Subscribe to Updates
Get the latest creative news from FooBar about art, design and business.
- ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
- ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
Author: admin
ತುಮಕೂರು: ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿಯವರ ಮೆರವಣಿಗೆ ನಡೆದಿದೆ. ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳು ಕನ್ನಡ ಅಭಿಮಾನಿಗಳು ಸೇರಿದಂತೆ ಅಧಿಕಾರಿ ವರ್ಗ ಮೆರವಣಿಗೆ ಜೊತೆ ಹೆಜ್ಜೆ ಹಾಕಿದ್ದು ನೋಡುಗರ ಗಮನ ಸೆಳೆದಿದೆ. ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಜೊತೆಗೆ ತಮ್ಮ ಕೈಯಲ್ಲಿ ಕನ್ನಡ ಬಾವುಟವನ್ನು ಹಿಡಿದು ಕನ್ನಡ ಪ್ರೇಮ ಸಾರಿದ್ದರೆ, ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರಿದರು. ಅದ್ದೂರಿಯಾಗಿ ತುಮಕೂರಿನಲ್ಲಿ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ವರದಿ : ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ/ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಅಗತ್ಯವಿದ್ದು, ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಕಟ್ಟಡದಲ್ಲಿ 100–125 ವಿದ್ಯಾರ್ಥಿಗಳು ವಾಸಿಸಲು ಸುಮಾರು 15 ರಿಂದ 20 ವಾಸದ ಕೊಠಡಿಗಳು, ಸ್ನಾನದ ಗೃಹ, ಶೌಚಾಲಯ, ಸ್ವಂತ ಬೋರ್ ವೆಲ್ ನೀರಿನ ವ್ಯವಸ್ಥೆ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡಿರುವ ಕಟ್ಟಡಗಳ ಅವಶ್ಯಕತೆಯಿದೆ. ಲೋಕೋಪಯೋಗಿ ಇಲಾಖೆಯವರು ನಿಗದಿಪಡಿಸುವ ಬಾಡಿಗೆಗೆ ಒಪ್ಪುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2251736ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿಯವರು ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಮುನ್ನ ಪೂರಕ ದಾಖಲೆ/ಮಾಹಿತಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕೆಂದು ತುಮಕೂರು ತಾಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರವಾಸದಲ್ಲಿ ಇಲಾಖಾ ಮಾರ್ಗಸೂಚಿಯನ್ನು ಮೀರಿ ಪ್ರವಾಸ ಕೈಗೊಂಡು ಸಂಭವಿಸುವ ಯಾವುದೇ ಅವಘಡಗಳಿಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯವರೇ ಜವಾಬ್ದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪೋಷಕತ್ವ ಕಾರ್ಯಕ್ರಮದಡಿ ಬಾಲನ್ಯಾಯ ಕಾಯ್ದೆ–2015 ಸೆಕ್ಷನ್–44ರ ಅನ್ವಯ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಮಕ್ಕಳನ್ನು ಅವರ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕವಾಗಿ ಸಾಕಲು ಕಳುಹಿಸುವ ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ/ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಮಕ್ಕಳ ಬೆಳವಣಿಗೆ ಹಿತದೃಷ್ಠಿಯಿಂದ ಪೋಷಕತ್ವ ಯೋಜನೆಯಡಿ ಇತರೆ ಕುಟುಂಬದಲ್ಲಿ ಬೆಳೆಯಲು ಮಕ್ಕಳ ಕಲ್ಯಾಣ ಸಮಿತಿಯಿಂದ ತೀರ್ಮಾನ ನಿಯಮಾನುಸಾರ ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ತುಮಕೂರಿನ ಬಾಲಮಂದಿರಗಳಲ್ಲಿರುವ 6–18 ವರ್ಷದ ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಾಕಲು/ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣ, ಮೊದಲನೇ ಮಹಡಿ, ಜಿಲ್ಲಾ ಮಕ್ಕಳ ರಕ್ಷಣಾ…
ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಅಧಿಕಾರಿಗಳೇ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಸರೆನ್ಸ್ ಸಭೆ ನಡೆಸಿ ಮಾತನಾಡುತ್ತಾ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತು ಪಡೆಯಲು ಆಗಮಿಸುವ ಫಲಾನುಭವಿಗಳ ಮಾಹಿತಿಯನ್ನು ಪಡೆದ ಅವರು ಸವಲತ್ತು ಪಡೆಯುವ ಫಲಾನುಭವಿಗಳೊಂದಿಗೆ ಡಿಸೆಂಬರ್ 2ರಂದು ಬೆಳಿಗ್ಗೆ 9:30ಗಂಟೆಗೆ ಕಾರ್ಯಕ್ರಮ ಸ್ಥಳದಲ್ಲಿ ಹಾಜರಿರಬೇಕು ಎಂದು ನಿಯೋಜಿತ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಅಡಿಗಲ್ಲುಗಳನ್ನು ಒಂದೇ ವಿನ್ಯಾಸದಲ್ಲಿ ಸಿದ್ಧಪಡಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ಗೆ ಸೂಚನೆ ನೀಡಿದರು. ಶಿಷ್ಟಾಚಾರದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ…
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 30ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ 2024–25ನೇ ಸಾಲಿನ ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿರುವ ವಿವಿಧ ಸಂಘ ಸಂಸ್ಥೆಗಳ ಯುವಕ/ಯುವತಿಯರು ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ವಿಷಯಾಧಾರಿತ ಸ್ಪರ್ಧೆ: ಸಾಂಸ್ಕೃತಿಕ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಜನಪದ ನೃತ್ಯ(ತಂಡ/ವೈಯಕ್ತಿಕ) ಹಾಗೂ ಜನಪದ ಗೀತೆ(ತಂಡ/ವೈಯಕ್ತಿಕ); ಜೀವನ ಕೌಶಲ್ಯ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಕವಿತೆ ಬರೆಯುವುದು(ವೈಯಕ್ತಿಕ-1000 ಪದಗಳಿಗೆ ಮೀರದಂತೆ), ಕಥೆ ಬರೆಯುವುದು(1000 ಪದಗಳಿಗೆ ಮೀರದಂತೆ), ಚಿತ್ರಕಲೆ(ಂ3 ಅಳತೆ-11.7”x16.5”), ಭಾಷಣ ಸ್ಪರ್ಧೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿರಬೇಕು) ನಡೆಯಲಿದೆ. ಸ್ಪರ್ಧೆಯೊಂದಿಗೆ ಗುಡಿ ಕೈಗಾರಿಕೆಯ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳ ಪ್ರದರ್ಶನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವಿನ್ಯತೆ ವಿಷಯದಡಿ ಪೂರಕ ಪರಿಕರ/ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಸ್ಪರ್ಧಾಳುಗಳು ತಮ್ಮ…
ತುಮಕೂರು: ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು. ನಗರದ ಬಾಲ ಭವನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು–ಕೊರತೆ ಸಭೆಯಲ್ಲಿ ದಲಿತ ಮುಖಂಡರು ಈ ಒತ್ತಾಯವನ್ನು ಮುಂದಿಟ್ಟರು. ಜಿಲ್ಲೆಯ ದಲಿತ ಸಮುದಾಯಗಳು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮತ್ತು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣ ಮಾಡಲು ಅನೇಕ ವರ್ಷಗಳಿಂದ ಸರ್ಕಾರದ ಮುಂದೆ ಬೇಡಿಕೆಯಿಟ್ಟರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂಬ ದಲಿತ ಮುಖಂಡರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಬಾಬು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಮುದಾಯ ಭವನ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣ ಇತ್ಯರ್ಥಗೊಂಡ ತಕ್ಷಣವೇ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮಹಾನಗರ ಪಾಲಿಕೆ…
ಬೆಂಗಳೂರು: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ರಾಜ್ಯದ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರುಗಳ ನಿಯೋಗವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. 2023–24ನೇ ಸಾಲಿನಲ್ಲಿ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿ ರೂ.5,600.00 ಕೋಟಿಗಳನ್ನು ಮಂಜೂರು ಮಾಡಿದ್ದ ನಬಾರ್ಡ್ ಸಂಸ್ಥೆಯು ಪ್ರಸಕ್ತ 2024-25 ನೇ ಸಾಲಿನಲ್ಲಿ ಕೇವಲ ರೂ. 2,340.00 ಕೋಟಿಗಳನ್ನು ಮಾತ್ರ ಮಂಜೂರು ಮಾಡಿದ್ದು. ಈ ಮೊತ್ತವು ಹಿಂದಿನ ಸಾಲಿಗೆ ಹೋಲಿಸಿದರೆ ಶೇ.58% ರಷ್ಟು ಇಳಿಕೆಯಾಗಿರುತ್ತದೆ. ಪ್ರಸಕ್ತ ನಬಾರ್ಡ್ ಸಂಸ್ಥೆಯ ರಿಯಾಯಿತಿ ಬಡ್ಡಿದರದ ಕೃಷಿ ಸಾಲದ ಮಿತಿ ಗಣನೀಯವಾಗಿ ಕಡಿಮೆಯಾಗಿರುವುದರಿಂದ ರೈತರಿಗೆ ಅವಶ್ಯಕವಾದ ಸಾಲ ಸೌಲಭ್ಯಕ್ಕೆ ಸಂಪನ್ಮೂಲದ ಕೊರತೆ ಉಂಟಾಗಿರುವ ಬಗ್ಗೆ ಚರ್ಚಿಸಲಾಯಿತು. ರಾಜ್ಯ ಸರ್ಕಾರದಿಂದ 2002ರಲ್ಲಿ ಮುಜರಾಯಿ ನಿಧಿಗಳ ಶೇ.50% ರಷ್ಟುನ್ನು ಹಾಗೂ ಕೃಷಿ ಮಾರುಕಟ್ಟೆ ಠೇವಣಿಗಳ ಶೇ. 50% ರನ್ನು ಡಿ.ಸಿ.ಸಿ. ಬ್ಯಾಂಕುಗಳಲ್ಲಿ ಠೇವಣಿ ಇಡಿಸಲು ಆದೇಶವಾಗಿದ್ದು ಇದು ಪಾಲನೆಯಾಗಿರುವುದಿಲ್ಲ. ಆದ್ದರಿಂದ ಅಪೇಕ್ಸ್ ಬ್ಯಾಂಕ್ ಹಾಗೂ ಜಿಲ್ಲಾ…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ನವೆಂಬರ್ 30ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್ 30ರಿಂದ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ…
ಬೀದರ್: ನೆರೆ ರಾಜ್ಯಕ್ಕೆ ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಸಾಗಿಸುತ್ತಿದ್ದ ಆರೋಪಿಯನ್ನು ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ, ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ. ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದೆ. ತೆಲಂಗಾಣ ರಾಜ್ಯದ ಶಂಶಾಬಾದ್ ಮೂಲದ ಪಿ.ಕೆ.ಬದ್ರುದ್ದೀನ್ ಬಂಧಿತ ಆರೋಪಿ. ತೆಲಂಗಾಣ ರಾಜ್ಯದಿಂದ ಮಹಾರಾಷ್ಟ್ರದ ಮುಂಬೈಗೆ ಅಕ್ರಮವಾಗಿ ಮಾರಾಟ ಮಾಡಲೆಂದು ಗೋಡ್ಸ್ ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಸವಕಲ್ಯಾಣ ವ್ಯಾಪ್ತಿಯ ಹೆದ್ದಾರಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಸವಕಲ್ಯಾಣ ನಗರ ಠಾಣೆ ಪಿಎಸ್ ಐ ಅಂಬರೀಷ್ ವಾಗ್ಮೋಡೆ ಹಾಗೂ ವಲಯ ಅರಣ್ಯ ಅಧಿಕಾರಿ ಮಹೇಂದ್ರ ಮೌರ್ಯ ನೇತೃತ್ವದ ಅಧಿಕಾರಿಗಳ ತಂಡದ ದಾಳಿಯಲ್ಲಿ 16 ಲಕ್ಷ ರೂ. ಮೌಲ್ಯದ ಒಂದು ಕ್ವಿಂಟಾಲ್ ಶ್ರೀಗಂಧದ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…