Author: admin

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುವುದು. ಈ ವರ್ಷ ಮೂವತ್ತು ವರ್ಷಗಳ ನಂತರ ಶನಿದೇವ ದೀಪಾವಳಿಯಂದು ಶುಭ ಸಂಯೋಗ ರೂಪಿಸುತ್ತಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಬುಧಾದಿತ್ಯ ಯೋಗದೊಂದಿಗೆ ಶಶ ರಾಜಯೋಗವೂ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್ ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ–ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರ ಪೀಠ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು. ದರ್ಶನ್ ಅವರ ಪಾಸ್‌‍ಪೋರ್ಟ್‌ನ್ನು ನ್ಯಾಯಾಲಯಕ್ಕೆ ತಕ್ಷಣವೇ ಒಪ್ಪಿಸುವುದು, ಅವರು ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು, ಒಂದು ವಾರದ ಚಿಕಿತ್ಸಾ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು. ನ್ಯಾಯಾಲಯದ ಆದೇಶದ ಪ್ರತಿಗಳನ್ನು ಬಳ್ಳಾರಿ ಜೈಲಿನ ಅಧೀಕ್ಷಕರಿಗೆ ಸಲ್ಲಿಸಿದ ಬಳಿಕ ಬಿಡುಗಡೆಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ತುಮಕೂರು: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ.ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಹೊರವಲಯದ ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಯೋಜನೆ ಮುಖ್ಯ ಪಾತ್ರವಹಿಸುತ್ತಿದ್ದು, ನರೇಗಾ ಕಾಮಗಾರಿಯಲ್ಲಿ ತೊಡಗಿದ ಕೂಲಿಕಾರ್ಮಿಕರಿಗೆ ಸಕಾಲಕ್ಕೆ ಕೂಲಿ ಪಾವತಿಸಿ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ದೃಷ್ಟಿಕೋನದಿಂದ ಗ್ರಾಮ ಪಂಚಾಯಿತಿ ಸಮಗ್ರ ದರ್ಶನ ಎಂಬ ವಿಶೇಷ ಅಭಿಯಾನದ ಮೂಲಕ ಈಗಾಗಲೇ 196.52 ಕೋಟಿ ರೂ.ವೆಚ್ಚದಲ್ಲಿ ಚರಂಡಿ, ರಸ್ತೆ, ಗ್ರಾಮ ಪಂಚಾಯಿತಿ ಕಟ್ಟಡ, ಸಂಜೀವಿನಿ ಭವನ, ಗ್ರಾಮೀಣ ಗೋದಾಮು, ಶಾಲಾ ಆವರಣ ಗೋಡೆ, ಶೌಚಾಲಯ, ಆಟದ ಮೈದಾನ ಅಂಗನವಾಡಿ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ…

Read More

ತುಮಕೂರು:  ಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು. ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದೇಶ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಮೂಲ್ಯ ಅವಕಾಶ ಸರ್ಕಾರಿ ನೌಕರರಿಗೆ ದೊರಕಿರುವುದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರನೂ ಸಹ ಪ್ರಾಮಾಣಿಕವಾಗಿ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಯಾವುದೇ ಆಸೆ ಆಕಾಂಕ್ಷೆಗಳಿಗೂ ಬಲಿಯಾಗದೆ, ನೈತಿಕತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ಮಾತ್ರ ನಮ್ಮ ವ್ಯಕ್ತಿತ್ವ ಮತ್ತು ನಮ್ಮ ಹೆಸರು ಜನ ಮಾನಸದಲ್ಲಿ ಉಳಿದುಕೊಳ್ಳುತ್ತದೆ. ಅಧಿಕಾರಿ ಮತ್ತು ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮನುಷ್ಯನನ್ನು ಹೊರತುಪಡಿಸಿ…

Read More

ತಿಪಟೂರು: ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಹತ್ತಿರ, ದೊಡ್ಮನೆ ಅಭಿಮಾನಿ ಬಳಗದ ವತಿಯಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಪುಷ್ಪ ನಮನ, ಅನ್ನ ಸಂತರ್ಪಣೆ ಹಾಗೂ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ದೊಡ್ಮನೆ ಅಭಿಮಾನಿ ಬಳಗದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ 18ರಂದು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವಂತೆ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. 10 ಮಂದಿ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಮತ್ತು ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸುವಂತೆ ಸೂಚನೆ ನೀಡಿದರು. ನಗರದ ಶಿರಾಗೇಟ್ ಬಳಿಯಲ್ಲಿರುವ ಕನಕ ಪುತ್ಥಳಿ ಹಾಳಾಗಿದ್ದು, ದುರಸ್ಥಿಗೊಳಿಸುವಂತೆ ಸಮುದಾಯದ ಮುಖಂಡರು ಬೇಡಿಕೆ ಇಟ್ಟರು. ಪುತ್ಥಳಿಯನ್ನು ದುರಸ್ಥಿಗೊಳಿಸಿ ಜಯಂತಿ ದಿನದಂದು ಶೃಂಗಾರಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್…

Read More

ತುಮಕೂರು:   ಭಗವಾನ್ ಶ್ರೀ ಮಹಾವೀರರ ಕೇವಲ ಜ್ಞಾನದ ಪ್ರಯುಕ್ತ 2024 ರ ಗುರುವಾರ 31 ರಂದು ಸಂಜೆ 4 ಗಂಟೆಗೆ ನಗರದ ಚಿಕ್ಕಪೇಟೆಯ ಜೈನ ಬಸದಿಯಲ್ಲಿ 108 ದೀಪಗಳನ್ನು ಅಚ್ಚಲಾಗುವುದು. ಶ್ರಾವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ. ವರದಿ:  ಜೆ.ರಂಗನಾಥ,  ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕೊರಟಗೆರೆ: ವಾಟರ್ ಟ್ಯಾಂಕ್ ಸ್ವಚ್ಚತೆ ಇಲ್ಲದೇ ಅನೈರ್ಮಲ್ಯ ಹೆಚ್ಚಾಗಿ 15 ಜನರು ವಾಂತಿ ಬೇದಿಯಿಂದ ಬಳಲುತ್ತಿದ್ದು, 15 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಾದವಾರ ಗ್ರಾಮದ ಹರೀಶ್ ಎಂಬವರ ಮಗಳಾದ ವಿದ್ಯಾರ್ಥಿ ಪೂರ್ಣಿಮಾ(15) ಮೃತಪಟ್ಟ ಬಾಲಕಿಯಾಗಿದ್ದಾಳೆ. ಘಟನೆಗೆ ತಾಲ್ಲೂಕು ಪಂಚಾಯಿತಿ ಇ ಓ ಮತ್ತು ಗ್ರಾಮ ಪಂಚಾಯಿತಿ ಪಿಡಿಓ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಪೇಸ್ ಬುಕ್ ಮತ್ತು ಇನ್ಸ್ ಸ್ಟಾಗ್ರಾಮ್ ಗಳಂತಹ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಬುದ್ಧಿವಾದ ಹೇಳುತ್ತಾರೆ. ಆದ್ರೆ ತಮ್ಮ ಜವಾಬ್ದಾರಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಟರ್ ಟ್ಯಾಂಕು, ನೀರಿನ ತೊಟ್ಟಿ, ಚರಂಡಿ, ಕುಡಿಯವ ನೀರಿನ ಸ್ವಚ್ಚತೆಯೇ ಗ್ರಾಮದಲ್ಲಿ ಮರೀಚಿಕೆಯಾಗಿದೆ. ಸಾರ್ವಜನಿಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸುವ ಮೊದಲು ಅಧಿಕಾರಿಗಳಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಆರೋಗ್ಯ ಇಲಾಖೆ…

Read More

ಬೆಂಗಳೂರು:  ಭಗವಾನ್ ಶ್ರೀ ಮಹಾವೀರ ಸಂಘ ಕಳೆದ 14 ವರ್ಷಗಳಿಂದ ನಡೆಸುತ್ತಿರುವ ಸಮಾಜಮುಖಿ ಸೇವೆಗಳು ಪ್ರಶಂಸನಿಯ ಎಂದು ಮಾಜಿ ಸಚಿವ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಸಂತಸ ವ್ಯಕ್ತಪಡಿಸಿದರು. ಅವರಿಂದ ಬೆಂಗಳೂರಿನ ಚಿದಾನಂದ ಮೂರ್ತಿ ಸಭಾಭವನದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಸಂಘದ  14ನೇ ವಾರ್ಷಿಕೋತ್ಸವ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ .ಎಸ್ .ಎಲ್ .ಸಿ. ಹಾಗೂ ಪಿ.ಯು.ಸಿ.  ಉತ್ತೀರ್ಣರಾದ ಪ್ರತಿಭಾವಂತ ಅರ್ಹ ಬಡ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿ ಉತ್ತೇಜನ ನೀಡುತ್ತಿರುವುದು, ಆಹಾರೋತ್ಸವ ಕುಟುಂಬಗಳ ಸಮ್ಮಿಲನ ನಿಜಕ್ಕೂ  ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಎರಡು ಲಕ್ಷ ರೂ ಗಳ ಧನ ಸಹಾಯ ನೀಡಿದರು. ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಮಾತನಾಡಿ, ತುಳುನಾಡಿನಲ್ಲಿ ನೆಲೆಸಿರುವ ಹಲವಾರು ಜೈನ  ಅರಸರು, ಹಲವು ಶತಮಾನಗಳ ಕಾಲ ಆಳ್ವಿಕೆ ನೀಡಿದ್ದು, ಹಲವಾರು ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ .ಅವರದೇ ಆದ ಆಹಾರ ಸಂಪ್ರದಾಯ ನಾಗರಿಕತೆ ಹೊಂದಿದ್ದಾರೆ. ವಿಶೇಷವಾಗಿ ಜೈನ ಖಾದ್ಯಕ್ಕೆ ಹೆಸರುವಾಸಿ ಆಗಿದ್ದಾರೆ. ಜೈನ…

Read More

ಪುನೀತ್ ರಾಜ್‍ಕುಮಾರ್ ಎಂಬ ಹೆಸರು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವೇ ದೊಡ್ಡ ಹೆಸರುಗಳಿಸಿದವನೆಂದು ಹೇಳಲು ಸಾಧ್ಯವಿಲ್ಲ; ಅಂದರೆ ಅದು ಅವರಿಗೆ  ಅಪಾರ ಪ್ರೀತಿಯ ಮನಸ್ಸು, ಸರಳತೆಯೇ ಅವರ ದೊಡ್ಡ ಸಂಪತ್ತು, ಎಲ್ಲರಿಗೂ ತಮ್ಮವನಂತೆ ಬೆರೆತು, ಕನ್ನಡಿಗರ ಹೃದಯದಲ್ಲಿ ಮನೆಮಾಡಿದವರೆಂದು ಹೇಳಬೇಕು. “ಅಪ್ಪು” ಎಂದು ಪ್ರೀತಿಯಿಂದ ಕರೆಯಲಾಗುವ ಪುನೀತ್, ಸದಾ ನಗುಮುಖದಿಂದ ಸುತ್ತಲಿನವರಿಗೂ ಸಂತೋಷವನ್ನ ಹರಡುವ ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದರು. ನಟನಾ ಕೌಶಲ್ಯ ಮತ್ತು ಜನಮೆಚ್ಚಿನ ಪಾತ್ರಗಳು: ಪುನೀತ್, ಕನ್ನಡ ಚಿತ್ರರಂಗದಲ್ಲಿ ನಟನೆಯ ಉನ್ನತ ಮಟ್ಟದ ಕೌಶಲ್ಯವನ್ನು ತೋರಿದ ನಟ. ಅವರ “ಅಪ್ಪು,” “ಮಿಲನ,” “ಅಜಯ್,” “ಹುಡುಗರು,” ಮತ್ತು “ರಾಜಕುಮಾರ” ಮೊದಲಾದ ಚಿತ್ರಗಳಲ್ಲಿ ಅವರು ನೀಡಿದ ಅಭಿನಯಗಳು, ಪ್ರೇಕ್ಷಕರನ್ನು ಆಕರ್ಷಿಸಿದವು. ಅವರ ಪಾತ್ರಗಳು ಜನರ ಜೀವನದಲ್ಲಿ ಮುದ್ರಿತವಾಗಿ ಹಾಸುಹೋಯಾಗಿ ನೆನಪಿನಲ್ಲೇ ಉಳಿಯುತ್ತವೆ. ಕೇವಲ ನಟನೆಯ ಮೂಲಕವಲ್ಲ, ಅವರ ಹೃದಯಪೂರ್ವಕವಾದ ಚಲನಚಿತ್ರ ಪಾತ್ರಗಳ ಮೂಲಕ ಅವರು ಜನಸಾಮಾನ್ಯರ ಹೃದಯಗಳಿಗೆ ಹತ್ತಿರವಾಗಿ ಮೆಚ್ಚುಗೆಯನ್ನು ಗಳಿಸಿದರು. ಸರಳತೆಯ ಸಜ್ಜನಿಕೆ: ನಟನಾಗಿ ಭವ್ಯತೆಯಲ್ಲಿದ್ದರೂ ಪುನೀತ್ ರಾಜ್‍ಕುಮಾರ್, ಅತೀ ನಯವಾದ…

Read More