Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಬೆಳಗಾವಿ ಸುವರ್ಣಸೌಧ: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಟಿ.ಎನ್.ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಎತ್ತರದ ರಚನೆಗಳು. ಸಂಪರ್ಕ–ರಸ್ತೆ (NH & SH), ರೈಲು ಮತ್ತು ಮೆಟ್ರೋ ಸಂಪರ್ಕ. ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನವನ್ನು ನಡೆಸಲಾಗುತ್ತಿದೆ ಎಂದರು. ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ / ಪ್ರಸ್ತಾವನೆಯನ್ನು ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ ಎಂದು…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೆಡ್ ಪ್ಲಸ್ ಹಾಗೂ ಸಿದ್ಧಿ ಅಸೋಸಿಯೇಟ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 20ರ ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಡಿ.ಫಾರ್ಮ, ಬಿ.ಫಾರ್ಮ, ಐ.ಟಿ.ಐ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಮಾತ್ರ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9071021143, 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ ಸುವರ್ಣಸೌಧ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಮೊತ್ತವನ್ನು ನೀಡಿರುವುದಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ನಿರ್ದಿಷ್ಟ ಪ್ರಕರಣಗಳು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯದಲ್ಲಿ ವರದಿಯಾಗಿರುವುದಿಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು. ವಿಧಾನ ಪರಿಷತನಲ್ಲಿ ಮಂಗಳವಾರ ಸದಸ್ಯರಾದ ಎನ್.ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.2018-19ನೇ ಸಾಲಿಗೆ ಸಂಬಂಧಿಸಿದಂತೆ ಮಾತ್ರ ಮೂರು ಸಕ್ಕರೆ ಕಾರ್ಖಾನೆಗಳಿಂದ 3.94 ರೂ ಕೋಟಿಗಳ ಕಬ್ಬು ಬಿಲ್ಲನ್ನು ಪಾವತಿಸುವುದು ಬಾಕಿ ಇದೆ. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಸಿ., ಹಳ್ಳಿಖೇಡ್, ಹುಮನಾಬಾದ್ ತಾಲ್ಲೂಕಿನಿಂದ 0.89 ಕೋಟಿ ಬಾಕಿ ಮೊತ್ತ, ಭವಾನಿ ಶುಗರ್ಸ್ ಲಿ., ಬರೂರು, ಬೀದರ್ ತಾಲ್ಲೂಕಿನಿಂದ 1.80 ಕೋಟಿ ರೂ. ಮತ್ತು ಧ್ಯಾನಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ಶುಗರ್ಸ್ ಲಿ., ಮರಗೂರು, ಇಂಡಿ ತಾಲ್ಲೂಕಿನಿಂದ 1.25 ಕೋಟಿ ರೂ ಕಬ್ಬು ಬಿಲ್ಲನ್ನು…
ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ ಅವರು ತೊಡಗಿಸಿಕೊಳ್ಳುವ ರೀತಿಯ ಬಗ್ಗೆ ಕೊಂಡಾಡಿದರು. ಸದನದಲ್ಲಿ ಹಾಜರಿದ್ದು ಸಭೆಯ ಗಾಂಭೀರ್ಯತೆ ಕಾಪಾಡುವುದರ ಮೂಲಕ ಕಿರಿಯ ಶಾಸಕರಿಗೆ ತೋರಿದ ಮಾರ್ಗದರ್ಶನ ಮೆಚ್ಚುವಂತದ್ದು ಎಂದು ಅಭಿಪ್ರಾಯಪಟ್ಟರು. ಟಿ.ಬಿ. ಜಯಚಂದ್ರ ಅವರು ಕಳ್ಳಂಬೆಳ್ಳ ಮತ್ತು ಶಿರಾದಿಂದ ಒಟ್ಟು 7 ಬಾರಿ ಶಾಸಕರಾಗಿದ್ದು, ಅವರು ರಾಜ್ಯದಲ್ಲಿ ಸಚಿವರಾಗಿ ಕೃಷಿ, ಸಂಸದೀಯ ವ್ಯವಹಾರ ಖಾತೆಗಳನ್ನ ನಿರ್ವಹಿಸಿದ್ಧಾರೆ. ವಿವಿಧ ನಿಗಮ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸದನದಲ್ಲಿ ಅತ್ಯುತ್ತಮ…
ಬೆಳಗಾವಿ: ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು. ತುಳಸಿ ಗೌಡ ಅವರು 1944ರ ಡಿಸೆಂಬರ್.16 ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು ‘ಪರಿಸರವೇ ನನ್ನ ಉಸಿರು’ ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ ‘ವೃಕ್ಷ ಮಾತೆ’ ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು. ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ…
ಬೆಳಗಾವಿ ಸುವರ್ಣಸೌಧ: ವೃಕ್ಷಮಾತೆ ಎಂದೇ ಜನಪ್ರಿಯರಾಗಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕು ಹೊನ್ನಳ್ಳಿ ಗ್ರಾಮದ ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನಕ್ಕೆ ಮಂಗಳವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ನಿರ್ಣಯ ಮಂಡಿಸಿ ತುಳಸಿ ಗೌಡ ಅವರ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದರು. ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಸಮುದಾಯದ ಬಡಕುಟುಂಬದಲ್ಲಿ ಜನಿಸಿದ್ದು, ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಮರಗಳೊಂದಿಗೆ ಅನುಭವ ಹಾಗೂ ಅಪಾರ ಜ್ಞಾನವನ್ನು ಹೊಂದಿದ್ದ ಅವರು ಅರಣ್ಯದ ಎನ್‌ಸೈಕ್ಲೋಪೀಡಿಯಾ, ವೃಕ್ಷ ಮಾತೆ ಎಂದೇ ಪ್ರಖ್ಯಾತರಾಗಿದ್ದರು. ಮುನ್ನೂರಕ್ಕೂ ಹೆಚ್ಚಿನ ಮರಗಳ ಪ್ರಬೇಧಗಳನ್ನು ತಿಳಿದಿದ್ದ ಅವರು ನಿಂತ ಜಾಗದಲ್ಲೇ ಅವುಗಳ ಬಗ್ಗೆ ವಿವರಿಸುವಷ್ಟು ಜ್ಞಾನವನ್ನು ಹೊಂದಿದ್ದರು. ಅರಣ್ಯ ಇಲಾಖೆಯ ಜೊತೆಗೆ ಕೈಜೋಡಿಸಿ 65ಕ್ಕೂ ಹೆಚ್ಚು ವರ್ಷಗಳಿಂದ ಪರಿಸರ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬಾಲ್ಯದಲ್ಲೇ ವಿಧವೆಯಾದ ತುಳಸಿಗೌಡ ಮರಗಳಲ್ಲೇ ಮಕ್ಕಳು ಹಾಗೂ ಕುಟುಂಬವನ್ನು ಕಂಡವರು. ಒಂದು ಕಾಲದಲ್ಲಿ ಕಾಡಿನಿಂದ ಸೌದೆ…
ತುಮಕೂರು: ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮೆನು ಚಾರ್ಚ್ ಗಳನ್ನು ಪ್ರದರ್ಶಿಸಬೇಕು. ಮೆನು ಚಾರ್ಟ್ ನಲ್ಲಿರುವಂತೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ, ಭೋಜನ ವ್ಯವಸ್ಥೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ತುಮಕೂರು ತಾಲ್ಲೂಕು ವಿದ್ಯಾರ್ಥಿ ನಿಲಯಗಳ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ತಿಪ್ಪೇಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಆಹಾರ, ಗ್ರಂಥಾಲಯ, ಕ್ರೀಡಾಕಿಟ್, ಶೌಚಾಲಯ, ವಿದ್ಯುತ್ ಸಂಪರ್ಕ, ಸಮವಸ್ತ್ರ, ಸಿಸಿ ಕ್ಯಾಮರಾ, ಕಂಪ್ಯೂಟರ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರು ಕೇಂದ್ರ ಸ್ಥಾನದಲ್ಲಿದ್ದು, ವಿದ್ಯಾರ್ಥಿನಿಲಯಗಳಲ್ಲಿ ಯಾವುದೇ ಸಮಸ್ಯೆಗಳು ತಲೆದೋರದಂತೆ ಎಚ್ಚರಿಕೆವಹಿಸಬೇಕೆಂದು ನಿರ್ದೇಶನ ನೀಡಿದರು. ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಪ್ರತಿ ಮಾಹೆ ಸ್ಯಾನಿಟರಿ ನ್ಯಾಪ್‌ಕಿನ್ ನೀಡಬೇಕು. ವಿದ್ಯಾರ್ಥಿ…
ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್ ನಿಂದ ನವೆಂಬರ್ ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್ ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿವೆ. ತಾಯಿ ಮತ್ತು ಶಿಶು ಮರಣಗಳ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರಲ್ಲದೆ, ಖಾಸಗಿ/ ಸರ್ಕಾರಿ ಆಸ್ಪತ್ರೆಗಳಲ್ಲಿ ಉದಾಸೀನ ಮಾಡದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಸಂಭವಿಸಿದ ನಂತರ ಮರಣ ಪ್ರಮಾಣದ ಬಗ್ಗೆ ಚರ್ಚಿಸುವ ಬದಲು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ…
ತುಮಕೂರು: ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಕನಿಷ್ಠ 3 ಮಂಜೂರಿ ದಾಖಲೆಗಳಿದ್ದರೂ ಆಗುತ್ತೆ ದರಖಾಸ್ತು ಮತ್ತು ಪೋಡಿ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ನಮೂನೆ 1-5ನ್ನು ತಯಾರಿಸುವ ಪ್ರಕ್ರಿಯೆಯನ್ನು ಸರಳೀಕರಿಸಿದ್ದು, ಕನಿಷ್ಠ 3 ಮಂಜೂರಿ ದಾಖಲೆಗಳು ಲಭ್ಯವಿದ್ದಲ್ಲಿ ತಹಶೀಲ್ದಾರ್‌ಗಳು ನೈಜತೆ…
ತುಮಕೂರು: ತುಮಕೂರು ನಗರದ ಹಿರಿಯ ಸಮಾಜ ಸೇವಕರಾದ ಪಿ.ಎಸ್.ಚಂದ್ರಮೋಹನ್(65) ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರು ಸದಾ ಶಿಕ್ಷಣ ಪ್ರೇಮಿಯಾಗಿದ್ದರು, ಬಡವರು, ದೀನರು, ಮಕ್ಕಳ ಬಗ್ಗೆ ಅಪಾರ ಪ್ರೇಮವನ್ನು ಹೊಂದಿದ್ದರು. ಪಿ.ಎಸ್.ಚಂದ್ರಮೊಹನ್ ರವರ ತಂದೆ ದಿವಂಗತ ಕೆ.ಸುಬ್ಬರಾಯರವರು ನಿವೃತ್ತ ಎಇಓ ಆಗಿದ್ದು, ತಾಯಿ ದಿವಂಗತ ಸರೋಜಮ್ಮನವರು ತಂದೆ—ತಾಯಿ ಇಬ್ಬರೂ ಸಹ ಶಿಕ್ಷಣಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತುರುವೇಕೆರೆ, ಗುಬ್ಬಿಯಲ್ಲಿ ಪಡೆದು ಪಿಯುಸಿಯನ್ನು ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪಡೆದು ಬಿಇ(ಸಿವಿಲ್) ಪದವಿಯನ್ನು ಶ್ರೀ ಸಿದ್ಧಗಂಗಾ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪಡೆದು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಸೇವೆಗೆ ಸೇರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ 36 ವರ್ಷ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಅವರಿಗೆಇಬ್ಬರು ಮಕ್ಕಳಿದ್ದು ಹಿರಿಯ ಮಗ ಟಿ.ಸಿ.ಚೇತನ್ ರವರು ಬಿ.ಇ.(ಕಂಪ್ಯೂಟರ್ ಸೈನ್ಸ್) ಪದವೀಧರರಾಗಿದ್ದು ಕೆನಡಾದೇಶದಲ್ಲಿ ಸಾಫ್ಟ್ ವೇರ್ ಕಂಪೆನಿಯಲ್ಲಿ ಮ್ಯಾನೇಜರ್ ಆಗಿದ್ದಾರೆ. ಮಗಳು ಸಹ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಹೆಂಡತಿ,…