Author: admin

ಬೆಂಗಳೂರು: ಜಿಟಿ ಜಿಟಿ ಮಳೆಯ ನಡುವೆಯೇ ಜೆ.ಜೆ.ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ವಯೋವೃದ್ಧರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸಹೋದರ ಸಹೋದರಿಯಾದ ಕಸ್ತೂರಿ ಹಾಗೂ ಲೋಕೇಶ್ ಎಂಬವರು ಅಪಾಯದಿಂದ ಪಾರಾದವರಾಗಿದ್ದಾರೆ. ರಾತ್ರಿ 12 ಗಂಟೆ ಸಮಯದಲ್ಲಿ ಏಕಾಏಕಿ ಮನೆ ಗೋಡೆ ಕುಸಿಯುತ್ತಿರುವುದನ್ನು ಕಂಡು ಇಬ್ಬರು ಜೋರಾಗಿ ಕೂಗಿಕೊಂಡರು.ಆದರೂ ಮನೆಯ ಛಾವಣಿಯ ಒಂದು ಭಾಗ ವೃದ್ಧರ ಮೇಲೆ ಬಿದ್ದಿತ್ತು. ತಕ್ಷಣ ಅಕ್ಕಪಕ್ಕದ ಮನೆಯವರು ಮನೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ರಕ್ಷಿಸಿದ್ದಾರೆ. ಮಣ್ಣಿನ ಮನೆಯಾಗಿದ್ದರಿಂದ ಗೋಡೆ ಕುಸಿದುಬಿದ್ದಿದೆ ಎಂದು ತಿಳಿದುಬಂದಿದೆ. ಸದ್ಯ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಪ್ರಾಣ ಉಳಿದರೂ ಜೀವಿಸಲು ಇದ್ದ ಮನೆಯನ್ನು ಕಳೆದುಕೊಂಡು ವೃದ್ಧ ಜೀವಗಳು ಕಣ್ಣೀರು ಹಾಕುತ್ತಿದ್ದು, ನಮಗೆ ಆಧಾರ ಇಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ. ಹೊಸ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಇಂದು ಇಲ್ಲವೆ ನಾಳೆ ನಡೆಯಲಿರುವ ಸಭೆಯಲ್ಲಿ ಘೋಷಣೆ ಮಾಡಲಾಗುವುದು ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮುಖ್ಯಮಂತ್ರಿಗಳ ಹೆಸರಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಗಹ ಸಚಿವ ಅಮಿತ್ ಶಾ ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬಹುದು ಎಂಬ ಊಹಾಪೋಹಗಳಿವೆ ಮತ್ತು ಶಿವಸೇನೆಯು ಗೃಹ ಖಾತೆಯ ಮೇಲೆ ಹಕ್ಕು ಸಾಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಚುನಾವಣಾ ಫಲಿತಾಂಶಗಳು ಪ್ರಕಟವಾದ ಒಂದು ವಾರದ ನಂತರ, ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರೆಂದು ಬಿಜೆಪಿ ಅಂತಿಮಗೊಳಿಸಿದೆ, ಶೀಘ್ರದಲ್ಲೇ ಘೋಷಣೆ ಬರಲಿದೆ ಎಂದು ವರದಿಗಳು ಹೇಳಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಸದಸ್ಯರು ಶೋಕಾಸ್ ನೋಟಿಸ್ ಗೆ ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ವಿವರ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧಿ ಬಣದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತಪಡಿಸುತ್ತೇನೆ ಎಂದಿದ್ದಾರೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಯತ್ನಾಳ್ ತಿಳಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ತುಮಕೂರಿನಲ್ಲಿ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಭೂಮಿಯು ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು. ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತರಬೇತಿಗೆ ಅಡಿಗಲ್ಲು ಹಾಕಲಾಗಿದೆ. ಕೆಸ್‌ಸಿಎ ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದೆ ಎಂದು ಹೇಳಿದರು. ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ನೀಡಲಾಗಿದೆ‌. ಏಷ್ಯದಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಫುಡ್ ಪಾರ್ಕಿಂಗ್ ಆರಂಭವಾಗಿದ್ದು, ಜಪಾನೀಸ್ ಟೌಪ್‌ಶಿಪ್‌ ನಿರ್ಮಾಣಕ್ಕೆ 500 ಎಕರೆ ನೀಡಲಾಗಿದೆ ಎಂದು ತಿಳಿಸಿದರು. ಈ ಭಾಗದ ಜನರು…

Read More

ತುಮಕೂರು:  ಮೈಸೂರಿನಲ್ಲಿಯೂ ಸ್ಟೇಡಿಂಗ್  ನಿರ್ಮಾಣಕ್ಕೆ ಜಾಗ ಕೊಡಲಾಗುವುದು. ತುಮಕೂರಿನ ಭಾಗದಲ್ಲಿ ಕ್ರಿಕೆಟ್‌ ಬೆಳೆಯಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಈ ಭಾಗದಲ್ಲಿ ಪರೋಕ್ಷವಾಗಿ ಅಭಿವೃದ್ಧಿ ಹೊಂದಲಿದೆ. ನಮ್ಮ ಸರಕಾರದಲ್ಲಿ ದುದ್ದೇ ಇಲ್ಲ ಎಂದು ಹೇಳುತ್ತಿ, ಇನ್ನೊಂದೆಡೆ ಅಭಿವೃದ್ದಿ ಮಾಡೋದಿಲ್ಲ ಎನ್ನುತ್ತೀಯ ಎಂದು ಬಿಜೆಪಿ ಶಾಸಕ ಸುರೇಶ್‌ ಗೆ ವೇದಿಕೆಯಲ್ಲೇ ಟಾಂಗ್‌ ನೀಡಿದರು. ವಿರೋಧ ಪಕ್ಷದವರ ಪ್ರಶ್ನೆಗೆ ಉತ್ತರ ನೀಡುವ ಶಕ್ತಿ ಇದೆ, ನಾನು ಹೆದರುಕೊಳ್ಳೋಲ್ಲ, ನಾನು ತಪ್ಪು ಮಾಡಿಲ್ಲ, ಹೆದರುವ ಪ್ರಶ್ನೆಯೂ ಇಲ್ಲ ಎಂದು ಸಿದ್ದರಾಮಯ್ಯ ಶಾಸಕ ಸುರೇಶ್ ಗೆ ತಿರುಗೇಟು ನೀಡಿದರು. ಆದಷ್ಟು ಬೇಗ ಸ್ಟೇಡಿಂಗ್‌ ನಿಮಾಣ ಮಾಡಬೇಕು, ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರೀಡೆಗಳು ಇಲ್ಲಿ ನಡೆಯಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,  ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಪ್ರಕೃತಿ ವಿಕೋಪದ ಬಿಸಿ ತಟ್ಟಿದೆ. ಹೌದು..! ಸಿಎಂ ಆಗಮನಕ್ಕೂ ಫಂಗಲ್ ಚಂಡಮಾರುತದ ಬಿಸಿ ತಟ್ಟಿದೆ.  ಮೋಡಕವಿದ ವಾತಾವರಣವಿರೋದರಿಂದ ಸಿಎಂ ಹೆಲಿಕಾಪ್ಟರ್ ಮೂಲಕ ಆಗಮನ ರದ್ದಾಗಿದೆ. ಮೋಡ ಮುಸುಕಿದ ವಾತವರಣ ಹಿನ್ನೆಲೆ ಹೆಲಿಕಾಪ್ಟರ್ ಜರ್ನಿ ರದ್ದಾದ ಹಿನ್ನೆಲೆ ಬೆಂಗಳೂರಿನಿಂದ ತುಮಕೂರಿಗೆ ರಸ್ತೆ ಮೂಲಕ ಸಿಎಂ ಸಿದ್ದರಾಮಯ್ಯ  ಆಗಮಿಸುತ್ತಿದ್ದಾರೆ. ಮೊದಲಿಗೆ ಪಿ.ಗೊಲ್ಲಹಳ್ಳಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿರೋ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ. 1 ಮುಂಜಾನೆ 4 ಗಂಟೆಗೆ ಅಪಘಾತ ನಡೆದಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು. ಗೋವಾದಿಂದ — ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತೆರಳುತ್ತಿತ್ತು. ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕೇವಲ ಪದವಿಗಾಗಿ ವಾಣಿಜ್ಯಶಾಸ್ತ್ರ ಅಧ್ಯಯನ ಮಾಡಬೇಡಿ. ವಾಣಿಜ್ಯೋದ್ಯಮಿಗಳಾದರೆ ಇಡೀ ಪ್ರಪಂಚವನ್ನೇ ಆಳಬಹುದು ಎಂದು ಕುಲಸಚಿವೆ ನಾಹಿದಾ ಜಮ್‌ ಜಮ್‌ ಹೇಳಿದರು. ತುಮಕೂರು ವಿವಿ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗವು ಶನಿವಾರ ಆಯೋಜಿಸಿದ್ದ ಪ್ರಥಮವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. ಹೊಸ ಕಲ್ಪನೆಗಳು, ಆಲೋಚನೆಗಳಿಂದ ಸಂಪಾದನೆಯನ್ನು ವಿಶಿಷ್ಟ ರೀತಿಯಲ್ಲಿ ಮಾಡಬಹುದು. ಸ್ವಯಂ ಉದ್ಯೋಗದ ಕುರಿತು ವಿಚಾರ ಮಾಡಿ. ಪ್ರತಿ ದಿನಕ್ಕೂ ಬೆಲೆ ಇದೆ. ಮೃದು ಕೌಶಲ್ಯಗಳು, ಸಂವಹನದ ಕಡೆ ಗಮನಹರಿಸಿ ಎಂದು ಕಿವಿಮಾತು ಹೇಳಿದರು. ವಿವಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಶೇಖರ್, ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಿ.ಪರಮಶಿವಯ್ಯ, ಪ್ರೊ.ಜಿ.ಸುದರ್ಶನರೆಡ್ಡಿ, ಸಹ ಪ್ರಾಧ್ಯಾಪಕ ಡಾ.ಸುರೇಶ್ ಬಿ.ಕೆ., ಕರ್ನಾಟಕ ಕೇಂದ್ರಿಯ ವಿವಿಯ ಪ್ರಾಧ್ಯಾಪಕ ಪ್ರೊ.ದೇವರಾಜಪ್ಪಎಸ್., ಉಪನ್ಯಾಸಕ ವಿಜಯ್‌ ಎನ್. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ, ಇಂಧನ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ…

Read More

ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ವಿಡಪನಕಲ್‌ ನಲ್ಲಿ ಇಂದು ಮುಂಜಾನೆ ನಡೆದಿದೆ. ಬಳ್ಳಾರಿಯ ನಿವಾಸಿ ಡಾ.ಗೋವಿಂದರಾಜುಲು, ಡಾ.ಯೋಗೇಶ್‌ ಮತ್ತು ವಕೀಲ ವೆಂಕಟನಾಯ್ಡು (55) ಮೃತಪಟ್ಟವರಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವೈದ್ಯ ಅಮರೇಗೌಡ ಪಾಟೀಲ್‌ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಇವರು ಕಳೆದ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಅನಂತಪುರ ಮಾರ್ಗವಾಗಿ ಕಾರಿನಲ್ಲಿ ಬಳ್ಳಾರಿಗೆ ವಾಪಸಾಗುತ್ತಿದ್ದ ವೇಳೆ ಮುಂಜಾನೆ 5.30ರ ಸಂದರ್ಭದಲ್ಲಿ ಅಪಘಾತ ನಡೆದಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More