Subscribe to Updates
Get the latest creative news from FooBar about art, design and business.
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
Author: admin
ತುಮಕೂರು: ಫೇಕ್ ನೋಟಿಸ್ ಎಂದು ಹೇಳುತ್ತಿರುವ ಬಿಜೆಪಿಯ ಕೆಲ ನಾಯಕರು ಹೇಳುತ್ತಿರುವುದರಲ್ಲಿ ಅರ್ಥವಿದೆಯೇ? ನಿನ್ನೆ ವಿಜಯೇಂದ್ರ ಸಹಿ ಮಾಡಿರುವುದು ಫೇಕ್ ನೋಟಿಸ್ ಗೆ ಎಂದು ಹೇಳುತ್ತಿರುವುದು ಮತ್ತು ಸಹಿ ಮಾಡುವುದು ಹುಡುಗಾಟವೇ ಅನಗತ್ಯವಾಗಿ ಮಾತನಾಡಬಾರದು ಎಂದು ಬಿಜೆಪಿ ಮುಖಂಡ ರೇಣುಕಾಚಾಯ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರಿನ ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪತ್ರಕತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಕಣ್ಣೀರು ಹಾಕಿದ್ದಾರೆ. ಅವರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಶಾಸಕರು, ಮತ್ತು ಸಚಿರಾಗಿದ್ದೆವು. ಅನಗತ್ಯವಾದ ಟೀಕೆಗೆ ಜಗ್ಗಲ್ಲ ಬಗ್ಗಲ್ಲ, ವಿಜಯೇಂದ್ರ ನೇತೃತ್ವದಲ್ಲಿ ನಾವು ಚುನಾವಣೆಗೆ ಹೋಗುತ್ತೇವೆ ಎಂದರು. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಬೇಕಿದೆ. ಅನಗತ್ಯವಾಗಿ ಯಡಿಯೂರಪ್ಪ ಮತ್ತು ವಿಜೇಂದ್ರ ವಿರುದ್ಧ ಟೀಕೆ ಮಾಡಿದರೆ ದೊಡ್ಡವರಾಗುತ್ತೇವೆ ಎಂದು ಕೊಂಡಿದ್ದಾರೆ ಎಂದು ಟೀಕಿಸಿದರು. ಕುಮಾರಬಂಗಾರಪ್ಪ ಅವರನ್ನು ರಾಜಕೀಯವಾಗಿ ಪುನರ್ ವಸತಿ ತಂದು ಕೊಟ್ಟದ್ದು ಯಡಿಯೂರಪ್ಪ ಅವರು, ವಿಜೇಂದ್ರ ಅವರೇ ರಾಜ್ಯದ ಅಧ್ಯಕ್ಷರಾಗಿ ಮುಂದುವರೆಯಲಿದ್ದು ಅವರ…
ಬೀದರ್ : ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಐ.ಪಿ.ಎಸ್, ಅವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ಬೀದರ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ತಸ್ಲೀಮಾ ಅವರ ನೇತೃತ್ವದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ವಾಹನ ಚಾಲಕರಿಗೆ ಅರಿವು ಮೂಡಿಸಲಾಯಿತು. ಬೀದರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಗವಾನ ಚೌಕ ದಿಂದ ಶಾಹಗಂಜ ಕಮಾನ ವರೆಗೆ ರಸ್ತೆ ದಟ್ಟಣೆ ಅಧಿಕ ಇದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ರಸ್ತೆ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಅಧಿನಿಯಮದ ಅಡಿಯಲ್ಲಿ ಸಾರ್ವಜನಿಕರಿಗೆ ಒಂದು ಕಡೆ ಪಾರ್ಕಿಂಗ್ (One side parking) ಮಾಡಲು ತಿಳಿಸಿ ಹಾಗೂ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಸಂಚಾರಿ ದಟ್ಟಣೆ ನೀಗಿಸುವ ನಿಟ್ಟಿನಲ್ಲಿ ಬೀದರ್ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರು ಸದಾ ಪ್ರಯತ್ನಿಸುತ್ತಿದ್ದು, ಅವರ ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಕೋರಲಾಗಿದೆ ಎಂದು ಪ್ರದೀಪ್ ಗುಂಟಿ, ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ…
ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದರು. ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಬೆಂಬಲಿಗರ ಜೊತೆ ಆಗಮಿಸಿದ ಅವರು, ಹಾಸನಕ್ಕೆ ತೆರಳೋ ಮಾರ್ಗ ಮಧ್ಯೆ ಯಡಿಯೂರಿಗೆ ಭೇಟಿ ನೀಡಿದ್ದರು. ರೇಣುಕಾಚಾರ್ಯಗೆ ಜಿಲ್ಲೆಯ ಬಿಜೆಪಿ ಮುಖಂಡರು,ಬೆಂಬಲಿಗರು ಸಾಥ್ ನೀಡಿದರು. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ದೇವರು ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೈಸೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ನಡಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಚ್ ಡಿ ಕೋಟೆ ಘಟಕಕ್ಕೆ ಸೇರಿದ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಸ್ ನ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ತಾಂತ್ರಿಕ ದೋಷಗಳಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಮುಸ್ಲಿಮರ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಇದೀಗ ವಿಚಾರಣೆಗೆ ಹಾಜರಾಗಲು ಅನಾರೋಗ್ಯದ ಕಾರಣ ನೀಡಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದ ಬಳಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಸಮುದಾಯದವರಿಗೆ ಮತದಾನದ ಹಕ್ಕು ರದ್ದುಪಡಿಸಬೇಕೆಂದು ಶ್ರೀಗಳು ಮಾತನಾಡಿದ್ದರು. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಠಾಣೆಗೆ ಬಂದು ವಿಚಾರಣೆಗೆ ಹಾಜರಾಗಲು ಪೊಲೀಸರು ಸ್ವಾಮೀಜಿವರಿಗೆ ನೋಟೀಸ್ ನೀಡಿದ್ದರು. ಆದರೆ ಆರೋಗ್ಯ ಸರಿ ಇಲ್ಲದಿರುವುದರಿಂದ ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ ಎಂದು ಶ್ರೀಗಳು ಪೊಲೀಸ್ ಅಧಿಕಾರಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಬಾಯಿ ತಪ್ಪಿನಿಂದ ತಾವು ಹೇಳಿಕೆ ನೀಡಿದ್ದಾಗಿ ಹಾಗೂ ಅದಕ್ಕೆ ವಿಷಾದವನ್ನು ವ್ಯಕ್ತಪಡಿಸುವುದಾಗಿ ಸ್ವಾಮೀಜಿ ಹೇಳಿದ್ದರು. ಅಲ್ಲದೆ ಈ ವಿಚಾರವನ್ನು ಬೆಳೆಸದಂತೆ ಮುಕ್ತಾಯಗೊಳಿಸಬೇಕೆಂದು ಕೋರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಭಾರತೀಯ ಸಮಾಜದಲ್ಲಿ ಪ್ರಮುಖ ಹಾಗೂ ಪುರಾತನವಾದ ಜೇನು ಸಂಸ್ಕೃತಿ ಸಂಸ್ಕಾರಗಳು ವಿನಾಶದ ಅಂಚಿನಲ್ಲಿದ್ದು, ಇವುಗಳ ಪುನರು ಜೀವನದಲ್ಲಿ ಜಿನ ಭಜನೆಗಳು ಪ್ರಮುಖ ಪಾತ್ರವಹಿಸಿವೆ ಎಂದು ಬೆಳಗಾವಿ ಚಕ್ರೇಶ್ವರಿ ಮಹಿಳಾ ಸಮಾಜದ ಅಧ್ಯಕ್ಷೆ ಉಷಾ ಸಂಜಯ್ ಪಾಟೀಲ್ ತಿಳಿಸಿದರು. ಅವರಿಂದು ದಕ್ಷಿಣ ಭಾರತ ಜೈನ ಮಿಲನ, ಮಾಣಿಕ್ ಬಾಗ್ ದಿಗಂಬರ್ ಜೈನ್ ಬೋರ್ಡಿಂಗ್, ದಕ್ಷಿಣ ಕನ್ನಡ ಜೈನ್ ಮೈತ್ರಿ ಕೂಟ , ಸೆಂಟ್ರಲ್ ಜೈನ್ ಬೋರ್ಡಿಂಗ್ ಬೆಳಗಾವಿ ಇವರ ಸಹಯೋಗದಲ್ಲಿ ಬೆಳಗಾವಿಯ ಶ್ರೀ ಧರ್ಮನಾಥ ಭವನದಲ್ಲಿ ಭಾರತೀಯ ಜೈನ್ ಮಿಲನ್ ವಲಯ– 8 ರ ಜಿನ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿನ ನಾಮ ಸ್ಮರಣೆ ಗೆ ಆತ್ಮ ಚಿಂತನೆ ಅಗತ್ಯ, ಜಿನ ಸಂಸ್ಕಾರಗಳನ್ನು ಮನೆಮನೆಗೆ ಕೊಂಡಿಯುತ್ತಿದ್ದು, ನಶಿಸುತ್ತಿರುವ ಜಿನಭಜನೆಗೆ ಪುನರುಜ್ಜೀವನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ, ಹೇಮಾವತಿ.ವಿ .ಹೆಗಡೆ ,ಅನಿತಾ ಸುರೇಂದ್ರ ಕುಮಾರ್, ಧರ್ಮಸ್ಥಳ ಸುರೇಂದ್ರ ಕುಮಾರ್…
ಬೆಳಗಾವಿ: ಜಿನ ಭಜನೆಯಲ್ಲಿ ಮಾಡುವ ಸಂಗೀತಕ್ಕೆ ಅದರಿಂದ ಮೂಡಿಬರುವ ಶಬ್ದಗಳು ಸಹಕಾರಿಯಾಗಲಿವೆ, ನಿಶ್ಚಲತೆಯಿಂದ ಶಕ್ತಿ ಬರುತ್ತದೆ, ಮನಸ್ಸು ಮೌನವಾದಾಗ ಧ್ಯಾನವಾಗುತ್ತದೆ. ಇದು ಶಕ್ತಿಯಾಗಿ ನಂತರ ಸರಳವಾಗಿ ಭಜನೆ ಆಗುತ್ತದೆ ಎಂದು ಧಾರವಾಡ ವಿಶ್ವವಿದ್ಯಾಲಯದ ಉಪಕುಲಪತಿ ನಿರಂಜನ್ ಹೆಗಡೆ ತಿಳಿಸಿದರು. ಅವರಿಂದು ಬೆಳಗಾವಿಯ ಶ್ರೀ ಧರ್ಮನಾಥ ಭವನದಲ್ಲಿ ಭಾರತೀಯ ಜೈನ್ ಮಿಲನ್ ವಲಯ –8. ಜಿನ ಭಜನಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿನ ಭಜನ ಸಂಘಟನೆ ಕಷ್ಟದ ಕೆಲಸ, ಈ ಜಿನ ಭಜನೆ ಈ ಹಿಂದೆ ನಿತ್ಯದ ಭಜನೆಯಾಗಿತ್ತು, ಟಿ.ವಿ. ಬಂದ ನಂತರ ಭಜನೆ ತಿರುಸ್ಕೃತವಾಯಿತು ,ಇಂಟರ್ನೆಟ್ ಬಂದ ನಂತರ ತನ್ನ ಅಸ್ತಿತ್ವವನ್ನು ಕಳೆದುಕೊಂಡಿತು. ಇಂತಹ ಜಿನ ಭಜನೆಗೆ ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ , ಡಾ. ಹೇಮಾವತಿ ಹೆಗಡೆ, ಅನಿತಾ ಸುರೇಂದ್ರ ಕುಮಾರ್ ಹಾಗೂ ಧರ್ಮಸ್ಥಳ ಸುರೇಂದ್ರ ಕುಮಾರ್ ಅವರು ಹೊಸ ರೂಪ ನೀಡಿ ಜೀವ ತುಂಬಿದರು. ಹಳ್ಳಿ ಹಳ್ಳಿಗಳಲ್ಲಿ ಭಜನಾ ಕಮಟಗಳನ್ನು ನಡೆಸಿ ಹೊಸ ರೂಪ ನೀಡಿದರು .ಇದು ಇಂದು ಗ್ರಾಮೀಣ…
ಉಡುಪಿ: ಸಂವಿಧಾನ ಬದಲಿಸಬೇಕು ಎನ್ನುವ ಮಾತುಗಳನ್ನು ನಾನು ಆಡಿಯೇ ಇಲ್ಲ ಅಂತ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ‘ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಅಲ್ಲಿ ನನ್ನ ಭಾಷಣದಲ್ಲಾಗಲಿ ಅಥವಾ ರಾಜ್ಯಪಾಲರಿಗೆ ಸಲ್ಲಿಸಲಾದ ಸಮಾವೇಶದ ನಿರ್ಣಯಗಳ ಲಿಖಿತ ಪ್ರತಿಯಲ್ಲಾಗಲಿ ಸಂವಿಧಾನ ಬದಲಾಯಿಸುವ ಕುರಿತ ಯಾವುದೇ ಉಲ್ಲೇಖ ಇಲ್ಲ. ಆದರೂ ಕೆಲವರು ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ ಎಂದರು. ನನ್ನ ವಿರುದ್ಧ ಪ್ರತಿಭಟಿಸುವ ಮತ್ತು ಖಂಡಿಸುವ ಕೆಲಸವಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಅವರ ಹೇಳಿಕೆಯಿಂದ ಇಷ್ಟೆಲ್ಲ ಆಗಿದೆ, ಅವರು ಪರಿಶೀಲಿಸಿ ಮಾತನಾಡಬೇಕಾಗಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇಲ್ಲಿ ಹಿಂದೂಗಳ ಭಾವನೆಗೂ ಬೆಲೆ ಕೊಡುವ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಾನು ಹೇಳಿದ್ದು ಹೌದು. ಸಂವಿಧಾನ ಬದಲಿಸಿ ಅಥವಾ ತಿದ್ದುಪಡಿ ಮಾಡಿ ಎಂದು ನಾನು ಯಾವತ್ತೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಇತ್ತೀಚಿನ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದಲ್ಲಿರುವ ವಿಚಾರಗಳಿಗೆ ಮಾತ್ರ ಗಮನವನ್ನು ಹರಿಸುತ್ತಿದ್ದು, ಅದರಂತೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ಕೊಡಬೇಕು ಎಂದು ಡಾ.ಪಿ.ಹೇಮಲತಾ ತಿಳಿಸಿದ್ದಾರೆ. ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಐಕ್ಯೂಎಸಿ ಹಾಗೂ ಮ್ಯಾಜಿಕ್ ಬಸ್ ಸಹಯೋಗ ಆಯೋಜನೆ ಮಾಡಿದ್ದ ಆಂತರಿಕ ಗುಣಮಟ್ಟದ ಭರವಸೆ ಸೆಲ್, ಪ್ಲೇಸ್‌ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಸ್ತಕದಲ್ಲಿರುವ ವಿಚಾರಗಳನ್ನು ಮಾತ್ರ ವಿದ್ಯಾರ್ಥಿಗಳು ಗಮನವಹಿಸುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳು ಇಲ್ಲದೆ ಇರುವ ವಿಚಾರಗಳು ಸಮಾಜದಲ್ಲಿ ಇದಾವೆ ಅದರ ಬಗ್ಗೆ ಹೆಚ್ಚಿನದಾಗಿ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ತಮ್ಮ ಜೀವನ ಮುಂದೆ ಬರಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್ ಅವರು ಮಾತನಾಡಿ, ನಾನು ಓದುವಂತಹ ಸಂದರ್ಭದಲ್ಲಿ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ನಾನು…