Subscribe to Updates
Get the latest creative news from FooBar about art, design and business.
- ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
- ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
- ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
- ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
- ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
- ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
- ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
Author: admin
ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರ/ ಆಶ್ರಮ ಶಾಲೆಗಳ ನಿರ್ವಹಣೆ ಕುರಿತು ಪರಿಶೀಲಿಸಲು ಹಮ್ಮಿಕೊಂಡಿದ್ದ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಲಾಖಾಯುಕ್ತರು ಜಿಲ್ಲಾ/ ತಾಲ್ಲೂಕು ಮಟ್ಟದ ಇಲಾಖಾಧಿಕಾರಿ/ ಸಿಬ್ಬಂದಿ ಪ್ರತಿ ಮಾಹೆಯ 3ನೇ ಶನಿವಾರದಂದು ನಿಗದಿತ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ನೀಡಿದ್ದ ನಿರ್ದೇಶನದಂತೆ “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಇಲಾಖೆಯಿಂದ ನಡೆಸಲಾಗುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಭೇಟಿ ಸಂದರ್ಭದಲ್ಲಿ ಸಮಗ್ರ ತಪಾಸಣೆ ನಡೆಸಿ 126 ಅಂಶಗಳನ್ನೊಳಗೊಂಡ ತಪಾಸಣಾ ನಮೂನೆಯನ್ನು ಭರ್ತಿ ಮಾಡಿ ಸಮಗ್ರ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ. “ಸಿಬ್ಬಂದಿಯ ನಡೆ ವಿದ್ಯಾರ್ಥಿನಿಲಯಗಳ ಕಡೆ” ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಹಿಂದುಳಿದ…
ತುಮಕೂರು: ಶಿರಾ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಚಿನ್ನೇನಹಳ್ಳಿ, ತಾಳಗುಂದ, ಸೀಬಿ, ತರೂರು, ಯಲದಬಾಗಿ, ಸೀಬಿ ಅಗ್ರಹಾರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ರೈತರು/ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಹೆಚ್. ಗೋವಿಂದರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯು ಪುಸ್ತಕ ಆಯ್ಕೆಗಾಗಿ 2024ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಮುದ್ರಣವಾಗಿ ಪ್ರಕಟಗೊಂಡ ಯಾವುದೇ ಭಾಷೆಯ ಪುಸ್ತಕಗಳನ್ನು ಆಹ್ವಾನಿಸಿದೆ. ಆಸಕ್ತ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಪುಸ್ತಕಗಳನ್ನು ಸಲ್ಲಿಸಬಹುದು. ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇವರಿಗೆ 2025ರ ಜನವರಿ 2ರೊಳಗಾಗಿ ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಪುಸ್ತಕವನ್ನು 2025ರ ಜನವರಿ 1ರೊಳಗಾಗಿ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ನೋಂದಣಿ ಮಾಡಿಸಬೇಕು. ಪುಸ್ತಕ ನೋಂದಣಿಗಾಗಿ ಅಂತರ್ಜಾಲ www.dpl.karnataka.gov.in ಅಥವಾ ದೂರವಾಣಿ ಸಂಖ್ಯೆ 080–22864990/ 22867358ನ್ನು ಸಂಪರ್ಕಿಸಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯು ವಿಕಲಚೇತನರಿಗಾಗಿ ನವೆಂಬರ್ 20ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದೆ. ದೈಹಿಕ ವಿಕಲಚೇತನರ ವಿಭಾಗದಲ್ಲಿ 6–18ವರ್ಷದವರಿಗಾಗಿ ಚೆಂಡು ಎಸೆತ, 100 ಮೀ. ನಡಿಗೆ, ಗಾಯನ ಸ್ಪರ್ಧೆ ಹಾಗೂ 18-45 ವರ್ಷದವರಿಗಾಗಿ ಗುಂಡು ಎಸೆತ, ಜಾವಲಿನ್ ಥ್ರೋ, ಗಾಯನ ಸ್ಪರ್ಧೆ; ದೃಷ್ಟಿದೋಷವುಳ್ಳವರ ವಿಭಾಗದಲ್ಲಿ 6–18ವರ್ಷದವರಿಗಾಗಿ ಚೆಂಡು ಎಸೆತ, ಮ್ಯೂಸಿಕಲ್ ಛೇರ್, ಗಾಯನ ಸ್ಪರ್ಧೆ ಹಾಗೂ 18–45 ವರ್ಷದವರಿಗಾಗಿ ಗುಂಡು ಎಸೆತ, ಮ್ಯೂಸಿಕಲ್ ಛೇರ್, ಗಾಯನ ಸ್ಪರ್ಧೆ; ಶ್ರವಣದೋಷವುಳ್ಳವರ ವಿಭಾಗದಲ್ಲಿ 6-18 ಹಾಗೂ 18–45 ವರ್ಷದವರಿಗಾಗಿ ಗುಂಡು ಎಸೆತ, 100 ಮೀ. ಓಟ, ಚಿತ್ರಕಲಾ ಸ್ಪರ್ಧೆ; ಬುದ್ದಿಮಾಂಧ್ಯರ ವಿಭಾಗದಲ್ಲಿ 6–18 ಹಾಗೂ 18–45 ವರ್ಷದವರಿಗಾಗಿ ಮ್ಯೂಸಿಕಲ್ ಛೇರ್, ಚೆಂಡು ಎಸೆತ, ವೇಷ ಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತ ವಿಕಲಚೇತನರು ಸ್ಪರ್ಧೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶಿಲ್ಪ ಎಂ ದೊಡ್ಡಮನಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಬಿ.ಕಾಂ, ಬಿ.ಎಸ್ಸಿ, ಬಿ.ಎಸ್ಸಿ ಅಗ್ರಿಕಲ್ಚರ್, ಎಂ.ಕಾಂ. ಎಂ.ಎಸ್ಸಿ, ಎಂ.ಎಸ್ಸಿ ಅಗ್ರಿಕಲ್ಚರ್, ಬಿ.ಇ. ಬಿ.ಸಿ.ಎ, ಎಂ.ಸಿ.ಎ ಮತ್ತು ಎಂ.ಬಿ.ಬಿ.ಎಸ್ ಕೋರ್ಸಿನಲ್ಲಿ ಶೇ.50ಕ್ಕಿಂತ ಹೆಚ್ಚಿನ ಅಂಕ ಪಡೆದು ವ್ಯಾಸಂಗ ಮಾಡುತ್ತಿರುವ ವಿಕಲಚೇತನ (ದೃಷ್ಟಿದೋಷವುಳ್ಳ, ಮಾನಸಿಕ ಅಸ್ವಸ್ಥತೆ, ಬುದ್ದಿಮಾಂದ್ಯತೆ, ಇನ್ಟಲೆಕ್ಚುಯಲ್ ಡಿಸೆಬಿಲಿಟಿ(ಐ.ಡಿ) ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಮೆರಿಟ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರಬೇಕು. ಆಸಕ್ತ ವಿದ್ಯಾರ್ಥಿಗಳು ಎಂ.ಜಿ.ರಸ್ತೆಯಲ್ಲಿರುವ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30ರೊಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷದಲ್ಲಿ ಅನುತೀರ್ಣಗೊಂಡಿರುವ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅರ್ಜಿಯೊಂದಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ(ಯು.ಡಿ.ಐ.ಡಿ), ವಿದ್ಯಾರ್ಹತೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ವ್ಯಾಸಂಗ ಪ್ರಮಾಣ ಪತ್ರ, ಸರ್ಕಾರ ಅಥವಾ ಇತರೆ…
ತುಮಕೂರು: ಉತ್ತಮ ಬದುಕು ಕಟ್ಟಿಕೊಳ್ಳಲು ಶ್ರೀ ನುಲಿಯ ಚಂದಯ್ಯನವರಂತಹ ಶಿವಶರಣರ ವಿಚಾರಧಾರೆಗಳನ್ನು ಅರಿತುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕುಳುವ ಮಹಾಸಂಘದ ವತಿಯಿಂದ ನಗರದ ಕನ್ನಡ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೋಷಿತ ಮತ್ತು ದಮನಿತ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡ ಶಿವ ಶರಣರ ಆದರ್ಶಗಳನ್ನು ಸಾಕಾರಗೊಳಿಸಲು ಎಲ್ಲರು ವಿದ್ಯಾವಂತರಾಗಬೇಕು. ಶೋಷಿತ ಸಮುದಾಯಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮುದಾಯವನ್ನು ಸಮಾಜದ ಮುನ್ನೆಲೆಗೆ ತರುವ ಕೆಲಸ ಮಾಡಬೇಕು ಎಂದು ತಿಳಿಸಿದ ಅವರು ನಿರಂತರ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಓದಿ ಉನ್ನತ ಅಧಿಕಾರಿಗಳಾಗುವ ಮೂಲಕ ಸಮುದಾಯದಕ್ಕೆ ದೊಡ್ಡ ಅಸ್ತಿಗಳಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಮಾತನಾಡಿ, ತಮ್ಮ ಕಾಯಕ ನಿಷ್ಠೆಗೆ…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಟಿವಿಎಸ್ ಎಲೆಕ್ಟ್ರಾನಿಕ್ಸ್ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ನವೆಂಬರ್ 20ರಂದು ನೇರ ಸಂದರ್ಶನ ನಡೆಯಲಿದ್ದು, ಐ.ಟಿ.ಐ, ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನವು ನವೆಂಬರ್ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಿ.ಡಿ.ಪಿ.ಐ ಬಸ್ ನಿಲ್ದಾಣದ ಬಳಿ ಸೋಮೇಶ್ವರಪುರಂ 14ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರದೊಂದಿಗೆ ಸಂದರ್ಶನಕ್ಕೆ ನೇರವಾಗಿ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ. 9071021143/ 9513136642ನ್ನು ಸಂಪರ್ಕಿಸಬೇಕೆAದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಜಿಲ್ಲೆಯಲ್ಲಿರುವ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತ ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ತಂತ್ರಾಂಶ (ಕೋರಲ್ ಡ್ರಾ, ನುಡಿ ತಂತ್ರಾಂಶ, ಕ್ಯಾನ್ವಾ, ಅಡೋಬ್ ಫೋಟೋಶಾಪ್, ಅಡೋಬ್ ಪ್ರೀಮಿಯರ್ ಪ್ರೊ, ಕಂಟೆಂಟ್ ಜನೆರೇಷನ್) ಪಠ್ಯೇತರ ಚಟುವಟಿಕೆ(ವ್ಯಕ್ತಿತ್ವ ಬೆಳವಣಿಗೆ, ಸಂವಹನ ಕೌಶಲ್ಯ, ಆರ್ಥಿಕ ಅಭಿವೃದ್ಧಿ) ಸೇರಿದಂತೆ ಮತ್ತಿತರ ತರಬೇತಿ ನೀಡಲಾಗುವುದು. ಅರ್ಜಿದಾರರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, 18 ರಿಂದ 35 ವರ್ಷ ವಯೋಮಾನದೊಳಗಿನವರಾಗಿರಬೇಕು ಹಾಗೂ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಗುರುತಿನ ಚೀಟಿ ಹೊಂದಿರಬೇಕು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ನವೆಂಬರ್ 25ರೊಳಗಾಗಿ ನಗರದ ಕುಣಿಗಲ್ ರಸ್ತೆ ಸದಾಶಿವನಗರ ಶ್ರೀ ನಾಗಾರ್ಜುನ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿರುವ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 20ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 20ರಂದು ಜಿಲ್ಲೆಯ ಶಿರಾ ತಾಲೂಕಿನ ಚಿನ್ನೇನಹಳ್ಳಿ; ತಿಪಟೂರು ತಾಲೂಕಿನ ಗುಂಗರಮಳೆ; ಮಧುಗಿರಿ ತಾಲೂಕಿನ ಹೊಸಕೆರೆ; ತುಮಕೂರು ತಾಲೂಕಿನ ಅರಕೆರೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಮಲ್ಲೀಗೆರೆ; ಕುಣಿಗಲ್ ತಾಲೂಕಿನ ನಡೆಮಾವಿನಪುರ ಹಾಗೂ ಜೋಡಿಹೊಸಹಳ್ಳಿ; ಕೊರಟಗೆರೆ ತಾಲೂಕಿನ ಕೋಳಾಲ; ಪಾವಗಡ ತಾಲೂಕಿನ ಪೋತಗಾನಹಳ್ಳಿ; ಗುಬ್ಬಿ ತಾಲೂಕಿನ ಇರಕಸಂದ್ರ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀನಿವಾಸ್ ಎಂಬವರಿಗೆ ಸೇರಿದ ಸೈಟ್ ವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಬುನಾದಿ ಹಾಕುವ ವಿಚಾರಕ್ಕೆ ಪಕ್ಕದ ಸೈಟ್ ಮಾಲಿಕ ನಾಗರಾಜ್ ಎಂಬುವವರು ಶ್ರೀನಿವಾಸ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಸೈಟ್ ನಮಗೆ ಸೇರಿದ್ದು ಎಂದು ಆರೋಪಿಸಿ ಹಲ್ಲೆ ಮಾಡಲಾಗಿದೆ. ಶ್ರೀನಿವಾಸ್ ರವರನ್ನು ಮಚ್ಚು ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಿದ್ದು ಕಣ್ಣು ಹಾಗೂ ಕೈಗೆ ಗಾಯಗಳಾಗಿ ರಕ್ತ ಸ್ತ್ರಾವವಾಗಿ ಜಿಲ್ಲಾಸ್ವತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ದೂರು ನೀಡಿದರು ವೈ.ಎನ್.ಹೊಸಕೋಟೆ ಪೋಲಿಸರು ದೂರು ಪಡೆದಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q