Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಬೆಂಗಳೂರು : ಸಮಾಜಮುಖಿ ಸೇವೆಯಲ್ಲಿ ಮುಂದಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ ಐಸಿ) ಸಂಸ್ಥೆಯ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ವತಿಯಿಂದ ನಗರದ ಖ್ಯಾತ ಆಸ್ಪತ್ರೆಗೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Foundation ಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಲಾಗಿದೆ. ಈ ದೇಣಿಗೆಯ ಭಾಗವಾಗಿ ಸುಮಾರು ₹4.31 ಕೋಟಿ ಮೌಲ್ಯದ 64–ಸ್ಲೈಸ್ CT ಸ್ಕ್ಯಾನ್ ಯಂತ್ರ ಹಾಗೂ ಹಾರ್ಟ್–ಲಂಗ್ ಮಷೀನ್ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು. ಈ ಉಪಕರಣಗಳು ಕ್ಯಾನ್ಸರ್ ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಯಲ್ಲಿ ಮಹತ್ವದ ನೆರವಾಗಲಿದ್ದು, ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗಗಳಿಂದ ಬರುವ ಸಾವಿರಾರು ರೋಗಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ ಐಸಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆರ್ ದೊರೆಸ್ವಾಮಿ ಅವರು ಮಾತನಾಡಿ, “ಸಮಾಜಕ್ಕೆ ಉಪಕಾರವಾಗುವ ಸಂಸ್ಥೆಗಳೊಂದಿಗೆ ಕೈಜೋಡಿಸುವುದು ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನ ಮುಖ್ಯ ಉದ್ದೇಶವಾಗಿದೆ. ಈ ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ…
ತುಮಕೂರು: ಬದುಕಿನಲ್ಲಿ ಎದುರಾಗುವ ಕಷ್ಟ–ನೋವುಗಳು ಸಹಜ ಪ್ರಕ್ರಿಯೆ. ಅವುಗಳಿಗೆ ಕುಗ್ಗದೆ, ಎದುರಾಗುವ ಸವಾಲುಗಳನ್ನು ಮೀರಿ ಸಾಧನೆಯತ್ತ ಸಾಗಬೇಕು ಎಂದು ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ದೀಪಿಕಾ ಟಿ.ಸಿ. ಕಿವಿಮಾತು ಹೇಳಿದರು. ತುಮಕೂರು ವಿಶ್ವವಿದ್ಯಾಲಯದ ಯೋಗ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಯೋಗ ಮತ್ತು ಮಹಿಳಾ ಸಬಲೀಕರಣ’ ಕುರಿತ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಜೀವನದ ಕಹಿ ಘಟನೆಗಳನ್ನು ಸ್ಮರಿಸಿದ ದೀಪಿಕಾ, “ಒಂದು ಹೊತ್ತಿನ ಊಟಕ್ಕೂ ಪರದಾಡಿದ ದಿನಗಳನ್ನು ಕಂಡಿದ್ದೇನೆ. ಆದರೆ ಯಾವುದೇ ಸವಾಲುಗಳು ನಮ್ಮ ಸಾಧನೆಯ ಹಾದಿಗೆ ಅಡ್ಡಿಯಾಗಬಾರದು,” ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯೋಗ ತರಬೇತುದಾರರಾದ ಎಸ್.ಪಿ. ನಂದಿನಿ ಮಾತನಾಡಿ, “ಯೋಗವು ಕೇವಲ ಒಂದು ಫ್ಯಾಷನ್ ಅಥವಾ ಸ್ಪರ್ಧೆಯಲ್ಲ. ಅದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮಾನಸಿಕ ಸ್ಥಿರತೆ, ಏಕಾಗ್ರತೆ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಯೋಗ ಪೂರಕವಾಗಿದೆ,” ಎಂದರು. ಇದೇ…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಕ್ಕೆ ಸಂಬಂಧಿಸಿದಂತೆ, ಹಾಲಿ ಮತ್ತು ಮಾಜಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (PDO) ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅಶ್ವಿಜ ಅವರು ಆದೇಶ ಹೊರಡಿಸಿದ್ದಾರೆ. ಕೋಟಗುಡ್ಡ ಗ್ರಾಮ ಪಂಚಾಯಿತಿಯ ಹಾಲಿ ಪಿಡಿಒ ಭವ್ಯ ಮತ್ತು ಮಾಜಿ ಪಿಡಿಒ ಶಿವಾನಂದ ಸಾತಿಹಾಳ ಅಮಾನತುಗೊಂಡ ಅಧಿಕಾರಿಗಳು. 15ನೇ ಹಣಕಾಸು ಯೋಜನೆಯಡಿ ವಿದ್ಯುತ್ ಬಿಲ್ ಪಾವತಿಸಲು ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡು, ಅಕ್ರಮವಾಗಿ ಸಾಮಗ್ರಿಗಳನ್ನು ಖರೀದಿ ಮಾಡಿದ ಗಂಭೀರ ದೂರು ಇವರ ಮೇಲೆ ಕೇಳಿಬಂದಿತ್ತು. ನಿಯಮ ಬಾಹಿರವಾಗಿ ವಿದ್ಯುತ್ ಬಿಲ್‌ನ ಮೊತ್ತವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಂಡಿರುವುದು. ಪಂಚಾಯತ್ ರಾಜ್ ನಿಯಮಗಳನ್ನು ಗಾಳಿಗೆ ತೂರಿ ಸಾಮಗ್ರಿಗಳನ್ನು ಖರೀದಿಸಿರುವುದು. ಈ ಹಿಂದೆಯೇ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಜಿಲ್ಲಾ ಪಂಚಾಯಿತಿ ಸಿಇಒ ಅವರು ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದು,…
ತುಮಕೂರು: ಬೆಂಗಳೂರು, ತುಮಕೂರು ಮತ್ತು ಅರಸೀಕೆರೆ ಮಾರ್ಗವಾಗಿ ಪ್ರಯಾಣಿಸುವ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ರೈಲ್ವೆ ಇಲಾಖೆ ಸ್ಪಂದಿಸಿದೆ. ಈ ಮಾರ್ಗದಲ್ಲಿ ಹೊಸ ಮೆಮು (MEMU) ರೈಲು ಸಂಚಾರಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಚಾಲನೆ ನೀಡಿದ್ದಾರೆ. ಈ ನೂತನ ರೈಲು ಸೇವೆಯು ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಿಂದ ಆರಂಭವಾಗಿ, ಯಶವಂತಪುರ ಮತ್ತು ತುಮಕೂರು ಮಾರ್ಗವಾಗಿ ಅರಸೀಕೆರೆಯನ್ನು ತಲುಪಲಿದೆ. ಈ ಮೆಮು ರೈಲು ಸೇವೆಯು ಭಾನುವಾರ ಹೊರತುಪಡಿಸಿ ವಾರದ ಆರು ದಿನಗಳ ಕಾಲ ಲಭ್ಯವಿರುತ್ತದೆ. ಯಲಹಂಕದಿಂದ ಅರಸೀಕೆರೆಗೆ (ರೈಲು ಸಂಖ್ಯೆ 66505): ಬೆಳಿಗ್ಗೆ 6:45ಕ್ಕೆ ಯಲಹಂಕದಿಂದ ಹೊರಟು, ಬೆಳಿಗ್ಗೆ 8:58ಕ್ಕೆ ತುಮಕೂರು ತಲುಪಲಿದೆ. ನಂತರ ಬೆಳಿಗ್ಗೆ 11:00 ಗಂಟೆಗೆ ಅರಸೀಕೆರೆಗೆ ತಲುಪಲಿದೆ. ಅರಸೀಕೆರೆಯಿಂದ ಯಲಹಂಕಕ್ಕೆ (ರೈಲು ಸಂಖ್ಯೆ 66506): ಮಧ್ಯಾಹ್ನ 2:15ಕ್ಕೆ ಅರಸೀಕೆರೆಯಿಂದ ಹೊರಟು, ಸಂಜೆ 4:38ಕ್ಕೆ ತುಮಕೂರು ತಲುಪಿ, ರಾತ್ರಿ 7:15ಕ್ಕೆ ಯಲಹಂಕಕ್ಕೆ ವಾಪಸಾಗಲಿದೆ. ಈ ನೂತನ ರೈಲು ಸಂಚಾರದಿಂದಾಗಿ ಪ್ರತಿನಿತ್ಯ ನಗರಗಳಿಗೆ ಸಂಚರಿಸುವ ವಿದ್ಯಾರ್ಥಿಗಳು, ಸರ್ಕಾರಿ ಮತ್ತು…
ಕೊರಟಗೆರೆ: ಪ್ರಸಕ್ತ ಆಧುನಿಕ ಯುಗದಲ್ಲಿ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗುತ್ತಿದ್ದರೂ, ಹೈನುಗಾರಿಕೆಯಲ್ಲಿ ಇಂದಿಗೂ ರೈತನಿಗೂ ಮತ್ತು ಹಸುವಿಗೂ ಇರುವ ಅವಿನಾಭಾವ ಸಂಬಂಧವನ್ನು ಸಾರುವ ‘ಹಾಲು ಕರೆಯುವ ಸ್ಪರ್ಧೆ’ಯೊಂದು ವಿಜೃಂಭಣೆಯಿಂದ ಜರುಗಿತು. ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಆವರಣದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘದ ಒಕ್ಕೂಟ ನಿಯಮಿತ ತುಮಕೂರು ಹಾಗೂ ತಾಲೂಕು ಘಟಕ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊರಟಗೆರೆ, ತುಮಕೂರು ಜಿಲ್ಲಾ ರೈತರ ಮತ್ತು ಎಂ ಪಿ ಸಿ ಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ ಹಾಗೂ ಕುಂಚೀಟಿಗ ಮಹಾ ಸಂಸ್ಥಾನ ಮಠದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಿಶ್ರ ತಳಿರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಕಾರ್ಯಕ್ರಮ ತುಂಬಾ ಯಶಸ್ವಿಯಾಗಿ ಜರಗಿ ಈ ಕಾರ್ಯಕ್ರಮ ಕೇವಲ ಸ್ಪರ್ಧೆಯಾಗಿ ಉಳಿಯದೆ, ರೈತರ ಶ್ರಮ ಮತ್ತು ಪಶುಸಂಗೋಪನೆಯ ಮಹತ್ವವನ್ನು ಸಾರುವ ವೇದಿಕೆಯಾಗಿ ಮಾರ್ಪಟ್ಟಿತ್ತು. ಕಾರ್ಯಕ್ರಮ ಸತತ ಎರಡು…
ತುಮಕೂರು: ತುಮಕೂರಿನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ನಡೆಯಲಿರುವ ಅಂತರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಲಾಂಛನ ಅನಾವರಣ ಮಾಡಿದೆ. ತುಮಕೂರಿನಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಟೆನ್ನಿಸ್ ಕ್ರೀಡಾಂಗಣವನ್ನು ನಿರ್ಮಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಕ್ರೀಡಾಕೂಟ ನಡೆಯಲಿದೆ. ತುಮಕೂರು ಜಿಲ್ಲಾಡಳಿತ, ತುಮಕೂರು ಟೆನ್ನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಮೇ 3ರಿಂದ ಮೇ 10 ರವರೆಗೆ ಟೂರ್ನಿಮೆಂಟ್ ನಡೆಯಲಿದ್ದು, ವಿಶ್ವಾದ್ಯಂತ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ ಕ್ರೀಡಾಕೂಟವು “ತುಮಕೂರು ಓಪನ್ ಚಾಂಪಿಯನ್ ಶಿಪ್” ಎಂದೇ ವಿಶ್ವ ಟೆನ್ನಿಸ್ ಭೂಪಟದಲ್ಲಿ ಕರೆಯಲ್ಪಡಲಿದೆ. ಇಲ್ಲಿ ಆಡುವ ಕ್ರೀಡಾಪಟುಗಳು ವಿಜೇತರಾದಲ್ಲಿ 35 ಪಾಯಿಂಟ್ ಗಳನ್ನು ಹಾಗೂ 30 ಸಾವಿರ ಅಮೆರಿಕಾ ಡಾಲರ್‌ಗಳನ್ನು ಗೆಲ್ಲಲಿದ್ದಾರೆ. ಅಲ್ಲದೆ ನಂತರದ ಸ್ಥಾನವನ್ನು ಹೊಂದುವ ಆಟಗಾರರು ಅಂತಾರಾಷ್ಟ್ರೀಯ ರ‍್ಯಾಂಕ್‌ಗಳನ್ನು ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಸಿಇಓ ಬಿ.ವಿ.ಆಶ್ವಿಜ,…
ತುಮಕೂರು : ಏಪ್ರಿಲ್ 1ರಂದು ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪತಿ ಮುರ್ಮು ಅವರು ಭಾಗವಹಿಸಲಿದ್ದು, ಸಂಬಂಧಿಸಿದಂತೆ ತುಮಕೂರು ನಗರದಾದ್ಯಂತ ಅಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅತಿಗಣ್ಯರ ಭದ್ರತೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಈಗಾಗಲೇ ತುಮಕೂರು ಜಿಲ್ಲೆಗೆ ಉಪರಾಷ್ಟ್ರಪತಿ, ಕೇಂದ್ರ ಗೃಹ ಸಚಿವರು, ರಾಜ್ಯಪಾಲರು ಸೇರಿದಂತೆ ಗಣ್ಯರು ಆಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಜರುಗಿಸಲಾಗಿದೆ. ಪ್ರಸ್ತುತ ರಾಷ್ಟ್ರಪತಿಯವರ ಕಾರ್ಯಕ್ರಮ ಅತಿಗಣ್ಯರ ಭದ್ರತೆ ಹೊಂದಿರುವುದರಿಂದ ಯಾವುದೇ ಲೋಪವಿಲ್ಲದಂತೆ ಭದ್ರತೆ ಒದಗಿಸುವ ಸಲುವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ನಿಯೋಜನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಭದ್ರತೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅವರು, ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ಅವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು…
ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸಲು ಭಾರತ ಸಮರ್ಥವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ನಗರದ ಕೆವಿಎಸ್ ಕ್ರೀಡಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಜಂಟಿ ನೇತೃತ್ವದಲ್ಲಿ ಆಯೋಜಿಸಿರುವ ವಿಟಿಯು ರಾಜ್ಯ ಮಟ್ಟದ 27ನೇ ಅಂತರ ಮಹಾವಿದ್ಯಾಲಯ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಿಪಟೂರಿನಲ್ಲಿ ನಡೆಯುತ್ತಿರುವ ಈ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ಕಲ್ಪತರು ನಾಡಿಗೆ ಕೀರ್ತಿಯ ವಿಷಯವಾಗಿದೆ ಎಂದರು. 1961ರಲ್ಲಿ ಸ್ಥಾಪಿತವಾದ ಈ ವಿದ್ಯಾ ಸಂಸ್ಥೆ ಗ್ರಾಮೀಣ ಭಾಗದ ಮಧ್ಯಮ ವರ್ಗದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿರುವ ಹೆಗ್ಗಳಿಕೆಯನ್ನು ಹೊಂದಿದೆ. ದೇಶದ ಪ್ರಧಾನ ಮಂತ್ರಿಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, 2030ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ದೇಶದಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆ ವೇಳೆಗೆ ದೇಶ ಮತ್ತು ರಾಜ್ಯದ…
ಬೆಂಗಳೂರು: ಕರ್ನಾಟಕ ರಾಜ್ಯದ ಎಸ್ ಎಸ್ ಎಲ್ ಸಿ (SSLC) ಪರೀಕ್ಷಾ ಪದ್ಧತಿಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಬದಲಾವಣೆಯನ್ನು ತಂದಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಕೆ ಮಾಡಲಾಗಿದ್ದು, ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಈ ಹಿಂದೆ ವಿದ್ಯಾರ್ಥಿಗಳು ಒಟ್ಟು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಆದರೆ ಹೊಸ ನಿಯಮದಂತೆ ಇನ್ನು ಮುಂದೆ ಕೇವಲ 525 ಅಂಕಗಳನ್ನು ಮಾತ್ರ ಅಂಕಪಟ್ಟಿಯಲ್ಲಿ ಮುಖ್ಯವಾಗಿ ಪರಿಗಣಿಸಲಾಗುತ್ತದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಇನ್ನು ಮುಂದೆ ಅಂಕಗಳ ಬದಲಿಗೆ ‘ಗ್ರೇಡ್’ (Grade) ನೀಡಲಾಗುವುದು. ವಿದ್ಯಾರ್ಥಿಗಳು ಎಂದಿನಂತೆ 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದರೂ, ಆ ಅಂಕಗಳನ್ನು ಒಟ್ಟು ಮೊತ್ತಕ್ಕೆ ಸೇರಿಸಲಾಗುವುದಿಲ್ಲ. ಬದಲಾಗಿ ಅಂಕಪಟ್ಟಿಯಲ್ಲಿ ಆ ವಿಷಯದ ಎದುರು ಗ್ರೇಡ್ ಮಾತ್ರ ನಮೂದಿಸಲಾಗುತ್ತದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಪ್ರಕಟಿಸಿದ್ದು, 2026ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದಲೇ…
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಳೆದ ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತದಿಂದ ಜನರು ಭ್ರಮನಿರಸನಗೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಜೀವಂತವಾಗಿರುವಂತೆ ಕಾಣುತ್ತಿಲ್ಲ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಅಹಿಂದ’ ಹೆಸರಿನಲ್ಲಿ ಅಧಿಕಾರಕ್ಕೆ ಬಂದು, ಈಗ ಅದೇ ವರ್ಗವನ್ನು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ‘ಕರ್ನಾಟಕದ ಮ್ಯಾಂಚೆಸ್ಟರ್’ ಎಂದೇ ಖ್ಯಾತಿಯಾಗಿದ್ದ ದಾವಣಗೆರೆಯ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ನಗರದಲ್ಲಿ ಈಗ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಕೇಂದ್ರದ ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಬರುತ್ತಿವೆ. ಇದಕ್ಕೆ ರಾಜ್ಯ ಸರ್ಕಾರದ ಕೊಡುಗೆ ಶೂನ್ಯ ಎಂದು ಪ್ರಶ್ನಿಸಿದರು. ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದಾವಣಗೆರೆಯ ರಾಜಕಾರಣದಲ್ಲಿ…