Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಪ್ರತಿ ವರ್ಷ ಡಿಸೆಂಬರ್ 9 ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ಭ್ರಷ್ಟಾಚಾರದ ವಿರುದ್ಧವಾಗಿ ಜಾಗೃತಿ ಮೂಡಿಸುವುದು ಮತ್ತು ಸಮರ್ಥ, ಪಾರದರ್ಶಕ ಆಡಳಿತವನ್ನು ಉತ್ತೇಜಿಸುವುದು. ಭ್ರಷ್ಟಾಚಾರವು ಯಾವುದೇ ದೇಶದ ಅಭಿವೃದ್ಧಿಗೆ ದೊಡ್ಡ ಅಡಚಣೆ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಗತಿಯನ್ನು ಹಿಮ್ಮುಖಗೊಳಿಸುವ ಕ್ರಿಯೆಯಾಗಿದ್ದು, ಅಸಮಾನತೆ, ದಾರಿದ್ರ್ಯ, ಮತ್ತು ನ್ಯಾಯದ ಕೊರತೆಯನ್ನು ಹೆಚ್ಚಿಸುತ್ತದೆ. ಭಾರತದಂಥ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಭ್ರಷ್ಟಾಚಾರದ ಪ್ರಭಾವವನ್ನು ಕಡಿಮೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯಾಗುತ್ತದೆ. ತುಮಕೂರಿನಂತಹ ಪ್ರಗತಿಶೀಲ ಜಿಲ್ಲೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವಲ್ಲಿ ನಮ್ಮತುಮಕೂರು ಮಾಧ್ಯಮ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಭ್ರಷ್ಟಾಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾದಾಗ, ಅದರ ನಿರ್ಮೂಲನೆ ಸಾಧ್ಯವಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಲಂಚಕೊಡುವುದಿಲ್ಲ ಎನ್ನುವ ಪ್ರತಿಜ್ಞೆಯನ್ನ ನಾಗರಿಕರು ಮಾಡಬೇಕಿದೆ. ಜೊತೆಗೆ ಅಧಿಕಾರಿಗಳು ಕೂಡ ಲಂಚ ಸ್ವೀಕರಿಸದೇ ನಾಗರಿಕರ ಕೆಲಸಗಳನ್ನ ಮಾಡಿಕೊಡುತ್ತೇವೆ ಎನ್ನುವ ಪ್ರತಿಜ್ಞೆ ಮಾಡಬೇಕಿದೆ. ಶಾಲಾ ಕಾಲೇಜು ಮಟ್ಟದಲ್ಲಿ ಭ್ರಷ್ಟಾಚಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ…
ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು ಸ್ಮರಣೆ ಮಾಡಿದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ…
ಜಮಖಂಡಿ: ಕನ್ನಡ ಸಾಹಿತ್ಯ, ಸಂಸ್ಕೃತಿ ,ಇತಿಹಾಸ, ಪರಂಪರೆಗೆ ಜೈನ ಕವಿಗಳ ಕೊಡುಗೆ ಅಪಾರವಾದದ್ದು ಅವುಗಳನ್ನು ಉಳಿಸಿ ಬೆಳೆಸಬೇಕು ಎಂದು ಸಿದ್ದರಾಜ ಪೂಜಾರಿ ಹೇಳಿದರು. ಅವರಿಂದು ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ ಎಂಟರ ಜಮಖಂಡಿ ವಲಯ ಮಟ್ಟದ ಜಿನ ಭಜನಾ ಸೀಸನ್ ಉದ್ಘಾಟಿಸಿ ಮಾತನಾಡಿದರು. ಜಿನ ಭಜನೆ ಅನಿತಾ ಸುರೇಂದ್ರ ಕುಮಾರ್ ರವರ ಕಲ್ಪನೆಯ ಕೂಸಾಗಿದೆ, ಜಿನ ಭಜನೆಯ ಉದ್ದೇಶ, ಇತಿಹಾಸ, ಸಂಸ್ಕೃತಿ ಪರಂಪರೆಗಳನ್ನು ಉಳಿಸಿ ಬೆಳೆಸುವುದಾಗಿದೆ, ಆಧ್ಯಾತ್ಮಿಕತೆ ಕಡೆಗೆ ಒಲವು ಕಡಿಮೆಯಾಗಿದೆ. ವೈಭೋಗಗಳ ಹಾವಳಿಯಿಂದ ಧರ್ಮದ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಅನಿತಾ ಸುರೇಂದ್ರ ಕುಮಾರ್ ದಂಪತಿಗಳು ಜಿನಭಜನೆಗೆ ಹೊಸ ರೂಪ ನೀಡುತ್ತಿದ್ದಾರೆ. ಈಗ ಎಂಟನೇ ಜಿನ ಭಜನೆಯಾಗಿದೆ ಎಂದ ಅವರು, ಸಮಾಜ ಜೀವಂತವಾಗಿ ಉಳಿಯಬೇಕಾದರೆ ಕಲೆಗಳು ಉಳಿಯಬೇಕು, ಜನಸಾಹಿತ್ಯ ಉಳಿಯಲು ಜೈನ ಧರ್ಮ ಅಗತ್ಯವಾಗಿದೆ ಎಂದರು. ಕನ್ನಡ ಸಾಹಿತ್ಯದ ಮೂಲ ಪುರುಷರಾದ ಪಂಪ, ರನ್ನ, ಜನ್ನ, ಪೊನ್ನ, ನಾಗಚಂದ್ರರು ಕನ್ನಡ ಸಾಹಿತ್ಯಕ್ಕೆ…
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಪಾದಯಾತ್ರಿಗಳಿಂದ ಗೃಹಸಚಿವ ಜಿ. ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಾಲೂಕಿನ ಗೊಲ್ಲಹಳ್ಳಿಯಲ್ಲಿ ಇರುವ ಗೃಹಸಚಿವರ ನಿವಾಸದ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಪಾದಯಾತ್ರೆಗಳು ಮುತ್ತಿಗೆ ಹಾಕಲು ಯತ್ನಿಸಿದರು. ಸಚಿವ ಪರಮೇಶ್ವರ ಅವರ ಮನೆಯದುರು ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಗುಬ್ಬಿಯಿಂದ ತುಮಕೂರು ನಗರದ ಕಡೆಗೆ ಬರುತ್ತಿದ್ದು ಇದರಲ್ಲಿ ಸ್ವಾಮೀಜಿಗಳು ಹಾಗೂ ಬಿಜೆಪಿ ಮುಖಂಡರು ಹಾಗೂ ಜೆಡಿಎಸ್ ಮುಖಂಡರು ಸೇರಿದ್ದಾರೆ. ಗೃಹಸಚಿವರ ಮನೆ ಎದುರು ಬರುತ್ತಿದ್ದವರು ಹಾಗೂ ಶಾಸಕ ಸುರೇಶ್ ಗೌಡ ಅವರನ್ನು ಸ್ಥಳದಲ್ಲಿಯೇ ಇದ್ದ ಪೊಲೀಸರು ಮುತ್ತಿಗೆ ನಡೆಸಲು ಇದಕ್ಕೆ ಅವಕಾಶ ನೀಡದೇ ತಡೆದರು. ಪಾದಯಾತ್ರಿಗಳು ತುಮಕೂರು ನಗರದ ಕಡೆಗೆ ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಘೋಷಣೆ ಕೂಗುತ್ತಾ ಸಾಗಿದರು. ತುಮಕೂರು ಜಿಲ್ಲೆಗೆ ಕುಡಿಯುವ ನೀರಿಗಾಗಿ ಹರಿಯುವಂತಹ ಹೇಮಾವತಿ ನದಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುವಂತಹ ಲಿಂಕ್ ಕೆನಾಲ್ ವಿರೋಧಿಸಿ ನೆನ್ನೆಯಿಂದ ಪಾದಯಾತ್ರೆ ಆರಂಭಿಸಿರುವ ಬಿಜೆಪಿ ಹಾಗೂ…
ತುಮಕೂರು: ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮವು ತುಮಕೂರು ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ ಅವರು ಭಾಗವಹಿಸಿ, ಸಹಕಾರ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು. ಅವರು, ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಸಮುದಾಯ ಸಹಕಾರದ ಮೂಲಕವೇ ಶಾಶ್ವತ ಅಭಿವೃದ್ಧಿ ಸಾಧ್ಯವೆಂದು ಆಶಿಸಿದರು. ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಟಿ.ಕೆ.ಧನಿಯಾ ಕುಮಾರ್, ಗೌರವಾಧ್ಯಕ್ಷ ಟಿ.ಎನ್. ಮಧುಕರ್, ಮಾಜಿ ಶಾಸಕ ಗಂಗಹನುಮಯ್ಯ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಪ್ರಜಾಪ್ರಗತಿ ಸಂಪಾದಕ ಎಸ್. ನಾಗಣ್ಣ ಉಪಸ್ಥಿತರಿದ್ದರು. ಈ ಸಮಾರಂಭದಲ್ಲಿ ಪುರಸ್ಕೃತರ ಸಾಧನೆಗಳನ್ನು ಸ್ಮರಿಸಿ, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ಸಹಕಾರ ಚಟುವಟಿಕೆಗಳಿಗೆ ನೀಡಿದ ಸಹಕಾರ ಮತ್ತು ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸ್ಥಳೀಯ ಮುಖಂಡರು, ಅಭಿಮಾನಿಗಳು, ಮತ್ತು ಹಲವಾರು…
ತುಮಕೂರು : ಎಕ್ಸ್ಪ್ರೆಸ್ ಕೆನಾಲ್ ಮಾಡೋದ್ರಿಂದ ನಮ್ಮ ಜಿಲ್ಲೆಗೆ ಅನ್ಯಾಯ ಆಗಲಿದೆ. ವಿರೋಧ ಪಕ್ಷದ ಹೋರಾಟಕ್ಕೆ ನನ್ನ ಸಹಮತ ಇದೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು ಎಕ್ಸ್ಪ್ರೆಸ್ ಕೆನಾಲ್ ಯೋಜನೆಯನ್ನು ನಾನು ಹಿಂದೆಯೂ ವಿರೋಧಿಸಿದ್ದೇನೆ. ಈಗಲೂ ವಿರೋಧಿಸುತ್ತೇನೆ ಎಂದರು. ಟೆಕ್ನಿಕಲ್ ಕಮಿಟಿ ವರದಿ ಇನ್ನೂ ಬಿಡುಗಡೆ ಆಗಿಲ್ಲ. ಕಮಿಟಿ ವರದಿ ಆಧರಿಸಿ ನಾವೂ ಹೋರಾಟ ರೂಪಿಸುತ್ತೇವೆ ಎಂದರು. ನಾನು ಸರ್ಕಾರದ ಭಾಗ ಆಗಿರೋದ್ರಿಂದ ನಮ್ಮದೇ ಚೌಕಟ್ಟಿನಲ್ಲಿ ವಿರೋಧಿಸುತ್ತೇನೆ ಎಂದರು. ವಿರೋಧ ಪಕ್ಷದವರು ಹೋರಾಟ ಮಾಡಲಿ. ಆದರೆ ರಕ್ತಪಾತ ಆಗುತ್ತದೆ ಎಂದು ಜನರನ್ನು ಎತ್ತಿಕಟ್ಟುವ ಕೆಲಸ ಬೇಡ ಎಂದರು. ಡಿಸಿಎಂ ಡಿಕೆಶಿ ಪ್ರತಿಕ್ರಿಯೆಗೆ ಸಹಮತ ಸೂಚಿಸಿದ ಎಸ್.ಆರ್.ಶ್ರೀನಿವಾಸ್, ಹೌದು ರಕ್ತಪಾತ ಆಗುತ್ತದೆ ಅನ್ನುವಂತ ಮಾತು ವಿರೋಧ ಪಕ್ಷದವರು ಹೇಳಬಾರದಿತ್ತು. ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಡಿಸಿಎಂ ವಿರೋಧಿಸಿದ್ದಾರೆ ಎಂದರು. ಗಲಭೆ ದೊಂಬಿ ಆದರೆ ಸರ್ಕಾರದ ಕೆಲಸ ಸರ್ಕಾರದ ಮಾಡುತ್ತದೆ ಎಂದು ಹೇಳಿದ್ದಾರೆಯೇ ಹೊರತು, ಎಕ್ಸ್ಪ್ರೆಸ್ ಕೆನಾಲ್ ಮಾಡಿಯೇ…
ತುಮಕೂರು: ತುಮಕೂರು ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ ವಿಷಯಗಳ ಶೈಕ್ಷಣಿಕ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಉದ್ಘಾಟಿಸಿದರು. ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ ಗೌರವ ತರಬೇಕು ಹಾಗೂ ಕಾರ್ಯಾಗಾರದಲ್ಲಿ ತಿಳಿಸಿದ ಮಾಹಿತಿಯ ಪ್ರಯೋಜನ ಪಡೆಯುವಂತೆ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಬೆಸ್ಕಾಂ ಕಂಪನಿಯು ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಹೊನ್ನೇನಹಳ್ಳಿ, ತಿಮ್ಮಸಂದ್ರ, ಹೆಬ್ಬೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ: ಭಾರತೀಯ ಸಂಸ್ಕೃತಿಯ ಪುರಾತನವಾದ ಜಿನ ಭಜನೆಯಿಂದ ಹೊಸ ಕ್ರಾಂತಿಯಾಗಿದ್ದು ಜಿನ ಭಜನೆಯಿಂದ ಸಮಾಜ ಹೊಸ ಹೊಸ ಬದಲಾವಣೆ ಕಂಡಿದೆ ಎಂದು ಜಿನ ಭಜನಾ ಕೇಂದ್ರ ಸಮಿತಿಯ ಸಂಯೋಜಕ ಪಿ. ಅಜಿತ್ ಕುಮಾರ್ ಅಭಿಪ್ರಾಯಪಟ್ಟರು. ಅವರಿಂದು ಇಲ್ಲಿನ ಹೊಂಬುಜ ಶ್ರೀ ಪದ್ಮಾವತಿ ಜೈನ ಸಮುದಾಯ ಭವನದಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ — 8 ರ ಮಲೆನಾಡು ವಿಭಾಗ ಮಟ್ಟದ ಜಿನ ಭಜನೆ ಸ್ಪರ್ಧೆ 2024 ರ ಸೀಜನ್ 8ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದು ಅನಿತಾ ಸುರೇಂದ್ರ ಕುಮಾರ್ ಅವರು ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆ, ಇಂದು ಎಲ್ಲರ ಸಹಕಾರದಿಂದ ಮುನ್ನಡೆಯುತ್ತಿದೆ, ಇದು ಕೇವಲ ದೊಡ್ಡವರಿಗಾಗಿ ಸೀಮಿತವಾಗಿಲ್ಲ ಎಂದ ಅವರು, ಕಿರಿಯರು ಹೆಚ್ಚು ಹೆಚ್ಚು ಪಾಲ್ಗೊಳ್ಳುತ್ತಿರುವುದರಿಂದ ಬಹಳಷ್ಟು ಬದಲಾವಣೆ ಕಂಡಿದೆ, ಈಗ ವಯಸ್ಸಾದವರಿಗೆ ಸುವರ್ಣ ತಂಡ ರೂಪಿಸಲಾಗಿದೆ ಎಂದರು. ಭಾರತೀಯ ಜೈನ್ ಮಿಲನ್ ವಲಯ — 8ರ ದಾವಣಗೆರೆ ವಿಭಾಗದ ಉಪಾಧ್ಯಕ್ಷ ಹೊಸದುರ್ಗ ಸುಮತಿ ಕುಮಾರ್ ಮಾತನಾಡಿ, ಅನಿತಾ…
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ಕಿರಿಯ ಮಹಿಳಾ ಆರೋಗ್ಯ ಸಹಾಯಕಿ)ಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಡಿಸೆಂಬರ್ 18ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ತರಬೇತಿ ಕೇಂದ್ರ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ಅಥವಾ ಜಾಲತಾಣ https://hfwcom.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx