Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ತುಮಕೂರು: ಕಾನೂನು ಮತ್ತು ಕಾಯ್ದೆಗಳ ಮಾಹಿತಿ ತಿಳಿದಿದ್ದರೆ, ಅದನ್ನು ಆಯುಧವನ್ನಾಗಿ ಬಳಸಿಕೊಂಡು ಸಮಾಜದಲ್ಲಿ ಘಟಿಸುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಉಪಾಧ್ಯಕ್ಷೆ ಬಾ.ಹ.ರಮಾಕುಮಾರಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ಯಲ್ಲಿ ಮಾತನಾಡಿದರು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಇರುವ ಆಯುಧವೆಂದರೆ ಮಾಹಿತಿ ಮತ್ತುಜ್ಞಾನ ಸಂಪಾದನೆ. ಈಗಾಗಲೇ ನಡೆದಿರುವ ಅನಾಹುತಗಳಿಗೆ ಪರಿಹಾರವನ್ನು ಕಾನೂನಿನ ಅರಿವಿನ ಮೂಲಕ ಪಡೆಯಬಹುದು ಎಂದರು. ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸರ್ಕಾರ ಗಮನಹರಿಸಬೇಕು. ಕಾರ್ಮಿಕರ ಕಾನೂನುಗಳ ಬಗ್ಗೆ ಹೆಚ್ಚುಒತ್ತು ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಮಾನವಹಕ್ಕುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು. ನಕಾರಾತ್ಮಕವಾಗಿ ಬಳಸಿಕೊಂಡು ಸಮಾಜವನ್ನು ಹಾಳು ಮಾಡಬಾರದು ಎಂದು ತಿಳಿಸಿದರು. ಸೋಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ರಮೇಶ್…
ತುಮಕೂರು:ಮಾನಸಿಕ ಏಕತೆಯತತ್ವವದಿಂದ ರಾಮಾಯಣ ಮಹಾಕಾವ್ಯ ವಿಶ್ವಕಥನವಾಯಿತು. ಇವತ್ತಿಗೆ ಬೇಕಾದ ರಾಜಕೀಯ ನೈತಿಕತೆಯ ಪಾಠವನ್ನು, ಜೀವನ ಮೌಲ್ಯವನ್ನು ರಾಮಾಯಣ ಸಾರುವುದರಿಂದ ‘ರಾಮಾಯಣ ಮರುಹುಟ್ಟುಗಳ ಮಹಾಕಾವ್ಯ’ವಾಗಿ ನಮಗೆಲ್ಲಕಾಣುತ್ತದೆ ಎಂದು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗ ಹಾಗೂ ಡಿವಿಜಿ ಕನ್ನಡಅಧ್ಯಯನಕೇಂದ್ರವು ಜಂಟಿಯಾಗಿ ಹಮ್ಮಿಕೊಂಡಿರುವ‘ರಾಮಾಯಣಂಗಳ್: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಬಗೆ’ ಎಂಬ ಪರಿಕಲ್ಪನೆಯ ಎರಡು ದಿನಗಳ ‘ಸಹಿತ-2’ ಸಾಹಿತ್ಯೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಅಧಿಕಾರಕ್ಕೇರಲುರಾಮನ ಹೆಸರನ್ನು ಬಳಸುತ್ತಿರುವ ಸಂದರ್ಭವಿದು. ರಾಮಾಯಣ ಗರ್ಭಗುಡಿಯ ಕಾವ್ಯವೆಂಬ ತಪ್ಪುಗ್ರಹಿಕೆ ಮಾಯವಾಗಬೇಕು. ಮಹಾಕಾವ್ಯಗಳು ರಾಜಕೀಯ ಅಸ್ತ್ರವಾದಾಗ ಅದರ ಅಸ್ಮಿತೆ ನಾಶವಾಗುತ್ತದೆ. ರಾಮಾಯಣ ಅಧ್ಯಯನಶೀಲ ಕಾವ್ಯವಾಗಿ ವಾಸ್ತವತೆ ಮತ್ತುಕಲ್ಪಿತ ಕಥೆಗಳ ಸಮನ್ವಯವಾಗಿದೆ. ಆತ್ಮಸ್ಥೈರ್ಯದ ಮಹಾಕಾವ್ಯ ರಾಮಾಯಣದಲ್ಲಿ ಹತಾಶೆಯಿಲ್ಲ. ಸಾಂಸ್ಕೃತಿಕ ಘಟಕಗಳನ್ನು, ಸಂಸ್ಕೃತಿಯ ಚಲನಶೀಲತೆ, ಅಧಿಕಾರ—ಭೋಗದ ನಿರಸನದ ಸ್ಥಿತ್ಯಂತರಗಳನ್ನು ಕಾಣಬಹುದು ಎಂದು ತಿಳಿಸಿದರು. ಸಮಕಾಲೀನ ಸಂದರ್ಭದಲ್ಲಿರುವ ಪ್ರಸ್ತುತತೆಯಿಂದ ರಾಮಾಯಣದ ಕಥನವನ್ನು ಇಂದಿಗೂ ಚರ್ಚಿಸುತ್ತೇವೆ. ರಾಮಾಯಣ ಮನುಷ್ಯನಲ್ಲಿಅಂತರ್ಗತವಾಗಿ ‘ಮನೆ ಮನೆರಾಮಾಯಣ’ವಾಗಿದೆ. ಜನಸಮುದಾಯದಿಂದ ಜನಪದ ರಾಮಾಯಣ ಉಗಮವಾಯಿತು.…
ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಮಂಗಳವಾರ ತೀವ್ರ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾನೂನು ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿಯು ಉಚಿತವಾಗಿ 5 ವಾರದ 20 ಕೋಳಿ ಮರಿಗಳನ್ನು ವಿತರಿಸಲು ಜಿಲ್ಲೆಯ ಗ್ರಾಮೀಣ ಮಹಿಳಾ ಫಲಾನುಭವಿಗಳಿಂದು ಅರ್ಜಿ ಆಹ್ವಾನಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರು(ಆಡಳಿತ) ಡಾ: ಗಿರೀಶ್‌ಬಾಬು ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕೋಳಿ ಮರಿ ಸೌಲಭ್ಯಕ್ಕಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ / ಸಾಮಾನ್ಯ ವರ್ಗದ ಗ್ರಾಮೀಣ ಮಹಿಳೆಯರು / ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು/ ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳ ಕಚೇರಿಯಿಂದ ಪಡೆಯಬಹುದಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿ.ಪಿ.ಎಲ್ ಕಾರ್ಡ್, ಭಾವಚಿತ್ರ ಸಹಿತದ ಗುರುತಿನ ಚೀಟಿ / ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳ ಕಚೇರಿಗೆ ಡಿಸೆಂಬರ್ 24ರೊಳಗಾಗಿ ಸಲ್ಲಿಸಬೇಕು. ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಸಾಮಾನ್ಯ ಫಲಾನುಭವಿಗಳನ್ನು ಹೊರತು ಪಡಿಸಿ, ಮೀಸಲಾತಿ…
ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದಾರೆ. ಈ ಹಿನ್ನೆಲೆ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ ಎಂದು ಸಚಿವಾಲಯ ಒತ್ತಿ ಹೇಳಿದೆ. ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್ಗೆ ದಾಟಿದ್ದು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಹಿಂತಿರುಗುತ್ತಾರೆ ಎಂದು ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ದೆಹಲಿ: ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ವಿಮೆ ಹಾಗೂ ಆಟೋ ಚಾಲಕರ ಹೆಣ್ಣುಮಕ್ಕಳ ವಿವಾಹಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ನಗರದ ಆಟೋ ಚಾಲಕರಿಗೆ 10 ಲಕ್ಷ ರೂಪಾಯಿ ವಿಮೆ ಹಾಗೂ ಆಟೋ ಚಾಲಕರ ಹೆಣ್ಣುಮಕ್ಕಳ ವಿವಾಹಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡುವುದಾಗಿ ಅವರು ಘೋಷಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಆಮ್ ಆದ್ಮಿ ಪಕ್ಷದ ವರಿಷ್ಠ ಕೇಜ್ರಿವಾಲ್ ಆಟೋ ಚಾಲಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೊಂಡ್ಲಿ ಕ್ಷೇತ್ರದಲ್ಲಿ ಆಟೋ ಚಾಲಕನೋರ್ವನ ಕುಟುಂಬ ಸದಸ್ಯರೊಟ್ಟಿಗೆ ಊಟ ಮಾಡಿರುವ ಕೇಜ್ರಿವಾಲ್, ಆಟೋ ಚಾಲಕ ಸಮುದಾಯಕ್ಕೆ ನೆರವಾಗುವ ಹಲವು ಘೋಷಣೆಗಳನ್ನು ಮಾಡಿದರು. ಆಟೋ ಚಾಲಕರಿಗೆ ವರ್ಷಕ್ಕೆ 2 ಬಾರಿ 2,500 ರೂಪಾಯಿಗಳ ಸಮವಸ್ತ್ರ ಭತ್ಯೆ, ಚಾಲಕರ ಮಕ್ಕಳಿಗೆ ಉಚಿತ ಕೋಚಿಂಗ್ ಹಾಗೂ ಪೂಚೋ ಆಪ್ ಗೆ ಮತ್ತೆ ಚಾಲನೆ ನೀಡುವ ಭರವಸೆಗಳನ್ನೂ ಕೇಜ್ರಿವಾಲ್ ಆಟೋ ಡ್ರೈವರ್ಸ್ ಸೆ…
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಕಂಡು ಗಾಬರಿಯಿಂದ ದಿಕ್ಕಾ ಪಾಲಾಗಿ ಓಡಿದ ಐವರು ಕಾರ್ಮಿಕರು ಬಿದ್ದು ಗಾಯಗೊಂಡಿದ್ದಾರೆ. ಬಿಕ್ಕೋಡು ಎಸ್ಟೇಟ್‌ನಲ್ಲಿ ಸೋಮವಾರ 8ರ ಸುಮಾರಿಗೆ ಕಾರ್ಮಿಕರು ಕಾಫಿ ಕೊಯ್ದು ಮಾಡುತ್ತಿದ್ದ ವೇಳೆ ಶನಿವಾರ ರೇಡಿಯೊಕಾಲರ್ ಅಳವಡಿಸಿದ್ದ ಬೀಟಮ್ಮ ಗ್ಯಾಂಗ್ ನ ಹೆಣ್ಣಾಣೆಯು ದಿಢೀರನೆ ತೋಟಕ್ಕೆ ಬಂದಿದೆ. ಇದರಿಂದ ಭಯಭೀತರಾದ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ್ದು, ಈ ವೇಳೆ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಬೆನ್ನುಮೂಳೆಗೆ ಪೆಟ್ಟು ಬಿದ್ದ ಲಕ್ಷ್ಮಿ ಅವರು ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೇತ್ರಾವತಿ, ವನಜಾಕ್ಷಿ, ಎಲಿಜಾ ಖಾಜನ್, ಅಕ್ಕಮ್ಮ ಅವರು ಬೇಲೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರೇಡಿಯೊ ಕಾಲರ್ ಅಳವಡಿಸಿದ್ದ ಈ ಹೆಣ್ಣಾನೆ, ಬೀಟಮ್ಮ ಗ್ಯಾಂಗ್ ನಿಂದ ಬೇರ್ಪಟ್ಟಿದ್ದು, ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ತೋಟದಲ್ಲಿ ಆನೆ ಬಂದಿರುವ ಬಗ್ಗೆ ತೋಟದ ಮ್ಯಾನೇಜರ್ ಗೆ ಅರಣ್ಯ ಇಲಾಖೆಯವರು ಮಾಹಿತಿ ನೀಡಿದ್ದರು. ಆದರೆ, ಮ್ಯಾನೇಜರ್ ಕಾರ್ಮಿಕರಿಗೆ ಮಾಹಿತಿ ನೀಡಿಲ್ಲ. ಇದರಿಂದಾಗಿ ಆನೆಯಿಂದ…
ಬೆಂಗಳೂರು: ಬೆಂಗಳೂರಿನ ಆಧುನಿಕ ಬೆಳವಣಿಗೆಗೆ ಎಸ್.ಎಂ. ಕೃಷ್ಣ ಅವರು ಕೊಡುಗೆ ಕೊಟ್ಟಿದ್ದಾರೆ. ಇವರು ಘನತೆ, ಸಜ್ಜನತೆ ತಮ್ಮ ಗಾಂಭೀರ್ಯದಿಂದಲೇ ಹೆಸರಾದವರು. ಎಸ್ಎಂ ಕೃಷ್ಣ ಅವರು ದೂರದೃಷ್ಟಿಯ ರಾಜಕಾರಣಿ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೆಂಗಳೂರಿನ ಕೇಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವೈಯುಕ್ತಿಕವಾಗಿ ಬಹಳ ಪ್ರೇರಿತನಾದವನು. ಅವರು ಸಿಎಂ ಆದಾಗ ನಾನು ಹೈಸ್ಕೂಲ್ ನಲ್ಲಿ ಇದ್ದೆ. ಆಗ ರಾಜಕುಮಾರ್ ಅವರ ಕಿಡ್ನಾಪ್ ಆಗಿತ್ತು. ಆ ಸಮಯದಲ್ಲಿ ಎಸ್.ಎಂ.ಕೃಷ್ಣ ಅವರ ನಿರ್ಧಾರಗಳು ಗಮನ ಸೆಳೆದಿದ್ದವು. ಅವರು ಬಹಳ ಸ್ಟೈಲಿಷ್ ರಾಜಕಾರಣಿ. ಬೆಂಗಳೂರು ಐಟಿ ಹಬ್ ಆಗಲು ಎಸ್ಎಂ ಕೃಷ್ಣ ಕಾರಣ. ಇನ್ನು 2019ರಲ್ಲಿ ಬಿಜೆಪಿ ಸೇರಿದ್ರು, ಅದು ನನಗೆ ಸಂತೋಷದ ವಿಚಾರ ಎಂದರು. ನಾವು ಎರಡು ಮೂರು ದಿನ ಶೋಕಾಚರಣೆ ಮಾಡಿ ಮರೆಯುತ್ತೇವೆ.ಆದರೆ ಎಸ್.ಎಂ.ಕೃಷ್ಣ ಅವರು ಬೆಂಗಳೂರಿಗೆ ಅಪಾರ ಕೊಡುಗೆ ನೀಡಿದ್ದಾರೆ. ಎಸ್ ಎಂಕೆ ಅವರ ಹೆಸರಲ್ಲಿ ಬೆಂಗಳೂರಿಗೆ ಕೊಡುಗೆ ಕೊಡುವ ವ್ಯಕ್ತಿಗಳಿಗೆ ಪ್ರಶಸ್ತಿ ಕೊಡುವ…
ಬೆಂಗಳೂರು: ಪಂಚಮಸಾಲಿ ಹೋರಾಟವನ್ನ ಹತ್ತಿಕ್ಕಲು ರಾಜ್ಯ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ. ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಸರಕಾರದ ವಿರುದ್ಧ ಗುಡುಗಿದ್ದಾರೆ. ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ…
ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಹಿಂಸೆಗೆ ತಿರುಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನ ಚದುರಿಸಿದ್ದಾರೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಪ್ರತಿಭಟನಾಕಾರರ ಗುಂಪು ಯತ್ನಿಸಿದ್ದಾರೆ. ಆ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮತ್ತೊಂದೆಡೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿಗೆ ಶಾಸಕರಾದ ಯತ್ನಾಳ್, ಅರವಿಂದ್ ಬೆಲ್ಲದ್ ಸಾಥ್ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx