Author: admin

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಒಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ…

Read More

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ  ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ  ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು  ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ…

Read More

ತಿರುವನಂತಪುರಂ: ಕೇರಳ ಸಿಎಂ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಬೆಂಗಾವಲು ವಾಹನಗಳು ಸರಣಿ ಅಪಘಾತ ಸಂಭವಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಕೊಟ್ಟಾಯಂಗೆ ಭೇಟಿ ನೀಡಿ ರಾಜ್ಯ ರಾಜಧಾನಿಗೆ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಏಕಾಏಕಿ ಅಡ್ಡ ಬಂದಿದ್ದಾರೆ. ಈ ವೇಳೆ ಬೆಂಗಾವಲು ಪಡೆ ವಾಹನ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದೆ ಇದ್ದ ಇತರ ಬೆಂಗಾವಲು ಪಡೆಗಳ ವಾಹನಗಳು ಒಂದರ ಹಿಂದೆ ಒಂದು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಬೇರೆ ವಾಹನದಲ್ಲಿ ಕೇರಳ ಸಿಎಂ ವಿಜಯನ್ ಅವರನ್ನು ಕಳುಹಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಪಾಪಿ ತಂದೆಯೋರ್ವ (ಮಂತ್ರವಾದಿ) ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ಈ ಘಟನೆ ನಡೆದಿದೆ. ಸದ್ದಾಂ ಎಂಬಾತ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ. ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕರ್ನಾಟಕದಲ್ಲಿ ಅನ್ಯ ಭಾಷಾ ಸಿನಿಮಾಗಳು ಬಿಡುಗಡೆಯಾದಾಗ 1500 ರೂ ಗಳಿಂದ 2000 ರೂ ಗಳವರೆಗೂ ಟಿಕೆಟ್‌ ಬೆಲೆ ಹೆಚ್ಚಿಸಲಾಗುತ್ತಿದೆ. ಇದರ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಏಕ ರೂಪದ ಟಿಕೆಟ್ ದರ ವಿಧಿಸಲು ಇದೀಗ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮಾತನಾಡಿರುವ ನಿರ್ಮಾಪಕ ಸಾ.ರಾ.ಗೋವಿಂದು, ವಿತರಕರಿಗೆ ಈಗಲೇ ಹೇಳುತ್ತೇವೆ, ಬೇರೆ ಭಾಷೆ ಸಿನಿಮಾಗೆ ಹೆಚ್ಚು ದುಡ್ಡು ಕೊಟ್ಟು ತರಬೇಡಿ. ಮುಂದೆ ಟಿಕೆಟ್‌ ದರ 200 ರೂಪಾಯಿ ಆಗುತ್ತದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ 180, 150 ಟಿಕೆಟ್‌ ದರ ಇದ್ದರೆ ಇಲ್ಲಿ 1200 ರೂಪಾಯಿ ಇದೆ. ಪುಷ್ಪ 2 ಚಿತ್ರಕ್ಕೆ 200 ರೂಪಾಯಿಗಿಂತ ಜಾಸ್ತಿ ದರ ಇಟ್ಟರೆ ಅದರಿಂದ ದೊಡ್ಡ ತೊಂದರೆ ಆಗಲಿದೆ. ಥಿಯೇಟರ್‌ಗಳಿಗೆ ಮುತ್ತಿಗೆ ಹಾಕಲಾಗುತ್ತದೆ. ಮಲ್ಟಿಪ್ಲೆಕ್ಸ್‌ನಲ್ಲಿ ರಜನಿಕಾಂತ್‌ ಚಿತ್ರಕ್ಕೆ 6 ಸ್ಕ್ರೀನ್‌ ಕೊಟ್ಟರೆ ಕನ್ನಡ ಸಿನಿಮಾಗೆ 2 ಶೋ ಕೊಡಲಾಗಿತ್ತು. ಟಿಕೆಟ್‌ ಬೆಲೆ 1500 ರೂಪಾಯಿ ನಿಗದಿ ಮಾಡಿದ್ದರು’ ಎಂದಿದ್ದಾರೆ. ಸದ್ಯ ಪರಭಾಷೆಯ ಚಿತ್ರಗಳ ವಿಷಯಕ್ಕೆ ಬರುವುದಾದರೆ ಅಲ್ಲು…

Read More

ನ್ಯೂಡಲ್ಸ್ ಅಂದ್ರೆ ಚೈನಿಸ್ ಫುಡ್ ಎಂದೇ ಪ್ರಚಲಿತ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ನ್ಯೂಡಲ್ಸ್ ಅನ್ನೇ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆಯಂತೆ! ಕೋಲ್ಕತ್ತಾದ ಕಾಳಿ ದೇಗುಲದಲ್ಲಿ ಇಂತಹದ್ದೊಂದು ವಿಶೇಷ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿದೆ. ಎಲ್ಲಾ ದೇವಸ್ಥಾನಗಳಲ್ಲಿ ಕೂಡ ಪ್ರಸಾದದ ರೂಪದಲ್ಲಿ ತಿಂಡಿ ತಿನಿಸುಗಳನ್ನು ನೀಡುವುದು ಸಾಮಾನ್ಯ ಆದ್ರೆ ಈ ದೇವಸ್ಥಾನದಲ್ಲಿ ನ್ಯೂಡಲ್ಸ್ ನ್ನೇ ಪ್ರಸಾದವಾಗಿ ಬಡಿಸಲಾಗುತ್ತದೆ. ಅಂದ ಹಾಗೇ ಇಲ್ಲಿ ನ್ಯೂಡಲ್ಸ್ ಪ್ರಸಾದವಾಗಿ ಬಳಕೆಯಾಗಲು ಕಾರಣವಿದೆ. ಈ ಪ್ರದೇಶವನ್ನು ಚೀನಾ ಟೌನ್ ಅಂತನೇ ಕರೆಯಲಾಗುತ್ತದೆಯಂತೆ. ಅಲ್ಲದೇ ಇಲ್ಲಿರುವ ಕಾಳಿ ದೇವಿಯ ದೇವಾಲಯ ಚೈನಿಸ್ ದೇವಾಲಯ ಎಂದೇ ಕರೆಯಲಾಗುತ್ತದೆಯಂತೆ! ಟಾಂಗ್ರಾ ಏರಿಯಾದಲ್ಲಿರುವ  ಈ ಚೈನೀಸ್​ ಕಾಳಿ ದೇಗುಲದಲ್ಲಿ  ನ್ಯೂಡಲ್ಸ್​, ಚಾಪ್​ ಸ್ಯೂ, ಅನ್ನ ಹಾಗೂ ತರಕಾರಿಯ ಖಾದ್ಯಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಬಂಗಾಳಿಗಳು ಕೂಡ ಈ ದೇಗುಲಕ್ಕೆ ಆಗಮಿಸ್ತಾರೆ ಹಾಗೂ ಕೈಯಲ್ಲೇ ಮಾಡಿದ ಕಾಗದವನ್ನು ಸುಡುವ ಮೂಲಕ ದುಷ್ಟ ಶಕ್ತಿಯನ್ನು ದೂರ ಇಡಲಾಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಚೈನೀಸ್​ ಇನ್ ​ಸೆನ್ಸ್​ ಸ್ಟಿಕ್​ ಗಳ ಮೂಲಕ ಮೇಣದಬತ್ತಿಯನ್ನು…

Read More

ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್‌ನ ಸುಂದರ್‌ ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ಸೋಮವಾರ ವೀರ ಮರಣವನ್ನಪ್ಪಿದೆ. ಸೋಮವಾರ ಬೆಳಿಗ್ಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ ಗಾಯವಾಗಿತ್ತು ಕೂಡಲೇ ಶ್ವಾನಕ್ಕೆ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫ್ಯಾಂಟಮ್ ಬೆಲ್ಜಿಯನ್ ಮಾಲಿನೋಯಿಸ್ ತಳಿಗೆ ಸೇರಿದ ಶ್ವಾನವಾಗಿದ್ದು, 2020ರ ಮೇ ತಿಂಗಳಲ್ಲಿ ಜನಿಸಿತ್ತು. ಬಳಿಕ 2022ರಲ್ಲಿ ಸೇನೆಗೆ ಸೇರ್ಪಡೆಗೊಂಡಿತ್ತು ಅಲ್ಲದೆ ಶ್ವಾನ K9 ಘಟಕದ ಭಾಗವಾಗಿತ್ತು, ಭಯೋತ್ಪಾದನೆ–ವಿರೋಧಿ ಕಾರ್ಯಾಚರಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿತ್ತು. ಅಗಲಿದ ಶ್ವಾನಕ್ಕೆ ಸೇನೆಯ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸಿ ಗೌರವ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬಾಗಲಕೋಟೆ : ಎಂಟಿಆರ್ ಮಸಾಲ ಪ್ಯಾಕೆಟ್ ನಲ್ಲಿ ಹುಳು ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಪ್ರತಿಷ್ಠಿತ ಬ್ರಾಂಡ್ ಆಗಿರುವ ಎಂಟಿಆರ್ ಮಸಾಲೆಯನ್ನು ಗ್ರಾಹಕರು ಖರೀದಿಸಿದ್ದಾರೆ, ಪ್ಯಾಕೆಟ್ ತೆರೆದಾಗ ಅದರಲ್ಲಿ ಹುಳುಗಳು ಪತ್ತೆಯಾಗಿವೆ. ಅಂದ ಹಾಗೆ ಪ್ಯಾಕೆಟ್ ನಲ್ಲಿ ಎಕ್ಸ್’ಪರಿ ಡೇಟ್ ಮುಕ್ತಾಯವಾಗಿಲ್ಲ. ಅದಕ್ಕೂ ಮೊದಲೇ ಪ್ಯಾಕೆಟ್ ನಲ್ಲಿ ಹುಳುಪತ್ತೆಯಾಗಿರುವುದು. ಆಹಾರ ಭದ್ರತೆಯ ಬಗ್ಗೆ ಆತಂಕ ಸೃಷ್ಟಿಸಿದೆ. MTR ಮಸಾಲ ಪ್ಯಾಕೆಟ್​ನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಃಕರು ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹಾಸನ: ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿದ ಸಚಿವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು- ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು  ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ  11 ನೋಟಿಫಿಕೇಷನ್ೈ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು,  ಮೂರು ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದು ತಿಳಿಸಿದರು. ನಾನು ಸಚಿವನಾದ ಮೇಲೆ ಕರ್ನಾಟಕ ರಾಜ್ಯದಲ್ಲಿ 11  ಯೋಜನೆಗಳು, 1800 ಹೊಸ ಲೈನ್‌ಗಳನ್ನು ಹಾಕಲು ಚಾಲನೆ ಕೊಟ್ಟಿದ್ದೇವೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಹತ್ತು ಹಲವಾರು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ…

Read More

ಈ ಬಾರಿಯ ದೀಪಾವಳಿ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ಶನಿ-ಗುರು ಗ್ರಹಗಳು.ಇವರಿಬ್ಬರ ಚಲನೆಯಲ್ಲಿನ ಬದಲಾವಣೆಯಿಂದ ಧನಯೋಗ ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ರಾಜಯೋಗವನ್ನು ಕರುಣಿಸುತ್ತದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಶನಿಯು ತನ್ನ ಮೂಲ ರಾಶಿಯಾದ ಕುಂಭದಲ್ಲಿ ಹಿಮ್ಮುಖವಾಗಿ ಚಲಿಸಿದರೆ…

Read More