Author: admin

ಬೆಂಗಳೂರು: ಡಾ. ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ನವೆಂಬರ್ 15ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿವೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’  ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶಿಸಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ‘ಭೈರತಿ ರಣಗಲ್’ ನಿರ್ಮಾಣವಾಗಿದ್ದು, ದೇಶಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿರುವ ‘ಭೈರತಿ ರಣಗಲ್’ ಹೇಗೆ ಸಿನಿಪ್ರಿಯರಿಗೆ ಮೋಡಿ ಮಾಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕೋಲ್ಕತ್ತ: ಪಕ್ಷದ ಕಚೇರಿಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದಿದೆ. ಪೃಥ್ವಿರಾಜ್ ನಸ್ಕರ್ ಹತ್ಯೆಗೀಡಾದ ಬಿಜೆಪಿ ನಾಯಕರಾಗಿದ್ದಾರೆ. ಇವರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯನ್ನು ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ನವೆಂಬರ್ 5ರಂದು ನಸ್ಕರ್ ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಶನಿವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆ  ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೇಗುಸರಾಯ್:  ಡಿ ಗ್ರೂಪ್ ಉದ್ಯೋಗಿಯೊಬ್ಬರು ರೈಲು ಎಂಜಿನ್ ಮತ್ತು ಕೋಚ್ ನಡುವೆ ಸಿಲುಕಿ ಭೀಕರವಾಗಿ ಸಾವನ್ನಪ್ಪಿದ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯ ಬರೌನಿ ರೈಲು ನಿಲ್ದಾಣದಲ್ಲಿ ನಡೆದಿದೆ. ಸಮಸ್ತಿಪುರದ 25 ವರ್ಷದ ಅಮರ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯ ಫೋಟೋ, ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ದೃಶ್ಯ ಬೆಚ್ಚಿಬೀಳಿಸುವಂತಿದೆ. ಫ್ಲಾಟ್‌ಫಾರ್ಮ್‌ 5ರಲ್ಲಿ ನಿಂತಿದ್ದ ಲಖನೌ-ಬರೌನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್ ಮತ್ತು ಕೋಚ್ ಅನ್ನು ಜೋಡಿಸುವ ಕೆಲಸವನ್ನು ಶನಿವಾರ ಬೆಳಿಗ್ಗೆ 8:10 ರ ಸುಮಾರು ಅಮರ್ ಕುಮಾರ್ ನಿರ್ವಹಿಸುತ್ತಿದ್ದರು. ಈ ವೇಳೆ ಪ್ಲೇಟ್‌ಗಳ ನಡುವೆ ಸಿಲುಕಿದ ಅಮರ್ ಕುಮಾರ್, ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೈಲ್ವೆಯ ಸಹೋದ್ಯೋಗಿಗಳ ಯಡವಟ್ಟಿನಿಂದ ಈ ದುರಂತ ಸಂಭವಿಸಿದೆ ಎಂದು ಪೂರ್ವ ಕೇಂದ್ರ ವಲಯದ ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಚಿತ್ರದುರ್ಗ:  ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ಅಜಾಗರೋಕತೆಯ ಚಾಲನೆಯಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ 10 ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಮುಂಬೈ: ಸೊಸೆಯನ್ನು ನಿಂದಿಸುವುದು, ಟಿವಿ ವೀಕ್ಷಣೆಗೆ ಅವಕಾಶ ನೀಡದಿರುವುದು, ದೇವಸ್ಥಾನಕ್ಕೆ ಏಕಾಂಗಿಯಾಗಿ ಹೋಗುವುದನ್ನು ನಿಷೇಧಿಸುವುದು, ಕಸಗುಡಿಸುವಂತೆ ಒತ್ತಾಯಿಸುವುದು, ಕಾರ್ಪೆಟ್ ಮೇಲೆ ಮಲಗುವಂತೆ ಮಾಡುವುದು ಕ್ರೌರ್ಯವಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್ ಪೀಠ ತೀರ್ಪು ನೀಡಿದೆ. 2003ರಲ್ಲಿನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೊಂದರಲ್ಲಿ ಪತಿ ಹಾಗೂ ಆತನ ಕುಟುಂಬದ ಸದಸ್ಯರಿಗೆ ಅಧೀನ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಭಯ್ ಎಸ್. ವಾಗ್ವಾಸೆ ಅವರಿದ್ದ ಏಕಸದಸ್ಯ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ. ಪ್ರಕರಣದಲ್ಲಿ ಪತಿ ಮತ್ತು ಅವರ ಕುಟುಂಬ ಸದಸ್ಯರನ್ನು ಕೋರ್ಟ್ ಖುಲಾಸೆಗೊಳಿಸಿದೆ. ವಾದ -ಪ್ರತಿವಾದ ಆಲಿಸಿದ ಹೈಕೋರ್ಟ್ ಪೀಠ ಇಂತಹ ಆರೋಪಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಮತ್ತು 306ರ ಅಡಿಯಲ್ಲಿ ಕಠಿಣ ಕ್ರಮಗಳಿಗೆ ಸಮನಾಗಿರುವುದಿಲ್ಲ ಎಂದು ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ವಿದರ್ಭ: ಕಾಂಗ್ರೆಸ್‌ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು, ಇದೀಗ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ವಿದರ್ಭದ ವಾರ್ಧಾದಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಂವಿಧಾನ ತಿದ್ದುಪಡಿ ಮಾಡಿದ್ದು, ಈಗ ಬಿಜೆಪಿಯ ವಿರುದ್ಧ ಆರೋಪ ಮಾಡ್ತಿದೆ ಎಂದರು. ಬಿಜೆಪಿಗೆ ಲೋಕಸಭೆಯಲ್ಲಿ 400 ಸ್ಥಾನಗಳು ಬಂದರೆ ಸಂವಿಧಾನವನ್ನು ಬದಲಾಯಿಸಲಾಗುತ್ತದೆ ಎಂದು ಕಾಂಗ್ರೆಸ್ ನವರು  ಭಾವನಾತ್ಮಕವಾಗಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್‌ ಪಕ್ಷವು ಸಂವಿಧಾನದಲ್ಲಿ ತಿದ್ದುಪಡಿ ಮಾಡಿತ್ತು  ಅವರು ಸಂವಿಧಾನವನ್ನು ಬದಲಿಸ್ತಾರೆ, ಆದರೆ ನಮ್ಮನ್ನು ದೂಷಿಸುತ್ತಾರೆ ಎಂದು ಗಡ್ಕರಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ ಕೊರಟಗೆರೆ : ಶೌಚಗುಂಡಿ ತುಂಬಿಹರಿದು ಶೇಖರಣೆಯಾಗಿದ್ದ ಕೊಳಚೆಯುಕ್ತ ಮಲದ ನೀರನ್ನು 14 ವರ್ಷದ ದಲಿತ ಬಾಲಕ ಮತ್ತು ದಲಿತ ವ್ಯಕ್ತಿಯಿಂದ ಸ್ವಚ್ಚಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ(ಏಜೆನ್ಸಿ) ಮತ್ತು ಸಂಚಾರ ನಿಯಂತ್ರಕ ಸೇರಿ 4 ಜನರ ಮೇಲೆ ತಹಶೀಲ್ದಾರ್ ಮಂಜುನಾಥ್ ನೀಡಿದ ದೂರಿನ ಅನ್ವಯ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಕೊರಟಗೆರೆ ಪಟ್ಟಣದ ಸರಕಾರಿ ಬಸ್‍ ನಿಲ್ದಾಣದ ಆವರಣದಲ್ಲಿನ ಹಳೆಯ ಶೌಚಗುಂಡಿಯ ಸಮೀಪ ದುರ್ಘಟನೆ ಜರುಗಿದೆ. ಸರಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಮೈಮೇಲೆ ಬಟ್ಟೆ ಮತ್ತು ಕೈಗಳಿಗೆ ಕೈಚೀಲ ಹಾಕದೇ ದಲಿತ ಸಮುದಾಯದ ಇಬ್ಬರು ಶೌಚಮಿಶ್ರಿತ ಕಲುಷಿತ ಕೊಳಚೆ ನೀರು ಮತ್ತು ಮಣ್ಣು ಸ್ವಚ್ಚ ಮಾಡುತ್ತಿರುವ ಬಗ್ಗೆ ಮಾಧ್ಯಮ ವರದಿ ಮಾಡಿತ್ತು. ಶೌಚದ ಘಟನೆಯ ಹಿನ್ನಲೆ ಏನು..? 2024ರ ನ.6ನೇ ಬುಧವಾರ 12ಗಂಟೆ ವೇಳೆ ಪರಿಶಿಷ್ಟ ಜಾತಿಗೆ ಸೇರಿದ ಬಾಲಕ ಮತ್ತು ವ್ಯಕ್ತಿಯೊರ್ವ ಕೊರಟಗೆರೆಯ ಸರಕಾರಿ ಬಸ್‍ ನಿಲ್ದಾಣದ ಶೌಚಗುಂಡಿಯ ಸಮೀಪ…

Read More

ಬೀದರ್: ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಚೌಬಾರಾ ಹತ್ತಿರ ಬೀದರ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ತಸ್ಲೀಮ್ ರವರು ತಮ್ಮ ಸಿಬ್ಬಂದಿ ರವರೊಂದಿಗೆ ಸಡಕ್ ಸುರಕ್ಷಾ, ಜೀವನ ರಕ್ಷಾ ಎಂಬ ವಾಕ್ಯದೊಂದಿಗೆ ವಾಹನ ಚಾಲಕರಿಗೆ, ಸಾರ್ಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಿದರು. ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸಿ, ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಿ ಅಮಾಯಕ ಪ್ರಾಣ ಕಾಪಾಡುವ ನಿಟ್ಟಿನಲ್ಲಿ ಬೀದರ್ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಜಾಗೃತಿ ಮೂಡಿಸಿದರು. ಪೊಲೀಸರ ಈ ಜಾಗೃತಿ ಜಾಥಾಕ್ಕೆ ಪ್ರಶಂಸೆ ವ್ಯಕ್ತವಾಗಿದ್ದು, ಈ  ಪೊಲೀಸರ ಈ ಪ್ರಯತ್ನಕ್ಕೆ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಕೈ ಜೋಡಿಸಿ, ಜನ ಸಾಮಾನ್ಯರ ಪ್ರಾಣ ರಕ್ಷಣೆಗೆ ಸಹಕರಿಸುವಂತೆ ಕೋರಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲೆಯ ತಿಪಟೂರಿನಲ್ಲಿ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಶನಿವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಸಾಂತ್ವಾನ ಹೇಳಿದೆ. ಹುಚ್ಚನಟ್ಟಿಯ ಮಕ್ಕಳ ಮನೆಗೆ ಭೇಟಿ ನೀಡಿದ ಮಕ್ಕಳ ರಕ್ಷಣಾ ಆಯೋಗದ  ತಿಪ್ಪೇಸ್ವಾಮಿ ಕೆ.ಟಿ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪರವಾಗಿ ಸಾಂತ್ವಾನ ತಿಳಿಸಿದರು. ಮಕ್ಕಳನ್ನು ಕಳೆದುಕೊಂಡವರ ಶೋಕ ನಿರಂತರವೆಂಬಂತೆ ಪೋಷಕರ ದುಃಖ ಮಡುಗಟ್ಟಿತ್ತು. ವಿವಿಧ ಇಲಾಖೆಗಳಿಂದ ಸಿಗಬಹುದಾದ ಪರಿಹಾರವನ್ನು ಆ ಕುಟುಂಬಕ್ಕೆ ಕೊಡಿಸುವ ಕೆಲಸವನ್ನು ಆಯೋಗ ಮಾಡಲಿದೆ. ಇಂತಹ ಘಟನೆಗಳು ಮರುಕಳಿಸದಿರಲೆಂದು ಆಶಿಸುತ್ತೇನೆ ಎಂದು ತಿಪ್ಪೇಸ್ವಾಮಿ ಕೆ.ಟಿ. ತಿಳಿಸಿದರು. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ವರದಿ ಪಡೆದಿದ್ದೇವೆ.  ಕಾಮಗಾರಿ ಸ್ಥಳಗಳಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಇರುವುದು ಕಡ್ಡಾಯ. ಅಜಾರೂಕತೆ ವಹಿಸಿದಲ್ಲಿ ಈ ರೀತಿಯ ದುರ್ಘಟನೆಗೆ ಕಾರಣವಾಗುತ್ತವೆ.  ಈ ಸಂಬಂಧ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಎತ್ತಿನಹೊಳೆ ಯೋಜನೆಯ ಸದರಿ…

Read More

ಛತ್ರಪತಿ ಸಂಭಾಜಿನಗರ: ಬಿಜೆಪಿಯೊಂದಿಗೆ 30 ವರ್ಷ ಮೈತ್ರಿ ಮಾಡಿಕೊಂಡರೂ ಶಿವಸೇನೆ ಬದಲಾಗಿಲ್ಲ, ಈಗ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡರೆ ಬದಲಾಗುತ್ತಾ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ನವೆಂಬರ್ 20 ರ ಮಹಾರಾಷ್ಟ್ರ ಚುನಾವಣೆಗೆ ಮುಂಚಿತವಾಗಿ ಕಲಂನೂರಿ, ಹಿಂಗೋಲಿ ಮತ್ತು ವಸ್ಮತ್ ವಿಧಾನಸಭಾ ಕ್ಷೇತ್ರಗಳ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಹಿಂಗೋಲಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಮಾತನಾಡಿ, ಬಿಜೆಪಿ ಮತ್ತು ಮೈತ್ರಿಕೂಟದ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಇಲ್ಲಿಗೆ ಬಂದು ನಾವು (ಶಿವಸೇನೆ-ಯುಬಿಟಿ) ಬಾಳಾಸಾಹೇಬ್ ಠಾಕ್ರೆ ಅವರ ಸಿದ್ಧಾಂತವನ್ನು ತ್ಯಜಿಸಿದ್ದೇವೆ ಎಂದು ಜನರಿಗೆ ಹೇಳುತ್ತಾರೆ. ನಾನು ಬಿಜೆಪಿ ಬಿಟ್ಟಿದ್ದೇನೆ ಹೊರತು ಸಿದ್ಧಾಂತ ಬಿಟ್ಟಿಲ್ಲ, ಬಾಳ್ ಠಾಕ್ರೆಯವರ ಚಿಂತನೆಯನ್ನು ಬಿಟ್ಟಿಲ್ಲ ಎಂದರು. ಶಿವಸೇನೆ ಕಾಂಗ್ರೆಸ್ ಆಗುವುದು ಹೇಗೆ? ಕಾಂಗ್ರೆಸ್ ನಮ್ಮೊಂದಿಗಿದೆ. 25–30 ವರ್ಷ ಜತೆಗಿದ್ದರೂ ಶಿವಸೇನೆ ಬಿಜೆಪಿಯಾಗಲಿಲ್ಲ. ಈಗ ಅದು ಕಾಂಗ್ರೆಸ್ ಆಗುವುದು ಹೇಗೆ? ಎಂದು…

Read More