Subscribe to Updates
Get the latest creative news from FooBar about art, design and business.
- ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ: ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
- ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
- ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
Author: admin
ಸರಗೂರು: ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳಮುಚ್ಚುತ್ತಾರೆ. ಆದರೆ, ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ ಇದು ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬಿದರಹಳ್ಳಿ ಗ್ರಾಮದಿಂದ ತಾಲೂಕಿನ ಗಡಿ ಭಾಗದ ಗೆಂಡತ್ತೂರು ಗ್ರಾಮದವರಗೆ ರಸ್ತೆ ದುರಸ್ತಿ ಮಾಡುವಂತೆ ಸೋಮವಾರದಂದು ಕಂಚನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭೀಮನ ಕೊಲ್ಲಿ ಶುಂಠಿ ಬೆಳೆಗಾರರ ಸಭೆಗೆ ತೆರಳುತ್ತಿದ್ದ ವೇಳೆ ರಸ್ತೆ ಹಳ್ಳಗುಂಡಿಗಳನ್ನ ನೋಡಿ ದಿಢೀರನೆ ಹಳ್ಳ ಕೊಳ್ಳಗಳ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಯಿತು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬರುವ ರಸ್ತೆ ಅಧಿಕಾರಿಗಳ ಕಣ್ಣಿಗೆ ಕಾಣುತ್ತದೆ ಬಿದರಹಳ್ಳಿ ಗ್ರಾಮ ಮಾರ್ಗವಾಗಿ ಮೂರ್ಬಾಂದು, ಕೆಂಚನಹಳ್ಳಿ, ಎನ್.ಬೇಗೂರು, ಹೊಸಹಳ್ಳಿ, ಗೆಂಡತ್ತೂರು, ಹಳ್ಳಿಯ ರೈತರು ದಿನನಿತ್ಯ ತಿರುಗಾಡುತ್ತಿದ್ದಾರೆ. ಆದರೆ ತಾಲೂಕಿನ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಹಾಗೂ…
ತುಮಕೂರು: ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿ ಹುಯಿಲ್ ದೊರೆ ಶ್ರೀ ಶಾರದಾ ಇಂಟರ್ನ್ಯಾಷನಲ್ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿಗಳು ಭಾನುವಾರ ಚನ್ನಪಟ್ಟಣದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಥಾ ವಿಭಾಗದಲ್ಲಿ ಹರ್ಷಿತ್ ಆರ್ , ಮಾರುತಿ, ಶ್ರೀ ಸ್ಕಂದ ಪ್ರಥಮ ಸ್ಥಾನ ಹಾಗೂ ಹಿತೇಶ್ ದ್ವಿತೀಯ ಸ್ಥಾನ ಕುಮಿತೆ ವಿಭಾಗದಲ್ಲಿ ನಿಶ್ಚಿತ್, ಮಾರುತಿ, ಪ್ರಥಮ ಸ್ಥಾನ ಹರ್ಷಿತ್ ಪಿ. ದ್ವಿತೀಯ ಸ್ಥಾನ ಹಾಗೂ ಶ್ರೀ ಸ್ಕಂದ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ರಂಗನಾಥ್ ಜೆ, ಕಾರ್ಯದರ್ಶಿಗಳಾದ ಬಾಲಕೃಷ್ಣ, ಪ್ರಾಂಶುಪಾಲ ನದೀಮ್ ಅಜ್ಮತ್, ಕರಾಟೆ ತರಬೇತುದಾರರಾದ ಮಧು ವೈ, ಎನ್, ಚಿದಾನಂದ, ಅಭಿಷೇಕ್ ಬಿ.ಆರ್. ಸೇರಿದಂತೆ ಶಾಲೆಯ ಸಹ ಶಿಕ್ಷಕರು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಗೃಹಲಕ್ಷ್ಮಿ ಸೇರಿದಂತೆ ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಂಚು ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು. ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು ನಡೆಸಲಿ ಎಂದು ಗೃಹಲಕ್ಷ್ಮಿಯನ್ನು ನೀಡಲಾಗುತ್ತಿದೆ. ಇದನ್ನು ನಿಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಯತ್ನಿಸುತ್ತಿವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ವಿಜಯಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ಕೊಟ್ಟಿರುವ ಹಿನ್ನೆಲೆಯಲ್ಲಿ ತಲೆದೋರಿರುವ ವಿವಾದವನ್ನು ಜೀವಂತವಾಗಿ ಇಡುವಂತೆ ಹಾಗೂ ನಿರಂತರವಾಗಿ ಪ್ರತಿಭಟನೆ ನಡೆಸುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಅಂತ ವರದಿಯಾಗಿದೆ. ರಾಜ್ಯದಲ್ಲಿ ವಕ್ಫ್ ಬೋರ್ಡ್ ನೋಟಿಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಉಪ ಚುನಾವಣೆಯಲ್ಲೂ ವಕ್ಫ್ ಬೋರ್ಡ್ ನೋಟಿಸ್ ವಿಚಾರವನ್ನು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲೂ ಇದು ಅನುಕೂಲವಾಗಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಇದರ ಸಾಧಕ ಬಾಧಕ ಪರಿಶೀಲನೆ ನಡೆಸಲು ಈಗಾಗಲೇ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವಿಜಯಪುರ ರೈತರಿಗೆ ವಕ್ಫ್ ನೋಟಿಸ್ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕಾರ ಮಾಡಿದೆ. ಕೇಂದ್ರ…
ಹಾವೇರಿ: ರಾಜ್ಯದ ಮೂರು ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2.68 ಲಕ್ಷ ರೂ. ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸವಣೂರಿನ ಸುಭಾಷ್ ಗಡ್ಡೆಪ್ಪನವರ್ ಎಂಬುವವರ ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿತ್ತು. ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಈ ಹಣ ಸಂಗ್ರಹಿಸಲಾಗಿದೆ ಎಂದು ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದರು. ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿದ್ದ ಒಟ್ಟು 2.68 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಸುಭಾಷ್ ಗಡ್ಡೆಪ್ಪನವರ್ ವಿರುದ್ಧ ಎನ್ ಸಿಆರ್ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: 10 ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 118 ಶಾಲಾ ವಾಹನ ಚಾಲಕರ ವಿರುದ್ಧ ಡ್ರಂಕ್ & ಡ್ರೈವ್ ಪ್ರಕರಣ ದಾಖಲಾಗಿದ್ದು, ಎಲ್ಲಾ ಚಾಲಕರ ವಾಹನ ಚಾಲನೆ ಪರವಾನಗಿ ರದ್ದುಗೊಳಿಸಲಾಗಿದೆ. ಜನವರಿಯಲ್ಲಿ 16, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್ನಲ್ಲಿ 26, ಸೆಪ್ಟೆಂಬರ್ ನಲ್ಲಿ 22, ನವೆಂಬರ್ ನಲ್ಲಿ 24 ಪ್ರಕರಣ ದಾಖಲಾಗಿತ್ತು. ಕಳೆದ 10 ತಿಂಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆ ವೇಳೆ ನಿಯಮ ಮೀರಿ ಬಸ್ನಲ್ಲಿ ಹೆಚ್ಚುವರಿ ಶಾಲಾ ಮಕ್ಕಳ ಸಾಗಾಟ ಮಾಡಿದ್ದು ಕೂಡ ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಟ್ರ್ಯಾಕ್ಟ್ ಶಾಲಾ ವಾಹನಗಳ ಚಾಲಕರಿಂದಲೇ ಹೆಚ್ಚು ರೂಲ್ಸ್ ಬ್ರೇಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪೊಲೀರು ಆಯಾ ಶಾಲಾ ಆಡಳಿತ ಮಂಡಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ಮಕ್ಕಳ ಕೈಗೆ ಪೆನ್ನಿನ ಬದಲು ತಲ್ವಾರ್ ನೀಡಿ ಎಂದು ಸ್ವಾಮೀಜಿಯೊಬ್ಬರು ಹೇಳಿರುವುದು ಸರಿಯಲ್ಲ. ಇದರ ವಿರುದ್ಧ ಯಾವ ಸೆಕ್ಷನ್‌ಗಳಡಿ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬುದನ್ನು ಪರಿಶೀಲನೆ ನಡೆಸುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಗುರುಗಳು ಧರ್ಮವನ್ನು ಪ್ರಚಾರ ಮಾಡಬೇಕು. ಎಲ್ಲರೂ ಧಾರ್ಮಿಕ ನಾಯಕರಿಗೆ ಗೌರವ ಕೊಟ್ಟು ಕಾಲಿಗೆ ಬೀಳುತ್ತೇವೆ. ಪೂಜ್ಯನೀಯ ಸ್ಥಾನದಿಂದ ನೋಡುತ್ತೇವೆ. ಅವರು ಎಲ್ಲರನ್ನೂ ಸಮಾನವಾಗಿ ನೋಡಬೇಕು. ಅಂತಹವರು ಪ್ರಚೋದನೆಯ ಮಾತುಗಳನ್ನಾಡುವುದು ಸೂಕ್ತವಲ್ಲ ಎಂದರು. ಕಾವಿ ಬಟ್ಟೆ ಹಾಕಿದವರು, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮದ ಮುಖಂಡರಾದರೂ ನಿಷ್ಪಕ್ಷಪಾತವಾಗಿರಬೇಕು. ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಚಿಕಿತ್ಸೆ ಹಿನ್ನೆಲೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಸದ್ಯ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರಿಗೆ ಸರ್ಜರಿ ನಡೆಸುವುದು ಬಹುತೇಕ ಫಿಕ್ಸ್ ಆಗಿದೆ. ಹೈಕೋರ್ಟ್ ದರ್ಶನ್ ಗೆ ಚಿಕಿತ್ಸೆಗೆಂದು ಮಧ್ಯಂತರ ಜಾಮೀನು ನೀಡಿದೆ. ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ ಗೆ ಫಿಜಿಯೋಥೆರಪಿ ಜೊತೆ ಸರ್ಜರಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿದ್ದಾರೆ. ಹಿನ್ನೆಲೆಯಲ್ಲಿ ದರ್ಶನ್ ಸರ್ಜರಿಗೆ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಗೆ ಸರ್ಜರಿ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಜೊತೆ ವೈದ್ಯರು ಚರ್ಚೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿಯೇ ದರ್ಶನ್ ಶೀಘ್ರದಲ್ಲೇ ಸರ್ಜರಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯವುಂಟಾಗಿದೆ ಎಂದು ವರದಿ ತಿಳಿಸಿದೆ. ಏರ್ ಪೋರ್ಟ್ ನಲ್ಲಿ ಬೆಳಿಗ್ಗೆಯಿಂದ ದಟ್ಟವಾದ ಮಂಜುಮುಸುಕಿರುವ ಹಿನ್ನೆಲೆಯಲ್ಲಿ ವಿಮಾನ ಹಾರಾಟಕ್ಕೆ ಅಡೆತಡೆಯುಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. 10ಕ್ಕೂ ಹೆಚ್ಚು ವಿಮಾನಗಳ ಟೇಕಾಫ್ , ಲ್ಯಾಂಡಿಂಗ್ ನಲ್ಲಿ ವ್ಯತ್ಯಯವಾಗಿದೆ. ಏರ್ ಪೋರ್ಟ್ ಹಾಗೂ ಸುತ್ತಮುತ್ತ ಸಂಪೂರ್ಣವಾಗಿ ದಟ್ಟ ಮಂಜಿನಿಂದ ಆವೃತಗೊಂಡಿದ್ದು, ಗೋಚರತೆಯಲ್ಲಿ ಸ್ಪಷ್ಟತೆ ಇಲ್ಲದೇ ಹಲವು ವಿಮಾನಗಳು ಲ್ಯಾಂಡ್ ಮಾಡಲಾಗದೇ ವಾಪಾಸ್ ತೆರಳಿವೆ. ಕೆಐಎದಲ್ಲಿ ಲ್ಯಾಂಡ್ ಆಗಬೇಕಿದ್ದ ಇಂಡಿಗೋ ವಿಮಾನವೊಂದು ದಟ್ಟ ಮಂಜಿನಿಂದಾಗಿ ಲ್ಯಾಂಡ್ ಮಾಡಲು ಸಾಧ್ಯವಾಗದೇ 45 ನಿಮಿಷಗಳ ಕಾಲ ಆಗಸದಲ್ಲಿಯೇ ಹಾರಾಟ ನಡೆಸಿದೆ. ಆದಾಗ್ಯೂ ವಾತಾವರಣ ಸುದಾರಿಸಿದ ಕಾರಣಕ್ಕೆ ಹೈದರಾಬದ್ ಏರ್ ಪೋರ್ಟ್ ಗೆ ಹಿಂತಿರುಗಿದೆ. ಇದರಿಂದಾಗಿ ಪ್ರಯಾಣಿಕರು ಸಂಕಷ್ಟ ಪಡುವ ಸ್ಥಿತಿಯುಂಟಾಗಿದೆ. ಕೆಐಎನಲ್ಲಿ ಮಂಜು ಕವಿದ ವಾತಾವರಣದಿಂದಾಗಿ 5 ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಅಮರಾವತಿ: ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ವಿರುದ್ಧ ಮಾಜಿ ಸಿಎಂ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಬಾಬು ನಾಯ್ಡು ಜನರನ್ನು ವಂಚಿಸಲು ಹಲವು ಅವತಾರಗಳನ್ನು ಎತ್ತಿದ್ದಾರೆ ಎಂದು ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ. ಮೊಬೈಲ್ ಫೋನ್‌ಗಳು ಮತ್ತು ಕಂಪ್ಯೂಟರ್ ಗಳನ್ನು ತಾವೇ ಆವಿಷ್ಕರಿಸಿದ್ದಾಗಿ ನಾಯ್ಡು ಅವರು ಎರಡು ದಶಕಗಳಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು. ಎಕ್ಸ್/ಟ್ವಿಟರ್ ನಲ್ಲಿ ಬರೆದುಕೊಂಡಿರುವ ಜಗನ್, ಚಂದ್ರಬಾಬು ನಾಯ್ಡು ಅವರು ಜನರನ್ನು ವಂಚಿಸುವುದಕ್ಕಾಗಿ ಕಣ್ಣಿಗೆ ಕಟ್ಟುವಂತೆ ತಂತ್ರಗಳನ್ನು ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಹಲವು ಅವತಾರಗಳನ್ನು ಧರಿಸಲಿದ್ದಾರೆ. ಇತ್ತೀಚೆಗಿನ ಶ್ರೀಶೈಲಂ ಸೀ–ಪ್ಲೇನ್ ಭೇಟಿಯೂ ಅಂತಹದೇ ತಂತ್ರವಾಗಿತ್ತು ಎಂದು ಅವರು ಹೇಳಿದರು. 114 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಸೀ–ಪ್ಲೇನ್ ಯೋಜನೆಯಲ್ಲಿ ಹೊಸದೇನೂ ಇಲ್ಲ. ಭಾರತದಲ್ಲಿ ಕೇರಳವು ಮೊದಲ ಬಾರಿಗೆ ಸೀ–ಪ್ಲೇನ್ ಕಾರ್ಯಾಚರಣೆಯನ್ನು 2013ರಲ್ಲಿ ಆರಂಭಿಸಿತ್ತು. ಆದರೆ, ನಂತರ ಸ್ಥಗಿತಗೊಳಿಸಿತು. ಅದೇ ರೀತಿ, ಗುಜರಾತ್ ಸಹ 2020ರಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿ ಹಿಂಪಡೆದಿತ್ತು ಎಂದು ಅವರು ಹೇಳಿದ್ದಾರೆ.…