Author: admin

ತುಮಕೂರು: ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದ ಘಟನೆ ಇಂದು ನಡೆಯಿತು. ತುರುವೇಕೆರೆ ತಾಲೂಕು ಡಿ.ಕಲ್ಕೆರೆಯ ಪರಮೇಶ್ವರ್ ಅಗ್ನಿಶಾಮಕ ವಾಹನದ ಚಾಲಕರಾಗಿ ಉದ್ಯೋಗದಲ್ಲಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಇಂದು ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಮೃತ ಪರವೇಶ್ವರ್ ಅವರ ಪತ್ನಿ ರೋಹಿಣಿ ಅವರನ್ನು ಕಚೇರಿಗೆ ಕರೆದು ಮಾತನಾಡಿಸಿದರು. ಮೂರು ವರ್ಷದ ತಮ್ಮ ಮಗು ಹಾಗೂ ಅತ್ತೆಯೊಂದಿಗೆ ಬಂದಿದ್ದ ರೋಹಿಣಿಯವರನ್ನು ತಮ್ಮ ಕಚೇರಿಯಲ್ಲೇ ಕೂರಿಸಿಕೊಂಡು ಕೇವಲ ಅರ್ಧ ತಾಸಿನಲ್ಲಿ ಅನುಕಂಪದ ಉದ್ಯೋಗದ ನೇಮಕಾತಿ ಆದೇಶವನ್ನು ಸಂತ್ರಸ್ಥ ಮಹಿಳೆಗೆ ನೀಡಿದರು. ಕುಣಿಗಲ್ ತಾಲೂಕಿನಲ್ಲಿ ಡಿ ವರ್ಗದ ನೌಕರರಾಗಿ ನೇಮಕಾತಿಗೆ ಆದೇಶಿಸಿ ರೋಹಿಣಿಯವರಿಗೆ ಆದೇಶ ಪತ್ರ ನೀಡಿದರು. ನೇಮಕಾತಿ ಆದೇ ಸಿದ್ಧವಾಗುವವರೆಗೆ ಅರ್ಧ ತಾಸು ತಮ್ಮಕಚೇರಿಯಲ್ಲಿ ಪಕ್ಕದಲ್ಲೇ…

Read More

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಭಕ್ತಿ, ನಾಯಕತ್ವ, ಆದರ್ಶ ಸೇವೆ, ಸಮಾಜ ಸೇವೆ, ಹೃದಯ ಶ್ರೀಮಂತಿಕೆ ಶ್ರೀ ಕ್ಷೇತ್ರದ ಬೆಳವಣಿಗೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲು ಕಾರಣವಾಯಿತು. ಇದು ಕರ್ನಾಟಕ ರಾಜ್ಯಕ್ಕೆ ಸಂದ ಗೌರವವಾಗಿದೆ ಎಂದು ಕಂಚಿ ಕಾಮ ಕೋಟಿ ಪೀಠದ ಪೂಜಾ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೂಜ್ಯಶ್ರೀಗಳವರು ಪುರ ಪ್ರವೇಶದಲ್ಲಿ ಭವ್ಯ ಸ್ವಾಗತದ ನಂತರ ಶ್ರೀ ಕ್ಷೇತ್ರಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರದ ಅನ್ನಪೂರ್ಣ ಭೋಜನಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳು ಸಮಾಜದಲ್ಲಿ ದಾರಿದ್ರ್ಯ ನಿರ್ಮೂಲನೆಯಾಗಬೇಕು ಈ ನಿಟ್ಟಿನಲ್ಲಿ ಹೆಗಡೆಯವರ ಕೊಡುಗೆ ಅಪಾರ ಹೆಗಡೆ ಕುಟುಂಬ ಅವಿಭಕ್ತ ಜೀವನಶೈಲಿ ಹೊಂದಿದ್ದು, ಕರ್ನಾಟಕ ಸಂಗೀತ, ಯಕ್ಷಗಾನ, ವಿದ್ಯೆ, ವಿದ್ವಾಂಸರ, ರಕ್ಷಣೆ…

Read More

ಧಾರವಾಡ: ರೋಗಿಗಳ ಜೀವನದ ಗುಣಮಟ್ಟ ಆಧರಿಸಿ ಸಂಶೋಧನೆ ಮಾಡುವ ಅಗತ್ಯವಿದೆ ಎಂದು ಧಾರವಾಡದ ಎಸ್. ಡಿ. ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ಕುಮಾರ್ ಅಭಿಪ್ರಾಯ ಪಟ್ಟರು . ಅವರಿಂದು ಎಸ್.ಡಿ.ಎಂ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಹತ್ತನೇ ವಾರ್ಷಿಕ ಅಂತರಾಷ್ಟ್ರೀಯ ಎಸ್ .ಡಿ .ಎಮ್ ಮೀಟು –24 (ಸೊಸೈಟಿ ಆಫ್ ಮೈಟೋಕಾಂಡ್ರಿಯ ರಿಸರ್ಚ್ ಅಂಡ್ ಮೆಡಿಸಿನ್ ಭಾರತ ) ಮೈಟೋಕಾಂಡ್ರಿಯಾ ಸಂಶೋಧನಾ ಮತ್ತು ಚಿಕಿತ್ಸೆಯಲ್ಲಿ ಪ್ರಗತಿ ಎಂಬ ವಿಚಾರ ಸಂಕೀರ್ಣದಲ್ಲಿ ಮಾತನಾಡಿದರು. ಮೈಟೊಕೊಂಡ್ರಿಯ ಎಲ್ಲಾ ಜೀವಕೋಶಗಳ ಶಕ್ತಿಯಾಗಿದೆ. ಇದರ ಕಾಯಿಲೆಗಳು ಅಪರೂಪದ ಕಾಯಿಲೆಗಳಾಗಿದ್ದು , ಇದರ ಸಂಶೋಧನೆಗಳು ಪ್ರಗತಿಯಲ್ಲಿವೆ ಎಂದರು. ಸೊಸೈಟಿ ಆಫ್ ಮೈಟೋಕಾಂಡ್ರಿಯ ರಿಸರ್ಚ್ ಅಂಡ್ ಮೆಡಿಸಿನ್ ಭಾರತದ ಅಧ್ಯಕ್ಷರಾದ ಡಾ.ಕೆ.ತಂಗರಾಜು ಸೊಸೈಟಿ ಚಟುವಟಿಕೆ ಕುರಿತು ಮಾಹಿತಿ ನೀಡಿದರು. ಸಮ್ಮೇಳನದ ಅಂಗವಾಗಿ ಬಿತ್ತಿ ಪತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಮ್ಮೇಳನದಲ್ಲಿ ಅತ್ಯುತ್ತಮ ಬಿತ್ತಿ ಪತ್ರ ಪ್ರಶಸ್ತಿ ,ಯುವ ಪೀಳಿಗೆಗೆ ಪ್ರಶಸ್ತಿಗಳನ್ನು ನೀಡಲಾಯಿತು. ಈ ಸಮ್ಮೇಳನದಲ್ಲಿ ದೇಶ ವಿದೇಶಗಳಿಂದ ನೂರಕ್ಕೂ ಹೆಚ್ಚು ತಜ್ಞ ಪ್ರತಿನಿಧಿಗಳು,…

Read More

ತುಮಕೂರು: ಕನಕದಾಸರ ಜಯಂತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಶಿಕ್ಷಕಿಯನ್ನ ಅಡ್ಡಗಟ್ಟಿದ ದುಷ್ಕರ್ಮಿಗಳು ಲಕ್ಷಾಂತರ ಮೌಲ್ಯದ ಮಾಂಗಲ್ಯ ಸರವನ್ನು ಕಳವು ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮರಿಸಿದ್ದಯ್ಯನ ಪಾಳ್ಯದಲ್ಲಿ ನಡೆದಿದೆ. ಬುಲೆಟ್ ಬೈಕ್ ನಲ್ಲಿ ಬಂದ ಕಳ್ಳರು ಶಿಕ್ಷಕಿ ರೇಖಾ ಅವರನ್ನು ಅಡ್ಡಗಟ್ಟಿದ್ದು, 40 ಹಾಗೂ 20 ಗ್ರಾಂ ತೂಕದ ಎರಡು ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ. ಸರ ಕಸಿದು ಪರಾರಿಯಾಗುವ ವೇಳೆ ಬುಲೆಟ್ ವಿಡಿಯೋ ಮಾಡಿಕೊಳ್ಳಲು ಶಿಕ್ಷಕಿ ಮುಂದಾಗಿದ್ದು, ಈ ವೇಳೆ ಮೊಬೈಲ್ ಕೂಡ ಕಿತ್ತುಕೊಂಡ ಕಳ್ಳ ಸ್ಥಳದಿಂದ ಪರಾರಿಯಾಗಿದ್ದಾರೆ. ಕಳ್ಳರು ಮೊಬೈಲ್ ಕಿತ್ತುಕೊಳ್ಳುವ ವೇಳೆ ಕೆಳಗೆ ಬಿದ್ದ ಶಿಕ್ಷಕಿ ರೇಖಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್ : ಬಸ್ಸಿನಲ್ಲಿ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿಸಿ ಕಂಡಕ್ಟರ್ ಮಾನವೀಯತೆ ಮೆರೆದ ಘಟನೆ ಬೀದರ್ ನಲ್ಲಿ ನಡೆದಿದೆ. ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣಿಸಿದ್ದ ಮಹಮದ್ ಎಂಬವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮರೆತು ಹೋಗಿದ್ದರು. ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ವಾಪಸಾಗಿದ್ದಾರೆ. ಬಳಿಕ ನಿರ್ವಾಹಕ ಪ್ರಕಾಶ ಹತ್ತಿರ ಚಿನ್ನಾಭರಣ ಸುರಕ್ಷಿತವಾಗಿರುವ ವಿಷಯ ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ವಾಹಕ ಪ್ರಕಾಶ್ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಪ್ರಕಾಶ್ ಅವರ ಪ್ರಾಮಾಣಿಕತೆಗೆ ಮೆಚ್ಚಿ ಪ್ರಯಾಣಿಕ ಮಹಮದ್ ಅಜರ್ ಹಾಗೂ ಸಾರಿಗೆ ಅಧಿಕಾರಿಗಳು ಚಾಲಕ ಹಾಗೂ ನಿರ್ವಾಹಕನನ್ನು ಸನ್ಮಾನಿಸಿ ಗೌರವಿಸಿದ್ದಾರೆ . ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೀದರ್: ಬ್ರಿಮ್ಸ್ ಆಸ್ಪತ್ರೆಯಿಂದ ನೂತನವಾಗಿ ಯಾದಗಿರಿ ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಯಾಗಿರುವ, ದಕ್ಷ ಪ್ರಾಮಾಣಿಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಡಾ.ಮಹೇಶ್ ಬಿರಾದಾರ್ ಅವರಿಗೆ ತುಕಾರಾಮ ಹಸನ್ಮುಖಿ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಭಾಗವಹಿಸಿದ ಸಾಯಿ ಶಿಂಧೆ ಪ್ರಜಾ ಶಕ್ತಿ ಜಿಲ್ಲಾ ಸಂಚಾಲಕರು ಬೀದರ್ ಮತ್ತು ಬಸವರಾಜ್ ನಾವಿದೊಡ್ಡಿ ಮತ್ತು ಮಹೇಂದ್ರ ಕುಮಾರ್ ಹೊಸ ಮನಿ, ಶಿವಕುಮಾರ್ ಗುನ್ನಳ್ಳಿ, ಗಣಪತಿ ವಾಸುದೇವ್, ಮಲ್ಲಿಕಾರ್ಜುನ್ ಜೋನ್ಕೇರಿ ಹಾಗೂ ಇನ್ನಿತರರು ಭಾಗವಹಿಸಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಳ್ಳೂರು: ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಬೆಳ್ಳೂರು ಪಟ್ಟಣದ ಶ್ರೀ ವಿಮಲನಾಥ ಜಿನಮಂದಿರ ಹಾಗೂ ಶ್ರೀ ಪುರಾಣ ಸಾಗರ ಮುನಿ ಮಹಾರಾಜರ 27ನೇ ವರ್ಷ ಯೋಗ ಚಾತುರ್ಮಾಸ ಇಂದು ವೈಭವದಿಂದ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿ ಮಠದ ಸ್ವಸ್ತಿ ಶ್ರೀ ಲಕ್ಷ್ಮೀ ಸೇನಾ ಭಟ್ಟರಕ ಮಹಾಸ್ವಾಮಿಗಳು ಹಾಗೂ ಶ್ರೀ ಕ್ಷೇತ್ರ ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಮಹಾಸ್ವಾಮಿಗಳು ಆಶೀರ್ವಾದದೊಂದಿಗೆ ನಡೆದ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ನೋಂಪಿಗಳು, ಆರಾಧನೆಗಳು, ಪೂಜೆಗಳು, ಸ್ವಾಧ್ಯಾಯಗಳು, ಮುನಿ ಮಹಾರಾಜರ ಪಿಂಚಿ ಪರಿವರ್ತನೆ ಹಾಗೂ ಧರ್ಮಚಕ್ರ ಆರಾಧನೆಗಳು ನಡೆದವು. ಕಾರ್ಯಕ್ರಮದಲ್ಲಿ ಮೂಲ ಸ್ವಾಮಿಗೆ ಅಭಿಷೇಕ, ಧ್ವಜಾರೋಹಣ, ಮಂಗಳ ಕಳಸ, ಸಮವಸರಣ ಉದ್ಘಾಟನೆ, ಧರ್ಮಚಕ್ರ ಆರಾಧನೆ, ನಿತ್ಯ ನಿಧಿ ಅಭಿಷೇಕ, ಆರತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸ್ಥಾನಿಕ ಪುರೋಹಿತ ಅಜಿತ್ ಬಸ್ತಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪದ್ಮನಾಭ ,ಶಾಂತಲಾ ಅಜಿತ್ ಸೇರಿದಂತೆ ಶ್ರೀ ದಿಗಂಬರ ಜೈನ ಸಮಾಜದ ಪದಾಧಿಕಾರಿಗಳು, ಜಿನ ವಾಣಿ ಮಹಿಳಾ…

Read More

ಮೂಡುಬಿದರೆ: ತುಳುನಾಡಿನ ಸಾಂಸ್ಕೃತಿಕ ಪರಂಪರೆಗೆ ಜೈನ ಅರಸರ ಕೊಡುಗೆ ಅಪಾರವಾಗಿದೆ, ಅವರ ಸ್ವಾಭಿಮಾನದ ಚಿಂತನೆಗಳು ಇಂದು ಸಹ ತುಳುನಾಡಿಗೆ ಆದರ್ಶವಾಗಿವೆ ಎಂದು ಹಿರಿಯ ಚಿಂತಕ ಡಾ.ಪುಂಡಿ ಕಾಯಿ ಗಣಪಯ್ಯ ಭಟ್ ಅಭಿಪ್ರಾಯ ಪಟ್ಟರು. ಅವರಿಂದು ಮೂಡುಬಿದರೆ ಜೈನ ಮಿಲನ್ ಆಶ್ರಯದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಳುಪ ಅರಸರ ನಂತರ 15ಕ್ಕೂ ಹೆಚ್ಚು ಸ್ಥಳೀಯ ರಾಜ ಮನೆತನಗಳು ಬೀಡು ಬಲ್ಲಾಳರು ತುಳುನಾಡಿನ ಸ್ವಾಭಿಮಾನಕ್ಕೆ ಧಕ್ಕೆ ಯಾಗದ ರೀತಿಯಲ್ಲಿ ಆಡಳಿತ ನಡೆಸಿದರು. ಕೆಳದಿ ಅರಸರ ರೊಂದಿಗಿನ ಸಂಘರ್ಷದ ನಡುವೆಯೂ ಸಂಸ್ಕೃತಿ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಕೆಲ ರಾಜಿ ಒಪ್ಪಂದಗಳ ಮೂಲಕ ಯಾವುದೇ ಸಂಘರ್ಷ, ರಕ್ತಪಾತಕ್ಕೆ ಅವಕಾಶ ನೀಡದೆ ಶ್ರಮಿಸಿದರು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭಾತ್ ಬಲ್ನಾಡು ಮಾತನಾಡಿ, ಸುಳ್ಯ ಭಾಗದಲ್ಲಿ ಉಳಿದಿರುವ ಜೈನ ಬಸದಿಗಳನ್ನು ಸಂರಕ್ಷಿಸುವ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮೂಡುಬಿದರೆ ಜೈನ್ ಮಿಲನ್ ಅಧ್ಯಕ್ಷ ಅನಡ್ಕ ದಿನೇಶ್ ಕುಮಾರ್,…

Read More

ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ಕರ್ನಾಟಕ ಮೂಲದ ಯಾತ್ರಿಯರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದು, ಪರಿಣಾಂವಾಗಿ ಹಲವು ಮಂದಿ ಯಾತ್ರಿಕರು ಗಾಯಗೊಂಡಿದ್ದಾರೆ. ಕೇರಳದ ವಯನಾಡಿನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಅಪಘಾತಕ್ಕೀಡಾದ ಬಸ್ ನಲ್ಲಿ 50ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು. ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಗಿಲ್ ಪೇಟೆ ಸಿನಿಮಾ ಖ್ಯಾತಿಯ ನಿರ್ದೇಶಕ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ. ಭರತ್ ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ಆಕ್ರೋಶಗೊಂಡು ತಾಂಡವ್ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ. ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್ ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More