ಲೂ ಸಮಸ್ಯೆ ನಿವಾರಣೆಯಾಗಿಲ್ಲ ಎಂದು ಆಗ್ರಹಿಸಿದರು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ, ಪೂರಕ ಪೌಷ್ಟಿಕ ಆಹಾರದ ಬದಲು ಸಂಪೂರ್ಣ ಆಹಾರ, ಮ.ಮ.ಇ.14 ಐಸಿಡಿ 2023ರ ಅದೇಶದ ಪ್ರಕಾರ ಕೂಡಲೇ ಗ್ರಾಜ್ಯುಟಿ ಅನುದಾನದ ಬಿಡುಗಡೆ ಮಾಡಿ ಮತ್ತು ಎಲ್ಲರಿಗೂ ಅನ್ವಯಿಸಿ ಎಂದು ಒತ್ತಾಯಿಸಿದರು. ಮುಂಗಡವಾಗಿ ಕರೆನ್ಸಿ ಹಣ, ಕೋಳಿ ಮೊಟ್ಟೆ, ಬಾಡಿಗೆ,…

Read More

ಔರಾದ: ತಾಲೂಕಿನ ಭೋಂತಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಸಾವಗಾಂವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ ಪರದಾಡುತ್ತಿದ್ದಾರೆ. ಹನಿ ನೀರಿಗಾಗಿ ಇಲ್ಲಿಯ ಜನರು ಹಾಹಾಕಾರ ಪಡುವ ಪರಿಸ್ಥಿತಿ ಉದ್ಭವಿಸಿದೆ.  ಜೆಜೆಎಂ ಯೋಜನೆ ಮೂಲಕ ಕೋಟ್ಯಾಂತರ ರೂಪಾಯಿಗಳು ಖರ್ಚು ಮಾಡಿದರೂ, ಜನರಿಗೆ ಹನಿ ನೀರು ಒದಗಿಸಲು ಅಧಿಕಾರಿಗಳಿಂದ ಆಗುತ್ತಿಲ್ಲ, ಸಂಪೂರ್ಣ ಕಳಪೆ ಮಟ್ಟ ಕಾಮಗಾರಿ ಮಾಡಿರೋದ್ರಿಂದ ಈ ಯೋಜನೆ ದಿಕ್ಕು ತಪ್ಪಿದೆ ಎಂದು ಮುಖಂಡ ಸುಧಾಕರ್ ಕೊಳ್ಳುರ ಅವರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಮಿನಬಾಯಿ ಎನ್ನುವ ತುಂಬ ಗರ್ಭಿಣಿ ಮಗುವನ್ನು ಎತ್ತಿಕೊಂಡು  ನೀರಿಗಾಗಿ ಅಲೆದಾಡುತ್ತಿರುವ ದೃಶ್ಯ ನೋಡಿದರೆ . ಇಡೀ ಮನುಕುಲದ ತಲೆತಗ್ಗಿಸುವ ಘಟನೆಯಾಗಿದೆ ಎಂದು ಸುಧಾಕರ್ ಕೊಳ್ಳುರ  ಹೇಳಿದರು. ಪ್ರತಿ ವರ್ಷ ಇಲ್ಲಿಯ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋತರ ವರ್ತಿಸುತ್ತಿರುವುದು  ಖಂಡನೀಯ ಎಂದು ಅವರು ಹೇಳಿದರು. ಕುಡಿಯುವ…

Read More

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಹಂದಿಕೆರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಕಾಮಗಾರಿ ಪೂರ್ಣಗೊಂಡದ ಮೇಲೆ ಹಣ ಪಾವತಿಸಬೇಕು ಎಂದು ಹಂದಿಕೆರಾ ಗ್ರಾಮದ ಸಮಾಜ ಸೇವೆಕ ಅಮೂಲ ಬಿರಾದಾರ ಅವರು ಮಂಗಳವಾರ ಚಿಮೆಗಾಂವ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾನಾಜಿ ಪಾಟೀಲವರಿಗೆ ಮನವಿ ಸಲ್ಲಿಸಿದರು. ಹಂದಿಕೆರಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವರ್ಷ ಹಿಂದೆ ಮಕ್ಕಳಗಾಗಿ ಶೌಚಾಲಯಗಾಗಿ ಕಟ್ಟಿಸಿದ ಶೌಚಾಲಯವನ್ನು ಅಪೂರ್ಣ ಇದ್ದು, ಹೊಂಡಾ ಸೇಫ್ಟಿ ಟ್ಯಾಂಕ್ ಮಾಡದೆ ಶೌಚಾಲಯ ಕೋಣೆಗಳನ್ನು ತಯಾರಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಹಣ ಪಾವತಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ವರದಿ ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ: ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆ  ಪೊಲೀಸರಿಂದ  ಬೀದರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಕಛೇರಿಯಲ್ಲಿ ಸೈಬರ್ ಅಪರಾಧದ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಶಿವಾನಂದ ಘಾಣಿಗೇರ, ಪಿ.ಐ. ಸೈಬರ್ ಅಪರಾಧ ಪೊಲೀಸ್ ಠಾಣೆ ಬೀದರ್ ಇವರು ತಮ್ಮ ಸಿಬ್ಬಂದಿ ಮಲ್ಲಿಕಾರ್ಜುನ ಪಾಟೀಲ್, ಹರಿಕಿಶನ್ ಠಾಕೂರ್ ರವರೊಂದಿಗೆ ಬೀದರ್ ದ ಸಾರ್ವಜನಿಕ ಶಿಕ್ಷಣ ಇಲಾಖೆ (ಡಿ.ಡಿ.ಪಿ.ಐ.) ಕಛೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ  ಸೈಬರ್ ಅಪರಾಧಗಳಿಗೆ ಒಳಗಾಗದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಮತ್ತು ಅಪರಾಧ ಸಂಭವಿಸಿದಲ್ಲಿ ತಕ್ಷಣ ಸೈಬರ್ ಅಪರಾಧ ಸಹಾಯವಾಣಿ 1930 ತಕ್ಷಣವೇ ಕರೆ ಮಾಡಿ ತಮ್ಮ ದೂರನ್ನು ದಾಖಲಿಸಿ ಸೈಬರ್  ವಂಚನೆಯಿಂದ ಪಾರಾಗಬಹುದು ಎಂಬ ಬಗ್ಗೆ ಅರಿವು ಮೂಡಿಸಿದರು. ಕರ್ತವ್ಯದ ಸಮಯದಲ್ಲಿ ಒತ್ತಡದಲ್ಲಿದ್ದಾಗ ಸರಕಾರಿ ನೌಕರರು ಸೈಬರ್ ಅಪರಾಧಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಇರುವುದರಿಂದ ಅವರು ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವುದರ…

Read More

ಬೀದರ್:  ಜಿಲ್ಲೆಯ ಔರಾದ್ ತಾಲ್ಲೂಕಿನ  ಸಂತಪೂರ ಪೊಲೀಸರು ಠಾಣೆಯ ಸರಹದ್ದಿನಲ್ಲಿ ಬರುವ ಸಂತಪೂರ ಗ್ರಾಮದ ಮಾಜಿ ಸೈನಿಕ ಪ್ರೌಢ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಯಿತು. ಮಕ್ಕಳಿಗೆ ಅಪರಾಧಗಳು ನಡೆಯದಂತೆ ಯಾವ ರೀತಿ ತಡೆಯುವುದು, ಮತ್ತು ರಸ್ತೆ ಅಪಘಾತಗಳು ನಡೆಯದಂತೆ ರಸ್ತೆ ಸುರಕ್ಷತೆಯ ಬಗ್ಗೆ, ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ  ಅರಿವು ಮೂಡಿಸಲಾಯಿತು ಎಂದು ಸಂತಪೂರ ಪಿ.ಎಸ್.ಐ. ನಂದಕುಮಾರ  ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಹೈಕೋರ್ಟ್ ನಿಂದ ಜಾಮೀನು ಪಡೆದ ಬಳಿಕ ಇಂದು ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿರುವ ದರ್ಶನ್ ಕುಟುಂಬ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದರು. ಬೆಳಿಗ್ಗೆ 6 ಗಂಟೆಯಿಂದಲೇ ಪತ್ನಿ ವಿಜಯಲಕ್ಷ್ಮೀ ಆಸ್ಪತ್ರೆಗೆ ಆಗಮಿಸಿದ್ದರು. ನಟ ದರ್ಶನ್ ಪುತ್ರ ವಿನೀಶ್, ನಟ ಧನ್ವೀರ್, ಸಹೋದರ ದಿನಕರ್ ಆಸ್ಪತ್ರೆ ಆವರಣಕ್ಕೆ ಆಗಮಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಕೆ.ಐ.ಎ.ಡಿ.ಬಿ. ವತಿಯಿಂದ ಸ್ವಾಧೀನಪಡಿಸಿಕೊಳ್ಳುವ  ಜಮೀನಿನ ಪರಿಹಾರವನ್ನು ಸಂಬಂಧಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ.ಎಸ್. (RTGS) ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಕೆಐಎಡಿ ಕಾಯ್ದೆ, 1996ರನ್ವಯ ಭೂಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ಈ ಕಾಯ್ದೆಯನ್ವಯ ರೈತರನ್ನು ಅವರ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ಸಹಭಾಗಿತ್ವ ನೀಡಲು ಅವಕಾಶವಿರುವುದಿಲ್ಲ ಎಂದರು. ರಾಜ್ಯದಲ್ಲಿ ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುವಾಗ ಅಭಿವೃದ್ಧಿ ಪಡಿಸಲಾದ ನಿವೇಶನಗಳನ್ನು ಹಂಚಿಕೆ ಮಾಡುವ ರೀತಿಯಲ್ಲೇ, ಕೆಐಎಡಿಬಿ ಯಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಕೈಗಾರಿಕಾ ಪ್ರದೇಶದ ಜಮೀನುಗಳಿಗೆ ಭೂಪರಿಹಾರದ ಬದಲಾಗಿ ಪ್ರತಿ ಎಕರೆ ಜಮೀನಿಗೆ 10,781 ಚದರಡಿ ಅಭಿವೃದ್ಧಿ ಪಡಿಸಿದ ವಿಸ್ತೀರ್ಣವನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ನಮ್ಮತುಮಕೂರಿನ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಎ — ಖಾತಾ ಮತ್ತು ಬಿ–ಖಾತಾ ಎಂದು ಇ–ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ…

Read More