Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾದೇನಹಳ್ಳಿ ಗ್ರಾಮದ ಬಹುಜನರ ಆರಾಧ್ಯ ದೈವವಾದ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಗುರುವಾರದಂದು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಅತ್ಯಂತ ಹಳೆಯದಾಗಿದ್ದ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಾಲಯವನ್ನು ದೇವಾಲಯದ ಪೂಜಾ ಸಮಿತಿಯ ಪದಾಧಿಕಾರಿಗಳು ಭಕ್ತಾದಿಗಳ ಉದಾರ ಸಹಕಾರವನ್ನು ಪಡೆದು, ದೇವಾಲಯವನ್ನು ವಿಶಾಲವಾಗಿ ನಿರ್ಮಿಸಲಾಗಿದ್ದು, ದೇವರ ಗರ್ಭಗುಡಿಯನ್ನು ನವೀಕರಿಸಲಾಗಿದ್ದು, ಗುರುವಾರದಂದು ನೂತನ ಗರ್ಭಗುಡಿಯಲ್ಲಿ ಪುನರ್ ಪ್ರತಿಷ್ಠಾಪಿಸಲಾಯಿತು. ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ಮರಡಿ ಗುಡ್ಡದ ಶ್ರೀ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಗಂಗಸ್ನಾನ ಮಾಡಿ ಗಣಪತಿ ಪೂಜೆಯ ನಂತರ ಸಂಜೆ ಐದು ಮೂವತ್ತಕ್ಕೆ ಸರಿಯಾಗಿ ಸುಮಂಗಲರಿಂದ ಗಂಗಾ ಪೂಜೆ ಮಾಡಿ ಆಲಯ ಪ್ರವೇಶ ಮಾಡಲಾಯಿತು. ಗುರುವಾರ ಬೆಳಗ್ಗೆ ಬೆಳಗಿನ ಜಾವ 5ಗೆ ಪ್ರಧಾನ ಕಲಶಾರಾಧನೆ ಸಪ್ತಸೂತ್ರರಾಧನೆ, ನವದುರ್ಗ ಆರಾಧನೆ ನಡೆದು ಬೆಳಗ್ಗೆ 5.30ರಿಂದ 6ಘಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ದೇವಿಯವರ ಸ್ಥಿರಮೂರ್ತಿ ಪ್ರತಿಷ್ಠಾಪನೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಂತರ…
ಮಧುಗಿರಿ: ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ ದಿನ ಇಲಾಖಾ ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು. ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು. ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು. ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು…
ತುಮಕೂರು: ಗ್ಯಾಂಗ್ ರೇಪ್ ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದ್ದು, ನ್ಯಾಯಾಧೀಶರಾದ ಹೆಚ್. ಅನಂತ್ ಅವರಿಂದ ಶಿಕ್ಷೆ ಪ್ರಕಟಗೊಂಡಿದೆ. ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ತಲಾ 1,62,000 ರೂ. ದಂಡ ವಿಧಿಸಲಾಗಿದೆ. ಆರೋಪಿಗಳಾದ ಮಹಂತೇಶ್, ಶ್ರೀನಿವಾಸ್ ಕಾರಿನಲ್ಲಿ ಅತ್ಯಾಚಾರ ಮಾಡಿದ್ದರು. ಅತ್ಯಾಚಾರ ಮಾಡಿದ್ದನ್ನು ವಿಡಿಯೋ ಮಾಡಿಕೊಂಡಿದ್ದರು. ನಿರ್ಭಯಾ ಕೇಸ್ ಗೂ ಮೂರು ತಿಂಗಳ ಮೊದಲು ನಡೆದಿದ್ದ ಪ್ರಕರಣ ಇದಾಗಿತ್ತು. ಮೂವರು ಗೆಳತಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಓರ್ವ ಯುವತಿಯಿಂದ ಮಾತ್ರ ದೂರು ದಾಖಲಾಗಿತ್ತು. ತನಿಖೆಯಿಂದ ಮತ್ತೋರ್ವ ಯುವತಿ ಮೇಲಿನ ಅತ್ಯಾಚಾರ ಬೆಳಕಿಗೆ ಬಂದಿತ್ತು. ಓರ್ವ ಕಾರು ಡ್ರೈವ್ ಮಾಡುತ್ತಿದ್ದರೆ, ಮತ್ತೊಬ್ಬ ಅತ್ಯಾಚಾರ ಮಾಡುತ್ತಿದ್ದನು. ಇವನು ಕಾರು ಓಡಿಸಬೇಕಾದರೆ, ಅವನು ಅತ್ಯಾಚಾರ ಮಾಡುತ್ತಿದ್ದ. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಕುರಿತು…
ಸರಗೂರು: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರ ಶ್ರೀ ಮತ್ತು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ ಎಂದು ವಿಧಾನ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಆಗ್ರಹಿಸಿದರು. ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಗುರುವಾರದಂದು ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿ ಮಾತನಾಡಿದರು. ಸಂವಿಧಾನ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳಬೇಕು. ಮನುವಾದಿಗಳ ಸಂಖ್ಯೆ ಹೆಚ್ಚದಂತೆ ನೋಡಿಕೊಳ್ಳಬೇಕು. ಮಠಗಳಲ್ಲಿ ಪಂಕ್ತಿಭೇದ ಮಾಡುವವರು ಪ್ರಜೆಗಳನ್ನು ಸಮಾನವಾಗಿ ಕಾಣುವುದಿಲ್ಲ. ಅಸ್ಪೃಶ್ಯತೆ ಪಾಲನೆ, ಮೌಢ್ಯ ಬಿತ್ತುವ ಸ್ವಾಮೀಜಿಗಳು ಸಂವಿಧಾನದ ವಿರುದ್ಧ ಮಾತನಾಡದಂತೆ ತಾಕೀತು ಮಾಡಬೇಕು’ ಎಂದು ಖಂಡಿಸಿದರು. ಸಮಾಜ ಸುಧಾರಕರ ಆಶಯಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ ‘ಸರ್ವ ಧರ್ಮ, ಸಹಬಾಳ್ವೆಯ ತಿರುಳಿರುವ ಸಂವಿಧಾನದ ಬದಲಾವಣೆಗೆ ಒತ್ತಾಯಿಸಿರುವ ಪೇಜಾವರ ಶ್ರೀಗಳು, ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷ್ಟಪಡಿಸಲಿ. ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ…
ಸರಗೂರು : ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು.ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಟೌನ್ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಗಳು ಹೇಳಿಕೆ ಕೊಟ್ಟಿರುವ ಬಗ್ಗೆ ಬುಧವಾರದಂದು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ ಅವರು, ಮುಸಲ್ಮಾನರ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಇಂತ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರೋದು ಒಳ್ಳೆಯದು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಶ್ನೆಗೂ ಬಂದಿರುವ ಹಕ್ಕು. ಇಲ್ಲಿ ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು ಎಂದು ತಿಳಿಸಿದರು. ಸಾರ್ವಜನಿಕರು ನಿಮ್ಮಗಳ ದೇವರು ಎಂದುಕೊಂಡಿದ್ದಾರೆ ಅದರಂತೆ ತಾವುಗಳು ಇದ್ದಾರೆ ಸಾಕು. ರಾಜಕೀಯ ಮಾಡೋಕ್ಕೆ ಬಂದರೆ ಬನ್ನಿ ಇಲ್ಲಾಂದ್ರೆ ಮಠದಲ್ಲಿ ಸ್ವಾಮೀಜಿ ಪೇಜಾವರ ಶ್ರೀಗಳು ಮಠದಲ್ಲೇ ಇರಿ…
ತುಮಕೂರು: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಮುಂದೂಡಿರುವುದಾಗಿ ಪ್ರಕಟಣೆ ನೀಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿರುವ ಘಟನೆ ನಡೆದಿದ್ದು, ಘಟನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಾಲಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಆದರೆ ಈ ಸಭೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿರುವುದಾಗಿಯೂ, ಅಂದು ಬೆಳಗ್ಗೆ 11 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ, ಸಭೆಯನ್ನು ಮುಂದೂಡದೇ ಈ ಹಿಂದೆ ನೀಡಿದ ದಿನಾಂಕ ನವೆಂಬರ್ 28ರಂದೇ ಸಭೆಯನ್ನು ಮಾಡುವ ಮೂಲಕ ಗೊಂದಲ ಸೃಷ್ಟಿ ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ…
ಕೇರಳ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅವರು, ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಅವರ ಸಮ್ಮುಖದಲ್ಲಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಾಂದೇಡ್ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್ (ಕಾಂಗ್ರೆಸ್) ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ರಾಂಚಿ: ಲೀವ್ ಇನ್ ರಿಲೇಶನ್ ಶಿಪ್ ನಲ್ಲಿದ್ದವಳನ್ನು ಪ್ರಿಯಕರನೇ ಹತ್ಯೆ ಮಾಡಿ ಮೃತದೇಹವನ್ನು 50 ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ಎಸೆದ ಘೋರ ಘಟನೆ ಜಾರ್ಖಂಡ್ ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ನರೇಶ್ ಭೇಂಗಾ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಜೋರ್ಡಾಗ್ ಗ್ರಾಮದ ಗಂಗಿ ಕುಮಾರಿ ಹತ್ಯೆಗೀಡಾದ ಬಲಿಪಶುವಾಗಿದ್ದಾಳೆ. ನರೇಶ್ ಗೆ ಮದುವೆಯಾಗಿದ್ದರೂ ಕೂಡ ಆತ ಗಂಗಿ ಜೊತೆಗೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ. ಈ ನಡುವೆ ನರೇಶ್ ಗೆ ವಿವಾಹವಾಗಿರುವುದು ಗಂಗಿ ಕುಮಾರಿಗೆ ತಿಳಿದಿದ್ದು, ಹೀಗಾಗಿ ಇಬ್ಬರ ನಡುವೆ ಬಿರುಕು ಮೂಡಿತ್ತು. ನನ್ನನ್ನು ನಿನ್ನ ಜೊತೆ ಕರೆದುಕೊಂಡು ಹೋಗು, ಇಲ್ಲವಾದರೆ, ನಾನು ನಿನಗೆ ನೀಡಿದ ಹಣವನ್ನು ವಾಪಸ್ ಕೊಡು ಎಂದು ಗಂಗಿ ಕೇಳಿದ್ದಾಳೆ, ಇದರಿಂದ ನರೇಶ್ ಹತ್ಯೆಗೆ ಸಂಚು ಹಾಕಿದ್ದು, ಆಕೆಯನ್ನು ಮನೆಯ ಸಮೀಪವಿರುವ ಅರಣ್ಯಕ್ಕೆ ಕರೆದೊಯ್ದು, ದುಪ್ಪಟ್ಟಾದಿಂದ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ 50 ತುಂಡುಗಳಾಗಿ ಕತ್ತರಿಸಿ ಕಾಡು ಪ್ರಾಣಿಗಳಿಗೆ ಎಸೆದಿದ್ದಾನೆ. ನಾಯಿಯೊಂದು ಮೃತದೇಹದ ಭಾಗವನ್ನು…
ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 28ರ ಬೆಳಿಗ್ಗೆ 11ಗಂಟೆಗೆ ನಗರದ ಬಾಲಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು-ಕೊರತೆ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಈ ಸಭೆಯನ್ನು 2024ರ ಡಿಸೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ–ಪ್ರತ್ಯಾರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲ ಎಂದು ವಿಭಾಗೀಯ ಪೀಠ ಇದೇ…