Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ, ಅಂಬೇಡ್ಕರ್ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಅವಾಜ್(ನಗರ) ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆಯಾಗಿ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪಡೆದು ಈವರೆಗೂ ಮನೆಯ ಕಾಮಗಾರಿಯನ್ನು ಪ್ರಾರಂಭಿಸದೇ ಇರುವ ಫಲಾನುಭವಿಗಳ ಮಂಜೂರಾತಿ ಆದೇಶವನ್ನು ರದ್ದು ಪಡಿಸಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಮನೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಈವರೆವಿಗೂ ತಳಪಾಯ/ಗೋಡೆ/ ಛಾವಣಿ/ಪೂರ್ಣ ಕಾಮಗಾರಿಗಳನ್ನು ಕೈಗೊಳ್ಳದೆ ಇದ್ದಲ್ಲಿ ಹಂತವಾರು ಕಾಮಗಾರಿ ಕೈಗೊಂಡು, ಪ್ರತಿ ಹಂತದ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪಾಲಿಕೆಯ ಆಶ್ರಯ ಶಾಖೆಯನ್ನು ಸಂಪರ್ಕಿಸಿ ಕಾಮಗಾರಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉಡುಪಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯ ದಲ್ಲಿ ತುಮಕೂರಿನಲ್ಲಿ ನ.24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. 50ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸುರೇಶ್ ಎರ್ಮಾಳ್ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಮುಹಮ್ಮದ್ ಶರೀಫ್ ಗುಂಡು ಎಸೆತ ಮತ್ತು ಉದ್ದ ಜಿಗಿತದಲ್ಲಿ ತೃತೀಯ, ಉದಯ್ ಮುಂಡ್ಕೂರು 100ಮೀ, 200 ಮೀಟರ್ ಓಟ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, 40ವರ್ಷ ದೊಳಗಿನ ವಿಭಾಗದಲ್ಲಿ ಚೇತನ್ ಮಟಪಾಡಿ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಅನಿಲ್ ಕೈರಂಗಳ ಉದ್ದ ಜಿಗಿತದಲ್ಲಿ ಪ್ರಥಮ, 200ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸಂಘದ ಸದಸ್ಯರ ಈ ಸಾಧನೆಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ,…
ತುಮಕೂರು: ಏಕಕಾಲದಲ್ಲಿ ಮೂರು ಚಿರತೆಗಳು ತೋಟದ ಮನೆಯ ಬಳಿ ಆಹಾರ ಅರಸಿ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪಾತಗಾನಹಳ್ಳಿ ಗ್ರಾಮದಲ್ಲಿ ಈ ದ್ರಶ್ಯ ಕಂಡುಬಂದಿದ್ದು ಚಿರತೆ ಗುಂಪು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಬೇಟೆ ಹುಡುಕಿ ಬಂದ ಮೂರು ಚಿರತೆಗಳು, ಗ್ರಾಮದ ನಂಜುಂಡಪ್ಪ ಎಂಬುವರ ತೋಟದ ಮನೆ ಬಳಿ ಕಾಣಿಸಿಕೊಂಡಿವೆ. ದೇವರಾಯ ದುರ್ಗದ ಕಾಡಿನ ತಪ್ಪಲಿನಲ್ಲಿರುವ ಗ್ರಾಮವಾಗಿದ್ದು, ಕಳೆದ ರಾತ್ರಿ ಕಂಡು ಬಂದಿರುವ ಚಿರತೆಗಳ ಹಿಂಡನ್ನು ಸೆರಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ನಗರದ ಟೌನ್ ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಗೆ ವಿವಿಧ ಇಲಾಖೆ ಅಧಿಕಾರಿಗಳು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು. ಮೆರವಣಿಗೆಯು ಮಹಾನಗರ ಪಾಲಿಕೆಯ ಟೌನ್ ಹಾಲ್ ವೃತ್ತದಿಂದ ಚರ್ಚ್ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಎಂಪ್ರೆಸ್ ಕಾಲೇಜು ಆವರಣ ತಲುಪಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ತ್ಯಾಗರಾಜು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮ್ಮದ್ ಸೇರಿದಂತೆ ಶಾಲಾ ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಸಾರ್ವಜನಿಕರು, ಎಲ್ಲಾ ಸಮುದಾಯದ ದಲಿತ ಮುಖಂಡರುಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಬಗ್ಗೆ ಅರ್ಜಿಯನ್ನು ನವೆಂಬರ್ 26ರ ಒಳಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕರಾದ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯನ್ನು ಇದೇ ತಿಂಗಳ ನವಂಬರ್ 28 ರಂದು ಬೆಳಗ್ಗೆ 11 ಗಂಟೆಗೆ ಬಾಲಾ ಭವನ ಎಂ.ಜಿ.ರಸ್ತೆ ತುಮಕೂರಿನಲ್ಲಿ ಏರ್ಪಡಿಸಿದ್ದು, ಪಾವಗಡ ತಾಲೂಕಿನ ವ್ಯಾಪ್ತಿಯ ದಲಿತರ ಕುಂದು ಕೊರತೆಯ ಬಗ್ಗೆ ಸಹಾಯಕ ನಿರ್ದೆಶಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ನವಂಬರ್ 26ರ ಒಳಗಾಗಿ ಲಿಖಿತ ರೂಪದಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹಾಗೂ ಅರ್ಜಿ ಸ್ವೀಕೃತಪ್ರತಿಯೊಂದಿಗೆ ಸಭೆಗೆ ಹಾಜರಾಗಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ(10+1) ಘಟಕಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಬೆಂಗಳೂರಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿದ್ದು, ತುಮಕೂರು ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು. 18 ರಿಂದ 60 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಕುರಿಭವನ, ಪಶು ಆಸ್ಪತ್ರೆ ಆವರಣ, ಕುಣಿಗಲ್ ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್ ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 96,494 ಪ್ರಕರಣಗಳ ಪೈಕಿ 9,082 ಪ್ರಕರಣಗಳನ್ನು ಹಾಗೂ 1,13,000 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಲೋಕ್ ಅದಾಲತ್ ನಲ್ಲಿ ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ…
ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ತಂದಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿವೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕರಿಸುತ್ತಿವೆ ಎಂದರು. ಸರ್ಕಾರದವರು ಅಭಿವೃದ್ಧಿ ಕಾರ್ಯಗಳೊಂದಿಗೆ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು ರೂ.52 ಸಾವಿರ ಕೋಟಿಗಳಷ್ಟು ಹಣ ಹಂಚಿಕೆ ಮಾಡಿದೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸುಮಾರು 1.22 ಕೋಟಿ ಫಲಾನುಭವಿಗಳು ಯೋಜನೆಯ ಫಲವನ್ನು ಪಡೆದಿದ್ದಾರೆ ಹಾಗೂ…
ತುಮಕೂರು: ಆರ್ ಎನ್ ಆರ್ 15048 ಅಕ್ಕಿ ತಳಿಯನ್ನು ಅರೆ ನೀರಾವರಿ ಪ್ರದೇಶದಲ್ಲಿಯೂ ಬೆಳೆಯಬಹುದಾಗಿದೆ ಎಂದು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯಶಾಸ್ತ್ರ ವಿಜ್ಞಾನಿ ತಸ್ಮಿಯಾ ಕೌಸರ್ ತಿಳಿಸಿದರು. ಜಿಲ್ಲೆಯ ತಿಪಟೂರು ತಾಲೂಕು ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆರ್ಎನ್ ಆರ್ 15048 ಅಕ್ಕಿ ತಳಿಯನ್ನು ಪರಿಚಯಿಸಿ ಭತ್ತ ಬೆಳೆಯುವ ಪ್ರದೇಶವನ್ನು ಹೆಚ್ಚಿಸುವ ಉದ್ದೇಶದಿಂದ ತಿಪಟೂರು ತಾಲೂಕು ನೊಣವಿನ ಕೆರೆ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಅಕ್ಕಿ ತಳಿಯು ಬೆಂಕಿ ರೋಗದ ನಿರೋಧಕ ಶಕ್ತಿಯನ್ನು ಹೊಂದಿದ್ದು, ನೀರಾವರಿ, ಅರೆ ನೀರಾವರಿ ಪ್ರದೇಶದಲ್ಲಿ ಬೆಳೆಯಬಹುದಾಗಿದೆ. ಅಲ್ಲದೆ ಏರೋಬಿಕ್ ಪದ್ಧತಿಯಲ್ಲೂ ಸಹ ಬೆಳೆಯಬಹುದಾಗಿದೆ. ಆರ್ ಎನ್ ಆರ್ 15048 ಅಕ್ಕಿ ತಳಿಯು ಅಲ್ಪಾವಧಿ ಬೆಳೆಯಾಗಿದ್ದು, 120–125 ದಿನಗಳಲ್ಲಿಯೇ ಕೊಯ್ಲಿಗೆ ಬರುತ್ತದೆ. ಪ್ರತಿ ಎಕರೆಗೆ 45–50 ಕ್ವಿಂಟಾಲ್ ಇಳುವರಿ ಪಡೆಯಬಹುದು ಎಂದು ಮಾಹಿತಿ ನೀಡಿದರು. ರೈತರು ಬಿಳಿ ಅಕ್ಕಿ ಅನ್ನ ಕಂಡರೆ ಭಯ ಬೀಳುವ ಮದುಮೇಹಿಗಳಿಗಾಗಿ ಸಕ್ಕರೆ…
ತುಮಕೂರು: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ಜನಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ತುಮಕೂರು ಜಿಲ್ಲೆಯು ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ 2 ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಶಸ್ತಿಯನ್ನು ನವೆಂಬರ್ 26ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…