Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಕಾರ್ಕಳ: ಇಲ್ಲಿನ ಹಿರಿಯಂಗಡಿಯ ಇತಿಹಾಸ ಪ್ರಸಿದ್ಧ ಹಲ್ಲರ ಬಸದಿಯ ರಥೋತ್ಸವ ಹಾಗೂ ಸಮಾವಸರಣ ಪೂಜೆಗಳು ನಡೆದವು. ಶ್ರೀ ನೇಮಿನಾಥ ತೀರ್ಥಂಕರ, ಶ್ರೀ ಪಾರ್ಶ್ವನಾಥ ತೀರ್ಥಂಕರ ಹಾಗೂ ಚತುರ್ವಿಶ ತೀರ್ಥಂಕರ, ಮಾತೆ ಪದ್ಮಾವತಿಗೆ ವಿಶೇಷ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು . ಕಾರ್ಕಳ ,ಮೂಡುಬಿದರೆ ,ಕಳಸ ಸೇರಿದಂತೆ, ನಾಡಿನ ವಿವಿಧಡೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಯಶ್ರೀ ಹೊರನಾಡು ಅವರ ಸಂಗೀತ ಹೊಸ ಮೆರುಗು ನೀಡಿತು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೂಡುಬಿದರೆ: ಜೈನ ಧರ್ಮ ಪುರಾತನವಾದ ಧರ್ಮವಾಗಿದ್ದು ಸರ್ವಧರ್ಮಗಳೊಂದಿಗೆ ಸಮನ್ವಯ ಕಾಪಾಡಿಕೊಂಡು ಬರುತ್ತಿರುವ ಧರ್ಮವಾಗಿದೆ, ಎಲ್ಲಾ ಧರ್ಮಗಳನ್ನು ಪ್ರೋತ್ಸಾಹಿಸುತ್ತಿದ್ದು, ಈ ಪರಿ ಬೇರೆ ಧರ್ಮದಲ್ಲಿ ಕಾಣುವುದಿಲ್ಲ ಎಂದು ಮೂಡುಬಿದರೆ ಜೈನ ಮಠದ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟರಕ ಪಂಡಿತಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದ ಮೂಡುಬಿದರೆ ಲೆಪ್ಪ ಬಸದಿಯ ಶ್ರೀ ಚಂದ್ರನಾಥ ತೀರ್ಥಂಕರ ಹಾಗೂ ಮಾತೇ ಜ್ವಾಲಾ ಮಾಲಿನಿ ಅಮ್ಮನವರ 38ನೇ ವಾರ್ಷಿಕ ಲಟ್ಟಣಿಗೆ ಅಭಿಷೇಕ, ಧಾರ್ಮಿಕ ಸಭಾ, ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮೂಡುಬಿದಿರೆ ಬಾಗದಲ್ಲಿ ಶ್ರೀಮಂತ ಮನೆತನಗಳು, ಮಠಗಳು, ರಾಜರಿದ್ದರು ಜೈನ ಧರ್ಮದ ಆಚಾರ ವಿಚಾರಗಳನ್ನು ಜನ ಗೌರವಿಸುತ್ತಿದ್ದರು, ಎಲ್ಲಾ ಧರ್ಮಗಳನ್ನು ಪ್ರೋತ್ಸಾಹಿಸಿದ್ದಾರೆ ಇದೊಂದು ಸರ್ವಧರ್ಮ ಸಮನ್ವಯ ಕ್ಷೇತ್ರವಾಗಿತ್ತು ಎಂದರು. ಮೂಡುಬಿದರೆಯಲ್ಲಿ ಜೈನ ಧರ್ಮಕ್ಕೆ ಪುರಾತನ ಇತಿಹಾಸವಿದೆ, ಉನ್ನತವಾಗಿ ಬೆಳೆದಿದೆ, ಪುತ್ತಿಗೆ ಅರಸರು, ಪರಂಪರೆ, ಕಾವ್ಯವಾಚನ ನೀಡಿದ್ದಾರೆ ಲೆಪ್ಪದ ಬಸದಿಗೆ ಈ ಹಿಂದೆ ವೈಭವದ ಪಂಚಕಲ್ಯಾಣಗಳು ನಡೆದಿವೆ ,ಕೆರೆ, ಕಟ್ಟೆ ಬಾವಿಗಳನ್ನು ಜನರಿಗೆ ಧಾರೆ ಎರೆದ ಜೈನ…
ಬೆಳಗಾವಿ ಸುವರ್ಣಸೌಧ: ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಬಡವರು, ಮಧ್ಯವರ್ಗದವರು, ಮತ್ತಿತರರು ಹಣಕಾಸು ವ್ಯವಹಾರಗಳಲ್ಲಿ ಆಸೆಗೆ ಬಲಿಯಾಗಿ ವಂಚನೆಗೆ ಒಳಗಾಗುವುದನ್ನು ತಡೆಗಟ್ಟಲು ಹಾಗೂ ವಂಚಕರನ್ನು ಶಿಕ್ಷಿಸುವ ನಿಟ್ಟಿನಲ್ಲಿ ವಿಧೇಯಕ ತರಲಾಗುತ್ತಿದೆ. ಈ ದಿಸೆಯಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ನೀಡಲಾಗುತ್ತಿದೆ ಎಂದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, 2003–04 ರಲ್ಲಿ ವಿನಿವಿಂಕ್ ಶಾಸ್ತ್ರಿ ಕೋಟ್ಯಾಂತರ ರೂ. ಗಳ ಠೇವಣಿ ಸಂಗ್ರಹಿಸಿ,…
ಸುವರ್ಣ ವಿಧಾನಸೌಧ ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಡಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ…
ಬೆಳಗಾವಿ ಸುವರ್ಣಸೌಧ: ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಪರ್ಯಾಲೋಚನೆಗೆ ಪ್ರಸ್ತಾಪಿಸಿದಾಗ, ಸದನ ಧ್ವನಿ ಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಿತು. ಈ ಹಿಂದೆ ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಮರು ನಾಮಕರಣಗೊಂಡಿದೆ. ಇದೇ ವೇಳೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅನುಮೋದನೆಗೆ ಪ್ರಸ್ತಾಪಿಸಿದಾಗ ಯಾವುದೇ ಚರ್ಚೆ ಇಲ್ಲದೆ ಸದನ ಅಂಗೀಕರಿಸಿತು. ಈ ವಿಧೇಯಕದ ಉದ್ದೇಶವೇನೆಂದರೆ ರಾಜ್ಯ ಸರ್ಕಾರ ಮೂಲಕದ ಸಂಬಂಧಪಟ್ಟ ಕ್ಷೇತ್ರದಿಂದ ವಿಶೇಷ ತಜ್ಞರನ್ನು ವಿಶ್ವ ವಿದ್ಯಾನಿಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸುವುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಳಗಾವಿ ಸುವರ್ಣಸೌಧ: ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69,915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್–ಡಿ ಹುದ್ದೆಗಳನ್ನು ಶೇ.30 ರಷ್ಟು Non–Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು. ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ…
ಕೊರಟಗೆರೆ: ಹೊಸ ಮನೆ ಕಟ್ಟುವ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನ 6 ತಿಂಗಳ ಗರ್ಭಿಣಿಯನ್ನಾಗಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಲೋಕೇಶ್ (48 ) ಎಂಬಾತ ಕೃತ್ಯ ನಡೆಸಿದ ಆರೋಪಿಯಾಗಿದ್ದಾನೆ. 9ನೇ ತರಗತಿಯ ವಿದ್ಯಾರ್ಥಿನಿಯನ್ನ ಆಕೆಯ ಮನೆಯವರು ಮನೆಯಲ್ಲಿ ಇಲ್ಲದಿರುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿ 6 ತಿಂಗಳ ಗರ್ಭಿಣಿಯನ್ನಾಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊರಟಗೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಿಂದ ಆರ್ ಬಿ ಎಸ್ ಕೆ ತಂಡ ವೈದ್ಯಕೀಯ ಪರೀಕ್ಷೆ ನಡೆಸಲು ಶಾಲೆಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಆರೋಗ್ಯ ತಪಾಸಣೆಯ ಸಂದರ್ಭದಲ್ಲಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಸಂಬಂಧ ಪೋಷಕರು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು , ಸಿಪಿಐ ಅನಿಲ್ ಕುಮಾರ್ ಪೋಕ್ಸೋ ಕಾಯ್ದೆ ಅಡಿ ಪ್ರಕರಣ…
ಪಾವಗಡ: ಮನೆಗಳಲ್ಲಿ ಪ್ರಕರಣಗಳನ್ನು ಕಡಿಮೆ ಮಾಡಲು ಪಟ್ಟಣದಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಹೌದು..! ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಇತ್ತೀಚಿಗೆ ಮನೆಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಳ ಹಾಕುವ ನಿಟ್ಟಿನಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಅದೇನಪ್ಪ ಅಂದ್ರೆ, ಮನೆ ಮಂದಿ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋದಂತಹ ಸಂದರ್ಭದಲ್ಲಿ ಪಾವಗಡ ಪೊಲೀಸರಿಗೆ ಮಾಹಿತಿ ನೀಡಿ, ನಾವು ನಿಮ್ಮ ಮನೆಗೆ ರಕ್ಷಣೆ ಕಲ್ಪಿಸುತ್ತೇವೆ ಎಂಬ ಮಾಹಿತಿ ಮತ್ತು ಪೊಲೀಸರನ್ನು ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತಹ ಸ್ಟಿಕ್ಕರ್ ಅನ್ನ ಪಾವಗಡ ಪಟ್ಟಣದ ಶ್ರೀನಿವಾಸನಗರ ನಾಗರಕಟ್ಟೆ ವೃತ್ತ ಸೇರಿದಂತೆ ವಿವಿಧಡೆ ಮನೆಗಳ ಬಾಗಿಲುಗಳ ಮೇಲೆ ಪೊಲೀಸರೇ ಸ್ವತಃ ಅಂಟಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪಾವಗಡ ವೃತ್ತ ನಿರೀಕ್ಷಕ ಎಂ.ಆರ್.ಸುರೇಶ್ ಅವರು ಮನೆಗಳಿಂದ ಪ್ರವಾಸ ಅಥವಾ ಊರುಗಳಿಗೆ ಹೋಗುವ ಸಂದರ್ಭದಲ್ಲಿ ಬೆಲೆ ಬಾಳುವಂತಹ ವಸ್ತುಗಳನ್ನ ಜೋಪಾನವಾಗಿ ತಮ್ಮ ಜೊತೆಗೆ ತೆಗೆದುಕೊಂಡು ಹೋಗುವುದಾಗಲಿ ಬ್ಯಾಂಕಿನಲ್ಲಿ ಇರಿಸುವುದಾಗಲಿ ಮಾಡಬೇಕು ಅಥವಾ ತಾವು ಊರುಗಳಿಗೆ…
ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಅಸಮರ್ಪಕ ಬಸ್ ವ್ಯವಸ್ಥೆಯಿಂದಾಗಿ ಹೆಣ್ಣುಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿರುವ ಘಟನೆ ನಡೆಯುತ್ತಿದೆ. ಕೊರೆಕಲ್, ಬ್ಯಾಂಬರಿ, ಡೋಣಗಾಂವ(ಮಹಾ), ಬೇಡಕುಂದಾ, ಲಕ್ಷ್ಮಿನಗರ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಂದ ಠಾಣಾಕುಶನೂರಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ನಡಿಗೆಯಿಂದಲೇ ಓಡಾಡಬೇಕಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದು, ವಿದ್ಯಾರ್ಥಿನಿಯರು ಮಧ್ಯದಲ್ಲಿಯೇ ಶಿಕ್ಷಣದಿಂದ ದೂರ ಉಳಿಯುವಂತಾಗಿದೆ. ಠಾಣಾಕುಶನೂರದಲ್ಲಿ ಸರ್ಕಾರಿ ಪಿಯುಸಿ ಕಾಲೇಜು, ಫ್ರೌಢಶಾಲೆ, ಸರ್ಕಾರಿ ಕನ್ಯಾ ಫ್ರೌಢಶಾಲೆ, ಪ್ರಾಥಮಿಕ ಕನ್ಯಾ ಶಾಲೆಗಳಿವೆ. ಜವಾಹರಲಾಲ್ ನೆಹರೂ ತಾಂತ್ರಿಕ ಮಹಾವಿದ್ಯಾಲಯ, ಅನುದಾನಿತ ಶಾಲೆಗಳಿವೆ. ಸುತ್ತಲಿನ ಗ್ರಾಮಗಳ ಮಕ್ಕಳು ಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಾರೆ. ಆದರೆ ಬಸ್ ಸೌಲಭ್ಯವಿಲ್ಲದೇ ನಿತ್ಯ 7–8 ಕಿ.ಮೀ. ದೂರವನ್ನು ನಡೆದುಕೊಂಡೇ ಕ್ರಮಿಸಬೇಕಾಗಿದೆ ಎಂದು ಲಕ್ಷ್ಮಿ ನಗರದ ನಿವಾಸಿಗಳು ಅಳಲು ತೊಂಡಿಕೊಂಡರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ನ್ಯಾಯಾಲಯದ ಆದೇಶದ ಮೇರೆಗೆ ವಿವಿಧ ಜಿಎಸ್ ಸಿ ನಂಬರ್ ಗಳಲ್ಲಿ ಅಮಾನತ್ತುಪಡಿಸಿಕೊಂಡು ಮಾಲೀಕರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಡಿಸೆಂಬರ್ 23ರ ಬೆಳಿಗ್ಗೆ 10.30 ಗಂಟೆಗೆ ನಗರ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx