Subscribe to Updates
Get the latest creative news from FooBar about art, design and business.
- ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
- ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
Author: admin
ತುಮಕೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯಲ್ಲಿರುವ ರುಡ್ ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಮಹಿಳೆಯರಿಗಾಗಿ 30 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಡಿಸೆಂಬರ್ 10 ರಿಂದ ಆರಂಭವಾಗಲಿದ್ದು, ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡ ಓದಲು/ಬರೆಯಲು ಬರುವಂತಹ ಹಾಗೂ 18 ರಿಂದ 45 ವರ್ಷ ವಯೋಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380162042, 9241482541ನ್ನು ಸಂಪರ್ಕಿಸಬಹುದಾಗಿದೆ ಎಂದು ತರಬೇತಿ ಸಂಸ್ಥೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ಜಿಲ್ಲೆಯ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಬಿ.ಇ(ಸಿವಿಲ್) ಹಾಗೂ ಡಿಪ್ಲೋಮಾ(ಸಿವಿಲ್) ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಲು ಡಿಸೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಉದ್ಯೋಗ ಮೇಳವು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, 9071021143, 9513136642ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಜೀವಶಾಸ್ತ್ರ ಉಪನ್ಯಾಸಕರ ವೇದಿಕೆ ಮತ್ತು ವಾಸವಿ ಪದವಿಪೂರ್ವ ಕಾಲೇಜು ತುಮಕೂರು ವತಿಯಿಂದ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ತುಮಕೂರು ನಗರದ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿ ಜೀವಶಾಸ್ತ್ರ ವಿಷಯದ ವೇದಿಕೆ ಮೂಲಕ ಸಿದ್ಧಪಡಿಸಿರುವ 2024–25 ನೇ ಸಾಲಿನ ದ್ವಿತೀಯ ಪಿಯುಸಿ ಜೀವಶಾಸ್ತ್ರ ವಿಷಯದ ಪ್ರಾಯೋಗಿಕ ಯೋಜಿತ ಕಾರ್ಯಗಳ ಕೈಪಿಡಿ ಬಿಡುಗಡೆ ಮಾಡಿದ ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಜಿಲ್ಲೆಯ ಫಲಿತಾಂಶ ಹೆಚ್ಚಿಸಲೂ ನಿಮ್ಮ ಸಹಕಾರ ಅಗತ್ಯ. ಇಲಾಖೆಯ ನಿಯಮದಂತೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ. ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳು ನೀವು ಸಿದ್ಧಪಡಿಸಿದ ಮಾದರಿಯ ಪ್ರಶ್ನೆಪತ್ರಿಕೆ ನೋಡಿ ವಾರ್ಷಿಕ ಪರೀಕ್ಷೆಯನ್ನೂ ಯಾವುದೇ ಆತಂಕ ಪಡದೆ ಪರೀಕ್ಷೆಯನ್ನೂ ಬರೆಯಬೇಕು ಎಂದರು. ಈ ವರ್ಷ ಪ್ರಾಯೋಗಿಕ ಪರಿಕ್ಷೆಯಲ್ಲಿ ವೆಬ್ ಕ್ಯಾಮರಾ ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಎಲ್ಲಾ ಕಾಲೇಜಿನ ಮಕ್ಕಳು ನಮ್ಮ…
ತುಮಕೂರು: ರಾಜ್ಯ ಸರ್ಕಾರ ಕಥಾ ಕೀರ್ತನ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಸುಮಾರು 9 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಕೀರ್ತನ ಕ್ಷೇತ್ರವನ್ನೇ ಮರೆತಿದೆ ಎಂದು ಹರಿಕಥಾ ವಿದ್ವಾನ್ ಕಲಾಶ್ರೀ ನರಸಿಂಹದಾಸ್ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಎಸ್.ಎಸ್.ಪುರಂನಲ್ಲಿ ಕೀರ್ತನ ರಂಗ ಬಳಗ (ರಿ.), ತುಮಕೂರು, ಶ್ರೀ ಸೀತಾರಾಮ ದೇವಸ್ಥಾನ ವಿಶ್ವಸ್ಥ ಸಮಿತಿ, ಎಸ್.ಎಸ್. ಪುರಂ, ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಥಾ ಕೀರ್ತನ ಸಂಭ್ರಮ 2024 ರ ಅಂಗವಾಗಿ ಹಮ್ಮಿಕೊಂಡಿದ್ದ ಕಥಾಕೀರ್ತನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸಂಗೀತ, ನೃತ್ಯ ಅಕಾಡೆಮಿಯಿಂದ ಕಥಾ ಕೀರ್ತನ ಕ್ಷೇತ್ರವನ್ನು ಬೇರ್ಪಡಿಸಿ ಕಥಾ ಕೀರ್ತನ ಅಕಾಡೆಮಿಯನ್ನು ಸ್ಥಾಪಿಸುವಂತೆ ಹಾಗೂ ಕೀರ್ತನ ಕ್ಷೇತ್ರದ ಸಾಧಕರಾದ ವಸಂತಲಕ್ಷ್ಮೀ÷್ಮ ಮತ್ತು ಕು. ಮಾಲಿನಿಯವರನ್ನು ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಲಕ್ಷಿಸಿರುವುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾ ಮಟ್ಟದಲ್ಲಿ ಕೀರ್ತನಕಾರರನ್ನು ಕಡೆಗಣಿಸಿರುವ ವಿಚಾರ ಮತ್ತು ಹರಿಕಥೆ ಎಂದರೆ ಏನು…
ತುಮಕೂರು: ನಗರದ ಜಿಲ್ಲಾ ವಕೀಲರ ಸಂಘದಲ್ಲಿಇಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರು ವಕೀಲರ ದಿನಾಚರಣೆ ಪ್ರಯುಕ್ತ ವಕೀಲರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ಇಂ ದು ಭಾರತದ ಪ್ರಥಮ ರಾಷ್ಟ್ರಪತಿ ಡಾ.ಬಾಬುರಾಜೇಂದ್ರ ಪ್ರಸಾದ್ ರವರ ಹುಟ್ಟುಹಬ್ಬದ ನಿಮಿತ್ತ ವಕೀಲರ ದಿನಾಚರಣೆಯನ್ನು ಪ್ರಪಂಚದಾದ್ಯಂತ ಆಚರಿಸುತ್ತಿದ್ದು, ವಕೀಲರು ದೇಶದ ಕಣ್ಣು ನೊಂದವರ ಕಣ್ಣೀರು ಒರೆಸಿ ನ್ಯಾಯಾಲಯದ ಮೂಲಕ ನ್ಯಾಯದಾನ ಒದಗಿಸುವಲ್ಲಿ ವಕೀಲರ ಪಾತ್ರ ಅತ್ಯಂತ ಹಿರಿದು, ಈ ನಿಟ್ಟಿನಲ್ಲಿ ವಕೀಲರು ಸದಾ ಒತ್ತಡದಲ್ಲಿರುತ್ತಾರೆ. ಅವರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು, ಆದ್ದರಿಂದ ಇಂದು ನಮ್ಮ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘ, ಶ್ರೀದೇವಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಕೀಲರು, ವಕೀಲರ ಕಚೇರಿಯ ಗುಮಾಸ್ತರುಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಿಗ್ಗಿನಿಂದ ಸಂಜೆವರೆಗೂ ಆಯೋಜಿಸಲಾಗಿದೆ, ಈ ಶಿಬಿರದಲ್ಲಿ…
ತುಮಕೂರು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ ಅಸ್ಲಾಂ ಪಾಷ ಎಂಬ ಮಹಿಳೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಒಂದೇ ದಿನದಲ್ಲಿ 20*30 ಅಳತೆಯ ನಿವೇಶನವನ್ನು ಹಂಚಿಕೆ ಮಾಡಿ ಠರಾವು ಅಂಗೀಕರಿಸಲಾಗಿದೆ. ಮಹಿಳೆಯ ಬಡತನವನ್ನು ಮನಗಂಡು ಆಶ್ರಯ ಯೋಜನೆಯಡಿ ರಾಬಿಯಾ ಅವರಿಗೆ ನಿವೇಶನ ನೀಡಲು 2024ರ ಸೆಪ್ಟೆಂಬರ್ 25ರಂದು ನಡೆದ ಶಿರಾ ಆಶ್ರಯ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ರಾಬಿಯಾಗೆ ನಿರ್ಣಯ ಕೈಗೊಂಡ ಆಶ್ರಯ ಸಮಿತಿ ಸಭೆಯ ನಡಾವಳಿ ಪತ್ರವನ್ನು ನೀಡಿದರು. ಶಿರಾ ನಗರದಲ್ಲಿ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ ಪೈಕಿ ಸರ್ವೇ ನಂಬರ್ 100ರಲ್ಲಿ 20*30 ಅಳತೆಯ ಒಂದು ನಿವೇಶನವನ್ನು ರಾಬಿಯಾ ಅವರ ಕುಟುಂಬಕ್ಕೆ ಹಂಚಿಕೆ ಮಾಡಲು ತಿರ್ಮಾನಿಸಲಾಗಿದೆ. ಅರ್ಜಿದಾರರ ಸೂಕ್ತ ದಾಖಲೆಗಳನ್ನು ರಾಜೀವ್ ಗಾಂಧಿ ವಸತಿ…
ತುಮಕೂರು: ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ–ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ತುಮಕೂರು, ತುರುವೇಕೆರೆ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು. ಬೆಳೆ ಹಾನಿಯಲ್ಲಿ ಪರಿಹಾರ ಹಣ ಪಾವತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಬಾಕಿ ಉಳಿದ ಪರಿಹಾರ ಹಣ ನೀಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರೈತರಿಗೆ ನೋಟಿಸ್ ನೀಡಿರುವ ಪ್ರಕರಣಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ…
ತುಮಕೂರು: ದಲಿತ ಕುಟುಂಬಗಳಿಗೆ ಉದ್ದೇಶ ಪೂರ್ವಕವಾಗಿ ಹಕ್ಕು ಪತ್ರಗಳನ್ನು ನೀಡದಿರುವ ಹಿನ್ನೆಲೆ ನೊಂದ ಗ್ರಾಮಸ್ಥರು ಆಹೋರಾತ್ರಿ ಧರಣಿ ನಡೆಸುತ್ತಿರುವ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ, ಕರಡಿಕಲ್ಲು, ಕುನ್ನಾಲ, ಕಿಟ್ಟದಕುಪ್ಪೆ, ಮಡೇನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ನೀಡಿದ ದಲಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಯಲ್ಲಿ ಕೆಲ ದಲಿತ ಕುಟುಂಬಗಳಿಗೆ ಉದ್ದೇಶ ಪೂರ್ವಕವಾಗಿ ಹಕ್ಕು ಪತ್ರಗಳನ್ನು ನೀಡಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆಯಿಂದ ತಹಶೀಲ್ದಾರ ಬಿ. ಆರತಿ ಹಾಗೂ ಇ.ಓ.ಶಿವಪ್ರಕಾಶ ಅವರ ವಿರುದ್ಧ ಆಹೋರಾತ್ರಿ ಧರಣಿ ನಡೆಯುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿದ್ದು, ಈ ವೇಳೆ ಪ್ರತಿಭಟನಾಕಾರರು, ತಹಶೀಲ್ದಾರ್ ಹಾಗೂ ಕಾರ್ಯ ನಿರ್ವಣಾಧಿಕಾರಿ ವಿರದ್ಧ ಕ್ರಮ ಕೈಗೊಳ್ಳುವುದಕ್ಕೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ದಲಿತ ಮುಖಂಡರುಗಳು ಹಾಜರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಗುಜರಾತ್ ರಾಜ್ಯದಲ್ಲಿ ರಾಜ್ಯಪಾಲರನ್ನು ಗೌರವಾನ್ವಿತ ಎಂಬುದಾಗಿ ಇರಿಸಿ, ಎಲ್ಲಾ ಅಧಿಕಾರವನ್ನು ಅದ್ರಲ್ಲಿ ಕುಲಸಚಿವ, ರಿಜಿಸ್ಟ್ರಾರ್ ನೇಮಕಾತಿ ಸೇರಿದಂತೆ ವಿಶ್ವವಿದ್ಯಾಲಯಗಳ ಪ್ರತಿಯೊಂದು ಆಡಳಿತ ವ್ಯವಸ್ಥೆಯನ್ನು ಬದಲಾಯಿಸಿ ಸರಕಾರದ ಸುಪರ್ಧಿಗೆ ತೆಗೆದುಕೊಂಡರು. ಅದೇ ರೀತಿ ಗುಜರಾತ್ ಮಾಡೆಲ್ ಅನ್ನು ನಮ್ಮ ರಾಜ್ಯದಲ್ಲಿ ಅಳವಡಿಸಿಕೊಂಡು, ಪ್ರಸ್ತುತ ಆರ್ ಡಿಪಿ ಆರ್ ವಿಶ್ವ ವಿದ್ಯಾಲಯಕ್ಕೆ ಮುಖ್ಯಮಂತ್ರಿಗಳು ಕುಲಪತಿಗಳನ್ನಾಗಿ ನೇಮಕ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದನದಲ್ಲಿ ಇದಕ್ಕೆ ಸಂಬಂಧಿಸಿದ ಆಕ್ಟ್ ಗಳನ್ನು ಮಂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಆರ್ ಡಿಪಿ ಆರ್ ವಿವಿಯಲ್ಲಿ ಮುಖ್ಯಮಂತ್ರಿಗಳನ್ನು ಕುಲಪತಿಗಳನ್ನಾಗಿ ಮಾಡಿ ಜಾರಿಗೆ ತರಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲಾ ವಿವಿ ಗಳಿಗೆ ವಿಸ್ತರಿಸಬಹುದಾಗಿದೆ ಎಂದರು. ಗುಜರಾತ್ ಮಾಡೆಲ್ ಉತ್ತಮವಾಗಿದೆ ಎಂದರೆ, ಅದನ್ನು ಮಾಡಬಹುದಾಗಿದೆ. ಅಲ್ಲದೆ ನಮ್ಮ ರಾಜ್ಯವನ್ನು ಅವರು ಕೂಡ ಎಷ್ಟೊಂದು ಯೋಜನೆಗಳನ್ನು ಅನುಕರಣೆ ಮಾಡಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿವಿಯಲ್ಲಿನ ಬದಲಾವಣೆಯನ್ನು ನಾವು ಅನುಕರಿಸಿದ್ದೇವೆ. ಯಾವುದನ್ನು ವಿರೋಧಿಸಬೇಕು ಎಂದು ಇದ್ದರೆ ಇಂದಿಗೂ…
ಬೆಳಗಾವಿ: ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ–ಆರ್ಥಿಕ–ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು. ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರಿನ ವೀರ ರಾಣಿ ಹೆಸರಿನ ವಿಶ್ವವಿದ್ಯಾಲಯ ಇದಾಗಿದೆ. ರಾಣಿ ಚನ್ನಮ್ಮ ಎಂದರೆ ಅದಮ್ಯ ರಾಷ್ಟ್ರಪ್ರೇಮ, ಸ್ವಾಭಿಮಾನ ಹಾಗೂ ಸ್ತ್ರೀಶಕ್ತಿ ಸಂಕೇತ, ಬೆಳಗಾವಿ–ವಿಜಯಪುರ ಭಾಗದ ಜನರಿಗೆ ಜ್ಞಾನದ ಬೆಳಕು ಹಂಚುವ…