Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಹೆಚ್.ಡಿ.ಕೋಟೆ: ತುಂಬಸೋಗೆ ಗ್ರಾಮದ ಕಾಂಗ್ರೆಸ್ ಮುಖಂಡ ನಾಗರಾಜು ಅವರ ಜಮೀನಿನಲ್ಲಿ ಮೂರು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ನಾಗರಾಜು ಅವರ ಜಮೀನಿನಲ್ಲಿ ನಿನ್ನೆ ಸಂಜೆ 6 ಗಂಟೆಯ ಸಮಯದಲ್ಲಿ ಹಸುವಿನ ರಕ್ತ ಹೀರಿ ಚಿರತೆ ಪರಾರಿಯಾಗಿತ್ತು, ಇದರಿಂದ ಭಯಭೀತಗೊಂಡ ಅಕ್ಕ-ಪಕ್ಕದ ಜಮೀನಿನವರು ಅರಣ್ಯ ಇಲಾಖೆಯ ಹೆಚ್.ಡಿ.ಕೋಟೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಚಿರತೆ ಕಾರ್ಯಪಡೆಯ ಸಿಬ್ಬಂದಿ ನಿನ್ನೆ ರಾತ್ರಿ ಜಮೀನಿನಲ್ಲಿ ಬೋನು ಇರಿಸಿ, ಹಸುವನ್ನು ಬೋನಿನೊಳಗಿರಿಸಿದ್ದರು. ಹಸುವನ್ನು ಭೇಟೆಯಾಡಲು ಮತ್ತೆ ಬಂದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಸ್ಥಳಾಂತರಿಸುವ ಕಾರ್ಯದಲ್ಲಿ ಅರಣ್ಯ ಸಿಬ್ಬಂದಿಗಳಾದ ನಾರಾಯಣ, ಪರಮೇಶ್, ಸ್ನೇಹಾ, ಧನುಷ್, ದೀಪಕ್ ಸೇರಿದಂತೆ ತುಂಬಸೋಗೆ ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಡ್ರೋನ್ ಪ್ರತಾಪ ನಿಂದ ಸೋಡಿಯಂ ಮೆಟಲ್ ಸ್ಟೋಟಕ ಪ್ರಕರಣ, ಪ್ರತಾಪ್ ಅರೆಸ್ಟ್ ಬೆನ್ನಲ್ಲೇ ಸ್ಥಳ ಪೊಲೀಸ್ ರಿಂದ ಸ್ಥಳ ಪರಿಶೀಲನೆ ನಡೆಸಲಾಯಿತು. ಮಧುಗಿರಿ ತಾಲೂಕಿನ ಚಿನಕಲೋಟಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ರಾಯರ ಬೃಂದಾವನ ಫಾಮ್ಸ್ ಬಳಿ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು. ನಿನ್ನೇ ಸಂಜೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು. ನಿನ್ನೆ ಬಂಧಿಸಿ ಇಂದು ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದಿಂದ ಪ್ರೇರೇಪಿತರಾಗಿ ನಾಲ್ವರು ಶಾಲಾ ವಿದ್ಯಾರ್ಥಿಗಳು ಹಾಸ್ಟೆಲ್ ಗೇಟ್ ಹಾರಿ ಪರಾರಿಯಾಗಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚರಣ್ ತೇಜ, ರಘು, ಕಾರ್ತಿಕ್ ಮತ್ತು ಕಿರಣ್ ಕುಮಾರ್ ಎಂಬ ನಾಲ್ವರು ಹುಡುಗರು ಮಹಾರಾಣಿಪೇಟೆಯ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದರು. ಇವರೆಲ್ಲರೂ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಕಿ ಭಾಸ್ಕರ್ ಸಿನಿಮಾದಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯಾಗಿರುವ ಭಾಸ್ಕರ್ ಗೌರವಯುತ ಬದುಕಿಗಾಗಿ ಹಣ ಮಾಡುವಂತೆಯೇ ತಾವೂ ಹಣ ಮಾಡುತ್ತೇವೆ. ಇನ್ನು ಇಲ್ಲೇ ಕುಳಿತರೇ ಜೀವನದಲ್ಲಿ ಯಶಸ್ಸು ಸಾಧ್ಯವಿಲ್ಲ ಎಂದು ಮಾತನಾಡಿಕೊಂಡು ಹಾಸ್ಟೆಲ್ ನ ಗೇಟ್ ಹಾರಿ ಎಸ್ಕೇಪ್ ಆಗಿದ್ದಾರೆ. ಮಕ್ಕಳು ಗೇಟ್ ಹಾರಿ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ನಾಪತ್ತೆಯಾದ ನಂತರ ವಿದ್ಯಾರ್ಥಿಗಳ ಪೋಷಕರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಕೆಲವು ವರದಿಗಳ ಪ್ರಕಾರ ವಿದ್ಯಾರ್ಥಿಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದು, ಅವರ ಮೇಲೆ ಸೋಡಿಯಂ ಬಾಂಬ್ ಸ್ಫೋಟಿಸಿದ ಆರೋಪದಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ರೈತರ ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಆ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಏನಿದು ಪ್ರಕರಣ? ಡ್ರೋನ್ ಪ್ರತಾಪ್ ಅವರು ತಮ್ಮ ಸ್ನೇಹಿತರೊಂದಿಗೆ ಸೇರಿ ರೈತರ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ್ದಾರೆ. ಈ ಸಂಬಂಧ ಯೂಟ್ಯೂಬ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ಆಧಾರವಾಗಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಪ್ರತಾಪ್ ಮತ್ತು ಇತರ ಇಬ್ಬರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಪ್ರತಾಪ್ ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆ ಸೆಕ್ಷನ್ 176, ಸಿಆರ್‌ಪಿಸಿ 158 ಎ ಮತ್ತು ಬಿ ಹಾಗೂ ಸ್ಪೋಟಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ…
ದಿಂಡಿಗಲ್: ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಡೆದಿದೆ. ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. 1 ಮಗು ಮೂವರು ಪುರುಷರು ಮತ್ತು ಮೂವರು ಮಹಿಳೆಯರು ದುರಂತದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ಅಂತಸ್ತಿನ ಆಸ್ಪತ್ರೆಯ ಲಿಫ್ಟ್ ನಲ್ಲಿ ಕೆಲವು ವ್ಯಕ್ತಿಗಳು ಕೂಡ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಕನಿಷ್ಠ ಇಬ್ಬರು ವ್ಯಕ್ತಿಗಳು ಸುಟ್ಟು ಕರಕಲಾಗಿದ್ದು, ಇತರ ಮೂವರು ಉಸಿರುಗಟ್ಟಿ ಸತ್ತಿದ್ದಾರೆ. ಆಸ್ಪತ್ರೆಯಲ್ಲಿ ಹರಡಿದ ಬೆಂಕಿಯಲ್ಲಿ ಇನ್ನೂ ಇಬ್ಬರು ಸಾವನ್ನಪ್ಪಿ ಒಟ್ಟಾರೆ 7 ಮಂದಿ ಸಾವಿಗೀಡಾಗಿದ್ದಾರೆ. ಮೊದಲು ಆಸ್ಪತ್ರೆಯ ರಿಸಿಪ್ಷನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ಜ್ವಾಲೆಯು ಇತರ ಮಹಡಿಗಳಿಗೆ ವೇಗವಾಗಿ ಹರಡಿ ಇಡೀ ಕಟ್ಟಡವನ್ನು ಆವರಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಸ್ಟೋಟಕವನ್ನ ನೀರಿಗೆ ಎಸೆದು ವಿಡಿಯೋ ಮಾಡಿದ್ದ ಡ್ರೋನ್ ಪ್ರತಾಪ್ ನನ್ನ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಸ್ಪೋಟಕ ವಸ್ತುವನ್ನ ನೀರಿಗೆ ಎಸೆದಿದ್ದ ಪ್ರತಾಪ್, ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಪ್ರತಾಪ್ ನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸ್ತಾ ಇದ್ದಾರೆ. ಬಿಎನ್ಎಸ್ ಕಾಯಿದೆ ಸೆಕ್ಷನ್ 288 ಮತ್ತು ಸ್ಪೋಟಕ ವಸ್ತುಗಳ ಕಾಯಿದೆ ಸೆಕ್ಷನ್ 3 ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಡ್ರೋನ್ ಪ್ರತಾಪ್ ನನ್ನು ಪೊಲೀಸರು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಸಂತಪೂರ್: 2024–25ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಮಾರ್ಚ್/ಏಪ್ರಿಲ್ 2025ರಲ್ಲಿ ಜರುಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ –1 ಬರೆಯುವ ವಿದ್ಯಾರ್ಥಿಗಳಿಗೆ ಪರಿಣಿತ ತಜ್ಞರಿಂದ ಒಂದು ದಿನದ ಕಾರ್ಯಾಗಾರವನ್ನು ದೀಪಾಲಯ ಪ್ರೌಢಶಾಲೆ ಸಂತಪೂರ್ ನಲ್ಲಿ ಆಯೋಜಿಸಲಾಗಿತ್ತು. ಡಾ.ಶಾಂತಿ ದೇಸಾಯಿ ಇಂಗ್ಲೀಷ್ ವಿಷಯದ ಪರಿಣಿತ ತಜ್ಞರು SSLC ವಿದ್ಯಾರ್ಥಿಗಳಿಗೆ ಇಂಗ್ಲಿಷ್ ನ ಸಂಪೂರ್ಣ ಪಠ್ಯವನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ನೋಡೆಲ್ ಅಧಿಕಾರಿ ಬಲಭೀಮ ಕುಲಕರ್ಣಿ ಮಾತನಾಡಿ, ಈ ಒಂದು ಕಾರ್ಯಕ್ರಮ ಮಕ್ಕಳಿಗೆ ಪರೀಕ್ಷಾ ಕಾರ್ಯಕ್ಕಾಗಿ ಉತ್ತಮವಾಗಿರುತ್ತದೆ. ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸುಮಾರು 15 ರಿಂದ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು. ಸುಮಾರು 850 ವಿದ್ಯಾರ್ಥಿಗಳು ಈ ಒಂದು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ದೀಪಾಲಯ ಪ್ರೌಢಶಾಲೆಯ ಮುಖ್ಯ ಗುರುಗಳು ಸಿಸ್ಟರ್ ಪ್ರೀತಿ, ಸರ್ಕಾರಿ ಪ್ರೌಢಶಾಲೆ ಮುಖ ಗುರುಗಳಾದ ಅಜಯ್ ಕುಮಾರ್ ದುಬೆ, ಶಿಕ್ಷಣ ಸಂಯೋಜಕರಾದ ರಾಜಕುಮಾರ್, ಸಿಆರ್ಪಿಗಳಾದ ಜ್ಯೋತಿ ಜೀರಿಗೆ, ರವೀಂದ್ರ ಕುಮಾರ್ , ಗಫರ್ ಖಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.…
ತುಮಕೂರು: ನವಂಬರ್ ನಲ್ಲಿ ಸೃಷ್ಟಿಯಾಗಿದ್ದ ಪೆಂಗಲ್ ಚಂಡಮಾರುತದಿಂದ ತಮಿಳುನಾಡಿನ ಭಾಗಶಃ ಸಮುದ್ರ ತೀರದ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು, ಪ್ರತಿ ವರ್ಷದಂತೆ ಈ ವರ್ಷವೂ ಸಹ ತಮಿಳುನಾಡಿನ ಜನರ ನೆರವಿಗೆ ಪಾವಗಡದ ಸ್ವಾಮೀಜಿ ಜಪಾನಂದ ನಿಂತಿದ್ದು, ಹತ್ತು ಸಾವಿರ ಜನರಿಗೆ ಸುಮಾರು 2500 ಮೌಲ್ಯದ ಕಿಟ್ ವಿತರಣಾ ಕಾರ್ಯಕ್ಕೆ ಬರದಿಂದ ಸಿದ್ಧತೆಗಳನ್ನ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮಿ ಜಪಾನಂದ ಜಿ., ಕಳೆದ 35 ವರ್ಷಗಳಿಂದ ಸೇವೆ ನಿರಂತರವಾಗಿ ನಡೆಸಲಾಗುತ್ತಿದ್ದು, ಕಳೆದ ನವೆಂಬರ್ ನಲ್ಲಿ ಆಂಧ್ರಪ್ರದೇಶದ ಅನಂತಪುರಂನಲ್ಲಿ ಪ್ರವಾಹ ಪೀಡಿತರಿಗೆ ನೆರವು ನೀಡಲಾಗಿತ್ತು. ನಂತರ ಇದೀಗ ತಮಿಳುನಾಡಿನ ಜನರು ಕರೆ ಮಾಡಿ ನೆರವಿಗೆ ಧಾವಿಸುವಂತೆ ವಿನಂತಿಸಿಕೊಂಡಿದ್ದು ಈ ಹಿನ್ನಲೆ 10,000 ಜನರಿಗೆ ನೆರವು ನೀಡುತ್ತಿದ್ದು, ಅದರಂತೆ ಪಾವಗಡದ ಸ್ವಯಂಸೇವಕರಿಂದ ಕೀಟಗಳನ್ನು ತಯಾರಿಸಲಾಗುತ್ತಿದೆ ಎಂದು ಮಾಹಿತಿಯನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಆಶ್ರಮದ ಭಕ್ತರಾದ ಜೆ.ಎಸ್.ಅನಿಲ್ ಕುಮಾರ್, ಕಮಲ್ ಬಾಬು, ಮತ್ತಿತರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಮತ್ತು ಹಿತೈಷಿಗಳಿಂದ ಕಿಡಿಗೇಡಿಗಳು ದೇಣಿಗೆ ಸಂಗ್ರಹ ಮಾಡಲು ಬಂಜೆತನಕ್ಕೆ ಔಷಧಿ ವಿತರಣೆ ಮಾಡಲು ತಮ್ಮನ್ನು ನಿಯೋಜಿಸಿರುತ್ತಾರೆ ಎಂದು ಸುಳ್ಳು ಹೇಳಿಕೊಂಡು ದೇಣಿಗೆ ಸಂಗ್ರಹ ಮಾಡುತ್ತಿರುವ ಹಾಗೂ ಔಷಧಿ ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀಮಠದಿಂದ ಬಂಜೆತನಕ್ಕೆ ಔಷಧಿ ವಿತರಣೆ ಮಾಡುವ ಸಲುವಾಗಿ ಅಥವಾ ದೇಣಿಗೆ ಸಂಗ್ರಹ ಮಾಡಲು ಶ್ರೀಮಠದಿಂದ ಯಾವುದೇ ವ್ಯಕ್ತಿಯನ್ನು ನಿಯೋಜಿಸಿರುವುದಿಲ್ಲ ಮತ್ತು ನೇಮಕ ಮಾಡಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ವಂಚಕರ ಮಾತಿಗೆ ಮರುಳಾಗಿ ಸಾರ್ವಜನಿಕರು ಮೋಸ ಹೋಗಬಾರದೆಂದು ತಿಳಿಸಲಾಗಿದೆ. ಹಿತೈಷಿಗಳು ದೇಣಿಗೆಯನ್ನು ಸಲ್ಲಿಸುವವರು ಶ್ರೀಮಠಕ್ಕೆ ನೇರವಾಗಿ ದೇಣಿಗೆಯನ್ನು ಅಂಚೆ ಮುಖಾಂತರ ಖಾತೆಗೆ ನೇರವಾಗಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಡಿಸೆಂಬರ್ 14ರಂದು ಸಾಹೇ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ : 876 ವಿದ್ಯಾರ್ಥಿಗಳಿಗೆ ಪದವಿ: 10 ಮಂದಿಗೆ ಚಿನ್ನದ ಪದಕ
ತುಮಕೂರು: ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ಡಿಸೆಂಬರ್ 14ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಕರ್ನಾಟಕದ ಶ್ರೀಮತಿ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸೀತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ…