Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ತುಮಕೂರು: ಹೆಗ್ಗೆರೆ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಒದಗಿಸಲು ಯಾವುದೇ ಮಧ್ಯವರ್ತಿಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಕೆಲವರು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಣ ನೀಡಬೇಕೆಂದು ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಾರ್ವಜನಿಕರು ಪಂಚಾಯತಿಗೆ ಸಂಬಂಧಿಸಿದ ತಮ್ಮ ಕೆಲಸ–ಕಾರ್ಯಗಳಿಗಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಹೆಗ್ಗೆರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಮನವಿ ಮಾಡಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ ದೊರೆಯುವ ಸಾರ್ವಜನಿಕ ಸೇವೆಗಾಗಿ ನಿಗದಿತ ಶುಲ್ಕವನ್ನು ಪಾವತಿಸಿ ರಸೀದಿ ಪಡೆಯಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಗಾಮ ಪಂಚಾಯತಿ ಸಿಬ್ಬಂದಿಗಳಾಗಲಿ ಅಥವಾ ಬೇರೆ ಯಾರಾದರೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಣ ನೀಡಬೇಕೆಂದು ಒತ್ತಾಯ ಮಾಡಿದಲ್ಲಿ ಹೆಗ್ಗೆರೆ ಗ್ರಾಮ ಪಂಚಾಯತಿ ಕಚೇರಿ ಅಥವಾ ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಜಿಲ್ಲೆಯ ಎಲ್ಲಾ ಶಾಲೆ/ಕಾಲೇಜು/ಅಂಗನವಾಡಿ/ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಸೆಂಬರ್ 9ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ತಿಳಿಸಿದ್ದಾರೆ. ಜಂತು ಹುಳು ಬಾಧೆಯಿಂದ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ನಿಶ್ಯಕ್ತಿ, ತೂಕ ಕಡಿಮೆಯಾಗುವುದು ಮತ್ತಿತರ ಪರಿಣಾಮಗಳು ಉಂಟಾಗಲಿದೆ. ಜಂತು ಹುಳು ಬಾಧೆಯಿಂದ ಉಂಟಾಗುವ ಅಪಾಯಕಾರಿ ಸಮಸ್ಯೆಯನ್ನು ನಿಯಂತ್ರಿಸಲು ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಜಂತು ಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು. ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 6,65,516 ಮಕ್ಕಳಿಗೆ ಜಂತು ನಿವಾರಕ ಮಾತ್ರೆಗಳನ್ನು ನೀಡುವ ಗುರಿ ಹೊಂದಲಾಗಿದೆ. ಪೋಷಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವ ಮೂಲಕ ಮಕ್ಕಳಲ್ಲಿ ಕಂಡು ಬರುವ ಜಂತು ಹುಳು ಬಾಧೆಯನ್ನು ನಿವಾರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆ, (ರಿ.) ಹಾಗೂ ಆಚಾರ್ಯ ಇನ್ಸಿಟ್ಯೂಟ್ ಆಫ್ ಗ್ರಾಜುಯೇಟ್ ಸ್ಟಡೀಸ್ ಕ್ರಿಮಿನಾಲಜಿ ಹಾಗೂ ವಿಧಿ ವಿಜ್ಞಾನ ವಿಭಾಗ, ಬೆಂಗಳೂರು ಇವರ ಸಂಯುಕ್ತಾ ಆಶ್ರಯದಲ್ಲಿ ಜನಸಾಮಾನ್ಯರಿಗಾಗಿ ಹೊಸ ಕ್ರಿಮಿನಲ್ ಕಾನೂನುಗಳ ಉಚಿತ ಆನ್ಸೆನ್ ಅಧ್ಯಯನ ಕಾರ್ಯಾಗಾರ ಡಿಸೆಂಬರ್ 8 ರಿಂದ 29 ವರೆಗೆ ನಡೆಯಲಿದೆ ಎಂದು ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ವಕೀಲರಾದ ಡಾ.ಜಿ ಪುರುಷೋತ್ತಮ್ ತಿಳಿಸಿದ್ದಾರೆ. ಹೊಸ ಕ್ರಿಮಿನಲ್ ಕಾನೂನುಗಳ ಉಚಿತ ಆನ್ಲೈನ್ ಅಧ್ಯಯನ ಪ್ರಾರಂಭೋತ್ಸವ ಉದ್ಘಾಟನೆಯನ್ನು ಟಿ.ವಿ. ಗುರುಪ್ರಸಾದ್, ಐಪಿಎಸ್, ಮಾಜಿ ಡಿಐಜಿ, ಸಿಐಡಿ ಹಾಗೂ ಹೋಂ ಗಾಡ್ಸ್ ಇಲಾಖೆ ಇವರು ನೆರವೇರಿಸಲಿದ್ದಾರೆ. ಡಿಸೆಂಬರ್ 8ರಿಂದ ಡಿಸೆಂಬರ್ 29ರವರೆಗೆ ಪ್ರತಿ ದಿನ ರಾತ್ರಿ 8ರಿಂದ 9 ಗಂಟೆಯವರೆಗೆ ಕಾರ್ಯಕ್ರಮ ಝೂಮ್(Zoom) ಮೂಲಕ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಆಸಕ್ತರು ಇಂದು ರಾತ್ರಿ 8 ಗಂಟೆಗೆ ಸರಿಯಾಗಿ ಈ ಕೆಳಗಿನ ಲಿಂಕ್ ಕ್ಲಿಕ್…
ತುಮಕೂರು: ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಬಹು ದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ಹಾಗೂ ನೀರಿನ ಬಳಕೆ ಶುಲ್ಕವನ್ನು ವಸೂಲಿ ಮಾಡಲು ಪಾಲಿಕೆ ವ್ಯಾಪ್ತಿಯ ಡೇ–ನಲ್ಮ್ ಅಭಿಯಾನದಡಿ ರಚಿತವಾಗಿರುವ ಆಸಕ್ತ ಮಹಿಳಾ ಸ್ವ–ಸಹಾಯ ಸಂಘಗಳು/ಸ್ತ್ರೀಶಕ್ತಿ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಿ ತೆರಿಗೆ ಹಾಗೂ ನೀರಿನ ಬಳಕೆ ಶುಲ್ಕವನ್ನು ವಸೂಲಿ ಕಾರ್ಯವನ್ನು ನಿರ್ವಹಿಸುವ ಮಹಿಳಾ ಸ್ವ–ಸಹಾಯ ಸಂಘಗಳು/ಸ್ತ್ರೀಶಕ್ತಿ ಸಂಘಗಳಿಗೆ ವಸೂಲಾದ ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕದ ಮೊತ್ತದಲ್ಲಿನ ಶೇ.5ರಷ್ಟನ್ನು ಪ್ರೋತ್ಸಾಹಧನ ರೂಪದಲ್ಲಿ ನೀಡಲಾಗುವುದು. ಆಸಕ್ತ ಸಂಘಗಳು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಆಯುಕ್ತರು, ಮಹಾನಗರಪಾಲಿಕೆ, ತುಮಕೂರು ಇವರಿಗೆ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ 109ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ತರಲು, ಮುಖ್ಯವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಇಲ್ಲದೇ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ. ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕೆಂದರೆ ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು. ಧರ್ಮ ಹಾಗೂ ಶಿಕ್ಷಣ ನೀಡುವ ಕೆಲಸವನ್ನು ಸುತ್ತೂರು ಸಂಸ್ಥೆಗಳು ಮಾಡುತ್ತಿವೆ. ಅದಕ್ಕೆ ಅಡಿಪಾಯವನ್ನು ಹಾಕಿದವರು ರಾಜೇಂದ್ರ ಮಹಾಸ್ವಾಮಿಗಳು. ಅವರು ಬಯಸಿದಂತಹ ಸಮಾಜ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ ಎಂದರು. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಒಬ್ಬ ಶ್ರೇಷ್ಠ ಸಂತರು. ಇಡೀ ಸಮಾಜಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದ್ದರು. ಆ ಕಾಲದಲ್ಲಿಯೇ ರಾಜೇಂದ್ರ ಮಹಾಸ್ವಾಮಿಗಳು ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ವಸತಿನಿಲಯ ನಿರ್ಮಿಸಿದ್ದರಿಂದ ಇಂದು ಸುತ್ತೂರು ಮಹಾಸಂಸ್ಥಾನ ಹೆಮ್ಮರವಾಗಿ ಬೆಳೆಯಲು…
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಉಡುಪಿ ಸಾಮಾನ್ಯ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಡಿಸೆಂಬರ್ 11ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಡಿಸೆಂಬರ್ 10ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಒಳನಾಡು: ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ…
ಬೀದರ್: ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಸುರಕ್ಷಾ ಅಧಿಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವಮ್ಮ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಶಿವಮ್ಮನವರು ಸುಮಾರು 18 ವರ್ಷ ಪ್ರಾಥಮಿಕ ಆರೋಗ್ಯ ಕೇಂದ್ರ ಡೂನಗಾಂವ ಎಂ. ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ವಡಗಾಂವನಲ್ಲಿ ಅತ್ಯುತ್ತಮ ಆರೋಗ್ಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಸಂತಪೂರ ಆಸ್ಪತ್ರೆಯಲ್ಲಿ ಡಾ.ಪ್ರವೀಣ್ ಕುಮಾರ್ ಹೂಗಾರ್ ಅವರ ನೇತೃತ್ವದಲ್ಲಿ ಅವರ ಕುಟುಂಬ ವರ್ಗದವರಿಗೆ ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಯಾರೇ ನಿವೃತ್ತಿ ಹೊಂದಿದರೂ, ಹಿರಿಯ ಅಧಿಕಾರಿಯಿಂದ ಡಿ ಗ್ರೂಪ್ ವರೆಗೂ ನಿವೃತ್ತಿ ಹೊಂದಿದವರಿಗೆ ಬೀಳ್ಕೊಡುಗೆ ಸಮಾರಂಭ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಅವರ ಕುಟುಂಬ ವರ್ಗಕ್ಕೆ ಮುಂದಿನ ಜೀವನ ಸುಖಕರವಾಗಲಿ ಎಂದು ಶುಭ ಹಾರೈಸಿದರು. ಶಿವಮ್ಮ ಮಾತನಾಡಿ, ಸಂತಪುರ ಆಸ್ಪತ್ರೆ ಎಲ್ಲ ವೈದ್ಯಾಧಿಕಾರಿಗಳಿಗೂ, ಎಲ್ಲ ಸಿಬ್ಬಂದಿ ವರ್ಗದವರು ನನ್ನನ್ನು ಕರೆದು ಪ್ರೀತಿ ವಾತ್ಸಲ್ಯದಿಂದ ಸನ್ಮಾನ ಮಾಡಿದ್ದು ತುಂಬಾ ಸಂತೋಷವಾಗಿದೆ. ಸಂಸ್ಥೆಯ ವೈದ್ಯಾಧಿಕಾರಿಗಳಿಗೂ ಎಲ್ಲಾ ಸಿಬ್ಬಂದಿ ವರ್ಗದವರು ತುಂಬು…
ತುಮಕೂರು: SSLC ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಪಡಿಸಲು ಪಾವಗಡ ತಾಲ್ಲೂಕಿನಲ್ಲಿ 10 ಕಲಿಕಾಸರೆ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ತಿಳಿಸಿದರು. ಪಾವಗಡದಲ್ಲಿಂದು ಕಲಿಕಾಸರೆ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಲಿಕಾ ಆಸರೆ ಕೇಂದ್ರದ ಸದುಪಯೋಗ ಪಡೆದುಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಕಲಿಕಾ ಆಸರೆ ಕೇಂದ್ರಗಳಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರದಂದು ಸರ್ಕಾರಿ/ಅನುದಾನಿತ ಪ್ರೌಢಶಾಲೆಗಳ ಮಕ್ಕಳಿಗೆ ಓದುವ ಮತ್ತು ಬರವಣಿಗೆಯ ಕೌಶಲ್ಯಗಳನ್ನು ಬೋಧಿಸಲಾಗುವುದು. ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡಬೇಕೆಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಕಲಿಕಾ ಆಸರೆ ಕೇಂದ್ರಗಳಲ್ಲಿ ಅನುಭವಾತ್ಮಕ ಕಲಿಕೆಯ ಮೂಲಕ ಮಕ್ಕಳಿಗೆ ಶಿಕ್ಷಣದ ಜೊತೆ–ಜೊತೆಗೆ ಮಾಹಿತಿ ಮತ್ತು ತಂತ್ರಜ್ಞಾನದ ವೇಗದ ಬದಲಾವಣೆಗಳ ಬಗ್ಗೆ ತಿಳಿಸಲಾಗುವುದು. ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸುವ ಸಲುವಾಗಿ ಪಾಸಿಂಗ್ ಪ್ಯಾಕೇಜ್, ರಸಪ್ರಶ್ನೆ ಕೋಠಿಯನ್ನು ರೂಪಿಸಲಾಗಿದೆಯಲ್ಲದೆ 6 ವಿಷಯಗಳ ಮಾದರಿ ಪ್ರಶ್ನೆಪತ್ರಿಕೆಗಳನ್ನು ತಯಾರಿಸಿ…
ಸರಗೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಕನ್ನಡ ಜ್ಯೋತಿ ರಥ’ವು ತಾಲ್ಲೂಕು ಆಡಳಿತ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ತಹಶೀಲ್ದಾರ್ ಮೋಹನಕುಮಾರಿ, ಇಓ ಪ್ರೇಮಕುಮಾರ್, ಕಬಿನಿ ನಿರಾವರಿ ಉಪವಿಭಾಗ ಎಇಇ ಕೆ ಉಷಾ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಅವರು ಗುಂಡ್ಲುಪೇಟೆ ತಾಲೂಕಿನಿಂದ ಬಂದ ಶನಿವಾರ ದಂದು ಪಟ್ಟಣದ ಮಹಾವೀರ ಸರ್ಕಲ್ ಬಳಿ ಇರುವ ಗಣಪತಿ ದೇವಸ್ಥಾನದ ಕನ್ನಡ ಜ್ಯೋತಿ ರಥವನ್ನು ಭುವನೇಶ್ವರಿ ಪ್ರತಿಮೆಗೆ ಹೂಮಾಲೆ ಹಾಕಿ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬರಮಾಡಿಕೊಂಡರು. ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಕನ್ನಡ ರಥ ಸಂಚರಿಸಿದಲ್ಲೆಲ್ಲ ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ನೆರೆದು ಸ್ವಾಗತವನ್ನು ಕೋರಿದ್ದಾರೆ. ಇದು ಕನ್ನಡಿಗರಲ್ಲಿ ಸ್ವಾಭಿಮಾನ ತುಂಬುವಲ್ಲಿ ಮತ್ತು ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ’ ಎಂದರು. ಕನ್ನಡ ಭಾಷೆ ಮತ್ತು…
ತುಮಕೂರು: ಬೆಳಧರ ಶಾಲೆಯ ಆವರಣದ ಒಳಗೆ ಅಕ್ರಮವಾಗಿ ವಾಹನ ಪಾರ್ಕಿಂಗ್ ಮಾಡುತ್ತಿರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳೀಯ ನಾಗರಿಕರು ಒತ್ತಾಯಿಸುತ್ತಿದ್ದರೂ ಈವರೆಗೆ ಕ್ರಮಕೈಗೊಂಡಿಲ್ಲ, ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರವೇ ಕ್ರಮಕೈಗೊಳ್ಳಬೇಕು ಎಂದು ಕಾಳಜಿ ಪೌಂಡೇಶನ್ (ರಿ) ತುಮಕೂರು ಹಾಗೂ ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ. ಶಾಲೆಯ ಆವರಣದೊಳಗೆ ಖಾಸಗಿ ವಾಹನಗಳ ಪ್ರವೇಶದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಶಾಲಾ ಆವರಣಕ್ಕೆ ವಾಹನಗಳು ನುಗ್ಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಗೆ ಅಪಾಯಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಮೀಸಲಾಗಬೇಕಾದ ಶಾಲಾ ಮೈದಾನ ಖಾಸಗಿ ವಾಹನಗಳ ನಿಲುಗಡೆ ತಾಣವಾಗಿ ಬದಲಾಗಿದೆ. ವಾಹನ ನಿಲುಗಡೆ ಮಾಡದಂತೆ ಫಲಕಗಳನ್ನು ಹಾಕಲಾಗಿದ್ದರೂ, ಕ್ಯಾರೇ ಅನ್ನದೇ ವಾಹನಗಳನ್ನು ಶಾಲೆಯ ಆಟದ ಮೈದಾನದಲ್ಲಿ ಪಾರ್ಕ್ ಮಾಡಲಾಗುತ್ತಿದೆ. ವಾಹನಗಳ ಪಾರ್ಕಿಂಗ್ ಮಾಡಿದ ಬಳಿಕ ಉಳಿದ ಜಾಗದಲ್ಲಿ ವಿದ್ಯಾರ್ಥಿಗಳು ತಮ್ಮ ಚಟುವಟಿಕೆ ನಡೆಸುವಂತಾಗಿದೆ ಇದರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಉಪ ಲೋಕಾಯುಕ್ತರು, ಪಿಡಿಓ ಮೌಖಿಕ ಸೂಚನೆ ನೀಡಿದ್ದರೂ, ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.…