Author: admin

ತಿಪಟೂರು:   ಹಿಂದಿನ ಯು.ಪಿ.ಎ. ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೆ ರೈಲ್ವೆಗೆ ಕೇವಲ 830 ಕೋಟಿ ರೂ. ನೀಡಲಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ರೂ. 7,750 ಕೋಟಿ ಅನುದಾನ ನೀಡಿ, ರಾಜ್ಯಕ್ಕೆ ಪ್ರೋತ್ಸಾಹ ನೀಡಲಾಗಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ಖಾತೆಯ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ರೈಲು ನಿಲ್ದಾಣದ ರೈಲು ನಿಲುಗಡೆ ಸಮಾರಂಭದಲ್ಲಿ  ಮಾತನಾಡಿದ ಅವರು, ವಿಮಾನ ನಿಲ್ದಾಣ ರೀತಿಯಲ್ಲಿ ಭಾರತೀಯ ರೈಲ್ವೆ ಹಾಗೂ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಹೆದ್ದಾರಿ ಕಾಮಗಾರಿಗಳಿಂದ ವಿಳಂಬವಾಗಿತ್ತು.  ಶೀಘ್ರದಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಲು ತಿಳಿಸಲಾಗಿದೆ,  ತಿಪಟೂರಿನಲ್ಲಿ ಬೆಂಗಳೂರು ಶಿವಮೊಗ್ಗ ಮತ್ತು ಬೆಂಗಳೂರು ಹುಬ್ಬಳ್ಳಿ ಜನ ಶತಾಬ್ದಿ ಎಕ್ಸ್ಪ್ರೆಸ್ ರೈಲು ನಿಲುಗಡೆ ಮಾಡಲಾಗಿದ್ದು, ಇದನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಸೋಮಣ್ಣ ತಿಳಿಸಿದರು. ಅರಳಗುಪ್ಪೆ ಚಿಕ್ಕಮಂಗಳೂರು ಎಕ್ಸ್ಪ್ರೆಸ್ ರೈಲನ್ನು ಬರುವ ದಿನಗಳಲ್ಲಿ ನಿಲ್ಲಿಸಲಾಗುವುದು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ತುಮಕೂರು ಶಾಸಕ ಜ್ಯೋತಿ ಗಣೇಶ್, ಮಾಜಿ ಶಾಸಕ ಮಸಾಲೆ…

Read More

ಸರಗೂರು: ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ  ಕಡೆ ಕಾರ್ತಿಕ ಮಾಸದಂದು ನಡೆಯಲಿರುವ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ನಿಯಮ ಅನುಸಾರವಾಗಿ ಎಂದಿನoತೆ  ಆಚರಿಸಲು ನಿರ್ಧರಿಸಲಾಯಿತು. ತಾಲೂಕಿನ ಸಮೀಪದ ಹೆಡಿಯಾಲ ವಲಯ ಅರಣ್ಯ ಕಚೇರಿ ಮುಂಭಾಗದಲ್ಲಿ ಶನಿವಾರ ದಂದು ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಶಾಸಕ ಅನಿಲ್ ಚಿಕ್ಕಮಾದು ರವರು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ನ.23ರಿಂದ 26 ವರೆಗೆ ನಾಲ್ಕು ದಿನಗಳು ಗ್ರಾಮೀಣ ಹಾಗೂ ಧಾರ್ಮಿಕ ಸಂಪ್ರದಾಯದoತೆ  ಜಾತ್ರೆ ನಡೆಯಲಿದೆ.  ಇದಕ್ಕೆ ಸಾರ್ವಜನಿಕರು, ಇಲಾಖಾಧಿಕಾರಿಗಳು ಸಹಕಾರ ನೀಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಖಾಸಗಿ ಮತ್ತು ಜಾನುವಾರು ಗಳಿಗೆ ಭಕ್ತಾಧಿಗಳಿಗೆ ಪ್ರಸಾದ . ನಾಲ್ಕೈದು ಗ್ರಾಮಗಳಿಂದ ಆಲಹರವಿಗಳು.ಬವಸಗಳು ಹತ್ತರಿಂದ ಇಪ್ಪತ್ತು ಜನರು ಬರುತ್ತವೆ.ಅವರಿಗೆ ಕಂದಾಯ . ಅರಣ್ಯ ಇಲಾಖೆ ಅಧಿಕಾರಿಗಳು ಪಾಸ್ ನೀಡಿ ಒಳಗಡೆಗೆ ಬಿಡಬೇಕು.ಅದರ ಜೊತೆಯಲ್ಲಿ ಮಠದ ಸ್ವಾಮೀಜಿಗಳು ಕಾರ್ಯಕ್ರಮಕ್ಕೆ ಅಡಚಣೆ ಮಾಡಬಾರದು ಅಧಿಕಾರಿಗಳಿಗೆ ತಿಳಿಸಿದರು. ದೇವಸ್ಥಾನದ ಸುತ್ತ ದೀಪಾಲಂಕಾರ ಹಾಗೂ ಬರುವ…

Read More

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ದುನಿಯಾ ವಿಜಯ್  ಮಾಡಿದ ಮಾನವೀಯ ಕಾರ್ಯ ಇದೀಗ ಅವರಿಗೆ ಸಂಕಷ್ಟವನ್ನುಂಟು ಮಾಡಿದೆ. ಜೈಲಿನಲ್ಲಿದ್ದ 10 ಮಂದಿ ಕೈದಿಗಳ ಮೇಲೆ ಕರುಣೆ ತೋರಿ ವಿಜಯ್ ಬಿಡುಗಡೆ ಮಾಡಿಸಿದ್ದರು. ಈ ಪೈಕಿ ಸುರೇಶ್ ಎಂಬಾತ ನವೆಂಬರ್ 11ರಂದು ಬಾಗಲೂರಿನಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದಾನೆ. ಜೋಡಿ ಹತ್ಯೆ ಮಾಡಿದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ನಟ, ನಿರ್ದೇಶಕ ದುನಿಯಾ ವಿಜಯ್ ಅವರೇ ಕೆಲವು ತಿಂಗಳ ಹಿಂದೆ ಆರೋಪಿಗೆ ಸುರೇಶ್‌ ಜಾಮೀನಿಗೆ ಶೂರಿಟಿ ಕೊಟ್ಟಿದ್ದರು ಎಂಬುದು ಗೊತ್ತಾಗಿದೆ. ಪ್ರಕರಣ ತನಿಖೆ ಮುಂದುವರಿದ ಭಾಗವಾಗ ಜೈಲಿನಿಂದ ಬಿಡುಗಡೆಯಾಗಲು ಸಹಕರಿಸಿದ್ದ ಕಾರಣದಿಂದ ದುನಿಯಾ ವಿಜಯ್ ಅವರನ್ನು ವಿಚಾರಣೆಗೆ ಕರೆಯಲು ಮುಂದಾಗಿದ್ದಾರೆ. ಯಾವ ಕ್ಷಣದಲ್ಲಾದರೂ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ — 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ಕ್ಯಾಂಪಸ್ ಮಾಡಲು ವಿವಿಯ ಜೀವ ವೈವಿಧ್ಯಕೋಶದೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು. ವಿವಿ ವಿಜ್ಞಾನಕಾಲೇಜಿನಜೀವಾವರಣಶಾಸ್ತ್ರ ಮತ್ತು ಪರಿಸರ ವಿಜ್ಞಾನಅಧ್ಯಯನ ವಿಭಾಗವು ಶುಕ್ರವಾರ ಆಯೋಜಿಸಿದ್ದ ‘ತುಮಕೂರು ವಿವಿ ಆವರಣ ಹಾಗೂ ಬಿದರಕಟ್ಟೆಕ್ಯಾಂಪಸ್‌ನಲ್ಲಿ ಮರಗಳ ಜಿಯೋಟ್ಯಾಗಿಂಗ್ ಮತ್ತುಜೀವವೈವಿಧ್ಯದಾಖಲಾತಿ’ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕೇವಲ ಪ್ರಚಾರಕ್ಕಾಗಿ ಸಸಿಗಳನ್ನು ನೆಡಬಾರದು.ಸಸಿಯು ಹೆಮ್ಮರವಾಗುವ ತನಕವೂ ಅದರ ಪಾಲನೆ, ಪೋಷಣೆ ನಮ್ಮದಾಗಬೇಕು. ಮಾಲಿನ್ಯರಹಿತ ಪರಿಸರ ನಿರ್ಮಿಸಲು ಸಾಧ್ಯವಾಗದಿದ್ದರೂ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶುದ್ಧ ಗಾಳಿ, ನೀರು ನಮ್ಮಆರೋಗ್ಯಕಾಪಾಡುವುದರಲ್ಲಿ ಮುಖ್ಯಪಾತ್ರವಹಿಸುತ್ತವೆ ಎಂದರು. ಕುಲಸಚಿವೆನಾಹಿದಾ ಜಮ್‌ ಜಮ್ ಮಾತನಾಡಿ, ಜಾಗತಿಕತಾಪಮಾನ ತಡೆಯಲು ನಮ್ಮಗುರಿ ಹಾಗೂ ದೃಷ್ಟಿಜೊತೆಯಲ್ಲಿ ಸಾಗಬೇಕು. ಮಾಲಿನ್ಯರಹಿತ ಬದುಕು ನಮ್ಮದಾಗಲು ಪರಿಸರ ಕಾಳಜಿಯ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು. ವಿವಿ ವಿಜ್ಞಾನ ಕಾಲೇಜಿನಪ್ರಾಂಶುಪಾಲ ಪ್ರೊ.ಶೇಟ್ ಎಂ.ಪ್ರಕಾಶ್, ಜೀವಾವರಣಶಾಸ್ತ್ರ ಮತ್ತು ಪರಿಸರ ವಿಜ್ಞಾನಅಧ್ಯಯನ ವಿಭಾಗದ ಸಂಯೋಜಕ ಡಾ.ದ್ವಾರಕಾನಾಥ್  ವಿ. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಪೆರ್ನಾಜೆ : ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ ಮತ್ತು ಪುರಸ್ಕಾರ ಸಮಾರಂಭವು ನ.1ರಂದು ವಿಟ್ಲ ಗಾರ್ಡನ್ ಸಭಾಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ನಡೆಯಲಿದೆ. ವಿದುಷಿ ಅರ್ಚನಾ ರಾಜೇಶ್ ಅವರಿಂದ ಅಪರಾಹ್ನ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದ್ದು ಕಲಾ ಪ್ರೇಮಿಗಳಿಗೆ ಸಂಗೀತದ ರಸದೌತಣ ನೀಡಲಿದೆ. ಒಂಬತ್ತನೇ ವರ್ಷದ ಸ್ವರ ಸಿಂಚನ ಪುರಸ್ಕಾರ –2024 ಪ್ರಶಸ್ತಿಗೆ ವಿದ್ವಾನ್ ಆಲುವ  ಆರ್.ರಾಜೇಶ್ ರನ್ನು ಆಯ್ಕೆ ಮಾಡಲಾಗಿದ್ದು, ಇವರು ಘಟಂನಲ್ಲಿ ತನ್ನ ಕೈಚಳಕವನ್ನು ಪ್ರದರ್ಶಿಸಿ ಉತ್ತಮ ಕಲಾವಿದರಾಗಿದ್ದು ಸ್ವರ ಸಿಂಚನ ಕಲಾತಂಡದ ಸದಸ್ಯರು ಆಗಿದ್ದಾರೆ. ಸಂಗೀತದ ಪಕ್ಕ ವಾದ್ಯ ಗಳಲ್ಲಿ ಒಂದಾದ ಘಟಂ ವಾದನದಲ್ಲಿ ಮಾಡಿರುವ ಸಾಧನೆಗೆ ಈ ಪ್ರಶಸ್ತಿ ಲಭಿಸಲಿದೆ .ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಪಿಟೀಲು ವಿದ್ವಾನ್ ಕೋಡಂಪಳ್ಳಿ ಗೋಪಕುಮಾರ್ ನಡೆಸಿಕೊಡಲಿದ್ದಾರೆ. ಮೃದಂಗದಲ್ಲಿ ವಿದ್ವಾನ್ ಡಾ.ಎ.ಆರ್ . ನಾರಾಯಣ್ ಪ್ರಕಾಶ್ ಕ್ಯಾಲಿಕಟ್ ,ಕೊಳಲು ವಾದನದಲ್ಲಿ ವಿದ್ವಾನ್ ಸುರೇಂದ್ರ ಆಚಾರ್ಯ ಕಾಸರಗೋಡು,ಕೀಬೋರ್ಡ್…

Read More

ರಾಯಚೂರು:  ಜಿಲ್ಲೆಯಲ್ಲಿ  ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ,  ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವೆಂಕಟೇಶ್,  ಸದಸ್ಯರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸದಸ್ಯ ಕಾರ್ಯದರ್ಶಿಗಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಪ ನಿರ್ದೇಶಕರು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದತ್ತು ಮಾಸಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮತ್ತು ಪ್ರತಿಜ್ಞಾ ವಿಧಿಯನ್ನು ಬೋದಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಜಿಲ್ಲೆಯ ಸಿರಿಧಾನ್ಯ ಬೆಳೆಯನ್ನು 10,000 ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ–2025ರ ಪ್ರಯುಕ್ತ ಕೃಷಿ ಇಲಾಖೆಯಿಂದ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ ಭೂಮಿಯಲ್ಲಿ 6,000 ಹೆ. ಪ್ರದೇಶದಲ್ಲಿ ಮಾತ್ರ ಸಿರಿಧಾನ್ಯವನ್ನು ಬೆಳೆಯಲಾಗುತ್ತಿದ್ದು, ಅದನ್ನು 10,000 ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸಲು ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಸಿರಿಧಾನ್ಯಗಳ ಬಳಕೆ, ಖರೀದಿಸುವವರ ಸಂಖ್ಯೆ ಕಡಿಮೆ ಇರುವುದರಿಂದ ಸಿರಿಧಾನ್ಯಕ್ಕೆ ಹೆಚ್ಚಿನ ಬೇಡಿಕೆಯಿಲ್ಲದೆ ರೈತರು ಸಿರಿಧಾನ್ಯ ಬೆಳೆಯಲು ಮುಂದಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡುವ ಸಲುವಾಗಿ 10,000 ರೂ.ಗಳ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದರಲ್ಲದೆ ಸಿರಿಧಾನ್ಯ ಬಳಕೆಯನ್ನು ಹೆಚ್ಚಿಸುವ ಸಲುವಾಗಿ ಈ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ…

Read More

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು, ಗುಬ್ಬಿ, ಶಿರಾ, ಪಾವಗಡ ಮತ್ತು ಮಧುಗಿರಿ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ 29 ವಿವಿಧ ಗ್ರಾಮ ಪಂಚಾಯತಿಯ 30 ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಅಂದರೆ ನವೆಂಬರ್ 21ರ ಸಂಜೆ 5 ರಿಂದ ನವೆಂಬರ್ 23ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಒಂದು ವೇಳೆ ಸದರಿ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಅವರು ಆದೇಶಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More