Author: admin

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ ಒಯು)ವು 2025–26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್‌ ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ (General & I.T.), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ ಕೋರ್ಸ್‌ಗಳಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರಾಮುವಿಯು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, 10+2 (ಪದವಿ ಪೂರ್ವ) ಹಾಗೂ 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪದವಿ ಪಡೆಯಬಹುದಾಗಿದೆ. ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಮಾರ್ಚ್ 31ರವರೆಗೆ ಸಾರ್ವತ್ರಿಕ ರಜಾ ದಿನಗಳಂದು ಕಚೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ…

Read More

ತುಮಕೂರು: ಸಿಂಹನಗದ್ದೆ ಶ್ರೀ ಕ್ಷೇತ್ರ ಪೀಠಾಧ್ಯಕ್ಷರಾದ ಪ.ಪೂ.ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಜನ್ಮ ಜಯಂತಿ ಮಹೋತ್ಸವವನ್ನು ನಾಳೆ (ಮಂಗಳವಾರ) ಬೆಳಿಗ್ಗೆ 6 ಗಂಟೆಯಿಂದ ನಗರದ ಬಿ.ಹೆಚ್.ರಸ್ತೆಯ ಜೈನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಯಂತಿ ಮಹೋತ್ಸವದ ಪ್ರಯುಕ್ತ ನಾಳೆ ಬೆಳಿಗ್ಗೆ 6 ಗಂಟೆಗೇಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನಿತ್ಯವಿಧಿ, ಜೈನ ಭವನದ ಜಿನಮಂದಿರದಲ್ಲಿ ಪಂಚಾಮೃತ ಪೂಜೆ, ಚಿಕ್ಕಪೇಟೆ ಜಿನಮಂದಿರದಲ್ಲಿ ಪಂಚಾಮೃತ ಪೂಜೆ, ತ್ರಿಲೋಕ ಭವನದಲ್ಲಿ ಉಪಹಾರ, ನಾಡಸ್ತರ್ ಮತ್ತು ಉಗಾರ್ ಬಿ.ಕೆ. ರವರ ಝುಂಝುಂ ಪಾಠಕ್ ವಾದ್ಯಗಳೊಂದಿಗೆ ಭಗವಾನ್ ಶ್ರೀ ಮಹಾವೀರ ಸ್ವಾಮಿಯವರ ಉತ್ಸವವು ಹೂವಿನ ಮಂಟಪದಲ್ಲಿ ನಡೆಸಲಾಗುತ್ತದೆ. ಜೈನ ಭವನದಲ್ಲಿ ಶ್ರೀ ಭಗವಾನ್ ಮಹಾವೀರ ಸ್ವಾಮಿಯವರಿಗೆ 108 ಕಲಶಗಳ ಮಹಾಭಿಷೇಕ ಪೂಜೆ, ಬಾಲ್ಯಲೀಲೋತ್ಸವ, ಮಹಾಭಿಷೇಕ ಪೂಜೆ ನಡೆಯುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ಸರ್ಕಾರಿ ಶಾಲೆಗಳನ್ನು ಉಳಿಸಲು ಏಪ್ರಿಲ್ 10 ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಮಟ್ಟದ ಸಮಾವೇಶದ ಹಿನ್ನಲೆಯಲ್ಲಿ ತುಮಕೂರು ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಸಭೆ ಇಂದು ನಗರದ ವಿಧ್ಯೋದಯ ಕಾಲೇಜನಲ್ಲಿ ಜರುಗಿತು. ಸಭೆಯಲ್ಲಿ ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು ಸೇರಿದಂತೆ ಎಲ್ಲಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು. ಸಭೆಯ ನಂತರ ರಾಜ್ಯಮಟ್ಟದ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಭೆಯನ್ನು ಉದ್ದೇಶಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ 40,000  ಸರ್ಕಾರಿ ಶಾಲೆ ಹಾಗೂ ತುಮಕೂರು ಜಿಲ್ಲೆಯ 1500 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದ್ದು, ಈ ನೀತಿಯ ವಿರುದ್ಧ ಎಐಡಿಎಸ್ಓ ನೇತೃತ್ವದಲ್ಲಿ ಈಗಾಗಲೇ ಜಿಲ್ಲೆಯ ಜನತೆ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಗಳನ್ನು ರಚಿಸಿಕೊಂಡು ಕಳೆದ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈ ಬಿಟ್ಟು, ನಮ್ಮೂರ ಶಾಲೆ ಉಳಿಸಿ ಎಂದು ಆಗ್ರಹಿಸಿ ಹಳ್ಳಿಯಲ್ಲಿ…

Read More

ತುಮಕೂರು: ಜಿಲ್ಲಾ ಬಾಲ ಭವನ ಸಮಿತಿ ತುಮಕೂರು ಇವರ ವತಿಯಿಂದ 2026-27ನೇ ಸಾಲಿನಲ್ಲಿ 5 ರಿಂದ 16ರ ವಯೋಮಾನದ ಮಕ್ಕಳಿಗಾಗಿ ಏಪ್ರಿಲ್ 15 ರಿಂದ 29ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 15 ದಿನಗಳ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತ ಪಾಲಕರು ಏ.9 ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾ ಬಾಲಭವನ ಕಚೇರಿ, ಎಂ.ಜಿ.ರಸ್ತೆ, ತುಮಕೂರು ಇಲ್ಲಿ ಕಚೇರಿ ವೇಳೆಯಲ್ಲಿ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಶಿಬಿರದಲ್ಲಿ 60 ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ/ಹೋಬಳಿ ಮಟ್ಟದ ಮತ್ತು ಸೌಲಭ್ಯ ವಂಚಿತ ಮಕ್ಕಳಿಗೆ, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕ/ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಹಾಗೂ ವಿಕಲಚೇತನ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9901890079 ಇವರನ್ನು ಸಂಪರ್ಕಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ಅಭಿವೃದ್ಧಿ ಕೆಲಸಗಳು 99 ಭಾಗದಷ್ಟು ಕಣ್ಣು ಮುಂದೆ ಇದ್ದರೂ ಸಹಿಸಲಾಗದೆ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕಿನ ಜನತೆ ಅನಿಲ್ ಚಿಕ್ಕಮಾದು ಅವರನ್ನು ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೂರು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಅದನ್ನು ನೋಡಲಾಗದೇ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಗೂ 365 ದಿನಗಳಲ್ಲಿ 300 ದಿನಗಳು ಜನರ ಮಧ್ಯದಲ್ಲಿ ಶಾಸಕರು ಇರುತ್ತಾರೆ. ಜನರೊಂದಿಗೆ ಇದ್ದು ಅವರ ಕಷ್ಟ ಪರಿಹರಿಸಲು ಮನೆ ಮಗನಂತೆ ಶ್ರಮಿಸುತ್ತಿದ್ದಾರೆ. ಇಂತಹ ಶಾಸಕರ ವಿರುದ್ಧ ಮಾತನಾಡಲೂ ಯೋಗ್ಯತೆ ಬೇಕು ಅಂತಾ ಅವರು ತಿರುಗೇಟು ನೀಡಿದ್ದಾರೆ. ಅನಿಲ್ ಚಿಕ್ಕಮಾದುರವರು ಯಾವುದೇ ಗ್ರಾಮಗಳಲ್ಲಿ ಜಾತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡು ತಾಲೂಕಿನಲ್ಲಿ ಶಾಂತಿಯುತವಾಗಿ ಹೊಂದಾಣಿಕೆಯಲ್ಲಿ ನೋಡಿಕೊಂಡು ಬರುತ್ತಿದ್ದಾರೆ ಎಂದರು. ತಂದೆಯಾದ ಎಸ್. ಚಿಕ್ಕಮಾದು ಹಾಗೂ ರಾಜಕೀಯ ಗುರುಗಳಾದ ಆರ್.ಧ್ರುವನಾರಾಯಣ್ ಅವರು…

Read More

ಸರಗೂರು:  ವಿವಾಹದ ಹೆಸರಿನಲ್ಲಿ ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಲು ಸಾಮೂಹಿಕ ವಿವಾಹ ಉತ್ತಮ ನಡೆ. ಸಾಮೂಹಿಕ ವಿವಾಹ ಏರ್ಪಡಿಸುವುದರಿಂದ ಬಡವ–ಬಲ್ಲಿದ, ಜಾತಿ, ಧರ್ಮದ ಸಂಕೋಲೆಯಿಂದ ಹೊರ ಬರಲು ಸಹಾಯವಾಗುತ್ತದೆ. ಭಾವೈಕ್ಯ ಬಿಂಬಿಸುವ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಮಠಗಳಲ್ಲಿ ನಡೆಯಬೇಕು ಎಂದು  ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಬಿಡಗಲು ಗ್ರಾಮದ ವಿರಕ್ತ ಮಠದಲ್ಲಿ ಶುಕ್ರವಾರದಂದು ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮ ಒಂದು ಜತೆ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ಜೋಡಿಗಳಿಗೆ ಶುಭ ಹಾರೈಸಿ ಮಾತನಾಡಿದರು. ನಮ್ಮ ತಾಲೂಕಿನ ವಿರಕ್ತ ಮಠದಲ್ಲಿ ಮೂರನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದಾರೆ ಮಠದ ಮಹದೇವಸ್ವಾಮಿಗಳುರವರಿಗೆ ವಂದನೆಗಳು ಸಲ್ಲುತ್ತವೆ ಎಂದರು. ಮಠದ  ಶ್ರೀಗಳು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮೂಹಿಕ ವಿವಾಹ ಹಾಗೂ ದಾಸೋಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ಅವರ ಕೆಲಸಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾತನಾಡಿದ ಗುಂಡ್ಲುಪೇಟೆ ತಾಲೂಕಿನ…

Read More

ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಮೃತ ರೈತ ರಮೇಶ್ ಮನೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಆದೇಶದ ಮೇರೆಗೆ ತಹಶೀಲ್ದಾರ್ ಮಂಜುನಾಥ್ ಕೆ. ಮತ್ತು ಕೃಷಿ ಅಧಿಕಾರಿ ರುದ್ರಪ್ಪ ಭೇಟಿ ನೀಡಿದ್ದಾರೆ. ಹೈನುಗಾರಿಕೆಗೆಂದು ಮೈಕ್ರೋ ಫೈನಾನ್ಸ್ ಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿ ಸಾಲದ ಕಂತುಗಳನ್ನು ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದ ಜೋನಿಗರಹಳ್ಳಿ ಗ್ರಾಮದ ಬಡ ರೈತ ರಮೇಶ್ ನಿವಾಸಕ್ಕೆ ತಹಶೀಲ್ದಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿ ಧೈರ್ಯ ತುಂಬಲಾಯಿತು. ರೈತ ರಮೇಶ್ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ. ಮೃತರ ಮನೆಗೆ ಭೇಟಿ ನೀಡಿ, ಮೃತ ರೈತ ರಮೇಶ್ ರವರ ಮರಣ ಪ್ರಮಾಣ ಪತ್ರ, ರಮೇಶ್ ಪತ್ನಿಗೆ ವಿಧವಾ ವೇತನ ಮಂಜೂರಾತಿ ಆದೇಶ ಪತ್ರ ನೀಡಿ ಕೊರಟಗೆರೆ ತಾಲ್ಲೂಕು ಆಡಳಿತ ನೊಂದ ಕುಟುಂಬದ ಜೊತೆ ಸದಾ ಕಾಲ ನಿಲ್ಲಲಿದೆ ಎಂದು ಧೈರ್ಯ ತುಂಬಿದ್ದಾರೆ.…

Read More

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈರಾಗನಹಳ್ಳಿ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಂಡಿನಶಿವರ ಮೂಲದ ನಾಗರಾಜ್ (45) ಎಂದು ಗುರುತಿಸಲಾಗಿದೆ. ನಾಗರಾಜ್ ಅವರು ತಮ್ಮ ಪತ್ನಿಯೊಂದಿಗೆ ಕುರುಬರಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬೈಕ್‌ ನಲ್ಲಿ ತೆರಳುತ್ತಿದ್ದರು. ಬೈರಾಗನಹಳ್ಳಿ ತಲುಪಿದಾಗ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಬಿದ್ದಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ರೋಡ್ ರೋಲರ್ ನಾಗರಾಜ್ ಅವರ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ನಾಗರಾಜ್ ಅವರ ಪತ್ನಿ ರಸ್ತೆಯ ಪಕ್ಕಕ್ಕೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ಮುನ್ನೆಚ್ಚರಿಕೆ ಫಲಕಗಳನ್ನು ಹಾಕಿಲ್ಲ ಮತ್ತು ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿರುವ ಸಾರ್ವಜನಿಕರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಗುಬ್ಬಿ: ರೈತರಿಗೆ ಬದುಕಲು ಹೈನುಗಾರಿಕೆಯಲ್ಲಿ ಅವಕಾಶವಿದೆ. ಒಳ್ಳೆಯ ಚಿಂತನೆಗಳು, ಒಳ್ಳೆಯ ಮನಸ್ಸು ಇಟ್ಟುಕೊಂಡು ಕೆಲಸ ಮಾಡಿ. ಪ್ರತಿಯೊಬ್ಬ ಪೋಷಕರಿಗೆ ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಬೇಕೆಂದು ಆಸೆ ಇದೆ. ಎ ಅಂದರೆ ಏನು ಅಂತ ಗೊತ್ತಿಲ್ಲ, ಬಿ ಅಂದರೆ ಏನು ಗೊತ್ತಿಲ್ಲ, ಯಾರನ್ನು ಕೇಳುವುದು? ಹಸುಗಳನ್ನು ಹೇಗೆ ಸಾಕಬೇಕು? ಕ್ವಾಲಿಟಿ, ಕ್ವಾಂಟಿಟಿ ಬಗ್ಗೆ ಅರಿವು ಇಲ್ಲದೆ ಇದ್ದು ಗೆದ್ದ ಬಳಿಕ ತಿಳಿಯಿತು, ಅಂದು ನನ್ನ ಮಾತಿಗೆ ಸುಮ್ಮನೆ ಆಗಿದ್ದರೆ ಇಂದು ಆಗಿರುವ ಉತ್ತಮ ಕಾರ್ಯಗಳು ಕುಂಠಿತವಾಗುತ್ತಿದ್ದವು ಎಂದು ಮಾಜಿ ಸಂಸದ ಹಾಗೂ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಗುಬ್ಬಿಯಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತುಮಕೂರು ಜಿಲ್ಲಾ ರೈತರ ಮತ್ತು ಎಂಪಿಸಿಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಹಾಗೂ ಗುಬ್ಬಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತ…

Read More

ಮೈಸೂರು: ರಾಜ್ಯದ ಶಾಲಾ ಶಿಕ್ಷಣದಲ್ಲಿ ಹಿಂದಿ ಭಾಷೆಯ ಹೇರಿಕೆಗೆ ತಡೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯನ್ನು ಕಡ್ಡಾಯಗೊಳಿಸದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿನಲ್ಲಿ ತಿಳಿಸಿದ್ದಾರೆ. “ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ. ಈಗಲೂ ಸಹ ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯವಾಗಬಾರದು ಎಂಬುದು ನಮ್ಮ ನಿಲುವು. ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ, ಆದರೆ ಅದನ್ನು ಕನ್ನಡಿಗರ ಮೇಲೆ ಕಡ್ಡಾಯವಾಗಿ ಹೇರಬಾರದು” ಎಂದು ಸಿಎಂ ಸ್ಪಷ್ಟಪಡಿಸಿದರು. ಸರ್ಕಾರದ ಹೊಸ ತೀರ್ಮಾನದಂತೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯ ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಸಲಾಗಿದೆ. ಈ ವರ್ಷದಿಂದಲೇ ತೃತೀಯ ಭಾಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ. ಈ ಹೊಸ ನಿಯಮವು ಪ್ರಸಕ್ತ ಸಾಲಿನಿಂದಲೇ ಜಾರಿಗೆ ಬರಲಿದೆ. ಸರ್ಕಾರದ ಈ ನಿರ್ಧಾರವನ್ನು ಕೆಲವರು ವಿರೋಧಿಸಬಹುದು, ಆದರೆ ರಾಜ್ಯದ ಹಿತದೃಷ್ಟಿಯಿಂದ ಎಲ್ಲವನ್ನೂ ಪರಾಮರ್ಶಿಸಿ ಈ ಕ್ರಮ…

Read More