Author: admin

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ ಐ)ನ 402 ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅ. 3ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ (ಪತ್ರಿಕೆ -1 ಮತ್ತು 2) ಅಭ್ಯರ್ಥಿಗಳು ಅಂತಿಮವಾಗಿ ಪಡೆದ ಅಂಕಗಳ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಈ ಪಟ್ಟಿಯನ್ನು ನೇಮಕಾತಿ ವಿಭಾಗದ ಪೊಲೀಸ್ ಮಹಾನಿರ್ದೇಶಕರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ವ್ಯತ್ಯಾಸ ಇಲ್ಲ: ತಾತ್ಕಾಲಿಕ ಅಂಕಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಈಗಾಗಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪತ್ರಿಕೆ-1ಕ್ಕೆ 313 ಹಾಗೂ ಪತ್ರಿಕೆ-2ಕ್ಕೆ 219 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು. ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ನಿಯಮ ಪ್ರಕಾರ ಒಂದು ಮತ್ತು ಎರಡನೇ ಮೌಲ್ಯಮಾಪನಕ್ಕೆ ಒಳಪಡಿಸಲಾಗಿದೆ. ಈ ಎರಡೂ ಮೌಲ್ಯಮಾಪನ ಸಂದರ್ಭದಲ್ಲಿ 8 ಅಥವಾ 8ಕ್ಕಿಂತ ಹೆಚ್ಚಿನ ಅಂಕಗಳ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು 3ನೇ…

Read More

ಬೀದರ್: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮವನ್ನು ಬೀದರ್ ಜಿಲ್ಲಾ ಕಮಲನಗರ ತಾಲೂಕಿನ ಕುಶನೂರ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಬರುವ ಸರಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಪಿಎಸ್ ಐ ಚಂದ್ರಶೇಖರ್ ಅವರು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವರದಿ: ಅರವಿಂದ ಮಲ್ಲಿಗೆ ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಾರ್ವಜನಿಕ ಕೆರೆಯಲ್ಲಿದ್ದ ಮೊಸಳೆ ಕೊನೆಗೂ ಸೆರೆ: ನಿಟ್ಟುಸಿರುಬಿಟ್ಟ ಜನ ಬೀದರ್: ಜಿಲ್ಲೆಯ ಔರಾದ್ ಬಿ ತಾಲೂಕಿನ ಕೌಠಾ ಬಿ ಗ್ರಾಮ ಪಂಚಾಯತ್ ಅಡಿಯಲ್ಲಿ ಬರುವ ಕೌಠಾ ಬಿ ಗ್ರಾಮದ ಸಾರ್ವಜನಿಕ ಕೆರೆಯಲ್ಲಿ ಮೂರು ದಿನಗಳ ಹಿಂದೆ ಮೊಸಳೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸಿದೆ. ಮೊಸಳೆ ಕಾಣಿಸಿಕೊಂಡ ಹಿನ್ನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರು ಕೂಡಲೇ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. ಬಳಿಕ ಸತತ ಮೂರು ದಿನಗಳ ಪ್ರಯತ್ನದ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೊಸಳೆಯಿಂದಾಗಿ ಭಯಭೀತರಾಗಿದ್ದ ಸಾರ್ವಜನಿಕರು ಇದೀಗ ನಿಟ್ಟುಸಿರುಬಿಟ್ಟಿದ್ದಾರೆ. ಮೊಸಳೆಯನ್ನು ಹಿಡಿದು ಅಧಿಕಾರಿಗಳು ಸಾರ್ವಜನಿಕರು ಜನರ ಭಯವನ್ನು ದೂರ ಮಾಡಿದ್ದಾರೆ. ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅನಿಲ್ ಕುಲಕರ್ಣಿ, ಅಧ್ಯಕ್ಷರಾದ ರವೀನಾ ಮೇತ್ರೆ, ಅರಣ್ಯ ಅಧಿಕಾರಿಗಳು ಹಾಗೂ ಗ್ರಾಮದ ಸದಸ್ಯರು ಹಿರಿಯರು ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಜವಾಬ್ದಾರಿಯುತ ಕಾರ್ಯ ಮಾಡುತ್ತಿದ್ದು, ಈ ಗ್ರಾಮ ಅಭಿವೃದ್ಧಿ ಕಾರ್ಯಗಳು ಮಹಿಳೆಯರು ಸ್ವಾವಲಂಬಿಗಳಾಗಲು ಪೂರಕವಾಗಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ತಿಳಿಸಿದರು. ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ರ (ರಿಜಿಸ್ಟರ್ಡ್) ಸ್ವಸಹಾಯ ಸಂಘಗಳಿಗೆ ಒಟ್ಟು 607.7 ಕೋಟಿ ರೂ ಗಳ ಲಾಭಾಂಶವನ್ನು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ಗ್ರಾಮೀಣ ಅಭಿವೃದ್ಧಿಯು,ಕಲ್ಯಾಣ ಕಾರ್ಯಕ್ರಮಕ್ಕೆ ಸೀಮಿತವಾಗಿತ್ತು. ಹಣವನ್ನು ಸ್ವಸಾಯ ಸಂಘಗಳು ಸಣ್ಣಪುಟ್ಟ ಉದ್ದೇಶಗಳಿಗೆ ಬಳಸುತ್ತಿದ್ದರು ,ಈಗ ಗ್ರಾಮೀಣ ಅಭಿವೃದ್ಧಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು ಉತ್ತೇಜನಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಲು ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆ ನೆರವಾಗುತ್ತಿದೆ ಎಂದರು. ಈ ಸಂಸ್ಥೆ ಪ್ರಯೋಗ ಶಾಲೆ ಇದ್ದಂತೆ ಇಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನವಾದ ಕಾರ್ಯಕ್ರಮಗಳು ಯಶಸ್ಸನ್ನು ಆಧರಿಸಿ ರಾಷ್ಟ್ರಮಟ್ಟದಲ್ಲಿ ಸರ್ಕಾರದ ನೀತಿಯಾಗಿ ಜಾರಿಗೊಳಿಸಲಾಗುತ್ತದೆ ಎಂದರು.…

Read More

ನಮ್ಮತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ನಡೆದಿದೆ. ಎರಡೂವರೆ ವರ್ಷದ ಹೆಣ್ಣು ಮಗು ಹಲೀಜಾ ಖಾನಂ ಬೀದಿನಾಯಿಗಳಿಂದ ದಾಳಿಗೊಳಗಾದ ಬಾಲಕಿಯಾಗಿದ್ದಾಳೆ. ಬಾಲಕಿಯ ಕಣ್ಣು ಹಾಗೂ ತಲೆಯ ಭಾಗಕ್ಕೆ ಬೀದಿನಾಯಿ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಬೀದಿನಾಯಿಯ ದಾಳಿಯಿಂದಾಗಿ ಬಾಲಕಿಯ ಎಡಗಣ್ಣಿಗೆ ಗಂಭೀರವಾಗಿ ಹಾನಿಯಾಗಿದೆ. ಬಾಲಕಿಗೆ ತುಮಕೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬೆಂಗಳೂರಿನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬೀದಿನಾಯಿಗಳ ನಿಯಂತ್ರಣಕ್ಕೆ ವಿಫಲರಾಗಿದ್ದಾರೆ. ಬೀದಿನಾಯಿಗಳ ಹಾವಳಿಗೆ ಹೆಗ್ಗೆರೆ ಗ್ರಾಮಸ್ಥರು ರೋಸಿಹೋಗಿದ್ದಾರೆ. ಮಕ್ಕಳು ಶಾಲೆಗೆ ಹೋಗುವಾಗ ಬರುವಾಗ ಹಾಗೂ ಮನೆ ಮುಂದೆ ಆಟವಾಡುವಾಗ ಬೀದಿ ನಾಯಿಗಳ ಹಿಂಡು ದಾಳಿ ಮಾಡುತ್ತಿದೆ. ಬೀದಿನಾಯಿಗಳ ಸೆರೆಹಿಡಿಯುವಂತೆ ಹಲವು ಬಾರಿ ಹೆಗ್ಗೆರೆ ಗ್ರಾಪಂ ಮನವಿ ಮಾಡಿದರೂ ಹೆಗ್ಗೆರೆ ಗ್ರಾಪಂ ಹಾಗೂ ಜಿಲ್ಲಾಡಳಿತ ತಲೆಕೆಡಿಸಿಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳನ್ನ ಸೆರೆ ಹಿಡಿದು…

Read More

ನವದೆಹಲಿ: ವಾಟ್ಸಾಪ್ ಗೆ ನಿಷೇಧ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯ ಪೀಠ ಈ ತೀರ್ಪು ನೀಡಿದೆ. ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸಾಪ್ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್ ಕುಟ್ಟನ್ ಕೆ.ಜಿ. ಎಂಬುವವರು ಕೇರಳ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. 2021ರಲ್ಲಿ ಕೇರಳ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಅಲ್ಲದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಆ್ಯಪ್ ನ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಭದ್ರತೆ ಇರುವುದರಿಂದ ಸಂದೇಶಗಳ ಮೂಲವನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಹೀಗಾಗಿ 2021ರ ಐಟಿ ನಿಯಮಗಳಿಗೆ ಒಳಪಡುವುದಿಲ್ಲ ಎಂದು ವಾಟ್ಸಾಪ್ ದೆಹಲಿ ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಅರ್ಜಿದಾರರ ಕೇರಳ ಹೈಕೋರ್ಟ್ ನಲ್ಲಿ ಉಲ್ಲೇಖಿಸಿದ್ದರು. ಇದೇ ವೇಳೆ, ‘ ಕೆಲವು ಸಂದರ್ಭಗಳಲ್ಲಿ ಬಳಕೆದಾರರು ಕಳುಹಿಸಿದ…

Read More

ತುಮಕೂರು: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಟಾನಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಹಕಾರ ಅಗತ್ಯ ಎಂದರು. ತಂಬಾಕಿನಿಂದ ತಯಾರಿಸಿದ ಉತ್ಪನ್ನಗಳನ್ನು ಬಳಕೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕಿನ ಚಟದಿಂದ ಹಲವಾರು ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಬರುತ್ತಿವೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಬಾಕು ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮತ್ತಿತರ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ…

Read More

ತುಮಕೂರು: ನಗರದ ಚಿಕ್ಕಪೇಟೆಯ ಗಾರ್ಡನ್ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಡಲ ಪೂಜೆ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮ ನ.15 ರಿಂದ ಜನವರಿ 14ರವರೆಗೆ ನಡೆಯಲಿದೆ. ನ. 15 ರಂದು ಸಂಜೆ 6:30ಕ್ಕೆ ಮಂಡಲ ಪೂಜೆ ಉದ್ಘಾಟನೆಗೆ ಹಿರೇಮಠಾಧ್ಯಕ್ಷರಾದ ಡಾ.ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆಗಮಿಸಲಿದ್ದಾರೆ. ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಟಿ.ಬಿ.ಶೇಖರ್ ಮನವಿ ಮಾಡಿದ್ದಾರೆ. ವ್ರತ ಪ್ರಾರಂಭಿಸುವ, ಯಾತ್ರೆ ಮಾಡುವ ಭಕ್ತಾದಿಗಳಿಗೆ ನ.15 ರಿಂದ ದೇವಾಲಯದಲ್ಲಿ ಮಾಲೆ ಹಾಕುವ, ಇರುಮುಡಿ ಕಟ್ಟುವ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೂವಿನ ಹಡಗಲಿ: ವಿಜಯನಗರ ಜಿಲ್ಲೆ ಹೂವಿನ ಹಡಗಲಿಗೆ ಶ್ರೀ ವಿಶುದು ಸಾಗರ್ ಮುನಿ ಮಹಾರಾಜರ ನೇತೃತ್ವದ ಜೈನ ಮುನಿಗಳ ಪ್ರವೇಶ ಮಾಡಿತು. ಈ ಸಂದರ್ಭದಲ್ಲಿ ಹೂವಿನ ಹಡಗಲಿ ಜೈನ ಬಾಂಧವರು ,ಬಾರಿ ಮಳೆ ನಡುವೆ ಮಹಿಳಾ ಸಂಘಟನೆಗಳು ಪೂರ್ಣ ಕುಂಭಗಳೊಂದಿಗೆ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು .ನಂತರ ಮುನಿಗಳು ಶ್ರೀ ಪಾರ್ಶ್ವನಾಥ ಜಿನ ಮಂದಿರಕ್ಕೆ ಭೇಟಿ ನೀಡಿ ತೀರ್ಥಂಕರರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಪೂಜಾ ಅಭಿಷೇಕ ,ಆರಾಧನೆ,ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ವಿಶುದ್ಧ ಸಾಗರ್ ಮುನಿ ಮಹಾರಾಜರ ಮುನಿಗಳ ತಂಡದೊಂದಿಗೆ ಹೂವಿನ ಹಡಗಲಿಯ ಜೈನ ಬಾಂಧವರು, ನಾಂದಿನಿ ಮಠದ ಸ್ವಸ್ತಿ ಶ್ರೀ ಜಿನ ಸೇನಾ ಭಟ್ಟಾರಕ ಶ್ರೀಗಳು ಉಪಸ್ಥಿತರಿದ್ದರು . ಈ ಕಾರ್ಯಕ್ರಮದಲ್ಲಿ ಶ್ರೀ ಪಾರ್ಶ್ವನಾಥ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಚ್.ಎಸ್. ಪ್ರಶಾಂತ್, ಪುರಸಭಾ ಸದಸ್ಯ ಹಾಗೂ ಮಹಾವೀರ ಬ್ಯಾಂಕ್ ನ ಉಪಾಧ್ಯಕ್ಷ ಮಂಜುನಾಥ ಜೈನ್, ಜೈನ ಸಮಾಜದ ಉಪಾಧ್ಯಕ್ಷ ವಿಜಯಕುಮಾರ್, ಜ್ವಾಲಾ ಮಾಲಿನಿ ಮಹಿಳಾ ಸಂಘದ ಅಧ್ಯಕ್ಷ ಎಂ.ಡಿ.ಪದ್ಮಾವತಿ…

Read More

ಪಾವಗಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಹೇಶ್ ಅವರು, ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಆರ್.ಡಿ.ರೋಪ್ಪ ಗ್ರಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಶ್ರೀ ಚಿಕ್ಕ ಪಾಲವಾಯಪ್ಪ ಸ್ವಾಮಿ ಮತ್ತು ಎಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಮಂಜೂರು ಮಾಡಲಾದ 2 ಲಕ್ಷ ರೂಪಾಯಿಗಳ ಡಿಡಿಯನ್ನು ಕಮಿಟಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗಣ್ಯರ ಸಮ್ಮುಖದಲ್ಲಿ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕೂಡ ಸೇರಿದೆ. ಪಾವಗಡ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 1.47 ಕೋಟಿ ಅನುದಾನ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ(ಸುಜ್ಞಾನ ನಿಧಿ), ನಿರ್ಗತಿಗಳಿಗೆ ಮಾಶಾಸನ, ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ವದಗನೆ, ಕುಡಿಯ ನೀರಿನ ಸಮಸ್ಯೆ ನಿವಾರಿಸಲು ಶುದ್ಧ ನೀರಿನ ಘಟಕ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾಗಿದೆ ಎಂದು…

Read More