Author: admin

ತುಮಕೂರು:  ವಿಶ್ವಮಟ್ಟದಲ್ಲಿ ಭಾರತದ ವೈದ್ಯರಿಗೆ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ತಂತ್ರಜ್ಞಾನ ಅಳವಡಿಕೆ, ಪರಸ್ಪರ ಶೈಕ್ಷಣಿಕ ಅಧ್ಯಯನ ಹಾಗೂ ಸಾಂಸ್ಕೃತಿಕ ವಿನಿಮಯಕ್ಕೆ ಸಂಬಂಧಪಟ್ಟಂತೆ ಒಪ್ಪಂದಗಳನ್ನು ಮಾಡಿಕೊಳ್ಳುವುದರ ಮೂಲಕ ಜಾಗತಿಕ ಪೈಪೋಟಿಯನ್ನು ಎದುರಿಸಲು ಸನ್ನದ್ದರಾಗುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಹೇ ವಿವಿ ಕೂಡ ಅಂತಾರಾಷ್ಟ್ರೀಯ ವಿವಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದು ಸಾಹೇ ವಿವಿಯ ಕುಲಾಧಿಪತಿ  ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು. ನಗರದ ಹೊರವಲಯದ ಅಗಳಕೋಟೆಯ ಡಾ.ಎಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ  ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ವಿಶ್ವವಿದ್ಯಾಯಲದ ವ್ಯಾಪ್ತಿಯ ಶ್ರೀ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ,  ಡೆಂಟಲ್ ಕಾಲೇಜು ಹಾಗೂ  ನೆಲಮಂಗಲದ ಶ್ರೀ ಸಿದ್ಧಾರ್ಥ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್‌ ನ  2024—25 ನೇ ಶೈಕ್ಷಣಿಕ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ‘ವೈಟ್ ಕೋಟ್ ಧಾರಣೆ ಮತ್ತು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಹಿಂದೆ ಇದ್ದ…

Read More

ಕರ್ನಾಟಕ ಸರ್ಕಾರವು ಪ್ರತಿವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. 1956ರಲ್ಲಿ ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಒಟ್ಟುಗೂಡಿಸಿ ಕರ್ನಾಟಕ ಎಂದು ನಾಮಕರಣ ಮಾಡಿ ಕರ್ನಾಟಕ ರಾಜ್ಯವನ್ನು ರಚಿಸಲಾಯಿತು. ಕರ್ನಾಟಕದಲ್ಲಿ   ನಮ್ಮನ್ನಾಳಿದ ಎಲ್ಲಾ ರಾಜಕೀಯ ಪಕ್ಷಗಳು ಕನ್ನಡವೇ ಆಡಳಿತ ಭಾಷೆ ಎಂದು ಘೋಷಿಸುತ್ತ ಬಂದಿದೆ. ಆದರೆ ಇದು ಸ್ವಲ್ಪಮಟ್ಟಿಗೆ ಕಾರ್ಯಗತವಾಗಿದ್ದರೂ ಸಹ ಸಂಪೂರ್ಣವಾಗಿ ಕನ್ನಡದಲ್ಲಿ ಆಡಳಿತ ನಡೆಸಲು ಸರ್ಕಾರಗಳು ವಿಫಲಗೊಂಡಿರುವುದು  ದುರಾದೃಷ್ಟಕರ ಸಂಗತಿಯಾಗಿದೆ ಎಂದು  ಹಿರಿಯ ಸಾಮಾಜಿಕ ಹೋರಾಟಗಾರ, ನೈಜ್ಯ ಹೋರಾಟಗಾರರ ವೇದಿಕೆ ಹೆಚ್.ಎಂ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದ್ದು, ಆದರೆ ಸಂತೋಷದ ವಿಷಯವೇನೆಂದರೆ, ಕರ್ನಾಟಕ ಸರ್ಕಾರವು ತಾಯಿ ಭುವನೇಶ್ವರಿಯ 25 ಅಡಿ  ಎತ್ತರದ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪನೆ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ. ದೇಶ ಕಂಡ ಅತ್ಯದ್ಭುತ ಕಟ್ಟಡಗಳಲ್ಲಿ ಒಂದಾದ ವಿಧಾನಸೌಧದ ಮುಂದೆ ಸರ್ಕಾರದ ಕೆಲಸ ದೇವರ ಕೆಲಸವೆಂದು ಬರೆಯಲಾಗಿದೆ. ಮತ್ತು ಈ ಶಕ್ತಿ ಕೇಂದ್ರದಿಂದಲೇ ಕರ್ನಾಟಕ ರಾಜ್ಯ ಸರ್ಕಾರ ನಾಗರಿಕರಿಗೆ ಆಡಳಿತ ನೀಡುತ್ತಿದೆ ಆದುದರಿಂದ…

Read More

ಭಟ್ಕಳ: ತಾಲೂಕಿನ ಕಡಲ ಕಿನಾರೆಯ ನೂಜಿ ಗ್ರಾಮದ ಗಂಜಿ ಗೆರೆಯಲ್ಲಿ ನೂತನ ಶ್ರೀ ಚಂದ್ರಪ್ರಭಾ ತೀರ್ಥಂಕರ ಜಿನಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಇಂದು ಸಂಪನ್ನಗೊಂಡಿತು. ಮುನಿಶ್ರೀ ವಿಧಿತ ಸಾಗರ ಮಹಾರಾಜರ ಪೂರ್ವಾಶ್ರಮದ ಧರ್ಮಭೂಮಿಯಲ್ಲಿ ಅವರ ಪ್ರೇರಣೆ , ಮಾರ್ಗದರ್ಶನ ಹಾಗೂ ಆಶೀರ್ವಾದದಿಂದ ಇಂದು ನೂತನ ಬಸದಿ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಗಳು ಭವ್ಯವಾಗಿ ನಡೆದವು. ಮುನಿಶ್ರೀ ವಿಧಿತ ಸಾಗರ ಮುನಿ ಮಹಾರಾಜರ ಶಿಷ್ಯರಾಜ ಮುನಿ ಶ್ರೀ ಸುಗಮ್ಯ ಸಾಗರ ಮಹಾರಾಜರ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಷ್ಠಾಪನಾಚಾರ್ಯ ಮಾಣಿಕ್ ಶ್ರೀಪಾಲ್ ಚಂದೆಗಡ್ ಸರ್ ಸದಲಗಾ ಬೆಳಿಗ್ಗೆ ಧ್ವಜಾರೋಹಣ ,ಜಲ ಅಭಿಷೇಕ, ಶಾಂತಿ ಧಾರೆ, ನಿತ್ಯ ಪೂಜೆ , ಜಿನಮಂದಿರದ ಶಿಲನ್ಯಾಸದ ಭೂಮಿ ಶುದ್ದಿ , ಜಪಾನೂಷ್ಟಾನ ,ಶಿಲನ್ಯಾಸ ಮಂಗಳ ದ್ರವ್ಯಗಳ ಶುದ್ದಿ, ಮಂಗಳ ಕಳಸ ಮತ್ತು ಕೂರ್ಮ ಶಿಲಾ ಸ್ಥಾಪನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಿದ್ದನಗೌಡ ಪಾಟೀಲ ಹಾರೋಗೆರೆ, ಮಂಜಯ್ಯ ಜೈನ್, ಜಯಕುಮಾರ್ ಜೈನ್, ಮಹಾವೀರ್ ಭಯ್ಯಜಿ , ಕಾಂತರಾಜು…

Read More

ಬೆಂಗಳೂರು: ರಾಜ್ಯದಲ್ಲಿ ದಿನಕ್ಕೆ ಈರುಳ್ಳಿ ದರ ಗಗನಕ್ಕೇರುತ್ತಿದೆ. ಇದರಿಂದಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದ್ದು, ಈಗ ಪ್ರತಿ ಕೆಜಿ ಈರುಳ್ಳಿ ದರ 70 ರೂ.ನಿಂದ 80 ರೂ.ಗೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ 100 ರೂ. ಗಡಿ ದಾಟುವ ಆತಂಕ ಎದುರಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡವರು, ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಇದರ ಬೆನ್ನಲ್ಲೆ ಈರುಳ್ಳಿ ದರ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದಲ್ಲಿ ಮಳೆ ಇಳಿಕೆಯಾಗಿದ್ದರೂ ಈರುಳ್ಳಿ ಧಾರಣೆ ಮಾತ್ರ ಕಡಿಮೆಯಾಗುತ್ತಿಲ್ಲ. ಕಳೆದ ತಿಂಗಳು ಸುರಿದ ಅಕಾಲಿಕ ಮಳೆಯಿಂದಾಗಿ ಈರುಳ್ಳಿ ನೀರು ಪಾಲಾಗಿದ್ದು, ಇದರಿಂದಲೇ ಈರುಳ್ಳಿ ದರ ದುಬಾರಿಯಾಗಲು ಪ್ರಮುಖ ಕಾರಣವಾಗಿದೆ. ಕಳೆದ 3 ತಿಂಗಳಿಂದ ಈರುಳ್ಳಿ ಬೆಲೆ ಗ್ರಾಹಕರ ಕೈ ಸುಡುತ್ತಿದೆ. ಮಳೆ ಇಲ್ಲದಿದ್ದರೂ 70 ರೂ. ಗಡಿ ದಾಟಿದೆ. ಭಾರೀ ಮಳೆಯಿಂದಾಗಿ ಈರುಳ್ಳಿ ಬೆಲೆ ನೆಲ ಕಚ್ಚಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಈರುಳ್ಳಿ ಬರುತ್ತಿಲ್ಲ.ಈಗ ಬರುತ್ತಿರುವ ಈರುಳ್ಳಿಯ ಗುಣಮಟ್ಟ ಚೆನ್ನಾಗಿಲ್ಲ.ಈರುಳ್ಳಿಯನ್ನು…

Read More

ತುಮಕೂರು:  ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನವೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮತದಾನ ಸಮಯದಲ್ಲಿ ಒಕ್ಕೂಟದಿಂದ ಸಂಘದ ಪ್ರತಿನಿಧಿ/ಡೆಲಿಗೇಟ್ ಅವರಿಗೆ ನೀಡಿರುವ ಗುರುತಿನ ಚೀಟಿಯನ್ನು ಮಾತ್ರ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ರಿಟರ್ನಿಂಗ್ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಸಹಾಯವಿಲ್ಲದೆ ಚಲಿಸಲು ಸಾಧ್ಯವಿಲ್ಲದಿರುವ ಅಂಧ(ದೃಷ್ಟಿಹೀನ) ಅಥವಾ ಅಶಕ್ತ ಮತದಾರರ ಜೊತೆಗೆ ಸಹಾಯಕರನ್ನು ಪಡೆಯಲು ಅವಕಾಶವಿದ್ದು, ಸಹಾಯಕರಾಗಿ ಬರುವ ವ್ಯಕ್ತಿಗಳು ಮತದಾರರ ಕುಟುಂಬದ ಸದಸ್ಯ(18 ವರ್ಷ ಮೇಲ್ಪಟ್ಟವರಾಗಿದ್ದು, ಆರೋಗ್ಯವಂತ ಹಾಗೂ ಸ್ವಸ್ಥಮನಸ್ಕರಾಗಿರಬೇಕು)ರಾಗಿರಬೇಕು. ಅಶಕ್ತ ಮತದಾರರಿಗೆ ಸಹಾಯಕರನ್ನು ಪಡೆಯುವ ಸಂಬಂಧ ಯಾವುದೇ ಗೊಂದಲಗಳಿದ್ದಲ್ಲಿ ರಿಟರ್ನಿಂಗ್ ಅಧಿಕಾರಿಯವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳ ಮರು ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮೀಕ್ಷೆಯ ಭಾಗವಾಗಿ ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಗುಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ ಹಾಗೂ ಶೌಚಾಲಯದ ಮಲದ ಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಯಾವುದೇ ವ್ಯಕ್ತಿಗಳಿದ್ದಲ್ಲಿ ಈ ಪತ್ರಿಕಾ ಪ್ರಕಟಣೆ ಪ್ರಕಟಣೆಯಾದ ದಿನಾಂಕದಿಂದ 10 ದಿನಗಳೊಳಗಾಗಿ ಕೊರಟಗೆರೆ ಪಟ್ಟಣ ಪಂಚಾಯತಿ ಆರೋಗ್ಯ ಶಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಭಾವಚಿತ್ರ(6*4 ಅಳತೆ), ಬ್ಯಾಂಕ್ ಖಾತೆ ಪಾಸ್ ಪುಸ್ತಕದ ಮುಖಪುಟದ ಪ್ರತಿ(ಮೂಲ ಪುಸ್ತಕ ತರಬೇಕು), ಆಧಾರ್ ಕಾರ್ಡ್(ಮೂಲ ಪ್ರತಿ ತರಬೇಕು), ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯ ನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರವನ್ನು ಹಾಜರುಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು:  ಭಾರತ ಚುನಾವಣಾ ಆಯೋಗವು ಘೋಷಿಸಿರುವ 185–ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ವೇಳಾಪಟ್ಟಿಯನ್ವಯ ಮತದಾನವು ನವೆಂಬರ್ 13ರಂದು ನಡೆಯಲಿದ್ದು, ಚುನಾವಣೆಯನ್ನು ಶಾಂತಿ, ಮುಕ್ತ, ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಸುಗಮವಾಗಿ ನಡೆಸುವ ಉದ್ದೇಶದಿಂದ 185–ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕುಣಿಗಲ್ ತಾಲ್ಲೂಕಿನ 5 ಕಿ.ಮೀ. ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶವು ನವೆಂಬರ್ 11ರ ಸಂಜೆ 5 ರಿಂದ ನ. 13ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ/ ಹಂಚಿಕೆ/ಸಾಗಾಣಿಕೆಯನ್ನು ನಿಷೇಧಿಸಿ ಶುಷ್ಕ ದಿನವೆಂದು ಘೋಷಿಸಿ ಅವರು ಆದೇಶಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  132–ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಂದೋಲನವು ನಿಗಧಿತ ದಿನಾಂಕದಂದು ಬೆಳಿಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಹಾಗೂ 132–ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಈಗಾಗಲೇ 2025ರ ಜನವರಿ 1ಕ್ಕೆ ಅನ್ವಯವಾಗುವಂತೆ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಚುರಪಡಿಸಲಾಗಿದ್ದು, ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಗದಿತ ನಮೂನೆಯಲ್ಲಿ ನವೆಂಬರ್ 28ರೊಳಗಾಗಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿಕೊಂಡು ಹೆಸರು ಸೇರ್ಪಡೆ/ತಿದ್ದುಪಡಿ/ಸ್ಥಳಾಂತರಕ್ಕೆ ಸಂಬಂಧಿಸಿದಂತೆ ನಿಗದಿತ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು:  ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 10ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ರಂಗಾಪುರ, ಲಿಂಗಾಪುರ, ಬಾಲಾಜಿ ಲೇಔಟ್, ಅಣ್ಣೆನಹಳ್ಳಿ, ಮರಳೇನಹಳ್ಳಿ, ಪಿ.ಜಿ.ಮ್ಯಾಗೋ ಲೇಔಟ್, ಹೆಬ್ಬಾಕ ರಸ್ತೆ, ಹೆಬ್ಬಾಕ, ನರಸಾಪುರ, ಡಿ.ಎಂ. ಪಾಳ್ಯ, ಪಿಎನ್‌ಆರ್ ಪಾಳ್ಯ, ಕುಪ್ಪೂರು, ಹೊಸಹಳ್ಳಿ, ಹಾರೋನಹಳ್ಳಿ, ನರಸಾಪುರ, ಕೆ.ಜಿ.ಪಾಳ್ಯ, ಶ್ರೀದೇವಿ ಕಾಲೇಜು, ಸಿರಾಗೇಟ್, ವಾಸವಿನಗರ, ಹೊಸಹಳ್ಳಿ, ಎಸ್.ಎನ್.ಪಾಳ್ಯ, ಹೊನ್ನೇನಹಳ್ಳಿ, ಭಜಂತ್ರಿ ಪಾಳ್ಯ, ನಾಗಣ್ಣನಪಾಳ್ಯ, ಹೌಸಿಂಗ್ ಬೋರ್ಡ್, ಮಲ್ಲೇನಹಳ್ಳಿ, ಊರುಕೆರೆ, ಹಂಚಿಹಳ್ಳಿ, ತಿಪುರಮ್ಮಪಾಳ್ಯ, ಕಟ್ಟಿಗೇನಹಳ್ಳಿ, ಕೋರಾ ಅಮಾನಿಕೆರೆ, ಕೆಎಐಡಿಬಿ ಕೈಗಾರಿಕಾ ಪ್ರದೇಶ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಲ್ ಅಂಡ್ ಟಿ ಫೈನಾನ್ಸಿಯಲ್ ಸರ್ವೀಸಸ್ ಹಾಗೂ ಮ್ಯಾಫ್ ಗಾರ್ಮೆಂಟ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಹಾಜರಾಗಬಹುದಾಗಿದೆ. ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ(ಯಾವುದೇ ಟ್ರೇಡ್), ಯಾವುದೇ ಪದವಿ ಪಾಸಾದ ಹಾಗೂ ಟೈಲರಿಂಗ್ ಅರ್ಹತೆ ಹೊಂದಿದವರು (ಟೈಲರಿಂಗ್‌ನಲ್ಲಿ ಅರ್ಹತೆ ಇಲ್ಲದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ನೇಮಕಾತಿ ಮಾಡಲಾಗುವುದು) ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆAದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More