Subscribe to Updates
Get the latest creative news from FooBar about art, design and business.
- ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
- ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
Author: admin
ಸರಗೂರು: ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್. ನಾಗರಾಜು ತಿಳಿಸಿದರು. ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅದಿಕರ್ನಾಟಕ ಮಹಾಸಭಾ ಹಾಗೂ ತಾಲೂಕು ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಡಿಸೆಂಬರ್ 6 ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ತಿಥಿ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಭಾರತ ಕಂಡ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿಂದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿಯೆನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು. ಅದಲ್ಲದೇ, ಭೀಮರಾವ್ ರಾಮ್…
ಶ್ರವಣಬೆಳಗೊಳ: ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಶಿಲಾಮಯ ನಿಷಿಧಿ ಮಂಟಪ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗುರುವಾರ ಶ್ರೀ ಚರಣ ಪಾದುಕೆ ಪ್ರತಿಷ್ಠಾಪನೆಯು ಸ್ವಸ್ತಿಶ್ರೀ ಅಭಿನವ ಚಾರುಶ್ರೀಗಳವರ ನೇತೃತ್ವದಲ್ಲಿ ನೆರವೇರಿತು. ಭೂಮಿ ಶುದ್ದಿ, ಮಂಟಪ ಶುದ್ದಿ, ಗಣಧರವಲಯ ಆರಾಧನೆ, ಅಷ್ಟವಿಧಾರ್ಚನೆ, ಚತುರ್ ದಿಕ್ಷು ಹೋಮ, ಧಾಮ ಸಂಪ್ರೋಕ್ಷಣೆ ಹಾಗೂ ವಿಧಿಪರ‍್ವಕ ಶ್ರೀಚರಣ ಪಾದುಕೆ ಪ್ರತಿಷ್ಠಾಪನೆ ಕಾರ್ಯಗಳು ಪೂಜಾ ವಿಧಿ–ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಸಚಿವ ಡಿ.ಸುಧಾಕರ್ ಉಪಸ್ಥಿತರಿದ್ದರು. ಕಾರ್ಕಳದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಕನಕಗಿರಿಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿಯ ಸ್ವಸ್ತಿಶ್ರೀ ದವಳಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಮೂಡಬಿದಿರೆಯ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ, ಮೇಲ್ ಚಿತ್ತಮೂರ್ ನ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ವರೂರಿನ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ, ಹೊಂಬುಜದ ಸ್ವಸ್ತಿಶ್ರೀ ದೇವೇಂದ್ರ ಭಟ್ಟಾರಕ ಸ್ವಾಮೀಜಿ, ಸೋಂದಾದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ನರಸಿಂಹರಾಜಪುರದ ಸ್ವಸ್ತಿಶ್ರೀ…
ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಅವರು ಮಾತನಾಡಿದರು.ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮನ್ನೆಲ್ಲಾ ಅಗಲಿದರು. ಈ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತಿದೆ. ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು. ದಲಿತರಿಗೆ ಮಾತ್ರವಲ್ಲದೇ ಸಮಸ್ತ ವರ್ಗದವರಿಗೂ…
ಬೇಲೂರು: ತಹಶೀಲ್ದಾರ್ ಮಮತಾ ಬಗರ್ ಹುಕುಂ ಪ್ರಕರಣಗಳ ಕುರಿತು ಕಡತಗಳನ್ನು ಪರಿಶೀಲನೆ ಮಾಡಿದ ನಂತರ, ಸ್ಥಳೀಯ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಗರ್ ಹುಕುಂ ಕಡತಗಳ ಪರಿಶೀಲನೆಯ ಮೂಲಕ, ತಹಶೀಲ್ದಾರ್ ಅವರು ಅನೇಕ ದಶಕಗಳಿಂದ ಬಾಕಿ ಇರುವ ಭೂಮಿಯ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಪರಿಶೀಲನೆ ಕಾರ್ಯವು ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಭೂಮಿಯ ಮೇಲೆ ತಮ್ಮ ಹಕ್ಕುಗಳ ದೃಢೀಕರಣ ಮಾಡಲು ಸಹಾಯಕರಾಗಿದೆ. ಮಮತಾ ತಮ್ಮ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ತೆರಳಿ ದೂರುಗಾರರ ಹಾಗೂ ಸಂಬಂಧಿತ ಪಕ್ಷಗಳ ಜಮೀನುಗಳ ಪರಿಶೀಲನೆ ನಡೆಸಿದರು. ಈ ದ್ವಾರಾ, ಬಗರ್ ಹುಕುಂ ಪಟಗಳನ್ನು ವಾಸ್ತವಿಕತೆಗಳ ಮೇರೆಗೆ ದೃಢಪಡಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. “ನಾನೊಬ್ಬ ಆಡಳಿತಾಧಿಕಾರಿಯಾಗಿ, ಜನರಿಗೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಬಗರ್ ಹುಕುಂ ಕಡತಗಳು ಎಷ್ಟು ಪ್ರಾಮುಖ್ಯತೆಯಿರುವುದು ಎಂಬುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ, ಅದಕ್ಕಾಗಿ ನಾವು ಎಲ್ಲ ರೀತಿಯ ಪರಿಶೀಲನೆ ನಡೆಸುತ್ತೇವೆ,” ಎಂದು ಮಮತಾ ಹೇಳಿದರು. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ ನನ್ನ ಬೇರೇನು ಕೇಳಬೇಡಿ ಎಂದು ಸಚಿವ ಮುನಿಯಪ್ಪ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಡಾ.ಜಿ.ಪರಮೇಶ್ವರ್ ಸಹಿತ ಇತರ ಕಾಂಗ್ರೆಸ್ ನಾಯಕರು ಅಧಿಕಾರ ಹಂಚಿಕೆ ಒಪ್ಪಂದ ಸುದ್ದಿಯನ್ನ ತಳ್ಳಿ ಹಾಕಿದ್ದರೆ, ಸಚಿವ ಮುನಿಯಪ್ಪ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ ನನ್ನ ಬೇರೇನು ಕೇಳಬೇಡಿ ಎಂದಿದ್ದಾರೆ. ಇನ್ನು ಬಿಜೆಪಿ ಹೋರಾಟದ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಹೆಚ್ಚು ಹೋರಾಟ ಮಾಡಿದಂತೆಲ್ಲಾ ಅದು ಕಾಂಗ್ರೆಸ್ ಗೆ ಹೆಚ್ಚು ಅನುಕೂಲ. ಆದರೆ, ಬಿಜೆಪಿಯವರು ಅಧಿಕಾರಕ್ಕೆ ಬರೋ ಚಿಂತನೆಯಲ್ಲಿದ್ದಾರೆ ಎಂದರು. ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ಸಂದರ್ಭದಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ನಮ್ಮ ನಡುವೆ ಕೆಲವು ಒಪ್ಪಂದವಾಗಿದೆ. ಅದನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆ ಮೂಲಕ…
ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವರಾಗಲಿ, ವೈದ್ಯಕೀಯ ಶಿಕ್ಷಣ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ , ಘಟನಾ ಸ್ಥಳಕ್ಕೆ ಹೋಗದಿರುವುದು ಖಂಡನೀಯ, ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಯಿಂದ ಔಷಧಿ ತೆಗೆದುಕೊಳ್ಳಲಾಗಿದೆ ಎಂದು ಕಿಡಿಕಾರಿದರು. ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ಪ್ರಕರಣದ ಬಗ್ಗೆ ಬಿಜೆಪಿ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬಾಣಂತಿಯರ ಸಾವು ಪ್ರಕರಣ, ರೈತರ ಬೆಳೆ ಸಮಸ್ಯೆ ಬಗ್ಗೆ ನಾವು ಧ್ವನಿ ಎತ್ತಲಿದ್ದೇವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿರುದ್ಧ ವಾಗ್ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಬಿಮ್ಸ್ ನಲ್ಲಿ ಕಳಪೆ ಐವಿ ಡ್ರಾಪ್ ನಿಂದ ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ ಎಂದು ಆರೋಪಿಸಿದರು. ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆ ಆಗಿದೆ. ಐವಿ ಡ್ರಾಪ್ ಕಳಪೆ ಎಂದು ಗೊತ್ತಾದ ಮೇಲೂ ಇಂದು ಮತ್ತೊಂದು ಸಾವು ಸಂಭವಿಸಿದೆ. ಇಷ್ಟೆಲ್ಲ ಆದರೂ ಆರೋಗ್ಯ ಸಚಿವರು, ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅತ್ತಿದ್ದೇ ಅತ್ತಿದ್ದು, ರಾಹುಲ್ ಗಾಂಧಿ ಸೇರಿ ಎಲ್ಲರೂ ಟವಲ್ ತಗೊಂಡು ಒರೆಸಿಕೊಂಡಿದ್ರು. ಕಣ್ಣೀರು ಬರದಿದ್ದರು ಒರೆಸಿಕೊಳ್ಳುತ್ತಿದ್ದರು. ಈಗ ಬಾಣಂತಿಯರು ಸಾವನ್ನಪ್ಪಿದ್ದಾರೆ. ಬಾಣಂತಿಯರು ಮೃತಪಟ್ಟಾಗ ಕಣ್ಣೀರು ಬರಲಿಲ್ವಾ? ಒಂದು ಸಿಂಗಲ್ ಡ್ರಾಪ್ ಕಣ್ಣೀರು ಬರೋದು ಬೇಡ್ವಾ? ಅಂತ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.…
ಬೆಂಗಳೂರು: ಮುಂದಿನ ಮೂರು ವರ್ಷಗಳಿಗೆ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ ಕಂಡು ಬಂದಿದೆ. ಪ್ರತಿ ಯೂನಿಟ್ಗೆ ಮೊದಲ ವರ್ಷ ಅಂದರೆ, 2025–26 ಕ್ಕೆ 67 ಪೈಸೆ, 2 ನೇ ವರ್ಷ 2026–27 ಕ್ಕೆ ಯೂನಿಟ್ಗೆ 74 ಪೈಸೆ ಹಾಗೂ ಮೂರನೇ ವರ್ಷವಾದ 2027-28 ಕ್ಕೆ 91 ಪೈಸೆ ವಿಸ್ತರಣೆ ಮಾಡಲು ಮನವಿ ಸಲ್ಲಿಸಿದೆ. ಒಂದು ವೇಳೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಒಪ್ಪಿಗೆ ಸೂಚಿಸಿದರೆ ಮುಂದಿನ ವರ್ಷದಿಂದಲೇ ದರ ಏರಿಕೆಯಾಗಿಲಿದೆ ಎನ್ನಲಾಗಿದೆ. ಬೇಡಿಕೆಯ ಹೆಚ್ಚಳವನ್ನು ನಿರ್ವಹಿಸಲು ವಿದ್ಯುತ್ ಖರೀದಿಗೆ ತಗಲುವ ವೆಚ್ಚವನ್ನು ಪೂರೈಸಲು ಈ ವಿದ್ಯುತ್ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಸೋಲಿನ ನಂತರ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಬಿ.ಎಲ್.ಸಂತೋಷ್ ಅವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜೀವನ – ಸಾಧನೆ ಕುರಿತ Furrows in a Field: The Unexplored Life of H.D. Deve Gowda (ಕನ್ನಡಲ್ಲಿ: ನೇಗಿಲ ಗೆರೆಗಳು) ಗ್ರಂಥ ನೀಡಿದರು. ಅಲ್ಲದೆ, ಚನ್ನಪಟ್ಟಣ ಚುನಾವಣೆಯ ಬಗ್ಗೆ ಸಂತೋಷ್ ಜೀ ಅವರು ಕೆಲ ಮಾಹಿತಿಗಳನ್ನು ನಿಖಿಲ್ ಅವರಿಂದ ಪಡೆದುಕೊಂಡರು ಹಾಗೂ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ನಿಖಿಲ್ ಅವರಿಗೆ ಮಹತ್ವದ ಸಲಹೆ ಸೂಚನೆ ಮಾರ್ಗದರ್ಶನ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸಮಾಜ ಕಲ್ಯಾಣ ಇಲಾಖೆ ಅನುಷ್ಟಾನ ಮಾಡುವ ನೇರ ಸಾಲ, ಸ್ವಾವಲಂಬಿ ಸಾರಥಿ ಸೇರಿದಂತೆ ಹಲವಾರು ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆಯ್ಕೆಯಾದ ಫಲಾನುಭವಿಗಳಿಗೆ ನಿಗದಿತ ಕಾಲಾವಧಿಯೊಳಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಗುರುವಾರ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ ಮಾತನಾಡಿದ ಅವರು, 2023–24ನೇ ಆರ್ಥಿಕ ಸಾಲಿನಿಂದ ಬಾಕಿಯಿದ್ದ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಇಂದು ನಡೆಸಲಾಗಿದ್ದು, ಸರ್ಕಾರ ನಿಗಧಿಪಡಿಸಿರುವ ಭೌತಿಕ ಗುರಿಯ ಆಧಾರದ ಮೇಲೆ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಡಿಮೆ ಜನಸಂಖ್ಯೆ ಇರುವ ಸಮುದಾಯದವರಿಗೆ ಆದ್ಯತೆ ನೀಡಲಾಗಿದೆ. ಸರ್ಕಾರ ನಿಗಧಿಪಡಿಸಿರುವ ಭೌತಿಕ ಗುರಿಯಲ್ಲಿ ಕನಿಷ್ಠ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹಿಳಾ ಫಲಾನುಭವಿಗಳು ಲಭ್ಯವಿಲ್ಲದಿದ್ದಾಗ ಪುರುಷ…