Subscribe to Updates
Get the latest creative news from FooBar about art, design and business.
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
Author: admin
ಗುಜರಾತ್: ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆಯೊಂದು ಗುಜರಾತ್ ನಲ್ಲಿ ನಡೆದಿದ್ದು, ಆರೋಪಿಯು ಮುಚ್ಚಿದ ಲಕೋಟೆಯಲ್ಲಿ ನ್ಯಾಯಮೂರ್ತಿಗೆ ಲಂಚ ನೀಡಿದ್ದು, ತಕ್ಷಣವೇ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಗುಜರಾತ್ ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ಆರೋಪಿ ಬಾಪುಭಾಯಿ ಸೋಲಂಕಿ 35,000 ರೂಪಾಯಿ ಲಂಚ ನೀಡಲು ಮುಂದಾಗಿದ್ದಾನೆ. ತನ್ನ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಲಂಚ ನೀಡುವ ಮೂಲಕ ಆರೋಪಿ ಕೇಳಿಕೊಂಡಿದ್ದ. ಮಹಿಸಾಗರ ಜಿಲ್ಲೆಯ ವೀರ್‌ಪುರ ತಹಸಿಲ್‌ನ ಸರಡಿಯಾ ಗ್ರಾಮದ ನಿವಾಸಿ ಸೋಲಂಕಿ 2023 ರಿಂದ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ಎದುರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪನಮ್ ಯೋಜನೆಯಡಿ ಭದರ್ ಕಾಲುವೆ ವಿತರಣಾ ಉಪವಿಭಾಗದ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಈ ಪ್ರಕರಣದ ವಿಳಂಬದಿಂದ ಹತಾಶೆಗೊಂಡು ಶೀಘ್ರವೇ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ವಿಚಾರಣೆಯ ಸಮಯದಲ್ಲಿ, ಸೋಲಂಕಿ ಲಕೋಟೆಯೊಂದಿಗೆ ನ್ಯಾಯಾಧೀಶರನ್ನು ಸಂಪರ್ಕಿಸಿ ತ್ವರಿತ ವಿಚಾರಣೆಗೆ ವಿನಂತಿಸಿದ್ದ. ನ್ಯಾಯಾಧೀಶರು ಲಕೋಟೆಯನ್ನು ಸ್ವೀಕರಿಸಲು ನಿರಾಕರಿಸಿ ಅದನ್ನು ತೆರೆದು ತೋರಿಸುವಂತೆ ಸೋಲಂಕಿಗೇ ಸೂಚಿಸಿದಾಗ ಅದರಲ್ಲಿ ನಗದು ಇದ್ದದ್ದು…
ಬೀದರ್: ಶಾಲಾ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸಂಪರ್ಕಿಸಲು ಮಕ್ಕಳ ಸಹಾಯವಾಣಿ, ಪೊಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಚಿಂತಾಕಿ ಪೊಲೀಸರು ತೆರೆದ ಮನೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಿದರು. ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ ಐ ಬಸವರಾಜ ಕೋಟೆ ತಮ್ಮ ಠಾಣೆಯ ಸಿಬ್ಬಂದಿರವರೊಂದಿಗೆ ಶ್ರೀ ಗುರುಪಾದಪ್ಪ ನಾಗಮಾರಪಳ್ಳಿ ಪ್ರೌಢ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಚಿಂತಾಕಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ರವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಪಟ್ಟಣದ ಕೆಂಪೇಗೌಡ ರಸ್ತೆಯ ಅಮರಾಜ್ಯೋತಿನಗರದಲ್ಲಿ ಇರುವ ಶ್ರೀಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಸತತ 14ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಆಗಮಿಸಿ ದೀಪ ಹಚ್ಚಿ ಶ್ರೀ ಶನೇಶ್ವರ ಸ್ವಾಮಿರವರನ್ನು ಪ್ರಾರ್ಥಿಸಿದರು. ಶ್ರೀ ಶನೇಶ್ವರ ಸ್ವಾಮಿ ರವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು . ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿಸಿರುವ ಪಾವನಗಂಗಾ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಕ್ರೀಡಾಕೂಟದ ಮೈದಾನಕ್ಕೆ ಶನಿವಾರದಂದು ಸ್ವಾಮಿ ಜಪಾನಂದ ಹಾಗೂ ಸ್ಥಳೀಯ ಶಾಸಕರಾದ ಹೆಚ್.ವಿ.ವೆಂಕಟೇಶ್ ಉದ್ಘಾಟನೆ ನೆರವೇರಿಸಿ ಚಾಲನೆ ನೀಡಿದರು. ಇದೇ ವೇಳೆ NSS ಶಿಬಿರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಶಾಸಕರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಪುರಸಭಾ ಅಧ್ಯಕ್ಷರಾದ ರಾಜೇಶ್, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸದಸ್ಯ ಎನ್. ರವಿ, ಸಮಾಜ ಸೇವಕರಾದ ಬತ್ತಿನೇನಿ ನಾಗೇಂದ್ರ ರಾವ್, ಶ್ರೀನಿವಾಸ್ ನಾಯಕ್, ಪ್ರಾಂಶುಪಾಲ ಶಿವಾನಂದಯ್ಯ, ನಿಕಟ ಪೂರ್ವ ಪ್ರಾಂಶುಪಾಲ ಮಾರಪ್ಪ ಕೆ.ಓ., ಜಿ.ಸಿ. ದೇವರಾಜ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಮೈಲಾಪ್ಪ, ಜಯರಾಮಪ್ಪ, ಮಂಜುಳಾ, ರಂಗನಾಥ್ ಎಂ, ಸ್ಟುಡಿಯೋ ಅಮರ್ ,ಅಶೋಕ್ ಸೇರಿ ಇನ್ನೂ ಮುಂತಾದವರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 02 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ, ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಘೋಷವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾಗೆ ಪ್ರಧಾನ ಜಿಲ್ಲಾ ಮತ್ತು…
ಮಡಿಕೇರಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಪೊನ್ನಂಪೇಟೆ ತಾಲ್ಲೂಕು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪದವಿ ಪೂರ್ವ ಕಾಲೇಜು ಹಾಗೂ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಪದವಿ ಪುರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ಮತ್ತು ಬಾಲಕಿಯರ ಹಾಕಿ ಪಂದ್ಯಾವಳಿ 2024-25 ಯು ಡಿಸೆಂಬರ್, 02 ಮತ್ತು 03 ರಂದು ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿಯು ಕಾಲೇಜು ಇಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಷ್ಟ್ರೀಯ ಹಾಕಿ ಕ್ರೀಡಾಪಟು ಪುಲಿಯಂಡ ತಿಮ್ಮಣ್ಣ, ಪೊನ್ನಂಪೇಟೆ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ.ಎಂ.ಸಿ.ಕಾರ್ಯಪ್ಪ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ…
ತುಮಕೂರು: ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ. ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ ಮತ್ತು ಗ್ರಾಮ ಸಹಾಯಕ ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ. ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ 12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ…
ಕೊಟ್ಟಿಗೆಹಾರ : ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿದಿನಗಳು. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮಂಗಳೂರು: ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಬಹಳ ಸವಾಲುಗಳಿವೆ. ಸಮಾಜಕ್ಕೆ ಅತ್ಯಂತ ಅಪಾಯಕಾರಿ ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡಬಾರದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು. ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬರೆಯುವ ಜವಾಬ್ದಾರಿಯನ್ನು ನನಗೆ ವಹಿಸಿದ್ದರು. ಪ್ರತಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಆಗಮಿಸಿದ್ದಾಗ ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ಮಾಡಿದ್ದರು. ಮಕ್ಕಳನ್ನು ಓದಿಸಲು ಬೇರೆ ಕಡೆ ಕಳುಹಿಸುವ ಪರಿಸ್ಥಿತಿ ಬಂದಿದೆ. ಉದ್ಯಮಗಳಿಗೆ ಹೂಡಿಕೆ ಮಾಡಲು ಬರುತ್ತಿಲ್ಲ ಎಂಬುದು ಗಮನಕ್ಕೆ…
ಬೆಂಗಳೂರು: ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್ 1ರ ವರೆಗೆ ಇರಲಿದೆ. ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ — ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶವಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx