Author: admin

ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದಲ್ಲಿನ ಪ್ರಾಥಮಿಕ ಪಾಠಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ನಂತರ ಚಿಕ್ಕಿ ಮೊಟ್ಟೆಯನ್ನು ಸೇವಿಸಿದ ಕೆಲವೇ ಕ್ಷಣದಲ್ಲಿ ಮೂರು ನಾಲ್ಕು ಮಕ್ಕಳಿಗೆ ವಾಂತಿ ಮಾಡಿಕೊಂಡಿದ್ದು ತಕ್ಷಣ ಎಚ್ಚೆತ್ತುಕೊಂಡ ಶಿಕ್ಷಕರು ಮತ್ತು ಗ್ರಾಮಸ್ಥರು ಕೂಡಲೇ ವಿಷಯವನ್ನು ಮೇಲಾಧಿಕಾರಿಗಳಿಗೆ ತಿಳಿಸಿ 40 ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಿರುತ್ತಾರೆ. ವಿಷಯ ತಿಳಿದ ತಹಶೀಲ್ದಾರ್ ವರದರಾಜು, ಕಾರ್ಯನಿರ್ವಾಹಣಾಧಿಕಾರಿ ಜಾನಕಿರಾಮ್, ಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ,ಅಕ್ಷರ ದಾಸೋಹ ನಿರ್ದೇಶಕರು, ಮತ್ತು ಬಿ.ಆರ್. ಸಿ ಗಳು ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ವೈದ್ಯರರಿಂದ ಮಾಹಿತಿ ಪಡೆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ತಹಶೀಲ್ದಾರ್ ವರದರಾಜು,  ಮಕ್ಕಳು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ, ಊಟ ಸೇವಿಸಿದ ನಂತರ ಕೆಲ ಮಕ್ಕಳು ವಾಂತಿ ಮಾಡಿಕೊಂಡಿದ್ದು ಅದನ್ನು ಕಂಡು ಉಳಿದ ಮಕ್ಕಳು ಆತಂಕಕ್ಕೊಳಗಾಗಿದ್ದಾರೆ ಎಲ್ಲಾ ಮಕ್ಕಳನ್ನು ವೈದ್ಯರು ಪರೀಕ್ಷಿಸಿದ್ದಾರೆ, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದರು. ಆರೋಗ್ಯ ವೈದ್ಯಾಧಿಕಾರಿಗಳಾದ ಬಾಬು ರವರು ಮಾತನಾಡಿ, ಕೋಣನಕುರಿಕೆ ಶಿಕ್ಷಕರು ನಮಗೆ ಕರೆ…

Read More

ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ತಾಯಿ ಭುವನೇಶ್ವರಿ ಅಬ್ಬ ಹಾಗೂ ಹೊಯ್ಸಳ ವಿಜಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭವು ಬಹಳ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಪಡೆದಂತಹ ಶ್ರೀಕ್ಷೇತ್ರ ಕುಂಚಶ್ರೀ ಎಲೆರಾಂಪುರ ಮಠದ ಪೀಠಾಧ್ಯಕ್ಷರಾದ  ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಈ ನಮ್ಮ ನಾಡಿನಲ್ಲಿ ಅನೇಕ  ಹಾಗೂ ಅನೇಕ ವಿದ್ಯಾ ಸಮೂಹಗಳು ಪ್ರಶಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ ಆದರೆ ಕರ್ನಾಟಕ ರಣಧೀರರ ವೇದಿಕೆಯವರು ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಹರುಷ ವ್ಯಕ್ತಿಗಳನ್ನು ಗುರುತಿಸಿ ಯಾವುದೇ ಫಲಾಪೇಕ್ಷೆ ಇಲ್ಲದೆ ಗೌರವ ಕೊಡುತ್ತಿರುವುದು ಬಹಳ ಸಂತೋಷವಾಗಿದೆ ಅಲ್ಲದೆ ನಾವು ಗಮನಿಸಿದಂತೆ ರಾಜ್ಯದಲ್ಲಿ ಕರ್ನಾಟಕ ರಣಧೀರರ ವೇದಿಕೆಯು ಬಹಳ ಗಾಂಭೀರ್ಯದಲ್ಲಿ ಸಿಂಹದ ಹೆಜ್ಜೆಯಂತೆ ಹೋರಾಟದ ಹೆಜ್ಜೆಗಳನ್ನಾಕುತ್ತಿರುವುದು ಬಹಳ ಸಂತೋಷವಾಗಿದೆ ಕರ್ನಾಟಕ ರಣಧೀರರ ವೇದಿಕೆ ಹೋರಾಟಕ್ಕೆ ನಾವು ಸದಾ ಬೆಂಬಲಿಸುತ್ತೇವೆ ಎಂದು ಹೇಳಿದರು. ಇದೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ರಣಧೀರದ…

Read More

ತುಮಕೂರು: ಎನ್‌ ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಬೇಡಿಕೆಯೂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುವ ಹೊಣೆಗಾರಿಕೆ ನನ್ನ ಮೇಲಿದ್ದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷ  ಎನ್.ನರಸಿಂಹರಾಜು  ಹೇಳಿದರು. ಇಂದು ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಅಭಿನಂದನೆ ಸ್ವೀಕರಿಸಿ ಅವರು  ಮಾತನಾಡಿದರು. ನನ್ನ ಮೇಲೆ ವಿಶ್ವಾಸವಿಟ್ಟು 2ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ  ಸಂಘದ ತಾಲೂಕು ಅಧ್ಯಕ್ಷರು, ನಿರ್ದೇಶಕರಿಗೆ, ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಅವರು ಪರಸ್ಪರ ಸಹಮತದಿಂದ ಮೂರು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಮಾಡಲಾಗಿದ್ದು. ಈ ಮೂಲಕ  ಜಿಲ್ಲಾ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ಮಾದರಿ ಸಂಘ ಎಂದು ಹೆಸರು ಮಾಡಿದೆ ಎಂದರು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್, ಕೇಂದ್ರ ರ‍್ಯೇಲ್ವೆ ್ಯ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್,ರಾಜಣ್ಣ ಹಾಗೂ…

Read More

ತುಮಕೂರು:  ಸರ್ಕಾರಿ ಶಾಲೆಯಲ್ಲಿ ವಿತರಣೆ ಮಾಡುವ ಚಿಕ್ಕಿ (ಕಡಲೆಮಿಠಾಯಿ) ತಿಂದು ಶಾಲಾ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವ ಘಟನೆ ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ. ಸುಮಾರು 46 ವಿದ್ಯಾರ್ಥಿಗಳಿಗೆ ಕಾಣಿಸಿಕೊಂಡ ವಾಂತಿ, ಮಧ್ಯಾಹ್ನ ಊಟದ ಜೊತೆಗೆ ಕೊಡುವ ಚಿಕ್ಕಿ ತಿಂದಾಗ ನಡೆದಿದೆ.  ಕೂಡಲೇ ಮಕ್ಕಳನ್ನ ಪಾವಗಡ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಪಾವಗಡ ತಹಶಿಲ್ದಾರ್ ವರದರಾಜು, ಬಿಇಓ ಇಂದ್ರಣಮ್ಮ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎನ್.ನರಸಿಂಹರಾಜುಯವರನ್ನು    ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ, ತಿಳಿಸಿದ್ದಾರೆ. ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಪರಶಿವಮೂರ್ತಿ ಹಾಗೂ ರಮೇಶ್ ಹೆಚ್.ಇ. ಅವರು ನಾಮಪತ್ರ ಹಿಂಪಡೆದು ಎನ್.ನರಸಿಂಹರಾಜು ಅವರಿಗೆ ಬೆಂಬಲ ನೀಡಿದರು.   ಹಿಂದಿನ ಎಲ್ಲಾ ಚುನಾವಣೆಗಳಿಗಿಂತÀ ಅತ್ಯಂತ ಸ್ಪರ್ಧಾತ್ಮಕವಾಗಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುಣಾವಣೆ ತೀವ್ರ ಕುತೂಹಲ ಕೆರಳಿಸಿತ್ತು, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ, ರಾಜ್ಯ ಪರಿಷತ್ ಸದಸ್ಯ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಮಾತ್ರ ಡಿಸೆಂಬರ್ ೪ ರಂದು ಚುನಾವಣೆ ನಡೆಯಬೇಕಿತ್ತು. ಈ ಮೂರು ಸ್ಥಾನಗಳಿಗೆ ತಲಾ ಮೂವರು ನಾಮಪತ್ರ ಸಲ್ಲಿಸಿದ್ದರು, ಕೊನೆಗಳಿಗೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲ ಸ್ಥಾನಗಳಿಂದಲೂ ಒಬ್ಬೊಬ್ಬರ ಹೊರತಾಗಿ ಉಳಿದೆಲ್ಲಾ ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದರು, ಇದರಿಂದ ಚುನಾವಣೆಗೆ ಮೊದಲೇ ಸಂಘದ ಅಧ್ಯಕ್ಷರಾಗಿ ಎನ್.ನರಸಿಂಹರಾಜು, ರಾಜ್ಯ ಪರಿಷತ್ ಸದಸ್ಯರಾಗಿ…

Read More

ತಿಪಟೂರು: ಸಾಲ ಬಾಧೆ ತಾಳಲಾರದೇ ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಹೆಚ್.ಎಂ.ಪಾಳ್ಯದಲ್ಲಿ ನಡೆದಿದೆ. ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಹೆಚ್.ಎಂ ಪಾಳ್ಯ ನಿವಾಸಿ ಅಡವೀಶ್(39) ಮೃತ ದುರ್ದೈವಿ. ಅಡವೀಶ್ ಫೈನಾನ್ಸ್ ,ಬ್ಯಾಂಕ್, ಸೇರಿದಂತೆ ಹಲವು ಕಡೆ ಕೈ ಸಾಲಮಾಡಿಕೊಂಡಿದ್ದು, ಸಾಲಕೊಟ್ಟವರ ಕಿರುಕುಳ ತಾಳಲಾರದೇ ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿದೆ. ಮೃತ ಅಡವೀಶ್ ಗೆ ಮದುವೆಯಾಗಿದ್ದು, 3 ವರ್ಷದ ಮಗು ಸಹ ಇದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಕಾರ್ಯಕರ್ತ ಶಿವಕುಮಾರ್ ಎಂಬುವರು ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದಾರೆ. ಮಂಡ್ಯದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಎಂಬುವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ರಕ್ತದ ಮೂಲಕ ಪತ್ರ ಬರೆದಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ತಕ್ಷಣವೇ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಪತ್ರ ಚಳುವಳಿಯನ್ನು ಆರಂಭಿಸಿರುವ ಅವರು, ಯತ್ನಾಳ್ ಹಾಗೂ ಅವರ ತಂಡ ನಡೆಸುತ್ತಿರುವ ಜಾಗೃತಿ ಅಭಿಯಾನಕ್ಕೆ ಕಡಿವಾಣ ಹಾಕಬೇಕು. ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ಅನುಮತಿ ಪಡೆಯದೆ ಪಕ್ಷದ ಚಿಹ್ನೆಯನ್ನು ಬಳಸದೆ ಯಾವ ಆಧಾರದ ಮೇಲೆ ಅಭಿಯಾನ ನಡೆಸಲು ಅವಕಾಶ ಕೊಡಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಪಕ್ಷದ ಒಪ್ಪಿಗೆಯನ್ನು ಪಡೆಯದೆ ನಡೆಸುತ್ತಿರುವ ಈ ಅಭಿಯಾನಕ್ಕೆ ಕೂಡಲೇ ರಾಷ್ಟ್ರದ ನಾಯಕರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಬೇಕು ಎಂದು ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬಳ್ಳಾರಿ: ಜಿಲ್ಲಾ ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ ಐವರು ಬಾಣಂತಿಯರ ಸಾವಾಗಿದ್ದು ,ಘಟನೆ ಕುರಿತಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವದಿನೇಶ್ ಗುಂಡೂರಾವ್,ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಸರಣಿ ಸಾವಿನ ಬೆನ್ನಲ್ಲೇ, ನ.16ರಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ ಔಷಧಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ ಎಂದು ಹೇಳಿದ್ದಾರೆ. ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ ,ಈ…

Read More

ತುಮಕೂರು: ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಂತಾದ ಸಚಿವರು, ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಸುಮಾರು ರೂ. 938 ಕೋಟಿ ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ. ವಿವಿಧ ಇಲಾಖೆಗಳ 1.50…

Read More

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.…

Read More