Subscribe to Updates
Get the latest creative news from FooBar about art, design and business.
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
- ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
Author: admin
ಸರಗೂರು: ಸರ್ಕಾರದಿಂದ ದ್ವಿಚಕ್ರ ವಾಹನ ಸೌಲಭ್ಯ ಪಡೆಯುವ ಪ್ರತಿಯೊಬ್ಬ ವಿಕಲಚೇತನರೂ ಕಡ್ಡಾಯವಾಗಿ ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್) ಹೊಂದಿರಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ತಾಲೂಕು ಪಂಚಾಯಿತಿ ವತಿಯಿಂದ ಶೇ.5ರಷ್ಟು ಅನುದಾನದಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ.ಆರ್.ಡಬ್ಲ್ಯೂ (VRW) ಹಾಗೂ ಎಂ.ಆರ್.ಡಬ್ಲ್ಯೂ (MRW) ಕಾರ್ಯಕರ್ತರಿಗೆ ಬೈಕ್ಗಳು ಹಾಗೂ ಕಾರ್ಯನಿರ್ವಹಣೆಗೆ ಅಗತ್ಯವಾದ ಲ್ಯಾಪ್ಟಾಪ್ಗಳನ್ನು ವಿತರಿಸಿ ಅವರು ಮಾತನಾಡಿದರು. “ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿ.ಆರ್.ಡಬ್ಲ್ಯೂ ಹಾಗೂ ಎಂ.ಆರ್.ಡಬ್ಲ್ಯೂ ಕಾರ್ಯಕರ್ತರ ಶ್ರಮ ಪ್ರಶಂಸನೀಯ. ಪ್ರಸ್ತುತ ವಿತರಿಸಲಾಗಿರುವ ಬೈಕ್ ಹಾಗೂ ಲ್ಯಾಪ್ಟಾಪ್ಗಳಿಂದಾಗಿ ಗ್ರಾಮಗಳಿಗೆ ಸರಳವಾಗಿ ಭೇಟಿ ನೀಡಿ, ಮಾಹಿತಿಯನ್ನು ತಕ್ಷಣವೇ ದಾಖಲಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಒದಗಿಸಲು ಅನುಕೂಲವಾಗಲಿದೆ,” ಎಂದು ಶಾಸಕರು ತಿಳಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಪ್ರೇಮ್ ಕುಮಾರ್ ಮಾತನಾಡಿ, “ತಾಲೂಕಿನಲ್ಲಿ ಒಟ್ಟು ಸುಮಾರು 1,500 ವಿಶೇಷಚೇತನರಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರಮಿಸುತ್ತಿರುವ ಕಾರ್ಯಕರ್ತರಿಗೆ…
ಸರಗೂರು: ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರಗಳನ್ನು ವಿತರಿಸುವುದು ಸರ್ಕಾರದ ಮುಖ್ಯ ಬದ್ಧತೆಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಂದಾಯ ಇಲಾಖೆಯ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಸಾಗುವಾಳಿ ಪತ್ರವು ಗ್ರಾಮೀಣ ಭಾಗದ ಬಡ ಹಾಗೂ ರೈತ ಕುಟುಂಬಗಳ ಬದುಕಿಗೆ ಶಕ್ತಿ ಮತ್ತು ಭದ್ರತೆಯನ್ನು ನೀಡುವ ಅತ್ಯಂತ ಮಹತ್ವದ ದಾಖಲೆಯಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಹಾಗೂ ಭೂಮಿಯ ಮೇಲಿನ ಹಕ್ಕನ್ನು ಕಾನೂನುಬದ್ಧವಾಗಿ ಸ್ಥಾಪಿಸಲು ಇದು ಸಹಕಾರಿಯಾಗಿದೆ,” ಎಂದು ಶಾಸಕರು ಹೇಳಿದರು. ಅರ್ಹರಿಗೆ ಪಾರದರ್ಶಕ ಹಾಗೂ ಶೀಘ್ರ ರೀತಿಯಲ್ಲಿ ಸಾಗುವಾಳಿ ಪತ್ರ ವಿತರಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಬಾಕಿ ಉಳಿದಿರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದರು. ಜಾತಿ, ಆದಾಯ ಪ್ರಮಾಣಪತ್ರ ಹಾಗೂ ಆರ್ಟಿಸಿ ಪಡೆಯಲು ಸಾರ್ವಜನಿಕರು ಮತ್ತು ರೈತರು ತಮ್ಮ ಕೂಲಿ ಕೆಲಸ ಬಿಟ್ಟು…
ಕುಣಿಗಲ್: ನೀಟ್ ಪರೀಕ್ಷೆ ಅಕ್ರಮ, ವಿದ್ಯಾರ್ಥಿಗಳ ಆತ್ಮಹತ್ಯೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಂಡ ರೀತಿಯನ್ನು ಖಂಡಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಕಾರ್ಯಕರ್ತರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಪಟ್ಟಣದಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ವೇದಿಕೆ ರಾಜ್ಯ ಅಧ್ಯಕ್ಷ ಹೆಚ್.ಜಿ.ರಮೇಶ್ ಮಾತನಾಡಿ, ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ದೇಹವನ್ನು ದಂಡಿಸಿಕೊಂಡು, ಪ್ರಾಣವನ್ನು ಲೆಕ್ಕಿಸದೇ ಸಾಮಾಜಿಕ ಹೋರಾಟಗಾರ ವಿಜ್ಞಾನಿ ಸೋನಂ ವಾಂಗ್‌ಚುಕ್ ಅವರು ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಮಾಜಿಕ ಕಾಳಜಿ ಇಟ್ಟುಕೊಂಡು ಯಾರೆಲ್ಲಾ ಹೋರಾಟ ನಡೆಸುತ್ತಿದ್ದಾರೋ ಯಾರೆಲ್ಲಾ ಸತ್ಯ ಹೇಳುತ್ತಾರೋ ಅವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಸೋನಂ ವಾಂಗ್ ಚುಕ್ ಅವರು ಲಡಾಖ್ ನ ಪ್ರಸಿದ್ಧ…
ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಆರೋಪಿಯಾಗಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಶಾಲೆಯ 7ನೇ ತರಗತಿಗೆ ದಾಖಲಿಸಿಕೊಳ್ಳಲು ಪ್ರಿನ್ಸಿಪಾಲ್ ನಾಮದೇವ ಅವರು 20 ಸಾವಿರ ರೂಪಾಯಿ ಲಂಚ ನೀಡುವಂತೆ ಪೋಷಕರಿಗೆ ಬೇಡಿಕೆಯಿಟ್ಟಿದ್ದರು. ಶಾಲೆಗೆ ‘ಡ್ರಮ್ ಸೆಟ್’ ಖರೀದಿಸಬೇಕು ಎಂಬ ನೆಪ ಒಡ್ಡಿ ಅವರು ಈ ಲಂಚದ ಹಣವನ್ನು ಕೇಳಿದ್ದರು ಎನ್ನಲಾಗಿದೆ. ಪ್ರಿನ್ಸಿಪಾಲ್ ಅವರ ಈ ವಿಚಿತ್ರ ಬೇಡಿಕೆಯಿಂದ ಬೇಸತ್ತ ವಿದ್ಯಾರ್ಥಿನಿಯ ಪೋಷಕರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಯೋಜನೆಯ ಪ್ರಕಾರ, ಇಂದು ಬೆಳಗ್ಗೆ ಪೋಷಕರಿಂದ 10 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಅವಧಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಹಾಗೂ ಇನ್ಸ್‌ಪೆಕ್ಟರ್ ರುದ್ರೇಶ್ ನೇತೃತ್ವದ ತಂಡವು ಆರೋಪಿ…
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೋಮವಾರ (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ಗಣ್ಯರು ಪಾರ್ಥಿವ ಶರೀರಕ್ಕೆ ಅಂತಿಮ ಪುಷ್ಪನಮನ ಸಲ್ಲಿಸಿದರು. ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ನಮನದೊಂದಿಗೆ ಸರ್ಕಾರಿ ಗೌರವ ವಂದನೆ ಸಲ್ಲಿಸಿದರು. ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿದ ನಂತರ, ಮುಖ್ಯಮಂತ್ರಿಗಳು ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರ ಕಾಲಿಗೆ ನಮಸ್ಕರಿಸಿ ವಂದಿಸಿದರು. ಸರ್ಕಾರಿ ಗೌರವಗಳ ಬಳಿಕ ದೇಹ ಶುದ್ಧಿ ಕಾರ್ಯ ನಡೆಯಿತು. ದೇವೇಗೌಡರು ಮತ್ತು ಅವರ ಕುಟುಂಬಸ್ಥರು ಪಾರ್ಥಿವ ಶರೀರಕ್ಕೆ ಅಂತಿಮ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಅರ್ಚಕರ ತಂಡದಿಂದ ಸ್ತೋತ್ರ ಪಠಣ ಕಾರ್ಯ ನಡೆದ ಬಳಿಕ ಮೂರು ಸುತ್ತು ಪಲ್ಲಕ್ಕಿ…
ಔರಾದ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಸಂತಪೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಸಿ ನೆಡುವುದರ ಮೂಲಕ ‘ಗೃಹಲಕ್ಷ್ಮಿ ದಿನ’ವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚನ್ನಪ್ಪ ಉಪ್ಪೆ ಅವರು, “ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಆಸರೆಯಾಗಿವೆ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾವಲಂಬನೆಗೆ ಹೊಸ ದಿಕ್ಸೂಚಿಯಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯಗಳನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು. ಇದೇ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಮಾತನಾಡಿ, “ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದಿವೆ. ಗೃಹಲಕ್ಷ್ಮೀ ಯೋಜನೆಯಿಂದಾಗಿ ಲಕ್ಷಾಂತರ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದು, ಕುಟುಂಬದ ನಿರ್ವಹಣೆಯನ್ನು ಆತ್ಮವಿಶ್ವಾಸದಿಂದ ನಿಭಾಯಿಸುತ್ತಿದ್ದಾರೆ” ಎಂದು…
ಔರಾದ್: ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ ಅವರ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಕಚೇರಿಯಲ್ಲಿ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜೆ.ಡಿ.ಎಸ್. ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅಗಲಿದ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಜೆ.ಡಿ.ಎಸ್. ತಾಲೂಕು ಅಧ್ಯಕ್ಷರಾದ ತಾಣಜಿ ತೋರಿನೇ, ಮುಖಂಡರಾದ ಮಾರುತಿ ಪೂಜಾರಿ, ಚೇತನ್ ಫುಲರಿ, ವರದಿಗಾರರಾದ ಕಿರಣ್ ಚಿಂತಾಕಿ, ಸೋಪಾನ ಜೈವಂತ್ ಸೇರಿದಂತೆ ಹಲವು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಹಾಗೆಯೇ ಅವರ ಅಗಲಿಕೆಯ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ಹೆಚ್.ಡಿ. ದೇವೇಗೌಡರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಈ ವೇಳೆ ಜಂಟಿಯಾಗಿ ಪ್ರಾರ್ಥಿಸಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವತಿ ಲಾವಣ್ಯಳನ್ನು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದರೂ ಆತ ಅವಳನ್ನು ಒತ್ತಾಯಿಸುತ್ತಿದ್ದ, ಪೀಡಿಸುತ್ತಿದ್ದ. ಅವಳು ಸಿಗದಿರುವುದನ್ನು ತಡೆಯಲಾಗದೆ ಆಕೆಯನ್ನು ಕೊಂದುಹಾಕಿದ. ಮಹಿಳೆಯರ ಮೇಲಿನ ಇಂತಹ ಕ್ರೂರ ಹಿಂಸಾಚಾರಗಳು ಸಮಾಜದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ, ಪುರುಷಪ್ರಧಾನ ಮನೋಭಾವ ಮತ್ತು ಮಾನವೀಯ ಮೌಲ್ಯಗಳ ಕುಸಿತವನ್ನು ಬಿಂಬಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಿನಿಮಾಗಳಲ್ಲಿ ಹಿಂಸೆ, ದ್ವೇಷ, ಕ್ರೌರ್ಯ, ಅನೈತಿಕ ಸಂಬಂಧಗಳನ್ನು ವೈಭವೀಕರಿಸುವುದು ನೋಡುತ್ತೇವೆ. ಇಂತಹ ದೃಶ್ಯಾವಳಿಗಳು ಯುವಕರ ಮನಸ್ಸನ್ನು ವಿಷಮಗೊಳಿಸುತ್ತಿವೆ. ಅಲ್ಲದೆ ಎಷ್ಟೋ ಸಿನಿಮಾಗಳಲ್ಲಿ ಪ್ರೀತಿಯ ನಿರಾಕರಣೆಯಾದಾಗ ಅದು ಹಿಂಸೆ, ಕೊಲೆಯಲ್ಲಿ ಕೊನೆಗೊಳ್ಳುವ ಉದಾಹರಣೆಗಳು ಸಾಕಷ್ಟಿವೆ. ಮಹಿಳೆಯರ ಸುರಕ್ಷತೆಗಾಗಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಮಾಜದಲ್ಲಿ ಮಹಿಳೆಯರ ವ್ಯಕ್ತಿತ್ವವನ್ನು ಗೌರವಿಸುವ, ಅವರನ್ನು ಸಮಾನವಾಗಿ ನೋಡುವ ಮನೋಭಾವ ಬೆಳೆಸಬೇಕು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜಾಗೃತಿ…
ಚಿಕ್ಕನಾಯಕನಹಳ್ಳಿ: ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ನಾಡಪ್ರಭು ಕೆಂಪೇಗೌಡ ಪತ್ತಿನ ಸಹಕಾರ ಸಂಘದ ವತಿಯಿಂದ 517ನೇ ಕೆಂಪೇಗೌಡ ಜಯಂತಿ ಹಾಗೂ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರವನ್ನು ಕಾರ್ಯಕ್ರಮವನ್ನು ಜು.25ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀ ಹರ್ಷ ತಿಳಿಸಿದರು. ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ದಿವ್ಯಾಶೀರ್ವಾದ ದೊಂದಿಗೆ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಮಹಾಸ್ವಾಮೀಜಿಗಳು ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಘನ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉಪಸ್ಥಿತರಿರುವರು. ಶಾಸಕ ಸಿ.ಬಿ.ಸುರೇಶ್ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶ್ರೀ ಹರ್ಷ ಟಿ.ಎಂ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ…
ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸಂದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮುಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ…