Subscribe to Updates
Get the latest creative news from FooBar about art, design and business.
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
- ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
- ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಸಂಕಲ್ಪ ಯಾತ್ರೆ
- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
Author: admin
ತುಮಕೂರು: ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವದ ಸಲುವಾಗಿ ಮಕ್ಕಳೇ ಮಕ್ಕಳಿಗಾಗಿ ನಡೆಸಿಕೊಡುವ ‘ಚಿಣ್ಣರ ಚಪ್ಪರ’ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಬಾರಿ ತುಮಕೂರಿನ ಕನ್ನಡ ಭವನದಲ್ಲಿ ದಿನಾಂಕ 22/11/2025ರ ಶನಿವಾರ ಬೆಳಿಗ್ಗೆ 9ರಿಂದ ಸಂಜೆ ಐದು ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ತುಮಕೂರಿನ ಹಾಗೂ ರಾಜ್ಯದ ಎಲ್ಲಾ ಮಕ್ಕಳು ಈ ಸಂಭ್ರಮದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯಲು ಆಯೋಜಕರು ಮನವಿ ಮಾಡಿಕೊಂಡಿದ್ದಾರೆ. ಮಕ್ಕಳಲ್ಲಿ ಇರುವ ಕೌಶಲ್ಯವನ್ನು ತೋರಿಸಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಅಲ್ಲದೇ, ಕಲೆ, ಕನ್ನಡ, ಮಾನಸಿಕ ಆರೋಗ್ಯ, ಕನ್ನಡದ ಆಟೋಟ, ಹೀಗೆ ಹಲವು ವಿಭಿನ್ನ ವಿಭಾಗಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯವಾಗುವಂತೆ ಕಾರ್ಯಕ್ರಮ ರೂಪಿಸಲಾಗುತ್ತದೆ. ನೃತ್ಯ, ಹಾಡುಗಾರಿಕೆ, ಚಿತ್ರ ಬಿಡಿಸುವುದು, ಭಾಷಣ ಇನ್ನು ಇತ್ಯಾದಿ ಅಭಿರುಚಿಗಳು ನಿಮ್ಮ ಮಕ್ಕಳಲ್ಲಿದ್ದರೆ, ದೂರವಾಣಿ ಸಂಖ್ಯೆ : 6360497877ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ. ನೋಂದಣಿ ಶುಲ್ಕ ಕೇವಲ 50…
ವರದಿ: ಹಾದನೂರು ಚಂದ್ರ ಸರಗೂರು: ತಾಲೂಕಿನ ಬಡಗಲುಪುರ ಗ್ರಾಮದ ರೈತನ ಮೇಲೆ ದಾಳಿ ನಡೆಸಿ ಕಾಡಿನತ್ತ ಓಡಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದ ಬಡಗಲುಪುರ, ಹಾದನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡು ಜನರ ಆತಂಕ್ಕೆ ಕಾರಣವಾಗಿ ಉಪಟಳ ನೀಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ ಬಳಿಕ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಶುಕ್ರವಾರ ಕಾಡಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಆನೆಗಳನ್ನು ಕಂಡು ಗಾಬರಿಯಿಂದ ಕಾಡಿನತ್ತ ಓಡುತ್ತಿದ್ದ ಹುಲಿ, ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ಮಹದೇವಗೌಡ ಎಂಬವರ ಮೇಲೆ ದಾಳಿ ಮಾಡಿ ಆತನ ಮುಖ ಭಾಗಕ್ಕೆ ಗಂಭೀರ ಗಾಯ ಮಾಡಿತ್ತು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಜನರು ಹುಲಿಯನ್ನು ಸೆರೆ ಹಿಡಿಯಲೇಬೇಕು ಎಂದು ಪಟ್ಟುಹಿಡಿದಿದ್ದರು. ನಂತರ ಶನಿವಾರ ಬೆಳಗ್ಗೆ ಮಹೇಂದ್ರ, ಅಭಿಮನ್ಯು, ಭೀಮ, ಭಗೀರಥ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆಯು ಯಾಡಿಯಾಲ…
ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ದೇವರಹಳ್ಳಿ ಹೊಸಕೆರೆಗೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯು ಕಸಬಾ ಹೋಬಳಿಯ ಹುಲಿಕುಂಟೆ ಗ್ರಾಮದ ರಾಮಣ್ಣ (62) ಎಂಬ ವ್ಯಕ್ತಿ ಮೃತ ಪಟ್ಟಿರುವುದು ದೃಢವಾಗಿದೆ. ಕೆಲವು ವರ್ಷಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಎನ್ನಲಾಗಿದೆ. ಕಳೆದ ಎರಡು ದಿನಗಳಿಂದ ದೇವರಹಳ್ಳಿ ಕೆರೆಯ ಅಕ್ಕ–ಪಕ್ಕದಲ್ಲಿ ರಾಮಣ್ಣ ಓಡಾಡುತ್ತಿದ್ದು, ಸ್ಥಳೀಯರು ಗಮನಿಸಿ ಹುಲಿಕುಂಟೆ ಗ್ರಾಮಕ್ಕೆ ಕರೆದು ತಂದು ಬಿಟ್ಟಿದ್ದಾರೆ. ಗುರುವಾರ ಸಂಜೆ ನಮ್ಮ ತಂದೆ ಕೆರೆಯ ಸಮೀಪ ಬಂದಿದ್ದಾರೆ. ರಾತ್ರಿ ಆದಕಾರಣ ಕಣ್ಣು ಕಾಣಿಸದೇ ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮಗ ರಂಜನ್ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಅಗ್ನಿಶಾಮಕ ತಂಡ ಆಗಮಿಸಿ ಮೃತದೇಹ ಹೊರ ತೆಗೆದಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೀದರ್: ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರ ನೇತೃತ್ವದಲ್ಲಿ ಬಸವಕಲ್ಯಾಣ ನಗರದಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ಮಾಡಿದರು. ವಿವಿಧ ಹಳ್ಳಿಗಳಿಂದ ಆಗಮಿಸಿದ ರೈತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಅರೆ ಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯು ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕ ಶರಣು ಸಲಗರ್ ಅವರು ಬಾರುಕೋಲಿನಿಂದ ಹೊಡೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು ಮಳೆಯಿಂದ ಹಾನಿಯಾದ ತೊಗರಿಯ ಬೆಳೆಯನ್ನು ಹಿಡಿದುಕೊಂಡು, ಮುಖ್ಯಮಂತ್ರಿ ಮತ್ತು ಸಚಿವರ ವೇಷ ಧರಿಸಿಕೊಂಡು ಬಾರುಕೋಲಿನಿಂದ ಹೊಡೆದುಕೊಳ್ಳುತ್ತಾ ಪ್ರತಿಭಟನೆ ಮಾಡಲಾಯಿತು. ಈ ಸಮಯದಲ್ಲಿ ರೈತರ ಹಾಗೆ ಲುಂಗಿ, ತಲೆಗೆ ಶಾಲು ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿದ ಶರಣು ಸಲಗರ್ ಬಾರುಕೋಲಿನಿಂದ ಮೈಯಲ್ಲ ಹೊಡೆದುಕೊಂಡು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಶರಣು ಸಲಗರ್, ರಾಜ್ಯ ಸರ್ಕಾರಕ್ಕೆ ಅನ್ನದಾತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಯಾವೊಬ್ಬ ಸಚಿವರು…
ಸರಗೂರು: ತಾಲೂಕಿನ ಪಟ್ಟಣದ ಕಬಿನಿ ಬಲದಂಡೆ ನಾಲೆಯ ಬಳಿ ಗೂಡ್ಸ್ ಆಟೋ ಪಲ್ಟಿಯಾಗಿ 15 ಜನ ಕೂಲಿ ಕಾರ್ಮಿಕರು ಗಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದಂದು ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ಜೆಡಿಎಸ್ ಪಕ್ಷದ ಮುಖಂಡ ಕೆ.ಎಂ.ಕೃಷ್ಣನಾಯಕ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ಬಗ್ಗೆ ವಿಚಾರಿಸಿ ಸಹಾಯಧನ ಮಾಡಿ ಆಸ್ಪತ್ರೆಯ ವ್ಯವಸ್ಥಾಪಕರಿಗೆ ಜೊತೆ ಮಾತುಕತೆ ನಡೆಸಿ ಹೆಚ್ಚಿನ ಚಿಕಿತ್ಸೆ ನೀಡಿಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಟೋ ಚಾಲಕ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಪಲ್ಟಿಯಾಗಿ ಗುರುವಾರ ಮೂರು ಜನ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಕೂಡಾ ಭೇಟಿ ಮಾಡಿ ಸಾಂತ್ವಾನ ಹೇಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾನೆ ಎಂದರು. ಸರಗೂರು ತಾಲೂಕಿನ ಭಾಗದಲ್ಲಿ ಹೆಚ್ಚು ಕೂಲಿ ಕಾರ್ಮಿಕರು ಬೇರೆ ಬೇರೆ ಜಿಲ್ಲೆಗಳಿಗೆ ಹಾಗೂ ಗ್ರಾಮಗಳಿಗೆ ಶುಂಠಿ ಕೆಲಸಕ್ಕೆ ಬರುತ್ತಿದ್ದು, ತಾಲೂಕಿನ ರಸ್ತೆಗಳು ಕಿರಿದಾಗಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್…
ಪಾವಗಡ : ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಮರಿದಾಸನಹಳ್ಳಿ ಬಾಲಕರು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮರಿದಾಸನಹಳ್ಳಿ ಬಾಲಕಿಯರು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳನ್ನು ಎರಡು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಗೂ ಎಸ್ ಡಿ ಎಮ್ ಸಿ ರವರು ಮತ್ತು ಶಾಲೆ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ 2025–26ನೇ ಸಾಲಿನಲ್ಲಿ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ಮತ್ತು ಸದರಿ ಸಮೂಹ ವಿವಾಹವನ್ನು ಆಯೋಜಿಸುವ ಆಯೋಜಕರಿಗೆ 5,000 (ಪ್ರತಿ ಜೋಡಿಗೆ) ರೂ.ಗಳ ಸಹಾಯಧನ ನೀಡಲಾಗುವುದು. ಸರಳ ಸಮೂಹ ವಿವಾಹಕ್ಕೆ ಜಿಲ್ಲಾ ನೋಂದಾಯಿತ ವಕ್ಫ್ ಬೋರ್ಡ್ ಕಚೇರಿಯಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್, ದೇವಸ್ಥಾನದ ಟ್ರಸ್ಟ್, ಸಂಘ, ಸೊಸೈಟಿ, ವಕ್ಫ್ ಸಂಸ್ಥೆ ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಧು–ವರರು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಕ್ಕೆ ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಟ 5 ಜೋಡಿಗಳು ಭಾಗವಹಿಸಬೇಕು. ಸಾಮೂಹಿಕ ವಿವಾಹಕ್ಕೆ ವಧುವಿಗೆ 18ರಿಂದ 42 ವರ್ಷ…
ತುಮಕೂರು: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000ರೂ. ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲು ಅರ್ಹರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು. ಪ್ರಶಸ್ತಿಗಾಗಿ ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದ್ವಿಪ್ರತಿಯಲ್ಲಿ ಅಕ್ಟೋಬರ್ 23ರೊಳಗಾಗಿ ಸಲ್ಲಿಸತಕ್ಕದ್ದು ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಭಾಗ್ಯಲಕ್ಷ್ಮಿ ಯೋಜನೆಯಡಿ 2026–07ನೇ ಸಾಲಿನಲ್ಲಿ ನೋಂದಣಿಯಾಗಿ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತವನ್ನು ಮಂಜೂರು ಮಾಡಲು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 30 ಕಡೆಯ ದಿನವಾಗಿದೆ. ಪರಿಪಕ್ವ ಮೊತ್ತದ ಮಂಜೂರಾತಿಗಾಗಿ ಫಲಾನುಭವಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಅಕ್ಟೋಬರ್ 30ರೊಳಗಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಯೋಜನೆಯ ಸೌಲಭ್ಯವನ್ನು ಪಡೆಯಬೇಕೆಂದು ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಗನವಾಡಿ ಕೇಂದ್ರ ಅಥವಾ ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ ಗಣಿಬಾಧಿತ ಗ್ರಾಮದ ಫಲಾನುಭವಿಗಳಿಗೆ ಒಂದು ಮಿಶ್ರತಳಿ ಹಾಲು ಕರೆಯುವ ಹಸು/ಎಮ್ಮೆ ಸಾಕಾಣಿಕೆಗಾಗಿ 60,000 ರೂ.ಗಳ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಣಿಬಾಧಿತ/ಪ್ರಭಾವಕ್ಕೊಳಗಾದ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ 5 ಕಿಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಫಲಾನುಭವಿಗಳು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಹರಿಗೆ ಬ್ಯಾಂಕಿನ ಮೂಲಕ ಘಟಕ ವೆಚ್ಚ 60,000 ರೂ.ಗಳ ಸಹಾಯಧನವನ್ನು ನೀಡಲಾಗುವುದು. ಘಟಕ ವೆಚ್ಚದ ಪೈಕಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.90ರಂತೆ ಮತ್ತು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.50ರಂತೆ ನೀಡಲಾಗುವುದು. ಉಳಿದ ಮೊತ್ತವನ್ನು ಫಲಾನುಭವಿಯು ವಂತಿಗೆ ರೂಪದಲ್ಲಿ ಅಥವಾ ಬ್ಯಾಂಕಿನಿಂದ ಸಾಲದ ರೂಪದಲ್ಲಿ ಪಾವತಿ ಮಾಡಬೇಕಾಗಿರುತ್ತದೆ. ನಿಯಮಾನುಸಾರ ಅಂಗವಿಕಲರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಬಂಧಪಟ್ಟ ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಬರುವ ಪಶುವೈದ್ಯ ಸಂಸ್ಥೆಯವರನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು…