Author: admin

ತುಮಕೂರು: ಕ್ರೀಡೆಗಳು  ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಸಾಮರಸ್ಯದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿವೆ ಎಂದು   ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯ ಪಟ್ಟರು. ನಗರದ ಮಹಾತ್ಮಾ ಗಾಂಧಿ  ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಡೆದ    ಪದವಿ ಪೂರ್ವ ಕಾಲೇಜುಗಳ   ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕಾರ್ಯಕ್ರಮವನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ  ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವವರನ್ನು ಒಂದೆಡೆಗೆ ಸೇರಿಸುವ ಮೂಲಕ ಏಕತೆಯ ಮನೋಭಾವ ಬೆಳೆಸುವ ಇಂತಹ  ಕ್ರೀಡಾಕೂಟಗಳಿಗೆ  ಇನ್ನೂ ಹೆಚ್ಚಿನ ಪ್ರೋತ್ಸಾಹ ದ  ಅವಶ್ಯಕತೆ ಇದೆ ಎಂದರು. ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ಭಾರತಕ್ಕೆ ಲಭಿಸಿರುವ ಪದಕಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಬೇಸರ ವ್ಯಕ್ತ ಪಡಿಸಿದ ಅವರು  ದೇಶದಲ್ಲಿ ಅಥ್ಲೆಟಿಕ್ಸ್ ಕ್ರೀಡೆಗಳನ್ನಾಡುವ ಪ್ರತಿಭಾವಂತ ಕ್ರೀಡಾ ಪಟುಗಲು ಇದ್ದು, ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನದ ಅಗತ್ಯವಿದೆ. ದೇಶದ ಪ್ರತಿಷ್ಠಿತ ಸಂಸ್ಥೆ ಮತ್ತು ವಿಶ್ವ ವಿದ್ಯಾನಿಲಯಗಳಿಗೆ ಸೀಮಿತವಾಗಿದ್ದ  ಅಥ್ಲೆಟಿಕ್ಸ್ ಕ್ರೀಡೆಗಳು ಇಂದು ಎಲ್ಲಾ ಹಂದ ಶಾಲಾ ಕಾಲೇಜುಗಳಿಗೆ ವ್ಯಾಪಿಸಿದೆ. ಮುಂದಿನ…

Read More

ತುಮಕೂರು:  ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 8ರಂದು ಜಿಲ್ಲೆಯ 12 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 8ರಂದು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಅಗ್ರಹಾರ; ತುರುವೇಕೆರೆ ತಾಲ್ಲೂಕಿನ ಸಂಪಿಗೆ; ತಿಪಟೂರು ತಾಲೂಕಿನ ತಡಸೂರು; ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ; ತುಮಕೂರು ತಾಲೂಕಿನ ಕೆಸರುಮಡು ಹಾಗೂ ಹಿರೇಹಳ್ಳಿ; ಕುಣಿಗಲ್ ತಾಲೂಕಿನ ಕಿತ್ನಾಮಂಗಲ ಹಾಗೂ ತಾವರೆಕೆರೆ; ಕೊರಟಗೆರೆ ತಾಲೂಕಿನ ಬುಕ್ಕಪಟ್ಟಣ; ಪಾವಗಡ ತಾಲ್ಲೂಕಿನ ತಿರುಮಣಿ; ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಹಾಗೂ ಬೆಲವತ್ತ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು:  ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಕಳೆದ ಅಕ್ಟೋಬರ್ 9ರಂದು ಜಿಲೆಟಿನ್ ಸ್ಪೋಟದಿಂದ ಕೈ ಬೆರಳುಗಳು ತುಂಡಾಗಿದ್ದ ಸರ್ಕಾರಿ ಹಿರಿಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರಿಗೆ ಬರವಣಿಗೆ ತರಬೇತಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಯ ತಾಯಿ ನಳಿನ ತಮ್ಮ ಮಗನ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ ಕೈಗೊಂಡ ಅಭಿನಂದನೆ ಸಲ್ಲಿಸಲು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮೋನಿಶ್ ಗೌಡ ಅವರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದರು. ಜಿಲೆಟಿನ್ ಸ್ಫೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕೈಬೆರಳುಗಳು ಪೂರ್ಣ ಗುಣಮುಖವಾದ ನಂತರ ಫಿಜಿûಯೋಥೆರಪಿ ಮೂಲಕ ಬರವಣಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ದೂರವಾಣಿ ಮೂಲಕ ಸ್ಥಳದಲ್ಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.…

Read More

ತುಮಕೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ರುಡ್‌ ಸೆಟ್ ಸಂಸ್ಥೆಯು ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಗೆ ಬ್ಯೂಟಿ ಪಾರ್ಲರ್ ಕುರಿತು 30 ದಿನಗಳ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ನವೆಂಬರ್ 12 ರಿಂದ ಪ್ರಾರಂಭವಾಗಲಿದ್ದು, ಅರ್ಜಿದಾರರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ತುಮಕೂರು:  ಜಿಲ್ಲಾಡಳಿತ ವತಿಯಿಂದ ನವೆಂಬರ್ ಮಾಹೆಯಲ್ಲಿ ಆಚರಿಸಲಾಗುತ್ತಿರುವ ಸಂತ ಶ್ರೇಷ್ಠ ವೀರರಾಣಿ ಒನಕೆ ಓಬವ್ವ ಜಯಂತಿ ಹಾಗೂ ಕನಕದಾಸರ ಜಯಂತಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವೆಂಬರ್ 11ರಂದು ವೀರರಾಣಿ ಒನಕೆ ಓಬವ್ವ ಜಯಂತಿ ಮತ್ತು ನವೆಂಬರ್ 18ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಒನಕೆ ಓಬವ್ವ ಹಾಗೂ ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವ ಮೂಲಕ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. ಜಯಂತಿ ಅಂಗವಾಗಿ ಸಮುದಾಯದ ತಲಾ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸ್ಕೃತಿ…

Read More

ಕೊಲ್ಲಂ: ಕೇರಳದ ಪ್ರಯಾಣಿಕರಿಗೆ 10 ಹೊಸ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳು ಶೀಘ್ರದಲ್ಲೇ ಲಭ್ಯವಾಗಲಿದೆ. ಕೇರಳ ರಾಜ್ಯಾದ್ಯಂತ 10 ಹೊಸ ವಂದೇ ಭಾರತ್ ರೈಲು ಓಡಾಡಲಿದೆ. ಈ ಹೊಸ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳು ಭದ್ರತೆಗಾಗಿ ಸ್ವಯಂಚಾಲಿತ ಸ್ಲೈಡಿಂಗ್ ಡೋರ್‌ ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ಸೌಕರ್ಯಗಳನ್ನು ಹೊಂದಿವೆ. ಈ ವಂದೇ ಭಾರತ್ ರೈಲುಗಳೊಂದಿಗೆ, ಪ್ರವಾಸಿಗರು ವಿವಿಧ ಸ್ಥಳಗಳಲ್ಲಿ ಪ್ರಯಾಣಿಸುವಾಗ ರಾಜ್ಯದ ನೈಸರ್ಗಿಕ ಸೌಂದರ್ಯ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಅನ್ವೇಷಿಸಲು ಇಡೀ ಕೇರಳಕ್ಕೆ ಭೇಟಿ ನೀಡಬಹುದು. ಈ 10 ರೈಲುಗಳು ಕೇರಳದ ಪ್ರವಾಸೋದ್ಯಮ ಕ್ಷೇತ್ರವನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ, ಇದು ಸುಧಾರಿತ ಪ್ರಯಾಣದ ಅನುಭವವನ್ನು ನೀಡುತ್ತದೆ. ಈ 10 ರೈಲುಗಳ ಪೈಕಿ ಎರಡು ರೈಲುಗಳು ಕೊಲ್ಲಂನಿಂದ ತಿರುನೆಲ್ವೇಲಿ ಮತ್ತು ತ್ರಿಶೂರ್‌ ಗೆ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ. ತ್ರಿಶೂರ್ ಮಾರ್ಗವನ್ನು ದೇವಾಲಯದ ಪಟ್ಟಣವಾದ ಗುರುವಾಯೂರಿಗೆ ವಿಸ್ತರಿಸುವ ಯೋಜನೆಯೂ ಇದೆ. ಇದರೊಂದಿಗೆ, ಹೆಚ್ಚುವರಿ ಮಾರ್ಗಗಳು ತಿರುವನಂತಪುರದಿಂದ ಎರ್ನಾಕುಲಂ ಮತ್ತು ಗುರುವಾಯೂರಿನಿಂದ ತಮಿಳುನಾಡಿನ ಮಧುರೈಗೆ…

Read More

ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೂವರು ಅಪರಾಧಿಗಳಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ(ಪೋಕ್ಸೋ) ನ್ಯಾಯಾಲಯವು ಜೀವಾವಧಿ ಶಿಕ್ಷೆ(ಸಾಯುವವರೆಗೂ ಶಿಕ್ಷೆ) ವಿಧಿಸಿ ತೀರ್ಪು ನೀಡಿದ್ದು, ಭಾರೀ ಮೊತ್ತದ ದಂಡವನ್ನು ವಿಧಿಸಲಾಗಿದೆ. ಈ ಘಟನೆ ತುರುವೇಕೆರೆ ಪೊಲೀಸ್ ಠಾಣಾ ಸರಹದ್ದಿನಲ್ಲಿ  ನಡೆದಿದ್ದು,  14 ವರ್ಷ ವಯಸ್ಸಿನ ನೊಂದ ಬಾಲಕಿ ರೇಷನ್ ತರಲು ಅಂಗಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ 2ನೇ ಆರೋಪಿಯಾಗಿರುವ ರತ್ನಮ್ಮ ಅಲಿಯಾಸ್ ನಾಗರತ್ನಮ್ಮ ಪರಿಚಯಿಸಿಕೊಂಡಿದ್ದಳು. ಬಳಿಕ ತನ್ನ ಮನೆಗೆ ಕರೆದುಕೊಂಡು ಹೋಗಿದ್ದಳು. ನೊಂದ ಬಾಲಕಿಗೆ ಅಜ್ಜಿ ಮಾತ್ರವೇ ಇರುವುದನ್ನು ತಿಳಿದ ರತ್ನಮ್ಮ, ಆಕೆಯನ್ನು ತನ್ನ ಮನೆಯಲ್ಲಿ ಕೂಡಿ ಹಾಕಿದ್ದಳು. ಕೊಲೆ ಬೆದರಿಕೆ ಹಾಕಿದ್ದಳು. ಅಲ್ಲದೇ ನಿನ್ನ ಅಜ್ಜಿಯನ್ನೂ ಸಾಯಿಸುವುದಾಗಿ ಬೆದರಿಸಿದ್ದಳು. ಬಳಿಕ 3ನೇ ಆರೋಪಿ ನಾಗರತ್ನಳನ್ನು ತನ್ನ ಮನೆಗೆ ಕರೆಸಿಕೊಂಡು 1ನೇ ಆರೋಪಿ ನಾಗೇಂದ್ರ(45) ಎಂಬಾತನನ್ನು ಮನೆಗೆ ಕರೆಸಿಕೊಂಡು ನೊಂದ ಬಾಲಕಿಯ ಮೇಲೆ ಹಲವಾರು ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ 2ನೇ ಆರೋಪಿ ರತ್ನಮ್ಮ ಮತ್ತು…

Read More

ತುಮಕೂರು: ತುಮಕೂರು ಜಿಲ್ಲೆ ಬಜ್ಜನಹಳ್ಳಿಯಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಲಾಶ್ ಎಂಬ ವಿದ್ಯಾರ್ಥಿ ಅನಿರೀಕ್ಷಿತವಾಗಿ ಮೃತಪಟ್ಟ ವಿಷಯಕ್ಕೆ ಸಂಬಂಧಪಟ್ಟಂತೆ ಇಂದು ಪರಮೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಚಿವ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವಂತಹ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ನಡೆದ ಅನಾಹುತಕ್ಕೆ ಕಾರಣ ಏನು ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹೈದರಾಬಾದ್: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಜೀವ ಬೆದರಿಕೆಯ ನಡುವೆಯೇ ಸಲ್ಮಾನ್ ಖಾನ್ ಅವರು ಚಿತ್ರೀಕರಣ ನಡೆಸುತ್ತಿದ್ದಾರೆ. ಸಲ್ಮಾನ್ ಖಾನ್ ಸದ್ಯ ಸಿಕಂದರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇವರಿಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿದ್ದಾರೆ. ಚಿತ್ರದ ಶೂಟಿಂಗ್ ನಲ್ಲಿ ಸಲ್ಮಾನ್ ಖಾನ್ ಭಾಗಿಯಾಗಿರುವ ಫೋಟೋಗಳು ಮತ್ತು ವೀಡಿಯೊಗಳು ಈಗ ಆನ್ ಲೈನ್ನಲ್ಲಿ ಸೋರಿಕೆಯಾಗಿವೆ. ಸೂಪರ್ಸ್ಟಾರ್ ಸಲ್ಮಾನ್ ಖಾನ್ ಬೆದರಿಕೆಗಳ ನಡುವೆಯೇ ಯಾವುದೇ ಆತಂಕವಿಲ್ಲದೆ ಶೂಟಿಂಗ್ ಮಾಡುತ್ತಿದ್ದಾರೆ. ಅವರು ತಮ್ಮ ಮುಂಬರುವ ಚಿತ್ರ ಸಿಕಂದರ್ ಗಾಗಿ ಹೈದರಾಬಾದ್ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಹೈದರಾಬಾದ್ನ ಪ್ರತಿಷ್ಠಿತ ಫಲಕ್ನುಮಾ ಪ್ಯಾಲೇಸ್ ನಲ್ಲಿ ಸಲ್ಮಾನ್ ಶೂಟಿಂಗ್ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಆದರೆ ವರದಿಗಳ ಪ್ರಕಾರ ಇದು ಆಕ್ಷನ್ ಥ್ರಿಲ್ಲರ್ ಚಿತ್ರ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚನ್ನಪಟ್ಟಣ: ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ. ಹಾಸನದಲ್ಲಿ ಇಂಥದೇ ಷಡ್ಯಂತ್ರ ಮಾಡಿದರು. ಚನ್ನಪಟ್ಟಣದಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಬ್ರದರ್ಸ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದ ಸೋಗಾಲಪಾಳ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ವಿಧಾನಸೌಧದಲ್ಲಿ ಮಾತಾಡಿರುವ ಆಡಿಯೋವನ್ನು ಅವರು ಎಲ್ಲಾ ಸಭೆಗಳಲ್ಲಿ ಕೇಳಿಸುತ್ತಿದ್ದಾರೆ. ಅವರಿಗೆ ಎಷ್ಟು ಹತಾಶೆ, ಸೋಲಿನ ಭೀತಿ ಕಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಕೇವಲ ಒಂದು ತುಣುಕು ಕತ್ತರಿಸಿ ಬಿಡುವುದಲ್ಲ, ಪೂರ್ಣ ಆಡಿಯೋ ಬಿಡಲಿ, ಆಗ ಅವರ ಮರ್ಯಾದೆ ಏನು ಎನ್ನುವುದು ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಡಿಯೋ ಬಿಡುಗಡೆ ಡಿ.ಕೆ.ಸುರೇಶ್ ಬಗ್ಗೆ ಕೆಂಡಾಮಂಡಲರಾದ ಕುಮಾರಸ್ವಾಮಿ, ಸಿಡಿ ಆಡಿಯೋ, ವಿಡಿಯೋ ಬಿಡುವುದಲ್ಲಿ ಡಿಕೆ ಸಹೋದರರು ನಿಪುಣರು. ಅವರು ಇಂಥ ದಂಧೆಗಳನ್ನೇ ಮಾಡಿಕೊಂಡು ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಆ ಆಡಿಯೋ ಹಳೆಯದು. ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು. ಒಂದು ವಾರದಿಂದ ಅದನ್ನು ಕತ್ತರಿಸಿ ಹಂಚುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೆ.…

Read More