Subscribe to Updates
Get the latest creative news from FooBar about art, design and business.
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
Author: admin
ಶ್ರವಣಬೆಳಗೊಳ: ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭವು ಡಿ.06 ರಂದು ನೆರವೇರಲಿದೆ ಎಂದು ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿಪಂಡಿತಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ತಿಳಿಸಿದರು. ಪಟ್ಟಣದ ಶ್ರೀ ಕಾನಜಿಸ್ವಾಮಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿದರು. ಶ್ರೀಕ್ಷೇತ್ರ ಶ್ರವಣಬೆಳಗೊಳದ ಅಭಿವೃದ್ಧಿಯ ಹರಿಕಾರ, ಧವಲತ್ರಯ ಗ್ರಂಥಗಳ ಅನುವಾದ ಪ್ರಕಾಶನ ಪ್ರವರ್ತಕರು, ಪ್ರಾಕೃತ ಭಾಷಾ ಪ್ರಸಾರಕರು, ಜನಕಲ್ಯಾಣ ಚಿಂತಕರು, ಚಂದ್ರಗಿರಿ ಮಹೋತ್ಸವ ಪ್ರವರ್ತಕರು, ಕ್ಷೇತ್ರದಲ್ಲಿನ 40 ಬಸದಿಗಳ ಜೀರ್ಣೋದ್ಧಾರ ಮಾಡಿಸಿದ ತೀರ್ಥ ಸಂರಕ್ಷಕರು, ಪಂಥ ರಹಿತ ಸಂತ, ಪರಮಶ್ರುತಭಕ್ತ, ಶಿಕ್ಷಣ ಪ್ರೇಮಿ, ಉತ್ತರ ಮತ್ತು ದಕ್ಷಿಣ ಭಾರತದ ಜೈನ ಸಮಾಜದ ಸೇತುವೆಯಾಗಿದ್ದ ಪ್ರಾತಃಸ್ಮರಣೀಯ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಐದು ದಶಕಗಳ ಕಾಲ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಕ್ಷೇತ್ರ ಶ್ರವಣಬೆಳಗೊಳವನ್ನು ವಿಶ್ವಮನ್ನಣೆಗೊಳಿಸಿರುತ್ತಾರೆ.…
ತುಮಕೂರು: ಕೀರ್ತನ ರಂಗ ಬಳಗ (ರಿ.), ತುಮಕೂರು, ಶ್ರೀ ಸೀತಾರಾಮ ದೇವಸ್ಥಾನ ವಿಶ್ವಸ್ಥ ಸಮಿತಿ, ಎಸ್.ಎಸ್. ಪುರಂ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಥಾ ಕೀರ್ತನ ಸಂಭ್ರಮ ೨೦೨೪ ರ ಅಂಗವಾಗಿ ಹಮ್ಮಿಕೊಂಡಿದ್ದ ಕಥಾಕೀರ್ತನ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ನೋಡುಗರ ಗಮನ ಸೆಳೆಯಿತು. ಎಸ್.ಎಸ್.ಪುರಂನಲ್ಲಿರುವ ಶ್ರೀ ಸೀತಾರಾಮ ದೇವಾಲಯದ ಆವರಣದಲ್ಲಿ 4 ದಿನಗಳ ಕಾಲ ನಡೆದ ಕಥಾಕೀರ್ತನ ಸಂಭ್ರಮದಲ್ಲಿ ಭಾರತೀಯ ಸಾಂಸ್ಕೃತಿ ಕಲಾ ಪ್ರಕಾರಗಳಲ್ಲಿ ವಿಶಿಷ್ಟ ಕಲೆಯಾದ ಕಥಾಕೀರ್ತನೆಯನ್ನು ಹರಿಕಥಾ ವಿದ್ವಾಂಸರುಗಳಾದ ಮೈಸೂರಿನ ಮಾಲಿನಿ ಮತ್ತು ತಂಡ, ಶೀಲಾನಾಯ್ಡು, ವಸಂತಲಕ್ಷ್ಮೀ ಮತ್ತು ತಂಡ, ತುಮಕೂರಿನ ಕೀರ್ತನ ರಂಗ ಬಳಗದ ಅಧ್ಯಕ್ಷ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕಲಾಶ್ರೀ ನರಸಿಂಹದಾಸ್ ಅವರು ನಡೆಸಿಕೊಟ್ಟರು. ಹಿರಿಯ ಕೀರ್ತನಗಾರ್ತಿ ಕಲಾಶ್ರೀ ಬೇಲೂರು ವಸಂತಲಕ್ಷ್ಮೀ ಅವರು ಮೈಸೂರಿನಿಂದ ಆಗಮಿಸಿ ಐರಾವಣ, ಶ್ರೀರಾಮಪಟ್ಟಾಭಿಷೇಕ, ಕು. ಮಾಲಿನಿ ಗಂಗಾವತರಣ, ಶ್ರೀರಾಮಾಂಜನೇಯ ಯುದ್ಧ ಹಾಗೂ ವಸಂ ಸೀತಾರಾಮರ ಜನನದಿಂದ ಕಲ್ಯಾಣದವರೆಗೆ ವಸಂತಲಕ್ಷ್ಮೀ ಅವರು ಉತ್ತಮವಾಗಿ…
ಹನ್ನೆರಡನೇ ಶತಮಾನದ ದಾರ್ಶನಿಕ ಬಸವಣ್ಣನವರ ಅಂತ್ಯದ ಬಗ್ಗೆ ಇನ್ನೂ ಖಚಿತವಾದ ಸಂಶೋಧನೆಗಳು ನಡೆಯದೇ ಇರುವ ಸಂದರ್ಭದಲ್ಲಿ ಶಾಸಕರಾದ ಯತ್ನಾಳರು ಬಸವಣ್ಣ ಹೊಳೆಗೆ ಹಾರಿ ಬಿದ್ದು ಸತ್ತುಹೋದ ಎಂದು ಹೇಳಿರುವುದು ಅವರ ಅಜ್ಞಾನದ ಪರಮಾವಧಿ. ಈ ಮೂಲಕ ಅವರು ಬಸವಾನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿರುವುದೇ ಅಲ್ಲದೆ ಲಿಂಗಾಯಿತರನ್ನು ಅವಮಾನಿಸುವ ಮೂಲಕ ವೈದಿಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು. ಅವರು ಬಸವಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯಟ್ರಸ್ಟ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾದವರು ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಶರಣಸಂಗಮ ಮತ್ತು ವಿಜಯಕುಮಾರ ಕಮ್ಮಾರ್ ಅವರ ಶರಣ ಸಿದ್ಧಾಂತಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಾಮಾಜಿಕ ಕಳಕಳಿ ಇದ್ದ ಬಸವಣ್ಣ ದುರ್ಬಲ ಮನಸ್ಸಿನವರಾಗಿದ್ದರೆ ಅವರು ಅಂದು ಅಧಿಕಾರದ ಉನ್ನತ ಅಧಿಕಾರದಲ್ಲಿದ್ದರು ಇಡೀ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡು ಸಾಮಾನ್ಯ ಜನರ ಪರವಾಗಿ ಹೋರಾಟ ಮಾಡುತ್ತಿರಲಿಲ್ಲ. ಅವರ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು, ಸಮಪಾಲು, ಸಮಬಾಳು ಎಂಬುದೇ ಬಸವಣ್ಣನ ಘೋಷಮಂತ್ರವಾಗಿತ್ತು ಎಂದರು. ಉಪನ್ಯಾಸ ನೀಡಿದ ಸಾಹಿತಿಗಳಾದ…
ಹೆಬ್ಬೂರು: ಕನ್ನಡಕ್ಕೂ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಒಂದು ನಂಟಿದೆ ಎಂದು ಮುಖಂಡರು ಹಾಗೂ ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯರಾದ ಮಂಜುನಾಥ್ ಹೆತ್ತೇನಹಳ್ಳಿ ತಿಳಿಸಿದರು. ಹೋಬಳಿಯ ಅಂಬೇಡ್ಕರ್ ಆಟೋ ಚಾಲಕರ ಸಂಘದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯಗಳ ಸ್ವಾಯತ್ತತೆ ಬಗ್ಗೆ ಅಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಸಭೆಯಲ್ಲಿ ಮಾತನಾಡಿದ್ದರು. ಇಲ್ಲದಿದ್ದರೆ ಇಂತಹ ಹೆಮ್ಮೆಯ ಕರುನಾಡನ್ನು ಕಟ್ಟಿಕೊಳ್ಳಲು ನಮಗೆ ಸಾಧ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಭಾರತ ಆಚಾರ, ವಿಚಾರ ಹಾಗೂ ಭಾಷೆಗಳಲ್ಲಿ ವೈವಿಧ್ಯತೆಯನ್ನು ಹೊಂದಿರುವ ದೇಶವೆಂದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಇಂತಹ ವೈವಿಧ್ಯಮಯ ದೇಶ ಸಂವಿಧಾನದ ಮೂಲಕ ಮಾತ್ರವೇ ಏಕತೆ ಸಾಧಿಸಲು ಸಾಧ್ಯ ಎಂದು ಅವರಿಗೆ ತಿಳಿದಿತ್ತು ಎಂದು ಹೇಳಿದರು. ನಮ್ಮ ದೇಶವನ್ನು ಹೊರತು ಪಡಿಸಿ ಇಡೀ ಪ್ರಪಂಚ ಬಾಬಾ ಸಾಹೇಬರನ್ನು ನೋಡಿದ್ದು ಜ್ಞಾನದ ದೃಷ್ಟಿಯಿಂದ ಮಾತ್ರ. ಬಾಬಾ ಸಾಹೇಬರ ವಿವೇಚನೆಗೆ ಬರದಂತಹ ಯಾವ ವಿಷಯಗಳೂ ಈ ಪ್ರಪಂಚದಲ್ಲಿ ಇಲ್ಲ. ವರ್ಷದ…
ಪೆರ್ನಾಜೆ: ಸಂಗೀತ ಶಾಲೆ ವಿಟ್ಲ, ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ ಸಮಾರಂಭವು ಡಿ.1ರಂದು ಸಭಾಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ವೈವಿಧ್ಯಮಯವಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ ಸೌಮ್ಯ ಪೆರ್ನಾಜೆ ದಂಪತಿಗಳಿಗೆ, ಕಲಾ ನಿರ್ದೇಶಕರು, ಕಲಾ ಪೋಷಕರು, ಸಂಶೋಧಕರು, ಜೇನು ಗಡ್ಡ ಹವ್ಯಾಸಿ ಪತ್ರಕರ್ತರು, ವಿಶೇಷ ಬರಹಗಳಿಂದ ಗಮನ ಸೆಳೆದ ಇವರನ್ನು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೊಡಂದೂರ್ ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಿದರು. ವೇದಿಕೆಯಲ್ಲಿ ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು, ವಿದ್ವಾನ್ ಡಾ.ಎ.ಆರ್.ನಾರಾಯಣ ಪ್ರಕಾಶ್ ಕ್ಯಾಲಿಕಟ್, ವಿದ್ವಾನ್ ಕೊಂಡಪಪಳ್ಳಿ ಗೋಪ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದ್ಮರಾಜ ಚಾರ್ಮಾಕ ಕಾರ್ಯಕ್ರಮ ನಿರೂಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು. ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ…
ಬೇಲೂರು: ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಮಾದಿಹಳ್ಳಿ ಹೋಬಳಿಯ ಐತಿಹಾಸಿಕ ತಾಣ ಜೈನರ ಗುತ್ತಿಯ ಶ್ರೀ ಪಂಚ ಕಲ್ಯಾಣ ಮಹೋತ್ಸವದ ಪ್ರತಿಷ್ಠಾ ಮಹೋತ್ಸವದಲ್ಲಿ ತುಮಕೂರು ಜೈನ ಸಮಾಜದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿದರು. ಕಾರ್ಯಕ್ರಮದ ಅಂಗವಾಗಿ ತುಮಕೂರಿನ ಜೈನ ಬಾಂಧವರು, ಶ್ರೀ ಮಂದಾರ ಗಿರಿಯಾತ್ರ ಸಂಘ ಸೇರಿದಂತೆ ಜೈನ ಪ್ರವಾಸಿ ತಂಡಗಳು ತಂಡ ಇನ್ನಿತರ ಸಂಘ-ಸಂಸ್ಥೆಗಳು ಭೇಟಿ ನೀಡಿ ಶ್ರೀ ಪಾರ್ಶ್ವನಾಥ ಬಸದಿ ,ಶ್ರೀ ಶೀತಲನಾಥ ತೀರ್ಥಂಕರ ವಿಗ್ರಹ ಶ್ರೀ ಮುನಿಸುವೃತ ನಾಥ ಪ್ರತಿಮೆಗಳ ದರ್ಶನ ಮಾಡಿ ಪುನೀತರಾದರು. ಇದಕ್ಕೂ ಮೊದಲು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕಿನ ,ನಿಟ್ಟೂರು ಗ್ರಾಮದ ಶ್ರೀ ಶಾಂತಿನಾಥ ತೀರ್ಥಂಕರ ಹಾಗೂ ಮಾತೇ ಶ್ರೀ ಜ್ವಾಲಾ ಮಾಲಿನಿಯ ದರ್ಶನ ಪಡೆದ ಜಿನ ಬಂಧುಗಳು, ಪ್ರಸಿದ್ಧವಾದ ಬಸದಿಯ ಶಿಲ್ಪಕಲೆಯ ಸೂಕ್ಷ್ಮ ಕೆತ್ತನೆ ಕುಸರಿಯ ಸವಿ ಸವಿದರು. ನಂತರ ಅದೇ ತಾಲೂಕಿನ ಮುಸುಕುಂಡಿ ಮುಸು ಕೊಂಡ್ಲಿ ಗ್ರಾಮದ ಶ್ರೀ ಮಹಾವೀರ ಜೈನಬಸದಿಯ ದರ್ಶನ ಪಡೆದ ಶ್ರಾವಕರು,…
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸ ಕೋಶ, ಪ್ಲೇಸ್ ಮೆಂಟ್ ಸೆಲ್ ಹಾಗೂ 5 ದಿನಗಳ ಕೌಶಲ್ಯ ವರ್ಧಕ ಕಾರ್ಯಕ್ರಮಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಣಿಗಲ್ ಸಿದ್ಧಾರ್ಥ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿನಜ್ ಕುಮಾರ್ ಸಿ.ಎಸ್, ಸಿದ್ಧಾರ್ಥ ಪಿಯು ಕಾಲೇಜು ಪ್ರಾಂಶುಪಾಲರಾದ ಭಾನುಪ್ರಕಾಶ್, ಮ್ಯಾಜಿಕ್ ಬಸ್ ನ ಹಿರಿಯ ತರಬೇತಿದರಾದ ಸೌಮ್ಯ, ಶ್ರೀ ಸಿದ್ದಾರ್ಥ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಕೆ.ಎಚ್.ಖಲಂದರ್ ಪಾಷಾ, ಐಕ್ಯೂಎಸಿ ಸಂಚಾಲಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ರಮೇಶ್ ಮಣ್ಣೆ, BCA ವಿಭಾಗ ಮುಖ್ಯಸ್ಥ ಶಿವರಂಗಯ್ಯ, ಐಕ್ಯೂಎಸಿ ಕೋ–ಆರ್ಡಿನೇಟರ್ ಮತ್ತು ಪ್ಲೇಸ್ಮೆಂಟ್ ಅಧಿಕಾರಿ ಸೈಯದ್ ಬಾಬು ಎಚ್.ಬಿ, ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಪಿ. ಹೇಮಲತಾ ಅವರು ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ, ಸರ್ಕಾರ ರಚನೆಗೆ ಭರ್ಜರಿ ಕಸರತ್ತು ನಡೆಯುತ್ತಿದೆ. ಈ ನಡುವೆ ಬಿಜೆಪಿಯಿಂದ ಮುಖ್ಯಮಂತ್ರಿಯನ್ನ ಆಯ್ಕೆ ಮಾಡಬೇಕು ಎಂದು ಬಿಜೆಪಿ ಸತತ ಒತ್ತಡ ಹಾಕುತ್ತಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನುವಾಗಲೇ ಏಕನಾಥ್ ಶಿಂಧೆ ಅವರು ಹೊಸ ಕ್ಯಾತೆ ತೆಗೆದಿದ್ದಾರೆ. ಹೌದು..! ಫಲಿತಾಂಶ ಪ್ರಕಟವಾಗಿ ಹತ್ತು ದಿನ ಸಮೀಪಿಸುತ್ತಿದ್ದರೂ ಮಹಾರಾಷ್ಟ್ರದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ವಿಚಾರ ಗೊಂದಲದಲ್ಲೇ ಕಳೆಯುತ್ತಿದೆ. ಈ ನಡುವೆ, ಏಕನಾಥ್ ಶಿಂಧೆ “ಜನ ನನ್ನನ್ನು ಮತ್ತೆ ಮುಖ್ಯಮಂತ್ರಿಯಾಗಿ ನೋಡುವುದಕ್ಕೆ ಆಸೆ ಪಡ್ತಿದ್ದಾರೆ” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ. ನಾನು ಉತ್ತಮ ಕೆಲಸ ಮಾಡಿರುವುದರಿಂದ ಜನ ಮತ್ತೆ ನಾನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಬೇಕು ಎಂದು ಬಯಸುತ್ತಿದ್ದಾರೆ. ಮಹಾರಾಷ್ಟ್ರದ ಸಿ.ಎಂ ಆಗಬೇಕು ಎಂದು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಉತ್ತರ ಪ್ರದೇಶ್: ಪ್ರಯಾಗರಾಜ್ ನ ಮಹಾ ಕುಂಭಮೇಳ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಹೀಗಾಗಿ ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ 75ರ ಬದಲು 76 ಜಿಲ್ಲೆಗಳು ಆಗಿರಲಿದೆ. ಜಿಲ್ಲಾಧಿಕಾರಿ ಪ್ರಯಾಗ್ರಾಜ್ ರವೀಂದ್ರ ಕುಮಾರ್ ಮಂದರ್ ನಿನ್ನೆ ಸಂಜೆ ಅಧಿಸೂಚನೆ ಹೊರಡಿಸಿದ್ದಾರೆ. ಮಹಾಕುಂಭಕ್ಕೂ ಮುನ್ನ ಹೊಸ ಜಿಲ್ಲೆಯ ಅಧಿಸೂಚನೆಯನ್ನು ಹೊರಡಿಸುವ ಸಂಪ್ರದಾಯವಿದೆ. ಮಹಾ ಕುಂಭಮೇಳ ಜಿಲ್ಲೆಯು ಸಂಪೂರ್ಣ ಮೆರವಣಿಗೆ ಮತ್ತು ನಾಲ್ಕು ತಹಸಿಲ್ಗಳ ಸದರ್, ಸೊರಾನ್, ಫುಲ್ಪುರ್ ಮತ್ತು ಕರ್ಚನಾಗಳ 67 ಗ್ರಾಮಗಳನ್ನು ಒಳಗೊಂಡಿದೆ. 13 ಜನವರಿ ಮತ್ತು 26 ರ ನಡುವೆ ಮಹಾಕುಂಭ 2025 ಅನ್ನು ಆಯೋಜಿಸಲಾಗುತ್ತಿದೆ. ಜಾತ್ರೆಯ ನಂತರ ಕೆಲವು ದಿನಗಳವರೆಗೆ ಈ ಜಿಲ್ಲೆ ಅಸ್ತಿತ್ವದಲ್ಲಿರುತ್ತದೆ. ಮಹಾಕುಂಭದ ಸಮಯದಲ್ಲಿ, ಸಂಪೂರ್ಣ ಹೊಸ ನಗರವನ್ನು ಸ್ಥಾಪಿಸಲಾಗಿದೆ ಎಂಬುದು ಗಮನಾರ್ಹವಾಗಿದೆ. ಹಾಗಾಗಿ ಈ ಅವಧಿಯಲ್ಲಿ ಹೊಸ ಜಿಲ್ಲೆ ಘೋಷಣೆ ಮಾಡುವ ಸಂಪ್ರದಾಯವಿದೆ. ಪ್ರಯಾಗ್ರಾಜ್ನ ನಾಲ್ಕು ತಹಸಿಲ್ ಗಳನ್ನು ಪ್ರತ್ಯೇಕಿಸಿ ಹೊಸ ಜಿಲ್ಲೆಯನ್ನು ರಚಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…