Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಕಲ್ಪತರುನಾಡು ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕು ಆಂಧ್ರ ಗಡಿಭಾಗದಲ್ಲಿರುವ ರಂಟವಾಳಲು ಗ್ರಾಮಪಂಚಾಯ್ತಿ ವ್ಯಾಪ್ತಿಗೆ ಬರುವ ಪುಲಮಘಟ್ಟ ಗ್ರಾಮದಲ್ಲಿ ಅದ್ಧೂರಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಡಾ.ರಂಗಾರೆಡ್ಡಿ ಕೋಡಿರಾಂಪುರ ರವರ ಹೆಸರನ್ನು ಮುಖ್ಯರಸ್ತೆಗೆ ನಾಮಕರಣ ಮಾಡಲಾಯಿತು. ಇದರ ಉದ್ಘಾಟನೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಮತ್ತು ಸಮತಾ ಸೈನಿಕ ದಳ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎಂ ವೆಂಕಟಸ್ವಾಮಿ ನೆರವೇರಿಸಿದರು. ಮಧುಗಿರಿ ಉಪವಿಭಾಗಾಧಿಕಾರಿಗಳಾದ ಶಿವಪ್ಪ ಗೊಟ್ಟೂರು ಚಾಲನೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಟವೊಳಲು ಗ್ರಾಮಪಂಚಾಯಿತಿ ಅಧ್ಯಕ್ಷರಾದ ರಂಜಿತಾ ರಂಗನಾಥ್ ರವರು ವಹಿಸಿದ್ದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಾದ ಧನಂಜಯ ಮತ್ತು ಕರುನಾಡ ಸೇನೆಯ ಅಧ್ಯಕ್ಷರಾದ ಪು.ನಾ.ಭರತ ತಗ್ಗಿನಮನೆ, ಪಿ.ಎಸ್.ರಂಗನಾಥ ಬಾಬು .ಆರ್.ಕೃಷ್ಣಪ್ಪ, ಜಗದೀಶ್.ಮಹೇಶ್, ಸ್ವಾಮಿರಾಜ, ಅರಸೇಗೌಡ, ತಿಲಕ್ ಭಾಗವಹಿಸಿದ್ದರು. ಸಂಜೆಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ನೆ.ಲ.ನರೇಂದ್ರಬಾಬು, ರಾಘವೇಂದ್ರಶೆಟ್ಟಿ, ಬೆಂಗಳೂರು ನಗರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಜನಪರ ವೇದಿಕೆಯ ಅಧ್ಯಕ್ಷರಾದ ಎಂ.ಡಿ.ಜಾಕೀರ್, ಸರ್ವ ಸಂಘಟನೆಗಳ ಮುಖಂಡರಾದ ಸಿ.ಎಂ.ಶಿವಕುಮಾರ ನಾಯಕ್, ಮಾಜಿ ಪ್ರಧಾನರಾದ…
ಬೆಳಗಾವಿ: ಬೆಳಗಾವಿಯಲ್ಲಿ ಒಂದೆಡೆ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮತ್ತೊಂದೆಡೆ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ನರೇಗಾ ಕಾರ್ಮಿಕರ ಶ್ರಮದಾನದಿಂದ ನಿರ್ಮಾಣ ಆಗುತ್ತಿರುವ “ಸೈನ್ಸ್ ಪಾರ್ಕ್” ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಸುವರ್ಣ ವಿಧಾನಸೌಧ ಪಶ್ಚಿಮ ಭಾಗದ ಮುಂದೆ ಸುಮಾರು 1 ಎಕರೆ ಪ್ರದೇಶದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಅವರ ವಿಶೇಷ ಕಾಳಜಿಯಿಂದ ಬಯಲು ವಿಜ್ಞಾನ ಉದ್ಯಾನವೊಂದು ತಲೆ ಎತ್ತುತ್ತಿದೆ. ಬೆಂಗಳೂರಿನ ಗ್ಯಾಂತ್ರೋ ಕಂಪನಿಯು, ಸೌಧಕ್ಕೆ ಜಾಗ ಕೊಟ್ಟ ಹಲಗಾ, ಬಸ್ತವಾಡ ಗ್ರಾಮದ ನರೇಗಾ ಕೂಲಿ ಕಾರ್ಮಿಕರ ನೆರವಿನೊಂದಿಗೆ ಪಾರ್ಕ್ ನಿರ್ಮಾಣ ಕಾರ್ಯ ಕೈಗೆತ್ತಿಕೊಂಡಿದೆ. ಗಣಿತ, ಭೌತಶಾಸ್ತ್ರ, ಜೀವಶಾಸ್ತ್ರ, ಭೂಗೋಳದ ಪ್ರಮುಖ ಅಂಶಗಳ ಸುಮಾರು 22 ಪ್ರಾಯೋಗಿಕ ಮಾದರಿಗಳನ್ನು ಆಕರ್ಷಣೀಯವಾಗಿ ಅಳವಡಿಸಲಾಗುತ್ತಿದ್ದು, ಮಕ್ಕಳಲ್ಲಿ ತೀವ್ರ ಕುತೂಹಲದ ಜತೆ ಹಲವು ನಿಗೂಢತೆಗಳಿಗೆ ಉತ್ತರವೂ ದೊರೆಯುತ್ತದೆ. ಅಲ್ಲದೇ ಚಟುವಟಿಕೆ ಆಧಾರಿತ ಕಲಿಕೆಗೆ ಅನುಕೂಲವಾಗುವಂತೆ ವಿಜ್ಞಾನ ಪಾರ್ಕ್ ವಿನ್ಯಾಸಗೊಳಿಸಲಾಗುತ್ತಿದೆ. ಪಾರ್ಕ್ನಲ್ಲಿ ಏನೇನಿರುತ್ತೆ..? ನ್ಯೂಟನ್ ಹಾಗೂ ಆರ್ಕಿಮಿಡಿಸ್…
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ 19ರವರೆಗೆ 9 ದಿನ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನಕ್ಕೆ 19 ಕೋಟಿ ರೂ. ವೆಚ್ಚವಾಗಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ 7 ಕೋಟಿ ರೂ. ಖರ್ಚಾಗಲಿದ್ದು, ಹಿಂದಿನ ವರ್ಷ ಒಟ್ಟು 18 ಕೋಟಿ ಖರ್ಚಾಗಿತ್ತು. ಆ ವೆಚ್ಚವನ್ನು ಆಧರಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ. ಇನ್ನೂ ನಿರ್ಮಾಣವಾಗದ ಶಾಸಕರ ಭವನ: ಪ್ರತೀ ವರ್ಷವೂ ಅಧಿವೇಶನದ ಖರ್ಚಿನಲ್ಲಿ ವಾಸ್ತವ್ಯಕ್ಕೆ ಸಿಂಹ ಪಾಲಿದೆ. ಈ ಹಣ ಉಳಿಸುವ ನಿಟ್ಟಿನಲ್ಲಿ ಸುವರ್ಣ ವಿಧಾನಸೌಧದ ಬಳಿ ಶಾಸಕರ ಭವನ ನಿರ್ಮಿಸುವ ದಶಕದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ. ಭದ್ರತೆಗೆ ₹5 ಕೋಟಿ, ಊಟಕ್ಕೆ ₹2.80 ಕೋಟಿ ವೆಚ್ಚ: ಭದ್ರತೆಗೆ 5 ಕೋಟಿ ರೂ ಖರ್ಚಾಗಲಿದೆ. ಸಚಿವ, ಶಾಸಕ, ಅಧಿಕಾರಿ ಹಾಗೂ ಸಿಬ್ಬಂದಿಯ ಊಟದ ಖರ್ಚಿಗೆ 2.80 ಕೋಟಿ ರೂ ಖರ್ಚಾಗಲಿದೆ.…
ತುಮಕೂರು: ಯುವಕರು ಸುಸ್ಥಿರ ದೇಶಕಟ್ಟುವ ದೃಢ ಸಂಕಲ್ಪ ಹೊಂದಿರಬೇಕು. ದೇಶಭಕ್ತಿಯಿಂದ ಅಭಿವೃದ್ಧಿಯೆಡೆಗೆ ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ಆಂಜಿನಪ್ಪ ಟಿ.ಎಸ್. ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕಲ್ಪತರು ರೋವರ್ಸ್ ಮತ್ತು ರೇಂಜರ್ಸ್ ಘಟಕವು ಶುಕ್ರವಾರ ಆಯೋಜಿಸಿದ್ದ ವಾರ್ಷಿಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಶಿಕ್ಷಣ ಮತ್ತು ದೈಹಿಕ ಚಟುವಟಿಕೆಗಳತ್ತ ಗಮನ ಹರಿಸಬೇಕು. ಶಿಸ್ತಿನ ಬದುಕು ರೂಪಿಸಿಕೊಂಡಾಗ ವೃತ್ತಿ ಬೆಳವಣಿಗೆ ಮತ್ತು ಸಾಮಾಜಿಕ ಕೊಡುಗೆಗಳಿಗೆ ಅಡ್ಡಿಯಾಗುವಂತಹ ಗೊಂದಲಗಳಿಂದ ದೂರಾಗಬಹುದು. ಸ್ಕೌಟ್ಸ್ ಮತ್ತು ಗೈಡ್ಸ್ 1907ರಲ್ಲಿ 25 ವಿದ್ಯಾರ್ಥಿಗಳೊಂದಿಗೆ ಪ್ರಾರಂಭವಾಯಿತು. ಈಗ ಜಾಗತಿಕವಾಗಿ ಬೆಳೆದಿದೆ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಶಿಸ್ತು, ಸಮಯ ಪಾಲನೆ ಮುಖ್ಯ ಎಂದು ತಿಳಿಸಿದರು. ಗೈಡ್ಸ್ ನ ಜಿಲ್ಲಾ ಆಯುಕ್ತೆ ಸುಭಾಷಿಣಿ ಆರ್.ಕುಮಾರ್ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವೃತ್ತಿಪರ ಶಿಸ್ತಿನ ನಿಯಮಗಳ ಮೂಲಕ ಆರೋಗ್ಯಕರ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಪ್ರತಿಷ್ಠಿತ ಸ್ಥಾನವನ್ನು…
ತುಮಕೂರು: ತುಮಕೂರು ಜಿಲ್ಲೆಗೆ ಸರಬರಾಜು ಆಗುವ ಹೇಮಾವತಿ ನದಿ ನೀರನ್ನು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮಾಗಡಿಗೆ ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು ಇದನ್ನು ವಿರೋಧಿಸಿ, ಎಲ್ಲಿಂದ ಯೋಜನೆ ಕಾಮಗಾರಿ ಪ್ರಾರಂಭವಾಗುತ್ತೊ ಅಲ್ಲಿಂದ ಪಾದಯಾತ್ರೆ ಶುರುಮಾಡಿದ್ದೇವೆ ಎಂದು ಜೆಡಿಎಸ್ ವಿರೋಧ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ತಿಳಿಸಿದ್ದಾರೆ. ಯೋಜನೆ ವಿರೋಧಿಸಿ ಆರಂಭವಾಗಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದು ನಮ್ಮಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆ. ಗುಬ್ಬಿ ತುಮಕೂರು ಸೇರಿದಂತೆ ಎಲ್ಲಾ ತಾಲ್ಲೂಕುಗಳಿಗೂ ತೊಂದರೆಯಾಗಲಿದೆ. ಈ ಯೋಜನೆ ನಿಲ್ಲಿಸ ಬೇಕು ಎಂದು ಡಿ.ಕೆ.ಶಿವಕುಮಾರ್ ಅವರನ್ನ ಹಲವು ಭಾರಿ ಭೇಟಿಯಾಗಿದ್ದೇವೆ. ಅವರ ಧೋರಣೆ ಏನು ಎಂಬುದು ಗೊತ್ತಾಗಿದೆ ಎಂದರು. ನೀವು ಏನೇಮಾಡಿದ್ರೂ ನೀರು ತೆಗೆದುಕೊಂಡು ಹೋಗ್ತಿವಿ ಅನ್ನೋದು ಅವರ ಧೋರಣೆ. ನೀರನ್ನ ಅದ್ಹೇಗೆ ತೆಗೆದುಕೊಂಡು ಹೋಗ್ತಿರಾ…ನೋಡೆ ಬಿಡೋಣ… ತುಮಕೂರು ಜಿಲ್ಲೆಯವರು ಏನು ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದರು. ಜಿಲ್ಲೆಯಲ್ಲಿ ಇಬ್ಬರು ಸಚಿವರು ಏಳು ಜನ ಕಾಂಗ್ರೆಸ್ ಶಾಸಕರಿದ್ದಾರೆ. ನಿಮಗೇನಾದ್ರು…
ತುಮಕೂರು: ಪ್ರೀತಿಸಿದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಣೆ ಆರೋಪ ಹಿನ್ನೆಲೆಯಲ್ಲಿ ಹುಡುಗಿ ಮನೆ ಮುಂದೆಯೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ತುಮಕೂರಿನ ಜಯನಗರ ಬಳಿಯ ಚನ್ನಪ್ಪನಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ (32), ಆತ್ಮಹತ್ಯೆಗೆ ಶರಣಾದವನ್ನಾಗಿದ್ದಾನೆ. ಟಿಟಿ ವಾಹನದ ಚಾಲಕನಾಗಿದ್ದ ಮಂಜುನಾಥ್, ಕೆಲ ತಿಂಗಳಿಂದ ಮಂಜುನಾಥ್ ಮನೆ ಪಕ್ಕದ ಮನೆ ಹುಡುಗಿಯನ್ನ ಲವ್ ಮಾಡ್ತಿದ್ದನು. ಇಬ್ಬರು ಮದುವೆಯಾಗಲು ಒಪ್ಪಿದ್ರು, ಮದುವೆ ಮಾಡಿಕೊಡುವಂತೆ ಯುವತಿ ಮನೆಯವರನ್ನ ಕೇಳಿದ್ದ ಮಂಜುನಾಥ ಗೆ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದ್ದರು. ಅಪ್ರಾಪ್ತ ಯುವತಿ ಹಿನ್ನೆಲೆ, ಮದುವೆ ಮಾಡಿಕೊಡಲು ನಿರಾಕರಣೆ ಎಂದು ಹೇಳಲಾಗ್ತಿದೆ. ತಡರಾತ್ರಿ ಯುವತಿ ಮನೆ ಮುಂದೆಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ ,ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಕ್ಕಳೊಂದಿಗೆ ಮುಕ್ತ ಸಂವಾದ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ಭಾಗವಹಿಸಿ ಮಾತನಾಡಿ, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕರಾದ ಡಾ.ಎಂ.ಆರ್.ರವಿ, ಜಿಲ್ಲಾಧಿಕಾರಿಗಳಾದ ಡಾ.ಎಂ.ಎಸ್. ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ಶ್ವೇತಾ, ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಕರೆಕೊಟ್ಟರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ವತಿಯಿಂದ ಸ್ವರ್ಣಸಂದ್ರದಲ್ಲಿ ಆಯೋಜಿಸಿದ್ದ ಮನೆ ಮನೆಗಳಲ್ಲಿ ಕನ್ನಡ ಬಾವುಟ ಕಾರ್ಯಕ್ರಮಕ್ಕೆ ಬಾವುಟ ಹಾರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು. ಮನೆಮನೆಗಳ ಮೇಲೆ ಕನ್ನಡ ಬಾವುಟ ಕಟ್ಟುವ ಕಾರ್ಯಕ್ರಮ ಕೇವಲ ಮಂಡ್ಯ ನಗರಕ್ಕೆ ಸೀಮಿತವಾಗದೇ ಜಿಲ್ಲೆಯ ಎಲ್ಲರ ಮನೆಮನೆಗಳ ಮೇಲೂ ಕನ್ನಡ ಬಾವುಟ ಹಾರಾಡಬೇಕು. ತಾಲೂಕು ಕೇಂದ್ರ, ಗ್ರಾಮ ಪಂಚಾಯತಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸಿ ಕನ್ನಡದ ಹಬ್ಬವನ್ನು ಮನೆಯ ಹಬ್ಬದ…
ಪಾವಗಡ: 2025 ಫೆಬ್ರವರಿ 8 ಮತ್ತು 9 ನೇ ತಾರೀಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಐತಿಹಾಸಿಕ ವಾಲ್ಮೀಕಿ ಜಾತ್ರೆಯಲ್ಲಿ ಪಾವಗಡ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮನವಿ ಮಾಡಿದರು. ಪಾವಗಡ ತಾಲ್ಲೂಕು ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ನಡೆಸಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಾಲ್ಮೀಕಿ ಸಮುದಾಯದ ಜಾಗೃತಿಗಾಗಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಪಾವಗಡ ತಾಲೂಕು ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಕರವೇ ಲಕ್ಷ್ಮೀನಾರಾಯಣ್ ಹಾಗೂ ಸಹ ಸಂಚಾಲಕರಾಗಿ ಬೇಕರಿನಾಗರಾಜ್ ಅವರನ್ನು ಆಯ್ಕೆ ಮಾಡಲಾಯಿತು. ನಿಕಟಪೂರ್ವ ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಮೂರ್ತಿರವರು ಇಂದಿನ ವರ್ಷ ವಾಲ್ಮೀಕಿ ಜಾತ್ರೆಗೆ ಬಂದಿರುವ ದೇಣಿಗೆ ವಿವರವನ್ನು ಸಭೆಯಲ್ಲಿ ತಿಳಿಸಿದರು. ಪೂರ್ವಭಾವಿ…
ತುಮಕೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಎಪಿಎಂಸಿ ಬಟವಾಡಿ ಶಾಖೆಯಲ್ಲಿ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಅಡಿಯಲ್ಲಿ ನೋಂದಾಯಿತ ಲಕ್ಷ್ಮೀದೇವಿ ಅವರ ನಿಧನದ ನಂತರ, ಯೋಜನೆಯ ಪ್ರಕಾರ 2 ಲಕ್ಷ ರೂ. ಪರಿಹಾರವನ್ನು ಕುಟುಂಬದ ನಾಮಿನಿ ಸದಸ್ಯರಿಗೆ ಚೆಕ್ ಮೂಲಕ ವಿತರಿಸಲಾಯಿತು. ಈ ಸಂದರ್ಭದಲ್ಲಿ SBI ರಿಜನಲ್ ಮ್ಯಾನೇಜರ್ (AGM) ಸುರೇಂದ್ರ ಟಿ.ಕೆ., ಶಾಖಾ ಮ್ಯಾನೇಜರ್ ಎಸ್. ಅಮೀರ್ ಉನ್ನೀಸ, RBO ಫೈನಾನ್ಸಿಯಲ್ ಇನ್ಕ್ಲೂಷನ್ ಮ್ಯಾನೇಜರ್ ರಾಹುಲ್, ಹಾಗೂ ಇತರ ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಯೋಜನೆಯ ಅಡಿಯಲ್ಲಿ ನೀಡುವ ಈ ಪರಿಹಾರವು ನಿಧನ ಹೊಂದಿದವರ ಕುಟುಂಬಕ್ಕೆ ಆರ್ಥಿಕವಾಗಿ ಬೆಂಬಲ ನೀಡಲು ಮಹತ್ವದ ಪಾತ್ರ ವಹಿಸುತ್ತಿದೆ. ಸ್ಥಳೀಯರು ಹಾಗೂ ಕುಟುಂಬ ಸದಸ್ಯರು ಬ್ಯಾಂಕ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx