Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಸರಗೂರು: ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದರು. ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಸಂವಿಧಾನ ಸಮರ್ಪಕದಿನಾಚರಣೆ ಹಮ್ಮಿಕೊಂಡಿದ್ದು ಅಂಬೇಡ್ಕರ್ ರವರು ಹಾಗೂ ಸಂವಿಧಾನ ಪೀಠಿಕೆ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂದು ತಿಳಿಸಿದರು. ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ, ದೇಶದಲ್ಲಿ ಕೋಮು ಭಾವನೆ, ಪ್ರಜಾಪ್ರಭುತ್ವದ ಅಣಕ, ಸಂವಿಧಾನ ವಿರೋಧಿ ಹೇಳಿಕೆಗಳು ಬರುತ್ತಿವೆ. ಇಂತಹ ಹೇಳಿಕೆ ನೀಡುವವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಲು ಸರಕಾರಗಳು ಕ್ರಮ ಕೈಗೊಳ್ಳಬೇಕು.…
ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗ್ತಿಲ್ಲ ಎನ್ನುವ ಕಾಂಗ್ರೆಸ್ ಶಾಸಕ ಗವಿಯಪ್ಪ ಹೇಳಿಕೆ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಗವಿಯಪ್ಪ, ಪಂಚ ಗ್ಯಾರೆಂಟಿಗಳಲ್ಲಿ ಎರಡು ಗ್ಯಾರೆಂಟಿಗಳನ್ನ ನಿಲ್ಲಿಸಿ ಎಂದು ಆಗ್ರಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವುದೇ ಶಾಸಕರು, ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ ಮುಂದುವರಿಸುತ್ತೇವೆ ಎಂದರು. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ. ಯಾವುದೇ ಗ್ಯಾರಂಟಿ ನಿಲ್ಲಿಸುವುದಿಲ್ಲ. ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ರೀತಿ ಪರಿಶೀಲನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಹೈದರಾಬಾದ್: ಇವಿಎಂ ಮತಯಂತ್ರಗಳ ಕಾರ್ಯ ನಿರ್ವಹಣೆ ಬಗ್ಗೆ ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. 75ನೇ ಸಂವಿಧಾನ ದಿನಾಚಾರಣೆಯ ಅಂಗವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, ರಾಷ್ಟ್ರ ಮತ್ತು ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೆಪರ್ಗಳನ್ನು ಬಳಸುವಂತೆ ಒತ್ತಾಯಿಸಿದ್ದಾರೆ. ನಮ್ಮ ಸಾರ್ವಭೌಮ, ಸಮಾಜವಾದಿ, ಜ್ಯಾತ್ಯತೀತ, ಪ್ರಜಾಸತ್ತಾತ್ಮಾಕ ಗಣರಾಜ್ಯವು ನಮಗೆ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವವನ್ನು ಖಾತರಿಪಡಿಸುತ್ತದೆ. ನಾವು 75ನೇ ಸಂವಿಧಾನ ದಿನವನ್ನು ಆಚರಿಸುತ್ತಿರುವಾಗ, ಆದರ ಮಹತ್ವವನ್ನು ಪ್ರತಿಬಿಂಬಿಸೋಣ ಮತ್ತು ಅದರ ಮಾರ್ಗದರ್ಶಿ ತತ್ವಗಳಿಗೆ ನಮ್ಮ ಅಚಲ ಬದ್ಧತೆ ಪುನರುಚ್ಚರಿಸೋಣ ಎಂದಿದ್ದಾರೆ. ಪ್ರಜಾಪ್ರಭುತ್ವದ ಮೂಲಧಾರವೆಂದರೆ ಸಾರ್ವಜನಿಕ ಪ್ರತಿನಿಧಿಗಳನ್ನು ಆಯ್ಕೆ ಮಾಡುವುದು. ಇವಿಎಂ ಮತ ಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ರಾಷ್ಟ್ರದ್ಯಂತ ಇವಿಎಂಗಳ ಸತ್ಯಾಸತ್ಯೆಯ ಪ್ರಶ್ನೆ ಎದ್ದಿದೆ. ಮತ್ತು ಪ್ರಪಂಚಾದದ್ಯಾಂತ ಬಹುಪಾಲು ದೇಶಗಳಲ್ಲಿ ಆಚರಣೆಯಲ್ಲಿರುವಂತೆ ಬ್ಯಾಲೆಟ್ ಪೇಪರ್ ಮತದಾನಕ್ಕೆ ನಾವು ಏಕೆ ಮಂದುವರೆಯಬಾರದು ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮತುಮಕೂರಿನ…
ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ, ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರವನ್ನು ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದರು. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ…
ಕೇರಳ: ಲಾರಿಯೊಂದು ಹರಿದ ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ ಅಲೆಮಾರಿ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ತ್ರಿಶೂರ್ ಜಿಲ್ಲೆಯ ನಾಟಿಕ ಎಂಬಲ್ಲಿ ನಡೆದಿದೆ. ಕಾಳಿಯಪ್ಪನ್(50), ನಾಗಮ್ಮ(39), ಬಂಗಾಜಿ(20), ಜೀವನ್(4) ಮತ್ತು ವಿಶ್ವ(1) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಕಣ್ಣೂರು ಮೂಲದ ಲಾರಿ ಚಾಲಕ ಅಲೆಕ್ಸ್ (35) ಎಂಬಾತನನ್ನು ಘಟನೆಯ ಬೆನ್ನಲ್ಲೇ ಬಂಧಿಸಲಾಗಿದೆ. ಕಣ್ಣೂರಿನಿಂದ ಕೊಚ್ಚಿಗೆ ಲಾರಿ ತೆರಳುತ್ತಿದ್ದು, ಲಾರಿಯಲ್ಲಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಕಂಡೆಕ್ಟರ್ ಹಾಗೂ ಲಾರಿ ಚಾಲಕ ಇಬ್ಬರೂ ಪಾನಮತ್ತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲೆಮಾರಿ ಕುಟುಂಬವು ರಸ್ತೆಯ ಬ್ಯಾರಿಕೇಡ್ ನಿಂದ ಸುರಕ್ಷಿತ ಸ್ಥಳದಲ್ಲಿ ಮಲಗಿದ್ದರು. ಆದರೆ ಲಾರಿಯು ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಅಲೆಮಾರಿಗಳ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. ಗಾಯಗೊಂಡಿರುವ ಬಾಲಕನನ್ನು ವಿಕಾಸ್ ಎಂದು ಗುರುತಿಸಲಾಗಿದೆ. ಔರಾದ್ ತಾಲೂಕಿನ ಜಿರಗಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿಕಾಸ್, ಹೆದ್ದಾರಿ ದಾಟಿ ಪಕ್ಕದ ರಸ್ತೆಗೆ ಹೋಗುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತ ಖಂಡಿಸಿ ಸ್ಥಳೀಯರು ಹಾಗೂ ಬಾಲಕನ ಕುಟುಂಬದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಅಪಘಾತದ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾಕಿಸ್ತಾನ: ಸೆರೆವಾಸ ಅನುಭವಿಸುತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಿಸಿ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ನಡೆದ ಸಂಘರ್ಷದಲ್ಲಿ ನಾಲ್ವರು ಸೈನಿಕರು ಹಾಗೂ ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಾ ಸೋಮವಾರ ಇಸ್ಲಾಮಾಬಾದ್ ಪ್ರವೇಶಿಸಿದ್ದಾರೆ. ಈ ವೇಳೆ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರು , ಸೇನೆಯ ನಡುವೆ ಸಂಘರ್ಷ ನಡೆದಿದೆ. ಈ ವೇಳೆ ನಾಲ್ವರು ಸೈನಿಕರು ಮತ್ತು ಓರ್ವ ಪ್ರತಿಭಟನಾಕಾರ ಮೃತಪಟ್ಟಿದ್ದಾರೆ. 70ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪಾಕಿಸ್ತಾನ್ ತೆಹ್ರೀಕ್—ಎ–ಇನ್ಸಾಫ್ ಪಕ್ಷ ಪಾಕಿಸ್ತಾನ ಹಾಗೂ ಪಂಜಾಬ್ ನಲ್ಲಿ ಪಕ್ಷದ ಮುಖಂಡರು ಸೇರಿ 3,000ಕ್ಕೂಅಧಿಕ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇಮ್ರಾನ್ ಖಾನ್ ವಿರುದ್ದ ಅಧಿಕಾರ ದುರುಪಯೋಗ ಭ್ರಷ್ಟಾಚಾರ ಹಿಂಸಾಚಾರ ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳು ನ್ಯಾಯಲಯದಲ್ಲಿಇವೆ. ಇದರಲ್ಲಿ ಕೆಲವು ಪ್ರಕರಣಗಳಿಗೆ ಜಾಮೀನು ದೊರೆತು ಶಿಕ್ಷೆ ಅಮಾನತುಗೊಳಿಸಿದರೂ ಇವರು ಬಂಧನನದಲ್ಲೇ ಇದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಳಗಾವಿ ಸುತ್ತಮುತ್ತಲಿನ ಕಡೋಲಿ, ಜಾಫರವಾಡಿ ಸೇರಿ ಮತ್ತಿತರ ಗ್ರಾಮಗಳಲ್ಲಿ ಭತ್ತದ ಸುಗ್ಗಿ ಜೋರಾಗಿದೆ. ಜಿಲ್ಲೆಯಲ್ಲಿ ಭತ್ತದ ಕೊಯ್ಲು ಮತ್ತು ರಾಶಿ ಜೋರಾಗಿದೆ. ಆದರೆ, ಕಷ್ಟಪಟ್ಟು ಬೆಳೆದ ಭತ್ತಕ್ಕೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸರ್ಕಾರ ಖರೀದಿ ಕೇಂದ್ರಗಳನ್ನೂ ಆರಂಭಿಸದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಒಟ್ಟು 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಭತ್ತದ ಕಟಾವು ಕಳೆದ ಒಂದು ವಾರದಿಂದ ನಡೆಯುತ್ತಿದೆ. ಇಲ್ಲಿ ಕಣ್ಣು ಹಾಯಿಸಿದಲ್ಲೆಲ್ಲೆಡೆ ರೈತರು ಭತ್ತದ ಕೊಯ್ಲು ಮತ್ತು ರಾಶಿ ಮಾಡುವಲ್ಲಿ ನಿರತರಾಗಿರುವುದು ಕಂಡುಬರುತ್ತದೆ. ಮಾರುಕಟ್ಟೆಯಲ್ಲಿ 1 ಕ್ವಿಂಟಾಲ್ ಭತ್ತ 2,150-2,200 ರೂಪಾಯಿಗೆ ಮಾರಾಟವಾಗುತ್ತಿದೆ. ಇದು ರೈತರಿಗೆ ಸಮಾಧಾನ ತಂದಿಲ್ಲ. ಯಾಕೆಂದರೆ, 1 ಎಕರೆಯಲ್ಲಿ ಭತ್ತ ಬೆಳೆಯಲು ಬೀಜ, ಗೊಬ್ಬರ, ನಾಟಿ-ಕಟಾವು ಮಾಡುವುದೆಲ್ಲವೂ ಸೇರಿ ಸರಾಸರಿ 54 ಸಾವಿರ ರೂ. ಖರ್ಚು ಆಗುತ್ತದೆ. ಆದರೆ, ಈಗಿನ ದರ ನೋಡಿದರೆ ಹಾಕಿದ ಖರ್ಚು ಕೂಡಾ ಬರುವುದಿಲ್ಲ ಎನ್ನುವುದು ರೈತರ ಅಳಲು. ಜಿಲ್ಲೆಯಲ್ಲಿ ಇಂದ್ರಾಯಿಣಿ, ಬಾಸುಮತಿ, ಶುಭಾಂಗಿ, ಚಿಟಕಾ ಸೇರಿ ಮತ್ತಿತರ ತಳಿಯ…
ತುಮಕೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ರೂ. ಗಳ ಶಿಷ್ಯವೇತನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಫೆಲೋಶಿಪ್ ಪಡೆಯದ ಅಭ್ಯರ್ಥಿಗಳು ಡಿಸೆಂಬರ್ 14ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.ವಾ.ಸಂ. 0816–2279153ನ್ನು ಸಂಪರ್ಕಿಸಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ–ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಮಹಾನಗರಪಾಲಿಕೆ ಆವರಣದಲ್ಲಿ “ಅಕ್ಕ ಕೆಫೆ” ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. “ಅಕ್ಕ ಕೆಫೆ” ಕ್ಯಾಂಟೀನ್ ನಡೆಸಲು ಆಸಕ್ತಿಯುಳ್ಳವರು ನವೆಂಬರ್ 27ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಡೇ-ನಲ್ಮ್ ಯೋಜನೆಯಡಿ ನೋಂದಾಯಿತವಾಗಿರುವ ಮಹಿಳಾ ಸ್ವ–ಸಹಾಯ ಸಂಘ/ಪ್ರದೇಶ ಮಟ್ಟದ ಒಕ್ಕೂಟದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿದಾರರು ಸ್ವ-ಸಹಾಯ ಸಂಘದ ಸದಸ್ಯರ ಬಿಪಿಎಲ್ ಕಾರ್ಡ್, ಸ್ವ-ಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಿಸಲು ಆಸಕ್ತಿ, ಇಚ್ಛೆ, ಬದ್ಧತೆ, ಕ್ಯಾಂಟೀನ್ ಪ್ರಾರಂಭಿಸಲು ಬಂಡವಾಳವನ್ನು ಹೂಡಲು ಆಸಕ್ತಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296