Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಜಮಖಂಡಿ: ಸದಾ ಸಂಸಾರಿಕ ಹಾಗೂ ವ್ಯವಹಾರದ ಜಂಜಾಟದಿಂದ ಮುಕ್ತಿ ಹೊಂದಲು ಭಜನೆಗಳು ಪೂರಕವಾಗಿವೆ ಎಂದು ಹಿರಿಯ ಸಾಹಿತಿ ಬಿ.ಪಿ.ನ್ಯಾಮಗೌಡ ಅಭಿಪ್ರಾಯ ಪಟ್ಟರು. ಅವರಿಂದು ಬಾಗಲಕೋಟೆ ಜಿಲ್ಲೆ, ಜಮಖಂಡಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ ಎಂಟರ ಜಿನ ಭಜನಾಕಾರ್ಯಕ್ರಮದ ಸೀಸನ್ –8 ರ ಜಮಖಂಡಿ ವಲಯ ಮಟ್ಟದ ಜನಭಜನೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಜನೆಯಿಂದ ಮಾನವ ನೆಮ್ಮದಿ ಅಹಿಂಸೆ, ಶಾಂತಿ, ಪಡೆಯಲು ಸಾಧ್ಯ ಇದು ಮಾನವನಿಗೆ ಸುಖ ನೀಡುತ್ತದೆ, ಜಿನ ಭಜನೆಗಳ ಸ್ಪರ್ಧೆಗಳು ಮಾನವನಿಗೆ ಕೇವಲ ಬಹುಮಾನ ಪಡೆಯಲು ಸೀಮಿತವಾಗಬಾರದು, ಸ್ಪರ್ಧಿಸುವುದು ಮುಖ್ಯ ಜಿನ ಭಜನೆ ಸಂಸ್ಕೃತಿ ಸಂಸ್ಕಾರದ ಪ್ರತೀಕವಾಗಿದೆ ಎಂದರು. ಸಾಹಿತಿ ಜೀವoದರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಸ್ಪರ್ಧೆಗಳು ಒಬ್ಬರಿಗೆ ಇದರಲ್ಲಿ ಯಾವುದೇ ಭೇದಭಾವವಿಲ್ಲ ಎಂದರು ಸೀಮಿತವಾಗಿಲ್ಲ. ಕಾರ್ಯಕ್ರಮದಲ್ಲಿ ಭಾರತಿ ಶಹಪುರ, ಸುಶೀಲ್ ಕುಮಾರ್ ಬೆಳಗಲಿ ,ಜನಭಜನೆಯ ಮುಖ್ಯ ಸಂಯೋಜಕ ಮಹಾವೀರ್ ಶಾಹಪುರ್, ದಯಾನಂದ ಶಿರಗಾರ, ನೇಮಿನಾಥ ನರಸಗೊಂಡ, ಪ್ರಶಾಂತ್…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಇಂದು ನಗರದ ಸ್ಲಂ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮಾತನಾಡಿದರು. 2023ರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿರುವ ಭರವಸೆಗಳನ್ನು ಜ್ಞಾಪಿಸಲು ಮತ್ತು ನಗರಗಳಲ್ಲಿ ದಮನಕ್ಕೊಳಗಾದ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಆಗ್ರಹಿಸಿ, ಸ್ಲಂ ನಿವಾಸಿಗಳ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಡಿಸೆಂಬರ್ 13 ರಂದು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರೂ ಸಂಖ್ಯೆಯಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿ ಸರ್ಕಾರವನ್ನು ಎಚ್ಚಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು. ಈಗಾಗಲೇ ಸ್ಲಂ ನಿವಾಸಿಗಳನ್ನು ನಿರ್ಲಕ್ಷ್ಯತೆಯಿಂದ ರಾಜ್ಯ ಸರ್ಕಾರ ನೋಡುತ್ತಿದ್ದು, 2024–2025ನೇ ಸಾಲಿನ ಬಜೆಟ್ ನಲ್ಲಿ ಬರಿ 30 ಕೋಟಿಗಳನ್ನು ಸ್ಲಂಗಳ ಅಭಿವೃದ್ಧಿಗೆ ನೀಡಿರುವುದು ನಗರ ವಂಚಿತ ಸಮುದಾಯಗಳನ್ನು ಅಪಮಾನಿಸಿದಂತಾಗಿದೆ. ಸಾಮಾಜಿಕ…
ಪಾವಗಡ: ಭೀಕರ ರಸ್ತೆ ಅಪಘಾತದಲ್ಲಿ ಬುಲೆರೋ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದ ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಎನ್ನುವರ 21 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ. ತುಮಕೂರು ರಸ್ತೆಯಿಂದ ಪಾವಗಡದ ಕಡೆ ಬರುತ್ತಿದ್ದಂತಹ ಬುಲೆರೋ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ, ಲಾರಿಯ ಮುಂಭಾಗದಲ್ಲಿ ಓಮ್ನಿಯೊಂದು ತೆರಳುತ್ತಿದ್ದು ಇದ್ದಕ್ಕಿದ್ದಂತೆ ಓಮ್ನಿ ಯ್ಯೂಟರ್ನ್ ತೆಗೆದುಕೊಂಡಿದ್ದು, ಲಾರಿ ಚಾಲಕ ತನ್ನ ವೇಗವನ್ನು ಕಡಿಮೆ ಮಾಡಿದ್ದಾನೆ, ಹಿಂದೆಯಿಂದ ಬರುತ್ತಿದ್ದ ಬುಲೆರೋ ವಾಹನ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ, ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಪಿಎಸ್ ಐ ಗುರುನಾಥ ಭೇಟಿ ನೀಡಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವರು, ಮಾಜಿ ರಾಜ್ಯಪಾಲರೂ ಆದ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್.ಎಂ.ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಜಿಲ್ಲೆಯಲ್ಲಿ ತೆಂಗು ಬೆಳೆ ಬೆಳೆಯುವ ರೈತರು ತಮ್ಮ ತೆಂಗಿನ ಬೆಳೆಯನ್ನು ವಿಮಾ ಯೋಜನೆಗೊಳಪಡಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಮನವಿ ಮಾಡಿದ್ದಾರೆ. ಆರೋಗ್ಯವಂತ ತೆಂಗಿನ ಗಿಡ/ ಮರಗಳು(4 ರಿಂದ 60 ವರ್ಷದವರೆಗೆ) ಈ ವಿಮೆಗೊಳಪಡುತ್ತವೆ. ರೈತರು ಕನಿಷ್ಠ 5 ತೆಂಗಿನ ಗಿಡ/ ಮರಗಳನ್ನು ಕಡ್ಡಾಯವಾಗಿ ವಿಮೆಗೊಳಪಡಿಸಬೇಕಾಗಿದ್ದು, 5ಕ್ಕಿಂತ ಕಡಿಮೆ ಸಂಖ್ಯೆಯ ತೆಂಗಿನ ಮರ/ ಗಿಡಗಳು ಈ ವಿಮೆಗೆ ಒಳಪಡುವುದಿಲ್ಲ. ಹವಾಮಾನ ವೈಪರೀತ್ಯದಿಂದ/ ಕೀಟ ಮತ್ತು ರೋಗ/ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದಲ್ಲಿ, ಬರಗಾಲ/ ಆಲಿಕಲ್ಲು/ ಸಿಡಿಲುಬಡಿತದಿಂದ ತೆಂಗಿನ ಗಿಡ /ಮರಗಳಿಗೆ ಸಂಪೂರ್ಣ ಹಾನಿಯಾಗಿ ಸತ್ತು ಹೋದಲ್ಲಿ ಹಾನಿ ಸಂಭವಿಸಿದ 15 ದಿನಗಳೊಳಗಾಗಿ ರೈತರು ಕಡ್ಡಾಯವಾಗಿ ವಿಮಾ ಕಂಪನಿಗೆ ತಿಳಿಸತಕ್ಕದ್ದು. ಈ ವಿಮಾ ಯೋಜನೆಯನ್ನು ತೆಂಗು ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತ ರೈತರು ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಪ್ರತಿ, ವಂತಿಕೆ ಹಣದೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ…
ತುಮಕೂರು: ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್. ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಆಧಾರ್ ಕಾರ್ಡ್, ಪಡಿತರ ಚೀಟಿ, ಅಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ದಾಖಲಾತಿಗಳೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023 ಹಾಗೂ 2024ರಲ್ಲಿ ಸ್ನಾತಕೋತ್ತರ ಪದವಿ/ಪದವಿ/ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ಈ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿಗಳು ಅಥವಾ ದೂರವಾಣಿ ಸಂಖ್ಯೆ 0816–2278488ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.…
ತುಮಕೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 9:45 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಆಶೋಕ್ ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಭಾರತ ಸಂಚಾರ ನಿಗಮವು ಡಿಸೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಬಿ.ಎಸ್.ಎನ್.ಎಲ್ ಭವನದ 3ನೇ ಮಹಡಿ ಸಭಾಂಗಣದಲ್ಲಿ ಗ್ರಾಹಕ ಶಿಕ್ಷಣ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ನಿಗಮದ ಹಿರಿಯ ಮಹಾ ಪ್ರಭಂದಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯು ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಆದಾಯ ತೆರಿಗೆ ಮಹತ್ವ’ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮವು ನಗರದ ಎಪಿಎಂಸಿ ಆವರಣದಲ್ಲಿರುವ ಛೇಂಬರ್ ಆಫ್ ಕಾಮರ್ಸ್ ಕಚೇರಿಯಲ್ಲಿ ನಡೆಯಲಿದ್ದು, ಬೆಂಗಳೂರು ವಲಯದ ಆದಾಯ ತೆರಿಗೆ ಹೆಚ್ಚುವರಿ ಆಯುಕ್ತ ಡಿ. ಕಿರಣ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಆದಾಯದ ರಿಟರ್ನ್ಸ್ ಸಲ್ಲಿಕೆ, ಆದಾಯ ತೆರಿಗೆ ಇಲಾಖೆ ಹೊರಡಿಸಿದ ಸೂಚನೆಗಳ ಅನುಸರಣೆ, ಆದಾಯ ತೆರಿಗೆ ಸಾಧಕ ಮತ್ತು ಭಾದಕ ಕುರಿತು ಅಗತ್ಯ ತಿಳುವಳಿಕೆ ಹಾಗೂ ವಿವಾದ್ ಸೇ ವಿಶ್ವಾಸ್ ಯೋಜನೆ–2024 ಕುರಿತು ಹೆಚ್ಚಿನ ಅರಿವು ಮೂಡಿಸಲಾಗುವುದು. ವೀಶೇಷವಾಗಿ ಜಿಲ್ಲೆಯ ಎಲ್ಲಾ ಸಾಲ ಸಹಕಾರ ಸಂಘ’ಗಳ ವಲಯಕ್ಕೆ ಅರಿವು ಮೂಡಿಸಲು ಈ ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಆದಾಯ ತೆರಿಗೆ ಅಧಿಕಾರಿ ಹೆಚ್.ಎಸ್. ಗುರುನಾಥ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿಲ್ಲಿರುವ ರುಡ್ ಸೆಟ್ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ 30 ದಿನಗಳ ಉಚಿತ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡ ಓದಲು/ಬರೆಯಲು ಬರುವಂತಹ ಹಾಗೂ 18 ರಿಂದ 45 ವರ್ಷ ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಬೇಸಿಕ್ ನಿಂದ ಅತ್ಯಧಿಕ ತಂತ್ರಜ್ಞಾನದ ಬಗ್ಗೆ ಥಿಯರಿ ಹಾಗೂ ಪ್ರಾಕ್ಟಿಕಲ್ ತರಬೇತಿ ನೀಡಲಾಗುವುದು. ಇಲೆಕ್ಟ್ರಾನಿಕ್ ಸ್ಪೇರ್ ಸ್ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಕೆ, ಎಲ್ ಇಡಿ, ಎಲ್‌ಸಿಡಿ ಟಿವಿಯ ಮದರ್ ಬೋರ್ಡ್, ಸಾಫ್ಟ್ ವೇರ್, ಪವರ್ ಸಪ್ಲೈ ಜೊತೆಗೆ ಆಡಿಯೋ ಸಿಸ್ಟಮ್ ರಿಪೇರಿ ಹಾಗೂ ಎಲ್ಲಾ ಕಂಪನಿಯ ಡಿಟಿಹೆಚ್ ಆಳವಡಿಕೆ ಬಗ್ಗೆ ತರಬೇತಿ ನೀಡಲಾಗುವುದು. ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ…