Subscribe to Updates
Get the latest creative news from FooBar about art, design and business.
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
Author: admin
ತುಮಕೂರು: ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ರೂ. ವೆಚ್ಚದಲ್ಲಿ…
ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಭಾರತ ಚುನಾವಣಾ ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ತುಮಕೂರಿನ ಗಾಂಧಿ ನಗರದ ಸೆಂಟ್ ಮೇರಿಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಮಂಜುನಾಥ್, ಶಾಲಾ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಸುನೀಲ್ ಕುಮಾರ್ ಹಾಗೂ ಮಂಜುನಾಥಾಚಾರ್ ಉದ್ಘಾಟಿಸಿದರು. ಪ್ರಬಂಧ ಸ್ಪರ್ಧೆ(ಕನ್ನಡ)ಯಲ್ಲಿ ಹೊರಪೇಟೆ ಚೇತನಾ ವಿದ್ಯಾ ಮಂದಿರದ ರಾಧಾ ಪಿ, ಪ್ರಬಂಧ ಸ್ಪರ್ಧೆ(ಆಂಗ್ಲ)ಯಲ್ಲಿ ತುರುವೇಕೆರೆ ಎಸ್.ಎ.ಸಿ. ಮಯೂರ ವಿದ್ಯಾಲಯದ ಅನನ್ಯ ಎಂ.ಡಿ. ಹಾಗೂ ಭಿತ್ತಿಚಿತ್ರ ಸ್ಪರ್ಧೆದಲ್ಲಿ ಜಿ.ಜೆ.ಸಿ. ವಿದ್ಯಾಸಂಸ್ಥೆಯ ವೈಷ್ಣವಿ ಬಿ.ಎಸ್, ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಣಿಗಲ್ ತಾಲ್ಲೂಕು ಎಸ್.ಪಿ.ಎಸ್.ಹೆಚ್.ಎಸ್ ಗವಿಮಠದ ಮುನಿರತ್ನ.ಕೆ.ಸಿ. ಹಾಗೂ ಧನಲಕ್ಷ್ಮೀ ಕೆ.ಎನ್. ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ಪೀಠಿಕೆಯ…
ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು. ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು. ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು…
ತುಮಕೂರು: ಸ್ವ–ಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟ ಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು. ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃ ಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು. ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು–ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು. ಅಭಿವ್ಯಕ್ತಿಗೆ ಧಕ್ಕೆ : ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ…
ತುಮಕೂರು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಆಸಕ್ತ ಪ.ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ/ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 35 ವರ್ಷ ಹಾಗೂ ಮಹಿಳೆಯರಿಗೆ 40 ವರ್ಷ ವಯೋಮಿತಿ ನಿಗಧಿಪಡಿಸಲಾಗಿದೆ. ಅಭ್ಯರ್ಥಿಯ ಕುಟುಂಬದ ಆದಾಯ 2.50ಲಕ್ಷ ರೂ.ಗಳನ್ನು ಮೀರಬಾರದು. ಮೂಲಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ ಮತ್ತು ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿ ನೋಂದಣಿ ಸಮಯದಲ್ಲಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತರಬೇತಿ…
ತುಮಕೂರು: ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರು ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವೆಂದು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ಟಿ.ಬಿ.ಎಸ್. ರಾಮೇಗೌಡ ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತುಮಕೂರು ಹಾಗೂ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಆರೋಗ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತರರಿಗಾಗಿ ಗುರುವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇತ್ತೀಚಿನ ಪೌರಾಡಳಿತ ನಿರ್ದೇಶನಾಲಯದ ಆದೇಶಗಳನುಸಾರ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಪ್ರತ್ಯೇಕ ಪರವಾನಗಿ ನೀತಿಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ವ್ಯಾಪಾರ ನಡೆಸುವಂತಹ ಅಂಗಡಿ ಮಾಲೀಕರುಗಳು ಇನ್ನು ಮುಂದೆ ಕಡ್ಡಾಯವಾಗಿ ತಂಬಾಕು ವ್ಯಾಪಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ತಂಬಾಕು ಉತ್ಪನ್ನಗಳ ವ್ಯಾಪಾರ ನಡೆಸುವಂತೆ ವ್ಯಾಪಾರಸ್ಥರಿಗೆ ಪಾಲಿಕೆ ಅಧಿಕಾರಿಗಳು ತಿಳುವಳಿಕೆ ನೀಡಬೇಕು ಎಂದು ಸೂಚನೆ ನೀಡಿದರಲ್ಲದೇ ಆದೇಶ ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು ಹಾಗೂ ಅಂಗಡಿ ವ್ಯಾಪಾರಕ್ಕೆ…
ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಕಾರ್ಯಕ್ರಮದ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಹಾಗೂ ಟಿಟಿ ಚಾಲಕ ಹರೀಶ್ ಜರೂರಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ಕಾರು ಮತ್ತು ಟಿಟಿ ಮೂಲಕ ರವಾನಿಸಿ ಯಾವುದೇ ಬಾರಿ ಅವಘಡ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರ ಕಾರ್ಯಕ್ಕೆ ಆಡಳಿತ ವರ್ಗ ಶ್ಲಾಘನೆ ವ್ಯಕ್ತಪಡಿಸಿದೆ. ಟಿಟಿ ಚಾಲಕ ಹರೀಶ್ ಅವರನ್ನು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಅವರಿಗೆ ಅಧಿಕಾರಿ ವರ್ಗ ಹಾಗೂ ಗ್ರಾಮಸ್ಥರು ಕೃತಜ್ಞತೆ ತಿಳಿಸಿದ್ದಾರೆ. ಈ ವೇಳೆ ಪಾವಗಡ ತಹಶೀಲ್ದಾರ್ ಡಿ.ಎನ್. ವರದರಾಜು, ಇಓ ಜಾನಕಿ ರಾಮ್, ಬಿಇಓ ಇಂದ್ರಾಣಮ್ಮ, ಅಕ್ಷರ ದಾಸೋಹ ಎ.ಡಿ.ಶಂಕರಪ್ಪ, ಇಸಿಒ ವೇಣು ಗೋಪಾಲ್ ಸೇರಿದಂತೆ ಕೋಣನಕುರಿಕೆ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಕೊರಟಗೆರೆ: ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಗರ್ಭಗುಡಿಯ ಮುಖ್ಯದ್ವಾರ ಅನಾವರಣಗೊಳಿಸಲಾಯಿತು. ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಲು ಗ್ರಾಮದಲ್ಲಿ ಸುಮಾರು 45 ಲಕ್ಷಗಳ ವೆಚ್ಚದಲ್ಲಿ ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 60 ವರ್ಷಗಳಿಂದ ಈ ಗ್ರಾಮದಲ್ಲಿ ಒಂದೇ ಒಂದು ದೇವಾಲಯವಿಲ್ಲದೆ ಮೂಲಭೂತ ಸೌಕರ್ಯವಿಲ್ಲದೆ, ಗ್ರಾಮದ ಅಭಿವೃದ್ಧಿ ಇಲ್ಲದೆ ಇದ್ದ ಕುಗ್ರಾಮದಲ್ಲಿ ಇದೀಗ ಸಂತಸದ ವಾತಾವರಣ ನಿರ್ಮಾಣವಾಗಿದೆ. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಎಲೆರಾಂಪುರ ಮಠದ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ರವರ ಮಾರ್ಗದರ್ಶನದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಅಕ್ಕ–ಪಕ್ಕದ ಗ್ರಾಮಸ್ಥರಿಂದ ಸ್ಥಳೀಯ ಜನಪ್ರತಿನಿಧಿಗಳಿಂದ ಸಾರ್ವಜನಿಕರ ಸಹಾಯ ಹಸ್ತದಿಂದ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ. ಶ್ರೀ ಬಲಮುರಿ ಗಣಪತಿ ದೇವಾಲಯದ ಅಭಿವೃದ್ದಿಗೆ, ದೇವಾಲಯ ಸಂಪೂರ್ಣವಾಗಿ ನಿರ್ಮಿಸಲು ದಾನಿಗಳು ಹೆಚ್ಚಿನ ಧನ ಸಹಾಯ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.…
ಸರಗೂರು: ಇಂದಿನ ಮಕ್ಕಳು ಬರೀ ಪಠ್ಯ ವಾಚನ ಮಾಡಿದರೆ ಸಾಲದು ಆಟೋಟ, ಪ್ರದರ್ಶನ, ಮನರಂಜನೆ ಕೂಡ ಮುಖ್ಯ ಎಂದು ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಂಜುಂಪಾಷ ಎಂದರು. ತಾಲೂಕಿನ ಪಟ್ಟಣದ ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 — 25 ನೇ ಸಾಲಿನ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಶುಕ್ರವಾರದಂದು ಏರ್ಪಡಿಸಲಾಗಿತ್ತು. ಸುತ್ತೂರು ಸ್ವಾಮೀಜಿಗಳ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮದ ಉದ್ಘಾಟಿಸಿ ನಂತರ ಮಾತನಾಡಿದರು. ಇಂದಿನ ಪೀಳಿಗೆಗೆ ಇಂತಹ ವಸ್ತು ಪ್ರದರ್ಶನಗಳು ಆಗಿಂದಾಗ್ಗೆ ಏರ್ಪಡಿಸುತ್ತಾ ಬಂದರೆ, ವಿದ್ಯಾರ್ಥಿಗಳಲ್ಲಿ ಅತ್ಯುತ್ಸಾಹ ಉಂಟಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದರು. ವಸ್ತು ಪ್ರದರ್ಶನಗಳು ಸೀಮಿತ ಅವಧಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿ ಸೀಮಿತಾವಧಿಗೆ ಮುಕ್ತಾಯವಾಗುತ್ತದೆ. ಆದರೆ ತಾತ್ಕಾಲಿಕವಾಗಿ ಏರ್ಪಾಡು ಮಾಡುವ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಪಡೆಯುವ ಜ್ಞಾನ ಶಾಶ್ವತವಾಗಿ ವಿದ್ಯಾರ್ಥಿಗಳ ಮನದಲ್ಲಿ ಉಳಿದುಕೊಳ್ಳುತ್ತದೆ ಎಂದರು. ಪ್ರಾಂಶುಪಾಲರು ಕೆ.ಎಸ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಹಾಗೂ ವೈಜ್ಞಾನಿಕವಾಗಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗುತ್ತದೆ. ಇದರಿಂದ…