Subscribe to Updates
Get the latest creative news from FooBar about art, design and business.
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
- ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
- ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಸಂಕಲ್ಪ ಯಾತ್ರೆ
- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
Author: admin
ತುಮಕೂರು: ತುಮಕೂರು ಜಿಲ್ಲೆ ಕ್ರೀಡೆಗೆ ಪ್ರಸಿದ್ಧಿಯಾಗಿದೆ. ಈ ಹಿಂದೆ ಜಿಲ್ಲೆಯಿಂದ ಖೋ ಖೋ ಸ್ಪರ್ಧೆಯಲ್ಲಿ 12 ಜನ ಪ್ರತಿನಿಧಿಸುತ್ತಿದ್ದರು. ಕಬಡ್ಡಿ ತಂಡದಲ್ಲಿ ಸಾಧನೆ ಮಾಡಿದ್ದಾರೆ. ತುಮಕೂರಿನಲ್ಲಿ ಕ್ರೀಡೆಗೆ ಇತಿಹಾಸವಿದೆ. ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದು ಗೃಹ ಸಚಿವ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು. ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು. ಕಬಡ್ಡಿ ಆಟದಿಂದ ಮನುಷ್ಯ ಮಾನಸಿಕವಾಗಿ ಮತ್ತು ಶಕ್ತಿಯುತವಾಗಿ ಬೆಳೆಯಲು ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಭಾರತಕ್ಕೆ ಸೀಮಿತವಾಗಿದ್ದ ಕಬ್ಬಡ್ಡಿ ಆಟ ಬಾಂಗ್ಲಾ, ನೇಪಾಳ ತದನಂತೆ ಶ್ರೀಲಂಕಾ ದೇಶಕ್ಕೆ ಪರಿಚಯವಾಯಿತು. ಏಷ್ಯಾನ್ ಗೇಮ್ಸ್ ನಲ್ಲಿ ಕಬ್ಬಡ್ಡಿ ಸೇರಿದೆ. ಈ ಕ್ರೀಡೆಯನ್ನು ಉತ್ತೇಜನ ಮಾಡಬೇಕಿದೆ. ಕ್ರೀಡೆಯ ಜೊತೆಗೆ ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು. ಪಿಯುಸಿ ನಿಮ್ಮ ಜೀವನವನ್ನು ತೀರ್ಮಾನ ಮಾಡುವ…
ತುಮಕೂರು: ಜಿಲ್ಲೆಯಲ್ಲಿ 40 ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 19 ಮಾದರಿಗಳು ಕುಡಿಯಲು ಯೋಗ್ಯವಾಗಿಲ್ಲ ಎಂಬ ಆತಂಕಕಾರಿ ವರದಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹೌದು… ತುಮಕೂರು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅತಿ ಹೆಚ್ಚು ಕೊರಟಗೆರೆ ತಾಲ್ಲೂಕಿನಲ್ಲಿ 9, ಸಿರಾ 6, ತುಮಕೂರು 3, ಗುಬ್ಬಿ ತಾಲ್ಲೂಕಿನ 1 ಮಾದರಿ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳಿಂದ ನೀರು ಸರಬರಾಜು ಮಾಡಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದಲ್ಲಿ ಗುರುವಾರ ವಿಪತ್ತು ನಿರ್ವಹಣಾ ಸಭೆ ನಡೆಸಿದರು. ನಗರದ ಎಲ್ಲ ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ಪ್ರಾಥಮಿಕ ಶಾಲೆಗಳಿಗೆ ಪೂರೈಕೆ ಮಾಡುವ ಕುಡಿಯುವ ನೀರನ್ನು ನಿಯಮಿತವಾಗಿ ಪರೀಕ್ಷೆಗೆ ಒಳಪಡಿಸುವಂತೆ ನಿರ್ದೇಶಿಸಿದರು. ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಉಪಸ್ಥಿತರಿದ್ದರು. ನಮ್ಮತುಮಕೂರಿನ…
ಸರಗೂರು: ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಗುರುವಾರ ಜಮೀನಿನಲ್ಲಿ ಹುಲಿ ದಾಳಿಗೆ ಗಾಯಗೊಂಡ ರೈತ ಮಹದೇವಗೌಡ ಅವರ ಮನೆಗೆ ಶುಕ್ರವಾರದಂದು ಸಮಾಜ ಸೇವಕ ಹಾಗೂ ಜೆಡಿಎಸ್ ಪಕ್ಷದ ಮುಖಂಡ ಕೃಷ್ಣನಾಯಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಹಾಯಧನ ನೀಡಿದರು. ನಂತರ ಮಾತನಾಡಿದ ಅವರು ತಾಲೂಕಿನಲ್ಲಿ ಇಂತಹ ಘಟನೆಗಳು ನಡೆಯಬಾರದಿತ್ತು. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯದಿಂದಾಗಿ ನಡೆದಿದೆ. ಬಡಕುಟುಂಬದ ವ್ಯಕ್ತಿ ಮನೆಯ ಸಂಸಾರವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದ. ಈಗ ಹುಲಿ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರಲ್ಲದೇ ಸ್ಥಳದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಮಾತನಾಡಿ, ಮಹದೇವಗೌಡರವರಿಗೆ ನಿಮ್ಮ ಇಲಾಖೆಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಬೇಕು. ಅದರಂತೆ ಸರ್ಕಾರದಿಂದ ಏನೆಲ್ಲ ಸೌಲಭ್ಯಗಳು ಇವೆಯೋ ಅವುಗಳನ್ನು ಅವರಿಗೆ ನೀಡಬೇಕು ಎಂದು ತಿಳಿಸಿದರು. ನಾನು ಕೂಡಾ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರನ್ನು ಭೇಟಿ ಹಾಗೂ ಕರೆ ಮೂಲಕ ಮಾತನಾಡಿ, ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ರೈಲು ಕಂಬಿಗಳು ಶೀಘ್ರದಲ್ಲೇ ಅಳವಡಿಸಲು ಸರ್ಕಾರ…
ಪಾವಗಡ: ತಾಲೂಕಿನ ಲಿಂಗದಹಳ್ಳಿ ವಲಯದ ನ್ಯಾಯದಗುಂಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ( ರಿ.) ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದ ಅಡಿಯಲ್ಲಿ ಕೆರೆಯ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕರಾದ ಸೀನಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯಾದ್ಯಂತ ಸುಮಾರು 1,200 ಕೆರೆಗಳ ಪುನಶ್ಚೇತನ ಕಾಮಗಾರಿ ಮಾಡಿದ್ದು, ರೈತರ ಜಮೀನಿಗೆ ಫಲವತ್ತದ ಮಣ್ಣು ಒದಗಿಸುವುದು ಮತ್ತು ನೀರಿನ ಅಂತರ್ಜಾಲ ಮಟ್ಟ ಸುಧಾರಣೆ ಬಗ್ಗೆ ಜಾನುವಾರುಗಳಿಗೆ ಬೇಸಿಗೆ ಸಮಯದಲ್ಲಿ ಕುಡಿಯಲು ನೀರಿನ ವ್ಯವಸ್ಥೆ ಸಿಗುವುದರಿಂದ ಅನುಕೂಲವಾಗುತ್ತದೆ ಎಂದು ವಿವರಿಸಿದರು. ಯೋಜನಾಧಿಕಾರಿ ಮಹೇಶ್ ಹೆಚ್. ಮಾತನಾಡಿ, ಪಾವಗಡ ತಾಲೂಕಿನಲ್ಲಿ ಈಗಾಗಲೇ ಒಟ್ಟು 7ನೇ ಕೆರೆಯ ಕಾಮಗಾರಿ ಮಾಡುತ್ತಿದ್ದು, ಗ್ರಾಮದ ಅಕ್ಕ ಪಕ್ಕ ಇರುವ ಬೋರ್ವೇಲ್ ಮರುಪೂರಾಣ ಆಗುತ್ತದೆ ಎಂದು ತಿಳಿಸಿದರು. ಊರಿನ ಮುಖಂಡ ತಿಮ್ಮಾರೆಡ್ಡಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆರೆಗಳ ಹೂಳು ತೆಗೆಸಿ ಅವುಗಳ ಅಭಿವೃದ್ಧಿಯಿಂದ ಬೇರೆ ಬೇರೆ ರೀತಿಯ ಜನಗಳಿಗೆ…
ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಗ್ರಾಮದಲ್ಲಿ ಗುರುವಾರದಂದು ಹುಲಿ ದಾಳಿಗೆ ರೈತ ಗಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದಂದು ಗ್ರಾಮದ ಮಹದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ರೈತರು ಹಾಗೂ ಗ್ರಾಮಸ್ಥರು ಮತ್ತು ಅರಣ್ಯ ಅಧಿಕಾರಿಗಳು ಜೊತೆ ಸಭೆಯಲ್ಲಿ ರೈತರು, ಹುಲಿಯನ್ನು ಇನ್ನೂ ಎರಡು ದಿನಗಳಲ್ಲಿ ಹಿಡಿಯಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದು ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ನಮ್ಮ ಗ್ರಾಮದ ರೈತ ಹುಲಿ ಬಾಯಿಗೆ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನುಗು ಅರಣ್ಯದಲ್ಲಿ ಕಾಡು ಪ್ರಾಣಿಗಳು ದಿನನಿತ್ಯ ಬರುವುದರಿಂದ ನಾವುಗಳು ಬೆಳೆದ ಬೆಳೆ ಪಡೆಯಲು ಕಷ್ಟಪಡುವಂತಾಗಿದೆ. ಇವುಗಳು ಆನೆ ಮತ್ತು ಹುಲಿ, ಚಿರತೆ ಇನ್ನೂ ಪ್ರಾಣಿಗಳಿಂದ ಬೆಳೆ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಡಂಚಿನ ಭಾಗದ ಸರಿಯಾದ ರೀತಿಯಲ್ಲಿ ರೈಲು ಕಂಬಿಗಳು ಅಳವಡಿಸಿಲ್ಲ, ಆದ್ದರಿಂದ ಕಾಡು ಪ್ರಾಣಿಗಳು ನಮ್ಮ ಜಮೀನಿಗೆ ಬಂದು ಒಂದಲ್ಲ ಒಂದು ಸಮಸ್ಯೆ ನೀಡುತ್ತಿವೆ. ಇನ್ನೂ ಎರಡು ಮೂರು ದಿನಗಳಲ್ಲಿ ಹುಲಿ ಸೆರೆ ಹಿಡಿಯಲು ಮುಂದಾಗಿ,…
ಶಿರಾ: ತಾಲ್ಲೂಕಿನ ವಡ್ಡನಹಳ್ಳಿಯಲ್ಲಿ ಬುಧವಾರ ರಾತ್ರಿ ಮನೆಯ ಬಾಗಿಲ ಬೀಗ ಒಡೆದು ಕಳ್ಳರು ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ತಾಲ್ಲೂಕಿನ ವಡ್ಡನಹಳ್ಳಿ ಗ್ರಾಮದ ಕಾರ್ತಿಕ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅವರ ತಂದೆ, ತಾಯಿ ಇಲ್ಲಿ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಮಗನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು ಮನೆಯ ಬೀಗ ಒಡೆದು ಒಳಗೆ ನುಗ್ಗಿ ಮನೆಯಲ್ಲಿದ್ದ 2 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ತಾಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ರಾಜಗೋಪಾಲ ಇವರು ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025ಕ್ಕೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ (ರಿ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾ. ಮೆಳೇಗೋಟೆ ಕ್ರಾಸ್, ಮಹರ್ಷಿ ವಾಲ್ಮೀಕಿ ಗುರುಪೀಠ, ಸಮುದಾಯ ಭವನದಲ್ಲಿ ಅಕ್ಟೋಬರ್ 26ರಂದು ಪ್ರದಾನ ಮಾಡಲಾಗುತ್ತದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ನಾಗಶಕ್ತಿ ಶ್ರೀಶ್ರೀಶ್ರೀ ವಾಲ್ಮೀಕಿ ಬ್ರಹ್ಮನಾಂದ ಗುರೂಜಿ, ಪೀಠಾಧ್ಯಕ್ಷರು ಶ್ರೀ ಮಹರ್ಷಿ ವಾಲ್ಮೀಕಿ ದೊಡ್ಡಬಳ್ಳಾಪುರ ಇವರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತಿಪಟೂರು: ಕಾಲ ಬದಲಾಗುವಂತೆ ಮನುಷ್ಯನ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಬದಲಾಗುತ್ತಿದೆ. ಆರೋಗ್ಯದ ಬಗ್ಗೆ ಅರಿವು ಅಗತ್ಯ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು. ನಗರಸಭೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ ಕೊನೇಹಳ್ಳಿ ಹಾಗೂ ನಗರಸಭೆಯಿಂದ ವಿಶ್ವ ಆಹಾರ ದಿನದ ಅಂಗವಾಗಿ ಪೌರ ಕಾರ್ಮಿಕರು ಹಾಗೂ ನೀರು ವಿತರಕರಿಗೆ ಕಾರ್ಯಾಗಾರ ನಡೆಯಿತು. ಮಾನವ ಪೌಷ್ಟಿಕತೆ, ವಿಜ್ಞಾನ ಮತ್ತು ಆರೋಗ್ಯದ ಆಧಾರದಲ್ಲಿ ಆಹಾರ ಆಯ್ಕೆಮಾಡುತ್ತಿದ್ದಾನೆ. ಉತ್ತಮ ಆಹಾರ ಮತ್ತು ಭವಿಷ್ಯಕ್ಕಾಗಿ ಕೈ ಜೋಡಿಸಿ ಎಂಬ ಘೋಷವಾಕ್ಯದಲ್ಲಿ ವಿಶ್ವ ಆಹಾರ ದಿನ ಆಯೋಜಿಸಲಾಗಿದೆ ಎಂದರು. ನಗರಸಭೆ ಪ್ರಭಾರ ಅಧ್ಯಕ್ಷೆ ಮೇಘಶ್ರೀ ಭೂಷಣ್ ಮಾತನಾಡಿ, ಆಧುನಿಕ ಜೀವನ ಶೈಲಿ ವೇಗವಾಗಿ ಬದಲಾಗುತ್ತಿದ್ದು, ನಮ್ಮ ಆಹಾರ ಪದ್ಧತಿ ಆರೋಗ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದರು. ಜಿಕವಿಕ ವಿಸ್ತರಣಾ ನಿರ್ದೇಶಕ ವೈ.ಎನ್.ಶಿವಲಿಂಗಯ್ಯ ಮಾತನಾಡಿ, ಪೌಷ್ಟಿಕ ಆಹಾರದ ಅಗತ್ಯತೆ, ಆಹಾರದ ಗುಣಮಟ್ಟ ಮತ್ತು ಪೌಷ್ಟಿಕ ಬೆಳೆಗಳ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ಮನುಷ್ಯನ ಬೆಳವಣಿಗೆಯ ಹಾದಿಯಲ್ಲಿ ಆಹಾರದ ಗುಣಮಟ್ಟವೇ ಅವನ ಬುದ್ಧಿ ಮತ್ತು…
ಗುಬ್ಬಿ: ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಆಹಾರ ಪದಾರ್ಥಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಾಗದಿರುವುದು ದುರಾದೃಷ್ಟಕರ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ಚೇಳೂರಿನಲ್ಲಿ ನಡೆದ ಪೋಷಣೆ ಅಭಿಯಾನದಲ್ಲಿ ಮಾತನಾಡಿದ ಅವರು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಹೆಚ್ಚಿನ ಪೋಷಕಾಂಶ ಅಗತ್ಯವಿದ್ದು, ಸಾವಯವ ಪದ್ಧತಿಯಲ್ಲಿ ಬೆಳೆಯುವ ಹಣ್ಣು ತರಕಾರಿಗಳನ್ನು ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಈ ಹಿಂದೆ ಕೊಟ್ಟಿಗೆ ಗೊಬ್ಬರ ಬಳಸಿ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತಿತ್ತು. ಆದರೆ ಇತ್ತೀಚಿಗೆ ಇಳುವರಿಗೆ ಆದ್ಯತೆ ನೀಡಿ ಗುಣಮಟ್ಟವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ಮಹಿಳಾ ಮತ್ತು ಸಮಾಜ ಕಲ್ಯಾಣ ಇಲಾಖೆ ಡಿ.ಡಿ. ಸಿದ್ದರಾಮಣ್ಣ ಮಾತನಾಡಿ, ಗರ್ಭಿಣಿಯರು, ತಾಯಂದಿರು ಜಂಕ್ ಫುಡ್ ಆಸೆಗೆ ಆರೋಗ್ಯ ಹಾಳು ಮಾಡಿಕೊಳ್ಳದೆ, ಮನೆಯಲ್ಲಿಯೇ ತಯಾರಿಸುವ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಹೇಳಿದರು. ತಾಲ್ಲೂಕು ಆರೋಗ್ಯಧಿಕಾರಿ ಬಿಂಧು ಮಾಧವ್ ಮಾತನಾಡಿ, ಹಣದಿಂದ ಆರೋಗ್ಯ ಕೊಂಡುಕೊಳ್ಳಲು ಸಾಧ್ಯವಿಲ್ಲದಿರುವುದರಿಂದ ಗುಣಮಟ್ಟದ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು…
ತುಮಕೂರು: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ ನೀಡುವುದಾಗಿ ನಂಬಿಸಿ ತಾಲ್ಲೂಕಿನ ನಂದಿಹಳ್ಳಿಯ ರೈತ ಎನ್.ಸಿ.ಶಿವರಾಜು ಎಂಬುವರಿಗೆ 3 ಲಕ್ಷ ರೂ. ವಂಚಿಸಲಾಗಿದೆ. ಪಾರ್ಟ್ ಟೈಮ್ ಕೆಲಸ, ಕೊರಿಯ, ಡಿಜಿಟಲ್ ಅರೆಸ್ಟ್, ದುಪ್ಪಟ್ಟು ಹಣಗಳಿಕೆಯ ಆಮಿಷ ನೀಡಿ ಹಣ ವಂಚಿಸುತ್ತಿದ್ದ ಖದೀಮರು ಇದೀಗ ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸಲಾಗುತ್ತಿದೆ. ಸಾಲ ಕೊಡಲಾಗುವುದು ಎಂದು ರೈತರನ್ನು ಮರಳು ಮಾಡಲಾಗುತ್ತಿದೆ. ಶಿವರಾಜು ಮುದ್ರಾ ಯೋಜನೆಯಡಿ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆಗ ಕೆಲ ಅಪರಿಚಿತರು ಕರೆ ಮಾಡಿ ಮಾತನಾಡಿದ್ದಾರೆ. ಕಂಪನಿಯ ಮ್ಯಾನೇಜರ್, ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ. 8 ಲಕ್ಷ ಸಾಲ ಮಂಜೂರು ಮಾಡುತ್ತಿದ್ದು, ಅದಕ್ಕೆ ನೀವು ಒಂದಷ್ಟು ಹಣ ಕಟ್ಟಬೇಕು ಎಂದು ತಿಳಿಸಿದ್ದಾರೆ. ಶಿವರಾಜು ಮೊದಲಿಗೆ 4,500 ಹಾಕಿದ್ದಾರೆ. ನಂತರ ಇಎಂಐ ಕಟ್ಟಬೇಕು ಎಂದು ಮತ್ತೊಂದಷ್ಟು ಹಣ ಹಾಕಿಸಿಕೊಂಡಿದ್ದಾರೆ. ನಿಮಗೆ ಸಾಲ ಮಂಜೂರಾಗಿದೆ ಅದಕ್ಕೆ ಮ್ಯಾನೇಜರ್ ಸಹಿ ಮಾಡಬೇಕು. ಅವರಿಗೆ ಲಂಚವಾಗಿ 10 ಸಾವಿರ ನೀಡುವಂತೆ’ ಸೈಬರ್ ವಂಚಕರು ಹೇಳಿದ್ದಾರೆ. ನಾನಾ ಕಾರಣ…