Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಕೋಲಾರ: ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ದಲಿತರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯಿಸಿದ್ದಾರೆ. ನಗರದಲ್ಲಿ ಶುಕ್ರವಾರ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಒಳಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ. ಧರ್ಮಾಧಾರಿತವಾಗಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ದರಿಂದ ಮುಸ್ಲಿಮರ ಮೀಸಲಾತಿಯನ್ನು ಹಿಂಪಡೆದು, ನ್ಯಾಯ ಸಿಗದ ಸಮುದಾಯಗಳಿಗೆ ಮತ್ತು ದಲಿತರಿಗೆ ನೀಡಬೇಕು ಎಂದು ಅವರು ಪ್ರತಿಪಾದಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿವೇಶನದಲ್ಲಿ ನಡೆದುಕೊಂಡ ರೀತಿ ‘ಕೊತ್ವಾಲ್ ರಾಮಚಂದ್ರ’ನ ವರ್ತನೆಯನ್ನು ನೆನಪಿಸುವಂತಿತ್ತು. ಇಂತಹವರು ಮುಖ್ಯಮಂತ್ರಿಯಾದರೆ ರಾಜ್ಯದ ಗತಿ ಏನು? ಎಂದು ಯತ್ನಾಳ್ ಪ್ರಶ್ನಿಸಿದರು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಬಿಜೆಪಿಯವರ ಬೆಂಬಲವನ್ನೂ ಯಾಚಿಸುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಎಂದಿಗೂ ಒಪ್ಪುವುದಿಲ್ಲ ಎಂದು ಅವರು ಭವಿಷ್ಯ ನುಡಿದರು. ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸುವ ಬದಲು ಐಪಿಎಲ್ ಟಿಕೆಟ್‌ಗಾಗಿ…
ಕೊರಟಗೆರೆ : ತಹಶೀಲ್ದಾರ್ ಕೆ.ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಎಸ್.ಸಿ. ಮೀಸಲಾತಿ ವಿಧಾನಸಭಾ ಕ್ಷೇತ್ರದ ಕೊರಟಗೆರೆ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವು ಪ್ರಮುಖ ಬೇಡಿಕೆಗಳು ಮುಂದಿರಿಸಲಾಯಿತು. ಸಭೆಯಲ್ಲಿ ಮಾತನಾಡಿದ ದಲಿತ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು, ತಾಲ್ಲೂಕು ಕಚೇರಿ ಆವರಣದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಯನ್ನು ಸ್ಥಾಪಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಂಬೇಡ್ಕರ್ ಅವರ ತತ್ವಗಳು ಸಮಾಜದ ಸಮಾನತೆಗಾಗಿ ಮಹತ್ವದ್ದಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅವರ ಸ್ಮಾರಕಗಳು ಹೆಚ್ಚಬೇಕು ಎಂದು ಹೇಳಿದರು. ಇದೇ ವೇಳೆ ದಲಿತ ಒಳ ಮೀಸಲಾತಿ ಹೋರಾಟಗಾರ ದಾಡಿ ವೆಂಕಟೇಶ್ ಮಾತನಾಡಿ, ಒಳಮೀಸಲಾತಿ ಶೀಘ್ರ ಜಾರಿಗೆ ಬರಬೇಕು. ಅದುವರೆಗೆ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ದಲಿತ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು. ಹಾಗೂ ಬಾಬು…
ತುಮಕೂರು: ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಮುಖಂಡರು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿದ ಮಹಾಸಭಾ ಯುವ ಘಟಕ ಜಿಲ್ಲಾಧ್ಯಕ್ಷ ಡಾ. ದರ್ಶನ್ ಕೆ.ಎಲ್. ಮಾತನಾಡಿ, ಜಿಲ್ಲೆಯಲ್ಲಿ ಜೇನುಹುಳುಗಳು ದಾಳಿ ಮಾಡಿದ ಪ್ರಕರಣಗಳು ಹೆಚ್ಚಾಗುತ್ತಿವೆ. ಜೇನುಹುಳುಗಳ ಕಡಿತದಿಂದ ಗಾಯಗೊಂಡ ಅನೇಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಜೇನು ಕಡಿತದಿಂದ ತುಮಕೂರಿನ ವಿಜಯಕುಮಾರ್ ಎಂಬುವವರು ಮೃತಪಟ್ಟರು. ಇದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ ಎಂದು ಹೇಳಿದರು. ಮರಗಳಲ್ಲಿ ಕಟ್ಟಿರುವ ಜೇನುಗೂಡಿಗೆ ಕಿಡಿಗೇಡಿಗಳು ಕಲ್ಲು ಹೊಡೆದಾಗ, ಪಕ್ಷಿ, ಪ್ರಾಣಿಗಳು ಜೇನುಗೂಡನ್ನು ಕೆಣಕಿದಾಗ ಗೂಡಿನ ಲಕ್ಷಾಂತರ ಸಂಖ್ಯೆಯ ಜೇನು ಹುಳುಗಳು ಎದ್ದು ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ವಾಹನ ಸಂಚಾರ ಮಾಡುವವರನ್ನೂ ಜೇನು ಹುಳುಗಳು ಕಚ್ಚಿ ಗಾಬರಿ ಮಾಡುತ್ತವೆ. ಇದರಿಂದ ವಾಹನ ಸಂಚಾರವೂ ಅಸ್ತವ್ಯಸ್ತವಾಗುತ್ತದೆ. ಜೇನುಹುಳುಗಳ…
ಪಾವಗಡ: ಸರ್ಕಾರಿ ಯೋಜನೆಗಳ ಜೊತೆಗೆ ಅಧಿಕಾರಿಗಳ ಕಾರ್ಯಕ್ಷಮತೆ ಪರಿಶೀಲಿಸುವ ಸಲುವಾಗಿ ಹೋಬಳಿ ಮಟ್ಟದಲ್ಲಿ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಅವರು ಗುರುವಾರ ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹಾಗೂ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿ ಅಹವಾಲು ಸ್ವೀಕರಿಸಿ ಮಾತನಾಡಿದರು. ವೈ.ಎನ್.ಹೊಸಕೋಟೆ ಗ್ರಾಮದಲ್ಲಿ 163, ಪಟ್ಟಣದಲ್ಲಿ 232 ಅರ್ಜಿಗಳು ಸೇರಿ ಒಟ್ಟು 395 ಅರ್ಜಿಗಳು ಸ್ವೀಕರಿಸಲಾಗಿದೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ವಸತಿ, ನಿವೇಶನ, ಶುದ್ಧ ಕುಡಿಯುವ ನೀರಿನ ಸಮಸ್ಯೆ, ರೈತರ ಜಮೀನುಗಳಿಗೆ ದಾರಿ ಸೇರಿದಂತೆ ಪಿಂಚಣಿ ಸಮಸ್ಯೆಗಳು, ಆಧಾರ್, ಆಹಾರ, ಪಿಂಚಣಿ ಮತ್ತು ಪೌತಿ ಖಾತೆ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರ ನಾನಾ ರೀತಿಯ ಸಮಸ್ಯೆಗಳ ಜೊತೆಯಲ್ಲಿ ಗ್ರಾಹಕರ ಸಮಸ್ಯೆಗಳ ಬಗ್ಗೆ ಕೂಡ ಅರ್ಜಿ ಸಲ್ಲಿಕೆಯಾಗಿವೆ ಎಂದರು. ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಸಾರ್ವಜನಿಕರು ಅರ್ಜಿ ಸಲ್ಲಿಸಿದ್ದು, ಪ್ರತಿ…
ತುಮಕೂರು: ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು, ನಕಲಿ ನೇಮಕಾತಿ ಪತ್ರ ನೀಡಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರಿನ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ತುಮಕೂರಿನ ವಡ್ಡರಹಳ್ಳಿಯ ತೋಟದ ಶೆಡ್ ವೊಂದರಲ್ಲಿ ‘ಮಾಹಿತಿ ಮತ್ತು ತರಬೇತಿ ಕೇಂದ್ರ’ ಎಂಬ ಹೆಸರಿನಲ್ಲಿ ನಕಲಿ ಅಕಾಡೆಮಿಯನ್ನು ನಡೆಸಲಾಗುತ್ತಿತ್ತು. ನೆಲಮಂಗಲದ ಕಿರಣ್ ಹಾಗೂ ತುಮಕೂರಿನ ಪವನ್ ಮತ್ತು ಉದಯ್ ಎಂಬುವವರು ಈ ಜಾಲದ ಸೂತ್ರಧಾರರು ಎಂದು ತಿಳಿದುಬಂದಿದೆ. ಸುಮಾರು 15ಕ್ಕೂ ಹೆಚ್ಚು ಯುವಕರಿಗೆ ಅರಣ್ಯ ಇಲಾಖೆಯ ನೇಮಕಾತಿಗಾಗಿ ಇಲ್ಲಿ ತರಬೇತಿ ನೀಡಲಾಗುತ್ತಿತ್ತು. ಮೈಸೂರು ವಿಭಾಗದ ಅರಣ್ಯ ಪ್ರದೇಶದಲ್ಲಿ ಖಾಯಂ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ನಂಬಿಸಿ ಪ್ರತಿ ಯುವಕನಿಂದ ₹3 ಲಕ್ಷದಿಂದ ₹5 ಲಕ್ಷದವರೆಗೆ ಹಣ ವಸೂಲಿ ಮಾಡಲಾಗಿತ್ತು. ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ (IAS) ಅವರ ಹೆಸರಿನಲ್ಲಿ ನಕಲಿ ಆದೇಶ ಪತ್ರಗಳನ್ನು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಸಹಿ ಇರುವ ನಕಲಿ ನೇಮಕಾತಿ…
ವಿಧಾನ ಪರಿಷತ್ತು: ಮೀಸಲು ಅರಣ್ಯ ಪ್ರದೇಶ, ಪರಿಭಾವಿತ ಅರಣ್ಯ ಪ್ರದೇಶ ಸೆಕ್ಷನ್ 4 ರ ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟ ಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಅಕ್ರಮ ಸಕ್ರಮದಡಿ ನಮೂನೆ : 50, 53, 57ರಲ್ಲಿ ಜಮೀನು ಮಂಜೂರಾತಿ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕಂದಾಯ ಭೂಮಿ ಮಂಜೂರು ಮಾಡಲು ಬರುತ್ತದೆಯೇ ಹೊರತು ಅರಣ್ಯ ಭೂಮಿಯನ್ನು ಅಲ್ಲ ಎಂದು ಸ್ಪಷ್ಟವಾದ ಮಾಹಿತಿಯನ್ನು ತಿಳಿಸಿದರು. ಒಂದೇ ಸರ್ವೇ ನಂಬರ್ ನಲ್ಲಿ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿ ಇರುವ ಕಡೆ ಜಂಟಿ ಸರ್ವೇ ಮಾಡುವಂತೆ ಕಂದಾಯ ಸಚಿವರು ಹಾಗೂ ತಾವು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೋಜಿಣಿ ಕಾರ್ಯಕ್ಕೆ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲ, ಕಾಲ ಮಿತಿಯಲ್ಲಿ ಗಡಿ ಗುರುತಿಸುವ…
ಕೆಸ್ತೂರು (ತುಮಕೂರು): ಜಿಲ್ಲೆಯ ಕೋರಾ ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಅಡುಗೆ ಅನಿಲ (LPG) ಸಿಲಿಂಡರ್ ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಹಕರು ಹೈರಾಣಾಗಿದ್ದಾರೆ. ಸಿಲಿಂಡರ್ ಗಾಗಿ ಹತ್ತು ದಿನಗಳಿಂದ ಕಾಯುತ್ತಿದ್ದರೂ ಸಿಗುವ ಭರವಸೆ ಇಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಸ್ತೂರಿನ ವಿತರಣಾ ಕೇಂದ್ರದಲ್ಲಿ ಸದ್ಯ 1,400 ಸಿಲಿಂಡರ್ ಗಳಿಗೆ ಬೇಡಿಕೆಯಿದೆ. ಆದರೆ, ಕಂಪನಿಯಿಂದ ಪೂರೈಕೆಯಾಗುತ್ತಿರುವುದು ಕೇವಲ 350 ಸಿಲಿಂಡರ್ ಗಳು ಮಾತ್ರ. ಇದರಿಂದಾಗಿ ಶೇ.75 ರಷ್ಟು ಗ್ರಾಹಕರು ಖಾಲಿ ಕೈಯಲ್ಲಿ ಮರಳುವಂತಾಗಿದೆ. ಈ ಕೇಂದ್ರವು ಕೋರಾ, ಕಳ್ಳಂಬೆಳ್ಳ, ಬೆಳ್ಳಾವಿ ಹಾಗೂ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸುಮಾರು 20 ಕಿ.ಮೀ ವ್ಯಾಪ್ತಿಯ ನೂರಾರು ಹಳ್ಳಿಗಳಿಗೆ ಅನಿಲ ಪೂರೈಸುತ್ತದೆ. ಸುಮಾರು 10,400 ನೋಂದಾಯಿತ ಗ್ರಾಹಕರು ಈ ಕೇಂದ್ರವನ್ನು ಅವಲಂಬಿಸಿದ್ದಾರೆ. ಬೇಡಿಕೆಗೆ ತಕ್ಕಷ್ಟು ಸಿಲಿಂಡರ್ ಪೂರೈಕೆಯಾಗದ ಕಾರಣ ವಿತರಕರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೆ ಸರತಿಯ ಸಾಲಿನಲ್ಲಿ ನಿಂತರೂ ಸಿಲಿಂಡರ್ ಸಿಗದೆ ಜನರು ನಿರಾಶೆಯಿಂದ ವಾಪಸ್ ಹೋಗುತ್ತಿದ್ದಾರೆ. ಈ ಭಾಗದಲ್ಲಿ ಉಂಟಾಗಿರುವ ಅಡುಗೆ…
ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು ಬೆಳಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಪರಿಹಾರವನ್ನು ನೀಡಲಾಗಿದೆ. ಏಪ್ರಿಲ್ 4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಮುಂಭಾಗದಲ್ಲಿ ನಿರ್ಮಿಸಲಾಗುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಜಾಗದಲ್ಲಿ…
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಅಭಾವ ಸೃಷ್ಟಿಯಾಗಿದ್ದು, ಜಿಲ್ಲೆಯ ಸುಮಾರು 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಣೆ ಸ್ಥಗಿತಗೊಳಿಸಿವೆ. ಇದರಿಂದಾಗಿ ವಾಹನ ಸವಾರರು ತೀವ್ರ ಪರದಾಡುವಂತಾಗಿದೆ. ವರದಿಯ ಪ್ರಕಾರ, ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಗಿಬಿದ್ದು ಪೆಟ್ರೋಲ್ ಮತ್ತು ಡಿಸೇಲ್ ಖರೀದಿಸಿದ್ದರಿಂದ ಸ್ಟಾಕ್ ಬೇಗನೇ ಖಾಲಿಯಾಗಿದೆ. ಬೀದರ್ ನಗರದ ಪ್ರಮುಖ ವೃತ್ತವಾದ ಬಸವೇಶ್ವರ ವೃತ್ತದ ಬಳಿ ಇರುವ ‘ನಯಾರಾ’ ಪೆಟ್ರೋಲ್ ಬಂಕ್ ಸೇರಿದಂತೆ ನಗರದ ವಿವಿಧೆಡೆ ಇರುವ 7ಕ್ಕೂ ಹೆಚ್ಚು ಬಂಕ್‌ಗಳಲ್ಲಿ ಬುಧವಾರ ರಾತ್ರಿಯಿಂದಲೇ ಇಂಧನ ಖಾಲಿಯಾಗಿದೆ. ಸ್ಟಾಕ್ ಇಲ್ಲದ ಕಾರಣ ಬಂಕ್ ಮಾಲೀಕರು ಬಾಗಿಲು ಹಾಕಿದ್ದಾರೆ. ಪೆಟ್ರೋಲ್ ಹಾಕಿಸಿಕೊಳ್ಳಲು ಬಂದ ಸಾರ್ವಜನಿಕರು ಬಂಕ್‌ಗಳು ಮುಚ್ಚಿರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸುತ್ತಾ ವಾಪಸ್ ಹೋಗುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೆಟ್ರೋಲ್ ಬಂಕ್ ಮಾಲೀಕರು, “ಮಂಗಳೂರಿನಿಂದ ಬರಬೇಕಿದ್ದ ಪೆಟ್ರೋಲ್ ಮತ್ತು ಡಿಸೇಲ್…
ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಸೇರ್ಪಡೆಗೆ ಇರುವ ಕನಿಷ್ಠ ವಯೋಮಿತಿಯ ನಿಯಮದಲ್ಲಿ ಸರ್ಕಾರ ಮಹತ್ವದ ಸಡಿಲಿಕೆ ಮಾಡಿದೆ. ಈ ಕುರಿತು ಶಿಕ್ಷಣ ಸಚಿವರು ಸದನದಲ್ಲಿ ಅಧಿಕೃತ ಮಾಹಿತಿ ನೀಡಿದ್ದು, ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ. ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ 60 ದಿನಗಳ ವಯೋಮಿತಿ ಕೊರತೆಯಿದ್ದರೂ ಅಡ್ಮಿಷನ್ ಪಡೆಯಲು ಅವಕಾಶ ನೀಡಲಾಗಿದೆ. ಈ ಮೊದಲು ಕಟ್ಟುನಿಟ್ಟಾಗಿ 6 ವರ್ಷ ಪೂರೈಸಿರಬೇಕೆಂಬ ನಿಯಮವಿತ್ತು. ಈ ಹೊಸ ನಿಯಮವು ಮುಂಬರುವ 2026–27ನೇ ಶೈಕ್ಷಣಿಕ ಸಾಲಿಗೂ ಅನ್ವಯಿಸಲಿದೆ. ದಾಖಲಾತಿ ಸಮಯದಲ್ಲಿ ತಾಂತ್ರಿಕ ತೊಂದರೆಯಾಗದಂತೆ ಸಾಫ್ಟ್‌ವೇರ್ ನಲ್ಲೂ (SATS) ಅಗತ್ಯ ಬದಲಾವಣೆಗಳನ್ನು ಮಾಡಲು ಇಲಾಖೆ ಸೂಚಿಸಿದೆ. ಕೇವಲ ಒಂದನೇ ತರಗತಿ ಮಾತ್ರವಲ್ಲದೆ, ಎಲ್ ಕೆಜಿ ಮತ್ತು ಯುಕೆಜಿ ದಾಖಲಾತಿಗೂ ಈ ವಿನಾಯಿತಿ ಅನ್ವಯವಾಗಲಿದ್ದು, ಈ ಕುರಿತು ಶೀಘ್ರದಲ್ಲೇ ಹೊಸ ಕಾನೂನು ತರುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಪ್ರತಿ ವರ್ಷ ಪೋಷಕರು ಆತಂಕಕ್ಕೊಳಗಾಗುವುದನ್ನು ತಪ್ಪಿಸಲು, ಈ ವಯೋಮಿತಿ ಸಡಿಲಿಕೆಯನ್ನು ಪರ್ಮನೆಂಟ್ ಆಗಿ ಜಾರಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ…